Tuesday, 29 September 2015

ಅ.02 ರಂದು ಕಡ್ಡಾಯವಾಗಿ ಗ್ರಾಮ ಸಭೆ ನಡೆಸಲು ಸೂಚನೆ

ಕೊಪ್ಪಳ, ಸೆ.29 (ಕರ್ನಾಟಕ ವಾರ್ತೆ) : ಗಂಗಾವತಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತ್‍ಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅಕ್ಟೋಬರ್.02 ರಂದು ಗ್ರಾಮ ಸಭೆಯನ್ನು ಕಡ್ಡಾಯವಾಗಿ ನಡೆಸುವಂತೆ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎನ್. ಮಠ ಅವರು ಸೂಚನೆ ನೀಡಿದ್ದಾರೆ.
     ಕೇಂದ್ರ ಸರ್ಕಾರವು ರಾಜ್ಯ ಗ್ರಾಮೀಣಾಭಿವೃದ್ಧಿ ಯೋಜನೆಯನ್ನು ತಯಾರಿಸುವ ಸಲುವಾಗಿ ಅಕ್ಟೋಬರ್.02 ರಂದು ಕಡ್ಡಾಯವಾಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆಯನ್ನು ನಡೆಸುವಂತೆ ನಿರ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‍ಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿಗಳು ಸಭೆಗೆ ಬೇಕಾದ ಪೂರ್ವ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು, ತಮ್ಮ ವ್ಯಾಪ್ತಿಯಲ್ಲಿ ಗ್ರಾಮ ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು.  ಎಲ್ಲ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು, ಯೋಜನೆಗೆ ಸಂಬಂಧಿಸಿದ ಎಲ್ಲಾ ಬಾದ್ಯಸ್ಥರು, ಪಾಲುದಾರರು, ಗ್ರಾಮಸ್ಥರು ಈ ಗ್ರಾಮ ಸಭೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸುವಂತೆ ಗಂಗಾವತಿ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ. 
Post a Comment