Saturday, 30 July 2016

ಗ್ರಾಮ ಲೆಕ್ಕಿಗರು ಕೇಂದ್ರಸ್ಥಾನದಲ್ಲಿ ವಾಸ ಮಾಡುವುದು ಕಡ್ಡಾಯ- ಕಂದಾಯ ಸಚಿವ ಕಾಗೋಡು ತಿಮ್ಮಪ್ಪ


ಕೊಪ್ಪಳ ಜು. 30 (ಕರ್ನಾಟಕ ವಾರ್ತೆ) : ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗರ ಕರ್ತವ್ಯ ಪ್ರಮುಖವಾಗಿದ್ದು, ಸಾರ್ವಜನಿಕರ ಸೇವೆಗೆ ಸದಾ ಲಭ್ಯರಿರುವ ಸಲುವಾಗಿ ಗ್ರಾಮ ಲೆಕ್ಕಿಗರು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ವಾಸ ಮಾಡಲೇಬೇಕು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಹೇಳಿದರು.
 
     ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 
     ಕಂದಾಯ ಇಲಾಖೆಯು ಪ್ರತಿಯೊಂದು ಇಲಾಖೆಗೆ ಸಂಪರ್ಕ ಕಲ್ಪಿಸುವ ಮಹತ್ವದ ಇಲಾಖೆಯಾಗಿದ್ದು, ಅದರಲ್ಲಿ ಗ್ರಾಮ ಲೆಕ್ಕಿಗರ ಪಾತ್ರ ಹೆಚ್ಚಾಗಿರುತ್ತದೆ.  ಸಾರ್ವಜನಿಕರು, ರೈತರು, ಕಂದಾಯ ಇಲಾಖೆಗೆ ಸಂಬಂಧಿಸಿದ ಬಹುತೇಕ ಕೆಲಸಗಳಿಗೆ ಗ್ರಾಮ ಲೆಕ್ಕಿಗರ ಸೇವೆ ಪಡೆಯಬೇಕಾಗುತ್ತದೆ.  ಆದರೆ ಗ್ರಾಮ ಲೆಕ್ಕಿಗರು ಸಂಬಂಧಪಟ್ಟ ಕೇಂದ್ರ ಸ್ಥಾನದಲ್ಲಿ ಲಭ್ಯರಿರುವುದಿಲ್ಲ ಎನ್ನುವ ದೂರು ರಾಜ್ಯಾದ್ಯಂತ ಕೇಳಿಬರುತ್ತಿದೆ.  ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಿಗರು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ವಾಸವಿರಬೇಕು.  ಹಾಗೂ ನಿಗದಿಪಡಿಸಿದ ಕಚೇರಿಯಲ್ಲಿ ಕಚೇರಿವೇಳೆಯಲ್ಲಿ ಸಾರ್ವಜನಿಕರಿಗೆ ಲಭ್ಯರಿರಬೇಕು.  ಕೇಂದ್ರ ಸ್ಥಾನ ಬಿಡುವ ಮುನ್ನ ಕಡ್ಡಾಯವಾಗಿ ಆಯಾ ತಹಸಿಲ್ದಾರರಿಂದ ಪೂರ್ವಾನುಮತಿ ಪಡೆಯಬೇಕು ಎನ್ನುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.  ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ನಿಯಮಿತವಾಗಿ ಗ್ರಾಮಗಳಿಗೆ ಹಾಗೂ ಗ್ರಾಮ ಲೆಕ್ಕಿಗರ ನಿಗದಿತ ಕಚೇರಿಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.  ಕೇಂದ್ರಸ್ಥಾನದಲ್ಲಿ ವಾಸವಿರದ ಹಾಗೂ ಕಚೇರಿ ವೇಳೆಯಲ್ಲಿ ಲಭ್ಯರಿರದ ಗ್ರಾಮ ಲೆಕ್ಕಿಗರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಾಪೂಜಿ ಸೇವಾ ಕೇಂದ್ರ ಎಲ್ಲ ಗ್ರಾ.ಪಂ.ಗಳಿಗೆ ವಿಸ್ತರಣೆ : ರೈತರು ಪಹಣಿ ಪತ್ರಗಳಿಗೆ ತಾಲೂಕು ಮತ್ತು ಹೋಬಳಿ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಗ್ರಾಮ ಪಂಚಾಯತಿ ಕೇಂದ್ರದಲ್ಲೇ ಲಭ್ಯವಾಗುವಂತೆ ಮಾಡಲು, ಮೊದಲ ಹಂತದಲ್ಲಿ ರಾಜ್ಯದ 2000 ಗ್ರಾಮ ಪಂಚಾಯತಿಗಳಲ್ಲಿ ಪಹಣಿ ಪತ್ರವೂ ಸೇರಿದಂತೆ ವಿವಿಧ ಬಗೆಯ 100 ಸೇವೆಗಳನ್ನು ಒದಗಿಸಲು ಪಂಚಾಯತಿ 100- ಬಾಪೂಜಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.  ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೆ 76 ಗ್ರಾಮ ಪಂಚಾಯತಿಗಳಲ್ಲಿ ಮೊದಲ ಹಂತದಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.  ಪಹಣಿ ಪತ್ರಿಕೆಗಳು ಆಯಾ ಗ್ರಾಮ ಪಂಚಾಯತಿಗಳಲ್ಲಿಯೇ ಸುಲಭವಾಗಿ ಲಭ್ಯವಾಗಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಎಲ್ಲ ಗ್ರಾಮ ಪಂಚಾಯತಿಗಳಿಗೂ ಬ್ರಾಡ್‍ಬ್ಯಾಂಡ್ ಸೌಲಭ್ಯ ಕಲ್ಪಿಸಿ, ಎಲ್ಲ ಗ್ರಾ.ಪಂ. ಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಹೇಳಿದರು.
ಹೆಚ್ಚಿನ ದರದಲ್ಲಿ ಗೊಬ್ಬರ ಮಾರುವವರ ವಿರುದ್ಧ ಕ್ರಮ ಜರುಗಿಸಿ : ಪ್ರಸಕ್ತ ಹಂಗಾಮಿಗೆ ರೈತರಿಗೆ ಯಾವುದೇ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗಬಾರದು ಎಂದು ಸೂಚನೆ ನೀಡಿದ ಸಚಿವರು, ರಸಗೊಬ್ಬರಗಳ ಬೆಲೆಯನ್ನು ಈಗಾಗಲೆ ಸರ್ಕಾರ ಪರಿಷ್ಕರಿಸಿದ್ದು, ರಸಗೊಬ್ಬರಗಳ ದರಗಳನ್ನು ಕಡಿಮೆ ಮಾಡಲಾಗಿದೆ.  ಆದಾಗ್ಯೂ ಮಾರಾಟಗಾರರು ಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎನ್ನುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿದೆ.  ಕೃಷಿ ಇಲಾಖೆ ಅಧಿಕಾರಿಗಳು ಇದನ್ನು ಸಮರ್ಪಕವಾಗಿ ಪರಿಶೀಲಿಸಿ, ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಂಕೆವನ-ಪರಿಷ್ಕøತ ಪ್ರಸ್ತಾವನೆ ಸಲ್ಲಿಸಿ : ಜಿಲ್ಲೆಯ ಯಲಬುರ್ಗಾ ಮತ್ತು ಕೊಪ್ಪಳ ತಾಲೂಕಿನಲ್ಲಿ ಜಿಂಕೆಗಳ ಹಾವಳಿಯಿಂದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ.  ಸುಮಾರು 8 ರಿಂದ 10 ಸಾವಿರ ಜಿಂಕೆಗಳು ಈ ಭಾಗದಲ್ಲಿ ಇರುವುದರಿಂದ, ರೈತರು ಬೆಳೆ ಪಡೆಯಲು ಸಾಧ್ಯವಾಗುತ್ತಿಲ್ಲ.  ಈ ನಿಟ್ಟಿನಲ್ಲಿ ಜಿಂಕೆವನ ನಿರ್ಮಾಣ ಮಾಡುವುದು ಅಗತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಕಂದಾಯ ಸಚಿವರ ಗಮನ ಸೆಳೆದರು.  ಈ ಕುರಿತು ವಿವರಣೆ ನೀಡಿದ ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಅವರು, ಕಳೆದ 2008 ರಲ್ಲಿ ಜಿಂಕೆ ವನ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.  ಜಿಂಕೆಗಳು ಸೂಕ್ಷ್ಮ ಪ್ರಾಣಿಯಾಗಿರುವುದರಿಂದ ಕನಿಷ್ಟ 3 ರಿಂದ 4 ಸಾವಿರ ಎಕರೆ ಜಮೀನು ಜಿಂಕೆ ವನಕ್ಕೆ ಬೇಕಾಗುತ್ತದೆ.  ಆದರೆ ನಂತರದ ದಿನಗಳಲ್ಲಿ ಇಲಾಖೆಯಿಂದ ಜಿಂಕೆವನ ಕಾರ್ಯಸಾಧುವಲ್ಲ ಎಂಬ ಕಾರಣ ನೀಡಿ ಪ್ರಸ್ತಾವನೆಯನ್ನು ಇಲಾಖೆಯು ತಿರಸ್ಕರಿಸಿದೆ ಎಂದರು.  ಇದಕ್ಕೆ ಸ್ಪಂದಿಸಿದ ಕಂದಾಯ ಸಚಿವರು, ಜಿಂಕೆ ಹಾವಳಿಯಿಂದ ರೈತರಿಗೆ ನಷ್ಟವಾಗದ ರೀತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಗ್ರ ಯೋಜನೆಯನ್ನು ಮರು ರೂಪಿಸಿ, ಮತ್ತೊಮ್ಮೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಹಾರ ಮೊತ್ತ ರೈತರಿಗೆ ಶೀಘ್ರ ಪಾವತಿಸಿ : ಕಳೆದ ಸಾಲಿನಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದರಿಂದ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಮೊತ್ತವನ್ನು ನೀಡಲು ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ.  ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ 114015 ರೈತರಿಗೆ 46. 18 ಕೋಟಿ ರೂ. ಪಾವತಿಸಲಾಗಿದ್ದು, ಇನ್ನೂ 62122 ರೈತರಿಗೆ ವಿತರಿಸುವುದು ಬಾಕಿ ಇದೆ.  ರೈತರ ಬ್ಯಾಂಕ್ ಖಾತೆಗಳು ಚಾಲ್ತಿಯಲ್ಲಿ ಇಲ್ಲದಿರುವುದು, ರೈತರು ಮೃತಪಟ್ಟಿರುವುದು, ಜಮೀನು ಜಂಟಿ ಖಾತೆಯಲ್ಲಿರುವುದು, ಬ್ಯಾಂಕ್ ಖಾತೆಗಳ ಸಂಖ್ಯೆ ಹಾಗೂ ಕೋಡ್‍ಗಳನ್ನು ತಪ್ಪಾಗಿ ನೀಡಿರುವುದು ಹೀಗೆ ಹಲವು ಕಾರಣಗಳಿಂದ ಸುಮಾರು 9 ಕೋಟಿ ರೂ. ರೈತರಿಗೆ ಪಾವತಿಸಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಧಿಕಾರಿಗಳು ಸಭೆಗೆ ವಿವರಣೆ ನೀಡಿದರು.  ಚಾಲ್ತಿಯಲ್ಲಿ ಇಲ್ಲದ ರೈತರ ಖಾತೆಗಳನ್ನು 48 ಗಂಟೆಗಳ ಒಳಗಾಗಿ ಚಾಲ್ತಿಗೊಳಿಸಲು ಸಂಬಂಧಪಟ್ಟ ಬ್ಯಾಂಕ್‍ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಸಚಿವರು ಲೀಡ್‍ಬ್ಯಾಂಕ್ ವ್ಯವಸ್ಥಾಪಕರಿಗೆ ತಿಳಿಸಿದರು.   ಪರಿಹಾರ ಹಣವನ್ನು ವಿಳಂಬ ಮಾಡದೆ ಕೂಡಲೆ ಪಾವತಿಸಲು ಅಗತ್ಯ ಕ್ರಮ ಜರುಗಿಸಬೇಕು.  ಅಲ್ಲದೆ ಪರಿಹಾರ ಹಣ ಪಾವತಿಯಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಲು, ರೈತರಿಗೆ ನೇರವಾಗಿ ಪರಿಹಾರ ಹಣ ಪಾವತಿ ಮಾಡಲು ಸಾಧ್ಯವೇ ಎಂಬುದನ್ನು ಆಗಸ್ಟ್ 05 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
      ಸರ್ಕಾರದ ಜಮೀನು ಲಭ್ಯವಿರುವ ಕಡೆಗಳಲ್ಲಿ ಶಾಲಾ-ಕಾಲೇಜು, ಅಂಗನವಾಡಿ, ವಸತಿ ನಿಲಯ, ವಸತಿ ಶಾಲಾ ಕಟ್ಟಡಗಳಿಗೆ ಮಂಜೂರು ಮಾಡಬೇಕು. ವಿಲೇವಾರಿಯಾಗದೆ ಬಾಕಿ ಉಳಿದಿರುವ ಬಗರ ಹುಕುಂ ಸಾಗುವಳಿಯ ಎಲ್ಲ ಅರ್ಜಿಗಳನ್ನು ಪ್ರತಿ ತಿಂಗಳು ಪ್ರತ್ಯೇಕ ಸಭೆ ನಡೆಸಿ, ಶೀಘ್ರ ಇತ್ಯರ್ಥ ಮಾಡಬೇಕು ಎಂದು ಕಟ್ಟಿನಿಟ್ಟಿನ ಸೂಚನೆ ನೀಡಿದ ಸಚಿವರು,  ಸರ್ಕಾರದ ಆಲೋಚನೆ ಮತ್ತು ನಡವಳಿಕೆಗೆ ಅನುಗುಣವಾಗಿ ತಾಲೂಕಿನ ಜನರ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ತಹಶೀಲ್ದಾರರು ಪಾರದರ್ಶಕ ಆಡಳಿತ ನೀಡಬೇಕೆಂದು ಕಂದಾಯ ಸಚಿವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
     ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಸಂಸದ ಕರಡಿ ಸಂಗಣ್ಣ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ಬಳ್ಳಾರಿ ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್, ನಗರಸಭೆ ಅಧ್ಯಕ್ಷ ಮಹೇಂದ್ರಚೊಪ್ರಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸಿಲ್ದಾರರು ಭಾಗವಹಿಸಿದ್ದರು.

