Wednesday, 30 September 2015

ಜಿಲ್ಲಾ ಮಟ್ಟದ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

ಕೊಪ್ಪಳ, ಸೆ.30 (ಕರ್ನಾಟಕ ವಾರ್ತೆ) : ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯ, ಕೊಪ್ಪಳ ಇವರಿಂದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಶಿಕ್ಷಕರ ಕಾರ್ಯಾಗಾರವನ್ನು ಅಕ್ಟೋಬರ್ 05 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುಕನೂರಿನ ಎಸ್‍ಎಫ್‍ಎಸ್ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸಿ.ಇ.ಸಿ ಅನುಷ್ಠಾನ ಹಾಗೂ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮಗೊಳಿಸಲು ಶಾಲಾ ಹಂತದಲ್ಲಿ ಕೈಗೊಂಡ ಕ್ರಮಗಳ ಕುರಿತು ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದ್ದು, ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರು ಖುದ್ದಾಗಿ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. 
Post a Comment