ಆಗಸ್ಟ್ 06 ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಕೊಪ್ಪಳದಲ್ಲಿ ಜನಸಂಪರ್ಕ ಸಭೆ

ಕೊಪ್ಪಳ ಜು. 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಜನಸಂಪರ್ಕ ಸಭೆಯಲ್ಲಿ ಆಗಸ್ಟ್ 06 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಕೈಗೊಳ್ಳಲಿದ್ದಾರೆ.
     ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಅರ್ಜಿ, ಅಹವಾಲುಗಳನ್ನು ಆಗಸ್ಟ್ 04 ಮತ್ತು 05 ರಂದು ಕಚೇರಿ ವೇಳೆಯಲ್ಲಿ ಸ್ವೀಕರಿಸಲು ವ್ಯವಸ್ಥೆಗೊಳಿಸಲಾಗಿದೆ.  ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಮ್ಮ ಕುಂದುಕೊರತೆ ಅಹವಾಲು ಅರ್ಜಿಗಳನ್ನು ಕೌಂಟರ್‍ನಲ್ಲಿ ಸಲ್ಲಿಸಿ, ಸ್ವೀಕೃತಿ ಪಡೆಯಬಹುದು.  ಕೌಂಟರ್‍ನಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಆಗಸ್ಟ್ 06 ರಂದು ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆ ಕೈಗೊಳ್ಳುವರು.  ಸಾರ್ವಜನಿಕರು ಈ ಜನಸಂಪರ್ಕ ಸಭೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಫಸಲ ಬೀಮಾ ಯೋಜನೆ : ಆಗಸ್ಟ್ 02 ರವರೆಗೆ ಅವಧಿ ವಿಸ್ತರಣೆ

ಕೊಪ್ಪಳ ಜು. 30 (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಬೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೋಂದಾಯಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 02 ರವರೆಗೆ ವಿಸ್ತರಿಸಲಾಗಿದೆ.
     ಈ ಮೊದಲು ಬೆಳೆ ವಿಮೆ ನೋಂದಣಿಗೆ ಜು. 30 ಕೊನೆಯ ದಿನಾಂಕವನ್ನಾಗಿ ನಿಗದಿ ಮಾಡಲಾಗಿತ್ತು.  ಇದೀಗ ಸರ್ಕಾರ ನೋಂದಣಿ ಅವಧಿಯನ್ನು ಆಗಸ್ಟ್ 02 ರವರೆಗೆ ವಿಸ್ತರಿಸಲಾಗಿದೆ.  ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಂಟಿಕೃಷಿ ನಿರ್ದೇಶಕ ಡಾ. ರಾಮದಾಸ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಕೊಪ್ಪಳ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಯಲ್ಲಿ ಪಹಣಿ ವಿತರಣೆ ಪ್ರಾರಂಭ

ಕೊಪ್ಪಳ ಜು.30 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು ಈ ಕೇಂದ್ರಗಳಲ್ಲಿ ಪಹಣಿ ಪತ್ರಿಕೆಗಳನ್ನು ವಿತರಿಸಲಾಗುತ್ತಿದೆ.  ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ  ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
    ಗಣಕೀಕೃತ ಪಹಣಿಗಳನ್ನು ರಾಜ್ಯದ ತಾಲೂಕ/ವಿಶೇಷ ತಾಲೂಕಿನ ಭೂಮಿ ಕೇಂದ್ರ, ಅಟಲ್ ಜೀ ಜನಸ್ನೇಹಿ ಕೇಂದ್ರ ಮತ್ತು ಖಾಸಗಿ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದ್ದು, ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯತಿ ಕಛೇರಿಗಳಲ್ಲಿ ವಿತರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದಾಗಿ ರೈತರು ಪಹಣಿಯನ್ನು ಪಡೆಯಲು ತಾಲೂಕು ಮತ್ತು ಹೋಬಳಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದಾಗಿದೆ. ಗ್ರಾ.ಪಂ ಗಳಲ್ಲಿ ಬಳಸುತ್ತಿರುವ ಪಂಚತಂತ್ರ ತಂತ್ರಾಂಶವನ್ನು ಭೂಮಿ ತಂತ್ರಾಂಶದೊಂದಿಗೆ ಸಂಯೋಜಿಸಿ ಪಂಚತಂತ್ರ ತಂತ್ರಾಂಶದ ಲಾಗಿನ್‍ನಲ್ಲಿ ಪಹಣಿಗಳನ್ನು ವಿತರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ರೈತರು ತಾಲೂಕಿಹನ ಯಾವುದೇ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಯಾವುದೇ ಸರ್ವೆ ನಂಬರಿನ ಪಹಣಿಯನ್ನು ತಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಸಂಪರ್ಕಿಸಿ ರೂ.10 ಶುಲ್ಕ ಪಾವತಿಸಿ ಪಡೆಯಬಹುದು.
     ಕೊಪ್ಪಳ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಂದಾಯ ಸೇವೆಗಳು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಕಾಲ ಸೇವೆಯನ್ನು ಸಹ ಪಡೆಯಬಹುದಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಆಗಸ್ಟ್ ನಿಂದ ಬಾರ್ ಕೋಡೆಡ್ ಕೂಪನ್ ಮೂಲಕ ಪಡಿತರ ವಿತರಣೆ

ಕೊಪ್ಪಳ ಜು.30 (ಕರ್ನಾಟಕ ವಾರ್ತೆ): ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಆಗಸ್ಟ್ ತಿಂಗಳಿನಿಂದ ಜಾರಿಯಾಗುವಂತೆ ಕೊಪ್ಪಳ ನಗರ ಪ್ರದೇಶದ 10 ನ್ಯಾಯಬೆಲೆ ಅಂಗಡಿಗಳ ಮೂಲಕ ಬಾರ್ ಕೋಡೆಡ್ ಕೂಪನ್ ಆಧಾರದ ಮೇಲೆ ಪಡಿತರ ಧಾನ್ಯ ವಿತರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.
    ಕೊಪ್ಪಳ ನಗರ ಪ್ರದೇಶದ 10 ನ್ಯಾಯಬೆಲೆ ಅಂಗಡಿಗಳ ಪಡಿತರ ಚೀಟಿದಾರರು, ನಗರದಲ್ಲಿ ಸ್ಥಾಪಿಸಲಾಗಿರುವ ಫೋಟೋ ಬಯೋ ಕೇಂದ್ರಕ್ಕೆ ಹೋಗಿ ಉಚಿತವಾಗಿ ಬಾರ್ ಕೋಡೆಡ್ ಕೂಪನ್ ಪಡೆದುಕೊಳ್ಳಬೇಕು. ಆ.1 ರಿಂದ ಕೂಪನ್ ಪಡೆದುಕೊಂಡು, ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ದಾನ್ಯಗಳಾದ ಅಕ್ಕಿ, ಗೋದಿ, ಸಕ್ಕರೆ, ತಾಳೆಎಣ್ಣೆ. ಉಪ್ಪು ಪಡೆದುಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಪ್ಪಳ ಸರ್ಕಾರಿ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶ ಅವಧಿ ವಿಸ್ತರಣೆ

ಕೊಪ್ಪಳ ಜು.30 (ಕರ್ನಾಟಕ ವಾರ್ತೆ): ತಾಂತ್ರಿಕ ಶಿಕ್ಷಣ ಇಲಾಖೆಯು ಕೊಪ್ಪಳದ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಎಸ್‍ಎಸ್‍ಎಲ್‍ಸಿ ಪಾಸಾದ ಅಭ್ಯರ್ಥಿಗಳಿಗೆ ಪ್ರಸಕ್ತ ಸಾಲಿಗೆ 1 ನೇ ಸೆಮಿಸ್ಟರ್ ಡಿಪ್ಲೋಮಾ ಹಾಗೂ ಐಟಿಐ  ಪಾಸಾದವರಿಗೆ ಲ್ಯಾಟರಲ್ ಎಂಟ್ರಿ 3 ನೇ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕಾಗಿ ಆ.12 ರವರೆಗೆ ಅವಧಿ ವಿಸ್ತರಿಸಲಾಗಿದೆ.
     ಪ್ರಸಕ್ತ ಸಾಲಿನ ಡಿಪ್ಲೋಮಾ 1 ನೇ ಸೆಮಿಸ್ಟರ್‍ನಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಎಸ್‍ಎಸ್‍ಎಲ್‍ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಐಟಿಐ ಪಾಸಾದ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ 3ನೇ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದು.
     ನಿಗದಿತ ಅರ್ಜಿ ನಮೂನೆಯನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್  www.dte.kar.nic.in & www.kea.kar.nic.in ಇಲ್ಲಿ ಪಡೆಯಬಹುದು. ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಚಾಲ್ತಿ ಖಾತೆ  ED-KEA-DCET-2016 ಅಪ್ಲೀಕೆಶನ್ ಫೀ ಕಲೆಕ್ಷನ್ ಅಕೌಂಟ್ ನಂ-64097386381 ಅಥವಾ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ ಶಾಖೆಯ ಚಾಲ್ತಿ ಖಾತೆ  ED-KEA-DCET-2016  ಅಪ್ಲೀಕೆಶನ್ ಫೀ ಕಲೆಕ್ಷನ್ ಅಕೌಂಟ್ ನಂ-62417732180 ಈ ಬ್ಯಾಂಕ್ ಖಾತೆಗೆ ಸಾಮಾನ್ಯ ವರ್ಗದ  ಹಾಗೂ ಓಬಿಸಿ ಅಭ್ಯರ್ಥಿಗಳು ರೂ.100 ಹಾಗೂ ಪ.ಜಾತಿ, ಪ.ವರ್ಗ ಹಾಗೂ ಪ್ರವರ್ಗ-1 ಅಭ್ಯರ್ಥಿಗಳು ರೂ.50 ಶುಲ್ಕ ಪಾವತಿಸಬೇಕು.
     ಆ.5 ರ ಸಂಜೆ 5.30 ಗಂಟೆಯೊಳಗಾಗಿ ಶುಲ್ಕ ಪಾವತಿಸಿ ಬ್ಯಾಂಕ್ ಚಲನ್ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು. ಆ. 8 ರಿಂದ 10 ರವರೆಗೆ ಪ್ರವೇಶ ಸಂದರ್ಶನ ನಡೆಸಲಾಗುವುದು. ಆ.12 ರಂದು ಸಂಜೆ 4.30 ಗಂಟೆಯೊಳಗಾಗಿ ಮೂಲ ದಾಖಲೆಗಳೊಂದಿಗೆ ಪ್ರವೇಶ ಶುಲ್ಕದೊಂದಿಗೆ ಪ್ರವೇಶ ಪಡೆಯಬಹುದು.
     ಹೆಚ್ಚಿನ ಮಾಹಿತಿಯನ್ನು ಇಲಾಖೆಯ ವೆಬ್‍ಸೈಟ್‍ನಲ್ಲಿ ಅಥವಾ ಸರ್ಕಾರಿ ಪಾಲಿಟೆಕ್ನಿಕ್, ಕೊಪ್ಪಳ ಇಲ್ಲಿ ಪಡೆಯಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಿನ್ಸಿಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಅರ್ಜಿ ಸಲ್ಲಿಸಲು ಆ. 11 ಕೊನೆಯ ದಿನ

ಕೊಪ್ಪಳ   ಜು. 30 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2016 ರ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ / ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 90 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ‘ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ’ ಯೋಜನೆಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಿದೆ.
     ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕ  www.backwardclasses.kar.nic.in ವೆಬ್‍ಸೈಟ್ ಮೂಲಕ ಸಲ್ಲಿಸಬೇಕು.  ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಯೋಜನೆಗೆ ಆಯ್ಕೆ ಮಾಡಲಾಗುವುದು.  ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನವಾಗಿರುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Friday, 29 July 2016

ಟೋಲ್ ಶುಲ್ಕ ವಿನಾಯಿತಿ ಕುರಿತು ಯಾವುದೇ ನಿರ್ಣಯವಾಗಿಲ್ಲ- ಜಿಲ್ಲಾಧಿಕಾರಿ ಸ್ಪಷ್ಟನೆ

ಕೊಪ್ಪಳ ಜು. 29 (ಕರ್ನಾಟಕ ವಾರ್ತೆ): ಗಂಗಾವತಿ ತಾಲೂಕಿನ ಮರಳಿ ಮತ್ತು ಹೇಮಗುಡ್ಡ ಗ್ರಾಮದ ಬಳಿ ಜಿ.ಕೆ.ಸಿ. ಕಂಪನಿಯಿಂದ ನಿರ್ಮಿತವಾಗಿರುವ ಟೋಲ್‍ಗೇಟ್ ಮೂಲಕ ಸಂಚರಿಸುವ ಸ್ಥಳೀಯ ಅಥವಾ ಇತರೆ ವಾಹನಗಳಿಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡುವ ಕುರಿತು ಯಾವುದೇ ನಿರ್ಣಯವನ್ನು ಯಾವುದೇ ಸಭೆಯಲ್ಲಿ ಕೈಗೊಂಡಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ.
     ಹೇಮಗುಡ್ಡ ಗ್ರಾಮದ ಬಳಿಯ ಜಿ.ಕೆ.ಸಿ. ಕಂಪನಿಯಿಂದ ನಿರ್ಮಿತವಾಗಿರುವ ಟೋಲ್‍ಗೇಟ್ ಮೂಲಕ ಸಂಚರಿಸುವ ಸ್ಥಳೀಯ ವಾಹನಗಳಿಗೆ ಟೋಲ್ ಶುಲ್ಕ ವಿನಾಯಿತಿ ನೀಡಲಾಗಿದೆ ಎಂಬುದಾಗಿ ಕೆಲವರು ಸುಳ್ಳು ವದಂತಿಯನ್ನು ಹರಡಿರುವುದಾಗಿ ತಿಳಿದುಬಂದಿದೆ.   ಕೆಲ ಮಾಧ್ಯಮಗಳಲ್ಲೂ ಇಂತಹ ವರದಿ ಪ್ರಕಟವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶ ಇರುವುದಿಲ್ಲ. ವಾಸ್ತವವಾಗಿ ವಾಹನಗಳಿಗೆ ಟೋಲ್ ಶುಲ್ಕ ವಿನಾಯಿತಿ ನೀಡಿದ ಕುರಿತು ಯಾವುದೇ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದಿಲ್ಲ.  ಈ ಕುರಿತಂತೆ ಸಾರ್ವಜನಿಕರು ಯಾವುದೇ ವರದಿಗಳಿಗೆ ಹಾಗೂ ವದಂತಿಗಳಿಗೆ ಕಿವಿಗೊಡದಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳನ್ನು ದುಡಿಮೆಗಾಗಿ ಬಳಸುವವರಿಗೆ ಕಠಿಣ ಶಿಕ್ಷೆ ಕಾದಿದೆ- ವನಿತಾ ತೊರವಿ

ಕೊಪ್ಪಳ ಜು. 29 (ಕರ್ನಾಟಕ ವಾರ್ತೆ) : ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಬಳಸುವವರಿಗೆ ಕಾನೂನಿನಲ್ಲಿ ಇದೀಗ ಕಟ್ಟುನಿಟ್ಟಿನ ಕಾಯ್ದೆ ಜಾರಿಗೆ ಬಂದಿದ್ದು, ನಿಯಮವನ್ನು ಉಲ್ಲಂಘಿಸುವವರಿಗೆ ಕಠಿಣ ಶಿಕ್ಷೆ ಕಾದಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ಎನ್. ತೊರವಿ ಅವರು ಎಚ್ಚರಿಕೆ ನೀಡಿದರು.

     ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098, ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಕೋಳಿಫಾರಂ, ಹೋಟೆಲ್, ಗ್ಯಾರೇಜ್, ಸೀಡ್ಸ್ ಕಂಪನಿಗಳ ಮಾಲೀಕರುಗಳಿಗೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
     ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದಾಗ ಬಾಲಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹ ಇವರೆಡೂ, ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ.  ಶಾಲೆ ಬಿಟ್ಟ ಮಕ್ಕಳನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಪುನಃ ಶಾಲೆಗೆ ಸೇರಿಸುವ ಕಾರ್ಯದಲ್ಲಿ ನಿರತವಾಗಿರುವುದರ ಜೊತೆಗೆ, ಮಕ್ಕಳನ್ನು ದುಡಿಮೆಗೆ ಬಳಸುವವರನ್ನು ಹಾಗೂ ಬಾಲ್ಯವಿವಾಹ ಪ್ರೋತ್ಸಾಹಿಸುವವರನ್ನು ಶಿಕ್ಷೆಗೆ ಗುರಿಪಡಿಸಲು ಮುಂದಾಗುತ್ತಿದೆ.  14 ವರ್ಷದೊಳಗಿನ ಮಕ್ಕಳನ್ನು ಮನೆಗೆಲಸವೂ ಸೇರಿದಂತೆ ಯಾವುದೇ ಕೆಲಸಗಳಿಗೆ ಬಳಸುವಂತಿಲ್ಲ.  ಇದನ್ನು ಉಲ್ಲಂಘಿಸುವವರಿಗೆ ಕಠಿಣ ಶಿಕ್ಷೆ ಕಾದಿದೆ.  ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯಲ್ಲಿ ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಲಾಗಿದೆ.  ಆದರೆ ಬಹಳಷ್ಟು ಜನರಿಗೆ ಕಾಯ್ದೆ, ಕಾನೂನಿನ ಅರಿವಿಲ್ಲ.  ಕಾನೂನಿನ ಅರಿವಿಲ್ಲ ಎಂದು ಕಾಯ್ದೆ ಉಲ್ಲಂಘಿಸಿದಲ್ಲಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.  ಇದಕ್ಕಾಗಿಯೇ ಎಲ್ಲೆಡೆ ಕಾನೂನಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.  ಬಡತನ, ನಿರುದ್ಯೋಗ, ಅನಕ್ಷರತೆ, ವಲಸೆ ಮುಂತಾದ ಕುಂಟು ನೆಪವೊಡ್ಡಿ, ಹಣ ಹಾಗೂ ದುಡಿಮೆಯ ತಾತ್ಕಾಲಿಕ ಆಸೆಗಾಗಿ ಮಕ್ಕಳನ್ನು ಮನೆಗೆಲಸಕ್ಕೆ, ಹೋಟೆಲ್, ಗ್ಯಾರೇಜ್, ಕೋಳಿ ಫಾರಂ, ಸೀಡ್ಸ್ ಕಂಪನಿ ಮುಂತಾದ ಕಡೆ ದುಡಿಮೆಗೆ ಕಳುಹಿಸುವ ಮೂಲಕ ಪಾಲಕರೇ ತಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ.  ಶಾಲೆಯಿಂದ ಹೊರಗುಳಿಯುವ ಮಕ್ಕಳು ಕುಟುಂಬಕ್ಕೆ ಮತ್ತು ಸಮಾಜಕ್ಕೆ ಯಾವುದೇ ಕೊಡುಗೆ ನೀಡಲು ಸಾಧ್ಯವಿಲ್ಲ.  ಮಕ್ಕಳು ಶಿಕ್ಷಣ ಪಡೆದು ವಿದ್ಯಾವಂತರಾದರೆ, ದೇಶ ಅಭಿವೃದ್ಧಿಯಾದಂತೆ.  ಈ ನಿಟ್ಟಿನಲ್ಲಿ 2020 ರೊಳಗಾಗಿ ರಾಜ್ಯವನ್ನು ಬಾಲಕಾರ್ಮಿಕ ಮುಕ್ತ ರಾಜ್ಯವನ್ನಾಗಿಸಲು ಆಯೋಗವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ಎನ್. ತೊರವಿ ಅವರು ಹೇಳಿದರು.
     ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಹಿರಿಯಶ್ರೇಣಿ ಸಿವಿಲ್ ನ್ಯಾಯಾಧೀಶ ಬಿ. ದಶರಥ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿಯಿಂದ ಶೋಷಣೆಗೆ ಒಳಗಾದವರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ನೆರವು ದೊರೆಯಲಿದೆ.  ಅಲ್ಲದೆ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಿರುವ ಕುರಿತು ಗ್ರಾಮೀಣ ಮಟ್ಟದಲ್ಲೂ ಸಹ ಅರಿವು ಮೂಡಿಸಲಾಗುತ್ತಿದೆ.  ಬಾಲಕಾರ್ಮಿಕ ಪದ್ಧತಿ ಅಥವಾ ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಲ್ಲಿ, ಮಾಹಿತಿ ನೀಡುವ ವ್ಯವಸ್ಥೆಯನ್ನು ಕೈಗೊಳ್ಳಲಾಗುತ್ತಿದೆ ಎಂದರು.
     ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಅವರು ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆ ಸಮಾನತೆಯಿಂದ, ನೆಮ್ಮದಿಯಿಂದ ಜೀವನ ಸಾಗಿಸಬೇಕು ಎನ್ನುವುದು ಸಂವಿಧಾನದ ಆಶಯವಾಗಿದೆ.  ಬಾಲಕಾರ್ಮಿಕ ಪದ್ಧತಿಯು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ.  ಮಕ್ಕಳು ದೇಶದ ಭವಿಷ್ಯ ಹಾಗೂ ಸಂಪತ್ತು.  ಶಿಕ್ಷಣ ಇಂದು ಎಲ್ಲ ಮಕ್ಕಳ ಮೂಲಭೂತ ಹಕ್ಕಾಗಿದ್ದು, ಸರ್ಕಾರದ ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಸೈಕಲ್, ಸಮವಸ್ತ್ರ, ಪುಸ್ತಕ ಮುಂತಾದ ಯೋಜನೆಗಳು ಜಾರಿಯಲ್ಲಿದ್ದರೂ, ಶೇ. 100 ರಷ್ಟು ಮಕ್ಕಳು ಶಿಕ್ಷಣ ಪಡೆಯುತ್ತಿಲ್ಲ.  ಮಕ್ಕಳನ್ನು ದುಡಿಮೆಗೆ ಹಚ್ಚಿ, ವಯಸ್ಕರು, ಪಾಲಕರು ಆರಾಮ ಜೀವನ ನಡೆಸುವುದು ಅತ್ಯಂತ ಕೆಟ್ಟ ಸಂಸ್ಕøತಿಯಾಗಿದೆ.  ಕೇವಲ ರಸ್ತೆ, ಸೇತುವೆ ಕಟ್ಟಡಗಳ ನಿರ್ಮಾಣವಷ್ಟೇ ಅಭಿವೃದ್ಧಿಯಲ್ಲ.  ಎಲ್ಲ ಮಕ್ಕಳು ಶಿಕ್ಷಣ ಪಡೆದು ವಿದ್ಯಾವಂತರಾದರೆ ಅದೇ ನಿಜವಾದ ಅಭಿವೃದ್ಧಿ ಎಂದರು.
     ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಪಾನಘಂಟಿ, ಜಿಲ್ಲಾ ಸರ್ಕಾರಿ ವಕೀಲ ಆಸೀಫ್ ಅಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ.ಎಸ್. ಕಲಾದಗಿ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶೇಖರಗೌಡ ರಾಮತ್ನಾಳ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  ಯುನಿಸೆಫ್ ಜಿಲ್ಲಾ ಸಂಯೋಜಕ ಹರೀಶ್ ಜೋಗಿ ಹಾಗೂ ಬಾಲ ನ್ಯಾಯ ಮಂಡಳಿ ಸದಸ್ಯ ಶಶಿಕಾಂತ ಕಲಾಲ್ ಕಾರ್ಯಕ್ರಮ ಅಂಗವಾಗಿ ವಿಶೇಷ ಉಪನ್ಯಾಸ ನೀಡಿದರು. ರೋಹಿಣಿ ಕೋಟಗಾರ್ ಸ್ವಾಗತಿಸಿದರು, ಬಸವರಾಜ ಹಿರೇಗೌಡ್ರ ನಿರೂಪಿಸಿದರು, ವೀರಣ್ಣ ಕುಂಬಾರ ವಂದಿಸಿದರು.  ಕಾರ್ಯಕ್ರಮದಲ್ಲಿ ಜಿಲ್ಲೆಯ ಕೋಳಿ ಫಾರಂ, ಸೀಡ್ಸ್ ಕಂಪನಿ, ಗ್ಯಾರೇಜ್, ಹೋಟೆಲ್‍ಗಳ ಮಾಲೀಕರು ಪಾಲ್ಗೊಂಡಿದ್ದರು.

ಕೊಪ್ಪಳ ಜಿಲ್ಲೆ ದ್ರಾಕ್ಷಿ ಬೆಳೆಗೆ ಪೂರಕವಾದ ಮಣ್ಣು, ನೀರು, ವಾತಾವರಣ ಹೊಂದಿದೆ- ಜೆ.ಎಸ್. ಪ್ರಕಾಶ್


ಕೊಪ್ಪಳ ಜು. 29 (ಕರ್ನಾಟಕ ವಾರ್ತೆ): ದ್ರಾಕ್ಷಿ ಬೆಳೆ ರೈತರಿಗೆ ಹೆಚ್ಚು ಲಾಭದಾಯಕ ಬೆಳೆಯಾಗಿದ್ದು, ಕೊಪ್ಪಳ ಜಿಲ್ಲೆ ದ್ರಾಕ್ಷಿ ಬೆಳೆಯನ್ನು ಬೆಳೆಯಲು ಪೂರಕವಾದ ಮಣ್ಣು, ನೀರು ಮತ್ತು ವಾತಾವರಣ ಹೊಂದಿದೆ ಎಂದು ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿವೃತ್ತ ಪ್ರಧಾನ ವಿಜ್ಞಾನಿ ಡಾ. ಜೆ.ಎಸ್. ಪ್ರಕಾಶ್ ಹೇಳಿದರು.

     ರಾಯಚೂರು ಕೃಷಿ ವಿಶ್ವವಿದ್ಯಾಲಯ, ಕೊಪ್ಪಳದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ತೋಟಗಾರಿಕೆ ಇಲಾಖೆ, ಹುಬ್ಬಳ್ಳಿಯ ಬಾಯರ್ ಕ್ರಾಪ್ ಸೈನ್ಸಸ್ ಇವರ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಶುಕ್ರವಾರದಂದು ಆಯೋಜಿಸಲಾಗಿದ್ದ ದ್ರಾಕ್ಷಿ ಬೆಳೆ ವಿಚಾರಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
     ದ್ರಾಕ್ಷಿ ಬೆಳೆ, ರೈತರಿಗೆ ಅತ್ಯಂತ ಲಾಭದಾಯಕ ಕೃಷಿಯಾಗಿದೆ.  ದೇಶದಲ್ಲಿ ದ್ರಾಕ್ಷಿ ಬೆಳೆ ಬೆಳೆಯುವ ಪ್ರದೇಶ ವಿಸ್ತರಣೆ ವೇಗವಾಗಿ ಆಗುತ್ತಿದೆ.  ಆದರೆ ದ್ರಾಕ್ಷಿ ಬೆಳೆಗೆ ಪೂರಕವಾಗಿರುವ ಮಣ್ಣು, ನೀರು ಮತ್ತು ಹವಾಮಾನ ಹೊಂದಿರುವ ಕೊಪ್ಪಳ ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆ ಪ್ರದೇಶ ವಿಸ್ತರಣೆ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ.  ಬಿಜಾಪುರ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಉತ್ತಮ ಗುಣಮಟ್ಟದ ದ್ರಾಕ್ಷಿ ಬೆಳೆದು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ.  ಬಿಜಾಪುರ ಜಿಲ್ಲೆಗಿಂತಲೂ ಕೊಪ್ಪಳ ಜಿಲ್ಲೆಯ ಮಣ್ಣು ಮತ್ತು ನೀರು ದ್ರಾಕ್ಷಿ ಬೆಳೆಗೆ ಹೆಚ್ಚು ಅನುಕೂಲಕರವಾಗಿದೆ.  ಆದರೂ ಇಲ್ಲಿನ ರೈತರು ದ್ರಾಕ್ಷಿ ಬೆಳೆಗೆ ಮುಂದಾಗದಿರುವುದು ನಿಜಕ್ಕೂ ಆಶ್ಚರ್ಯವನ್ನು ತಂದಿದೆ.  ಕರ್ನಾಟಕ ರಾಜ್ಯದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಸಾಂಗ್ಲಿ ಮುಂತಾದ ಪ್ರದೇಶಗಳಲ್ಲಿ ಅತ್ಯಲ್ಪ ಸೌಲಭ್ಯದ ನಡುವೆಯೂ ರೈತರು ಉತ್ತಮ ದ್ರಾಕ್ಷಿ ಇಳುವರಿ ಪಡೆದು ಲಾಭ ಕಂಡುಕೊಳ್ಳುತ್ತಿದ್ದಾರೆ.  ದ್ರಾಕ್ಷಿ ಬೆಳೆ ವೈಜ್ಞಾನಿಕ ರೀತಿಯಲ್ಲಿ ಸಿದ್ಧವಾಗಿರುವ ಮಾಡೆಲ್ ನಮ್ಮ ರಾಜ್ಯದಲ್ಲಿದೆ.  ಉತ್ಕøಷ್ಟ ಗುಣಮಟ್ಟದ ದ್ರಾಕ್ಷಿಯನ್ನು ನಮ್ಮ ರಾಜ್ಯದಲ್ಲಿಯೂ ಬೆಳೆಯಲಾಗುತ್ತಿದೆ.  ಇತರೆ ರಾಜ್ಯಗಳಿಗೆ ಹೋಲಿಸಿದಾಗ ಸಂಸ್ಕರಣೆ ಮತ್ತು ಮೌಲ್ಯವರ್ಧಕ ಅಂಶಗಳ ಬಗ್ಗೆ ನಮ್ಮ ರಾಜ್ಯದ ರೈತರಲ್ಲಿ ಮಾಹಿತಿಯ ಕೊರತೆ ಇದೆ.  ಉತ್ತಮ ಪರಿಶ್ರಮ ಹಾಕಿದರೆ, ಪ್ರತಿ ಎಕರೆಗೆ ಕನಿಷ್ಟ 06 ಲಕ್ಷ ರೂ. ನಿವ್ವಳ ಆದಾಯ ಪಡೆಯಲು ಸಾಧ್ಯವಿದೆ.  ಭಾರತ ದೇಶದಿಂದ ಬಾಂಗ್ಲಾ, ಚೀನಾ, ಪೆರು, ಚಿಲಿ, ಅರ್ಜೆಂಟಿನಾ ಸೇರಿದಂತೆ ಒಟ್ಟು 36 ರಾಷ್ಟ್ರಗಳಿಗೆ ಭಾರತ ದೇಶದಿಂದ ಉತ್ತಮ ಗುಣಮಟ್ಟದ ಒಣ ದ್ರಾಕ್ಷಿ ರಫ್ತಾಗುತ್ತಿದೆ.  ಕೆಲವು ಕಂಪನಿಗಳು ನಮ್ಮ ರೈತರಿಂದಲೇ ಖರೀದಿಸಿದ ದ್ರಾಕ್ಷಿಯನ್ನು ಮೌಲ್ಯವರ್ಧಕವನ್ನಾಗಿಸಿ, ವಿದೇಶಗಳಿಗೆ ರಫ್ತು ಮಾಡಿ ಅಧಿಕ ಲಾಭ ಗಳಿಸುತ್ತಿವೆ.  ಮಹಾರಾಷ್ಟ್ರ ರಾಜ್ಯದಲ್ಲಿ ಅತಿ ಹೆಚ್ಚು ದ್ರಾಕ್ಷಿಯನ್ನು ವಿದೇಶಗಳಿಗೆ ರಫ್ತು ಮಾಡಲಾಗುತ್ತಿದೆ.  ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಸರ್ಕಾರದ ವತಿಯಿಂದಲೂ ಅನೇಕ ಸೌಲಭ್ಯಗಳು ದೊರೆಯುತ್ತಿದ್ದು, ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಡಾ. ಜೆ.ಎಸ್. ಪ್ರಕಾಶ್ ಅವರು ರೈತರಿಗೆ ಕರೆ ನೀಡಿದರು.
     ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ರಾಯಚೂರು ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ. ಎಸ್.ಕೆ. ಮೇಟಿ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ತೋಟಗಾರಿಕೆ ಹಾಗೂ ಕೃಷಿಗೆ ಪೂರಕ ವಾತಾವರಣವಿದ್ದು, ನಿಸರ್ಗದ ಸಂಪತ್ತು ಹೇರಳವಾಗಿದೆ.  ಆದರೆ ಅದನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಲಾಭ ಗಳಿಸುವಲ್ಲಿ ರೈತರು ವಿಫಲರಾಗುತ್ತಿದ್ದಾರೆ.  ಮಣ್ಣು ಹಾಗೂ ನೀರಿನ ಗುಣಧರ್ಮಕ್ಕೆ ಅನುಗುಣವಾಗಿ ರೈತರು ಬೆಳೆ ಬೆಳೆಯಬೇಕು.  ಸಮಗ್ರ ಕೃಷಿ ಯೋಜನೆಯಲ್ಲಿ ಯೋಜಿತ ರೀತಿಯಲ್ಲಿ ಕರ್ತವ್ಯ ನಿಷ್ಠೇಯಿಂದ ಬೆಳೆ ಬೆಳೆದರೆ ರೈತರಿಗೆ ನಷ್ಟವೆನ್ನುವ ಮಾತೇ ಇರುವುದಿಲ್ಲ ಎಂದರು.
     ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ ಅವರು ಮಾತನಾಡಿ, ಕೊಪ್ಪಳ ಜಿಲ್ಲೆ ತೋಟಗಾರಿಕೆಯಲ್ಲಿ ಅತ್ಯಂತ ಶ್ರೀಮಂತ ಜಿಲ್ಲೆ.  ಇಲ್ಲಿ ಉತ್ಕøಷ್ಟ ನೀರಿದೆ, ಭೂಮಿ ಇದೆ, ಯುವ ಶಕ್ತಿಯೂ ಇದೆ.   ಆದಾಯದ ಕೊರತೆಯಿದೆ, ಲೈಫ್ ಅನ್ನು ಎಂಜಾಯ್ ಮಾಡಲು ಆಗಲ್ಲ ಎನ್ನುವ ತಪ್ಪು ಮನೋಭಾವದಿಂದ ಯುವಕರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ.  ರೈತರೂ ಸಹ ತಮ್ಮ ಮಕ್ಕಳ ಮನೋಸ್ಥೈರ್ಯ ಕುಗ್ಗಿಸುವಂತಹ ಮಾತುಗಳನ್ನಾಡಿ ಕೃಷಿಯ ಬಗ್ಗೆ ನಿರಾಸಕ್ತಿ ಮೂಡಿಸುತ್ತಿರುವುದು ಸರಿಯಲ್ಲ.  ಬ್ಯಾಂಕ್‍ಗಳು ಕೊಡುವ ಸಾಲವನ್ನು ರೈತರು ಸದ್ಬಳಕೆಗಾಗಿ ವಿನಿಯೋಗಿಸಿಕೊಳ್ಳಬೇಕು.  ರಸಗೊಬ್ಬರಗಳ ಬಳಕೆ ಕಡಿಮೆ ಮಾಡಿ, ಕೊಟ್ಟಿಗೆ, ಎರೆಹುಳು ಗೊಬ್ಬರದ ಬಳಕೆ ಹೆಚ್ಚಿಸಿ, ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯಲು ಸಾಧ್ಯವಿದೆ ಎಂದರು.
     ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಯಂಕಣ್ಣ ಯರಾಶಿ ಅವರು ಮಾತನಾಡಿ, ತಾವು ಅನೇಕ ವರ್ಷಗಳಿಂದ ದ್ರಾಕ್ಷಿ ಬೆಳೆ ಬೆಳೆಯುತ್ತಿದ್ದು, ನೈಸರ್ಗಿಕ ವಿಕೋಪದಿಂದ ಕೆಲವು ಬಾರಿ ನಷ್ಟ ಅನುಭವಿಸಲಾಗಿದೆಯೇ ಹೊರತು, ಬೆಳೆಯ ದರ ಅಥವಾ ವೈಪಲದ್ಯದಿಂದ ಈವರೆಗೂ ಯಾವುದೇ ನಷ್ಟವಾಗಿಲ್ಲ.  ಉತ್ತಮ ಲಾಭವನ್ನೇ ಪಡೆಯಲಾಗಿದೆ ಎಂದರು.
     ಕಾರ್ಯಕ್ರಮದಲ್ಲಿ ಜಂಟಿಕೃಷಿ ನಿರ್ದೇಶಕ ಡಾ. ರಾಮದಾಸ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ್ ಕೋಟಿಮನಿ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯ ವೈಜ್ಞಾನಿಕ ಅಧಿಕಾರಿ ಡಾ. ಬಿ.ಎಂ. ಚಿತ್ತಾಪುರ, ಬಿಜಾಪುರ ಕೃಷಿ ವಿಜ್ಞಾನ ಕೇಂದ್ರದ ಡಾ. ವಸ್ತ್ರದ್, ಹೇಮರಾಜ್ ಶರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.  ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥ ಡಾ. ಎಂ.ಬಿ. ಪಾಟೀಲ್ ಸ್ವಾಗತಿಸಿದರು.  ದ್ರಾಕ್ಷಿ ಬೆಳೆಯ ವಿಚಾರಸಂಕಿರಣದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಹಲವಾರು ರೈತರು ಆಸಕ್ತಿಯಿಂದ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಸ್ಥಗಿತಗೊಂಡ ಸಹಕಾರ ಸಂಘಗಳ ಸಮಾಪನೆ: ಆಕ್ಷೇಪಣೆಗೆ ಆಹ್ವಾನ

ಕೊಪ್ಪಳ ಜು.29 (ಕರ್ನಾಟಕ ವಾರ್ತೆ): ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಲಯ ಕೊಪ್ಪಳ ಇವರು ಜಿಲ್ಲೆಯಲ್ಲಿರುವ ತಾಲೂಕು ಮಟ್ಟಕ್ಕಿಂತ ಕಡಿಮೆ ಕಾರ್ಯವ್ಯಾಪ್ತಿ ಹೊಂದಿರುವ, ಸುಮಾರು ವರ್ಷಗಳಿಂದ ತಮ್ಮ ಕಾರ್ಯ ಚಟುವಟಿಕೆ ನಿರ್ವಹಿಸದೆ ಸ್ಥಗಿತಗೊಂಡಿರುವ ವಿವಿಧ ಸಹಕಾರ ಸಂಘಗಳನ್ನು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಪ್ರಕಾರ ಸಮಾಪನೆ ಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
     ಸಮಾಪನೆಗೊಳ್ಳಲಿರುವ ಸಹಕಾರ ಸಂಘಗಳ ವಿವರ ಇಂತಿದೆ. ಕೊಪ್ಪಳ ತಾಲೂಕಿನ ಭಾಗ್ಯನಗರದ ವಿಮೋಚನಾ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ.  ಕುಷ್ಟಗಿ ತಾಲೂಕಿನ ಗುಡದೂರುಕಲ್ ಹಾಲು ಉತ್ಪಾದಕರ ಸಹಕಾರ ಸಂಘ.  ಮಿಟ್ಲಕೋಡ ಹಾಲು ಉತ್ಪಾದಕರ ಸಹಕಾರ ಸಂಘ.
     ಸಮಾಪನೆಗೊಳ್ಳಲಿರುವ ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಒಂದು ವಾರದೊಳಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯ ಕೊಪ್ಪಳ ಇಲ್ಲಿಗೆ ಸಲ್ಲಿಸಬಹುದು. ನಿಗದಿತ ಕಾಲಾವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಬಾರದೇ ಇದ್ದಲ್ಲಿ ಕಾನೂನು ರೀತ್ಯಾ ಸಮಾಪನೆ ಗೊಳಿಸಲಾಗುವುದು ಎಂದು  ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕೊಪ್ಪಳ ಜು.29 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವೃತ್ತಿಪರ, ಸ್ನಾತಕೋತ್ತರ, ಮೆಡಿಕಲ್, ಇಂಜಿನಿಯರಿಂಗ್ ಹಾಗೂ ನರ್ಸಿಂಗ್ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
       ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವೃತ್ತಿಪರ, ಸ್ನಾತಕೋತ್ತರ, ಮೆಡಿಕಲ್, ಇಂಜಿನಿಯರಿಂಗ್ ಹಾಗೂ ನರ್ಸಿಂಗ್ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
    ಅರ್ಜಿ ಸಲ್ಲಿಸುವವರ ಪಾಲಕರ ವಾರ್ಷಿಕ ಆದಾಯ ಪ್ರವರ್ಗ-1, ಪ.ಜಾತಿ. ಪ.ಪಂಗಡ ಅಭ್ಯರ್ಥಿಗಳ ವಾರ್ಷಿಕ ಆದಾಯ ರೂ.2. 5 ಲಕ್ಷದೊಳಗಿರಬೇಕು. ಪ್ರವರ್ಗ- 2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಅಭ್ಯರ್ಥಿಗಳ ವಾರ್ಷಿಕ ಆದಾಯ 1 ಲಕ್ಷದೊಳಗಿರಬೇಕು.
     ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ www.backwardclasses.kar.nic.in ಇಲ್ಲಿ ಆ.23 ರೊಳಗಾಗಿ ಅರ್ಜಿ ಸಲ್ಲಿಸಬಹುದು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲಾತಿಗಳ ವಿವರ ಮತ್ತು ಸರ್ಕಾರದ ಆದೇಶದ ಮಾಹಿತಿಯನ್ನು ಇಲಾಖೆಯ ವೆಬ್‍ಸೈಟ್‍ನಲ್ಲಿಯೇ ಪಡೆಯಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆ ಉಂಟಾದಲ್ಲಿ ಕಚೇರಿಯ ಇ-ಮೇಲ್  bcmhosteladmission@gmail.com ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
     ಹೆಚ್ಚಿನ ಮಾಹಿತಿಗಾಗಿ ಮೊ-9480818013 ಗೆ ಅಥವಾ ಸಹಾಯವಾಣಿ ಸಂಖ್ಯೆ: 080-44554444 ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಬಿಸಿಎಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರಮಟ್ಟದ ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ ಜು.29 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಯುವಕ, ಯುವತಿಯರಿಗೆ ಹಾಗೂ ನೊಂದಾಯಿತ ಯುವಕ, ಯುವತಿ ಸಂಘಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಗೆ 2015-16 ನೇ ಸಾಲಿನ ರಾಷ್ಟ್ರಮಟ್ಟದ ಯುವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
    ಅರ್ಜಿ ಸಲ್ಲಿಸುವವರ ವಯೋಮಿತಿ 15 ರಿಂದ 29 ವರ್ಷದೊಳಗಿರಬೇಕು. ಜನ್ಮ ದಿನಾಂಕ ದೃಢೀಕೃತ ದಾಖಲಾತಿ ಕಡ್ಡಾಯವಾಗಿ ಸಲ್ಲಿಸಬೇಕು.  2015-16 ಹಾಗೂ ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ರಾಷ್ಟ್ರೀಯ ಅಭಿವೃದ್ಧಿ ಮತ್ತು ಸಮಾಜ ಸೇವೆಯ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದಂತಹ ಕಾರ್ಯಕ್ರಮಗಳ ಪತ್ರಿಕಾ ವರದಿ, ಫೋಟೊ, ಮತ್ತಿತರ ವರದಿಗಳ ಮೂಲ ಪ್ರತಿ ದಿನಾಂಕದೊಂದಿಗೆ, ಬ್ಯಾನರ್ ಸ್ಪಷ್ಟವಾಗಿ ಕಾಣುವಂತೆ ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ನೊಂದಾಯಿತ ಸಂಘ ಸಂಸ್ಥೆಗಳಲ್ಲದೇ ವಿಶ್ವ ವಿದ್ಯಾಲಯಗಳು, ಕಾಲೇಜುಗಳು, ಸ್ಥಳೀಯ ಅಭಿವೃದ್ಧಿ ಇಲಾಖೆಗಳು, ರಾಷ್ಟ್ರೀಯ ಯುವ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ಸಾರ್ವಜನಿಕ ಸಂಸ್ಥೆಗಳು, ನೆಹರೂ ಯುವಕ ಕೇಂದ್ರಗಳು, ರಾಷ್ಟ್ರೀಯ ಯುವ ಸಂಸ್ಥೆಗಳು ಮತ್ತಿತರ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
    ವೈಯಕ್ತಿಕ ಹಾಗೂ ಸಾಂಘಿಕ ಪ್ರಶಸ್ತಿಗೆ ಪ್ರಸ್ತಾವನೆ ಸಲ್ಲಿಸಲು ಎ-4 ಅಳತೆಯ ಕಾಗದದಲ್ಲಿ ಇತ್ತೀಚಿನ ಭಾವಚಿತ್ರದೊಂದಿಗೆ ಸ್ಪಷ್ಟವಾಗಿ ಆಂಗ್ಲ ಭಾಷೆಯಲ್ಲಿ ತ್ರಿ-ಪ್ರತಿಯಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆ.16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಖುದ್ದಾಗಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ ರಸ್ತೆ, ಜಿಲ್ಲಾ ಕ್ರೀಡಾಂಗಣ ಕೊಪ್ಪಳ. ದೂ.ಸಂ:08539-201400 ಇಲ್ಲಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾಸಿರಿ ಹಾಗೂ ವಿವಿಧ ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ

ಕೊಪ್ಪಳ ಜು.29 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ಕೊಪ್ಪಳ ಇವರು ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ, ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು  karepass.cgggov.in  ಹಾಗೂ  www.backwardclasses.kar.nic.in ವೆಬ್‍ಸೈಟ್ ಮೂಲಕ ಸಲ್ಲಿಸಬಹುದು.  
      ಅರ್ಜಿ ಸಲ್ಲಿಸಲು ಸೆ.15 ಕೊನೆಯದಿನ. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಕಚೇರಿ, ಕೊಪ್ಪಳ ದೂ.ಸಂ: 08539-221606 ಅಥವಾ ಮೊ-9480818016 ಇಲ್ಲಗೆ ಸಂಪರ್ಕಿಸಬಹುದು ಅಥವಾ ಸಹಾಯವಾಣಿ ಸಂಖ್ಯೆ-080-44554444 ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಿದ್ದಾಪೂರ ಗ್ರಾಮಕ್ಕೆ ಅಧಿಕಾರಿಗಳ ತಂಡ ಭೇಟಿ ಶೌಚಾಲಯ ನಿರ್ಮಾಣಕ್ಕೆ ಮನವೊಲಿಕೆ

ಕೊಪ್ಪಳ ಜು.29 (ಕರ್ನಾಟಕ ವಾರ್ತೆ): ಗಂಗಾವತಿ ತಾಲೂಕಿನ ಸಿದ್ದಾಪೂರ ಗ್ರಾಮಕ್ಕೆ  ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್ ನೇತೃತ್ವದಲ್ಲಿ ಹಲವು ಅಧಿಕಾರಿಗಳ ತಂಡ ಶುಕ್ರವಾರದಂದು ಬೆಳಗಿನ ಜಾವ 5 ಗಂಟೆಗೆ ಭೇಟಿ ನೀಡಿ ಗ್ರಾಮದ ಮನೆ-ಮನೆಗೆ ತೆರಳಿ ಶೌಚಾಲಯ, ಸ್ವಚ್ಛತೆಯ ಕುರಿತು ತಿಳುವಳಿಕೆ ನೀಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡು ಬಳಸುವಂತೆ ಜಾಗೃತಿ ಮೂಡಿಸಿದರು.
    ಜಿ.ಪಂ ಸಿಇಒ ಆರ್ ರಾಮಚಂದ್ರನ್ ಅವರು ಮನೆ ಮನೆ ಭೇಟಿ ನೀಡುವ ವೇಳೆ ಗ್ರಾಮದ ರಸ್ತೆಯಲ್ಲಿ ನಿಂತ ನೀರು ಇರುವುದನ್ನು ಕಂಡು,  ಇದರಿಂದ ಹಲವಾರು ಖಾಯಿಲೆಗಳು ಹರಡುತ್ತವೆ ನೀರು ನಿಲ್ಲದಂತೆ ಎಚ್ಚರ ವಹಿಸಿ, ಸ್ವಚ್ಚತೆಯನ್ನು ಕಾಪಾಡಬೇಕು ಎಂದು ಗ್ರಾಮಸ್ಥರಿಗೆ ಹೇಳಿದರು. ಮನೆಯ ಸುತ್ತ ಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ ಹಾಗೂ ಶಾಲೆಯ ಸುತ್ತ ಗಿಡ ಮರಗಳನ್ನು ಬೆಳೆಸಿ ಎಂದು ಶಾಲೆಯ ಆವರಣದಲ್ಲಿ ಸಸಿ ನೆಡುವ ಮೂಲಕ ಗ್ರಾಮಸ್ಥರಿಗೆ ಪರಿಸರ ಜಾಗೃತಿ ಮೂಡಿಸಿದರು.
     ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾಲಿಗೆ ಚಪ್ಪಲಿ/ ಬೂಟು ಧರಿಸಬೇಕು ಇಲ್ಲವಾದಲ್ಲಿ ಕಾಲಿನ ಮೂಲಕ ರೋಗಾಣುಗಳು ಹರಡುವ ಸಂಬವವಿರುತ್ತದೆ.  ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಗಮನಿಸಿ ಸ್ವಚ್ಛ ಮತ್ತು ಶಿಸ್ತಿನಿಂದ ಇರಲು ತಿಳಿ ಹೇಳಬೇಕು ಎಂದರು.
     ಸಿದ್ದಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು 1842 ಕುಟುಂಬಗಳಿದ್ದು, ಇದರಲ್ಲಿ 1053 ಕುಟುಂಬಳು ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡು ಬಳಸುತ್ತಿದ್ದಾರೆ. 789 ಕುಟುಂಬಗಳು ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಬಾಕಿ ಇದ್ದು, ಸೆಪ್ಟಂಬರ್ ಅಂತ್ಯದೊಳಗಾಗಿ ಬಾಕಿ ಉಳಿದ ಎಲ್ಲಾ ಕುಟುಂಬಗಳು ಶೌಚಾಲಯ ನಿರ್ಮಿಸಿ, ಬಯಲು ಬಹಿರ್ದೆಸೆ ಮುಕ್ತ ಗ್ರಾಮವನ್ನಾಗಿಸಲು ನಮ್ಮ ಅಧಿಕಾರಿಗಳ ತಂಡ ಶ್ರಮ ವಹಿಸುತ್ತದೆ ಎಂದು ಜಿ.ಪಂ ಸಿಇಓ ಆರ್.ರಾಮಚಂದ್ರನ್ ಅವರು ಹೇಳಿದರು.
     ಜಿಲ್ಲಾ ಸ್ವಚ್ಛ ಭಾರತ ಮಿಶನ್ ಸಿಬ್ಬಂದಿ, ಜಿ.ಪಂ ಸದಸ್ಯರು, ತಾ.ಪಂ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕ ಮಟ್ಟದ ಅಧಿಕಾರಿಗಳು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾ.ಪಂ  ಅಧಿಕಾರಿಗಳು ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ್ದರು.

Thursday, 28 July 2016

ಹಿಟ್ನಾಳ್ ಗ್ರಾಮ ಪಂಚಾಯತಿಯಲ್ಲಿ ಬಾಪೂಜಿ ಸೇವಾ ಕೇಂದ್ರ ಉದ್ಘಾಟಿಸಿದ ಕೃಷಿ ಸಚಿವ ಭೈರೇಗೌಡ

ಪಂಚಾಯತಿ-100 ಯೋಜನೆಯಲ್ಲಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ವಿವಿಧ ಬಗೆಯ 100 ಸೇವೆಗಳನ್ನು ಒದಗಿಸುವ ಬಾಪೂಜಿ ಸೇವಾ ಕೇಂದ್ರವನ್ನು ಹಿಟ್ನಾಳ ಗ್ರಾಮ ಪಂಚಾಯತಿಯಲ್ಲಿ ರಾಜ್ಯ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಉದ್ಘಾಟಿಸಿದರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ವಿಧಾನಪರಿಷತ್ ಸದಸ್ಯ ಬಸವರಾಜ ಪಾಟೀಲ್ ಇಟಗಿ ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಗ್ರಾ.ಪಂ. ಅಧ್ಯಕ್ಷ ಧರ್ಮರಾಜರಾವ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಕೃಷಿ ಯಂತ್ರಧಾರೆ ಮೂಲಕ 10 ಲಕ್ಷ ರೈತರನ್ನು ತಲುಪುವ ಉದ್ದೇಶವಿದೆ- ಕೃಷ್ಣ ಭೈರೇಗೌಡ


ಕೊಪ್ಪಳ ಜು. 28 (ಕರ್ನಾಟಕ ವಾರ್ತೆ): ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರದಾನವಾಗಿರುವ ಕೃಷಿ ಯಂತ್ರಧಾರೆ ಯೋಜನೆಯ ಮೂಲಕ ಕೃಷಿ ಇಲಾಖೆ, ಈ ವರ್ಷ ರಾಜ್ಯದ 10 ಲಕ್ಷ ರೈತರನ್ನು ತಲುಪುವ ಗುರಿ ಹೊಂದಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.

     ಕೃಷಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ತಾಲೂಕಿನ ಹಿಟ್ನಾಳ್ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಗುರುವಾರದಂದು ಆಯೋಜಿಸಲಾಗಿದ್ದ ಕೃಷಿ ಯಂತ್ರಧಾರೆ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ ಸೇವಾ ಕೇಂದ್ರದ ಉದ್ಘಾಟನೆ ಹಾಗೂ ಕೃಷಿ ಹೈಟೆಕ್ ಯಂತ್ರೋಪಕರಣಗಳ ಬೃಹತ್ ವಸ್ತು ಪ್ರದರ್ಶನದ ಉದ್ಘಾಟನೆ ಹಾಗೂ ಹಿಟ್ನಾಳ ಗ್ರಾಮ ಪಂಚಾಯತಿಯಲ್ಲಿ ಬಾಪೂಜಿ ಸೇವಾ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

     ರಾಜ್ಯಾದ್ಯಂತ ತಾವು ಪ್ರವಾಸ ಕೈಗೊಂಡ ಸಂದರ್ಭದಲ್ಲಿ ರೈತರೊಂದಿಗೆ, ಅವರ ಸಮಸ್ಯೆಗಳನ್ನು ಆಲಿಸಿದ್ದೇನೆ.  ಈ ಪೈಕಿ ಬಹುತೇಕ ರೈತರ ಸಮಸ್ಯೆ ಎಂದರೆ, ಯುವ ಪೀಳಿಗೆ ಕೃಷಿಯೇತರ ಕಸುಬಿನತ್ತ ಮುಖ ಮಾಡುತ್ತಿರುವುದರಿಂದ, ಕೃಷಿ ಕೂಲಿ ಕಾರ್ಮಿಕರ ಕೊರತೆಯಾಗುತ್ತಿದ್ದು, ಲಭ್ಯವಿರುವ ಕೂಲಿ ಕಾರ್ಮಿಕರ ವೆಚ್ಚ ಅಧಿಕವಾಗುತ್ತಿದ್ದು, ಕೃಷಿ ಚಟುವಟಿಕೆ ನಡೆಸಲು ತೊಂದರೆಯಾಗುತ್ತಿದೆ ಎಂಬುದಾಗಿತ್ತು.  ಕೃಷಿ ಸಚಿವರಾಗಿ, ಇದಕ್ಕೆ ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರಿತು, ಅತ್ಯಂತ ಕಡಿಮೆ ದರದಲ್ಲಿ ಎಲ್ಲ ರೈತರಿಗೂ ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಸೇವೆ ನೀಡುವಂತಹ ಕೃಷಿ ಯಂತ್ರಧಾರೆ ಯೋಜನೆಯನ್ನು ಕಳೆದ ವರ್ಷ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು. ರೈತರು ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಬಂಡವಾಳ ಹಾಕಿ, ಸಾಲದ ಸುಳಿಗೆ ಸಿಲುಕುವುದನ್ನು ತಪ್ಪಿಸಲು, ಸರ್ಕಾರವೇ ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿ, ಅತ್ಯಲ್ಪ ದರದಲ್ಲಿ ಅಂದರೆ ಮಾರುಕಟ್ಟೆ ದರಕ್ಕಿಂತಲೂ ಶೇ. 30 ರಷ್ಟು ಕಡಿಮೆ ಬಾಡಿಗೆ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಒದಗಿಸಲು ಈ ಯೋಜನೆ ಜಾರಿಗೊಳಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ 04 ಹೋಬಳಿಗಳಲ್ಲಿ ಕೇಂದ್ರ ತೆರೆದಿದ್ದರಿಂದ, 4 ಸಾವಿರ ರೈತರು ಇದರ ಪ್ರಯೋಜನ ಪಡೆದುಕೊಂಡರು. ಯೋಜನೆಯು ಅತ್ಯಂತ ಯಶಸ್ವಿದಾಯಕ ಹಾಗೂ ಜನಪ್ರಿಯವಾಗುತ್ತಿದ್ದು, ಈ ವರ್ಷ ಈಗಾಗಲೆ 3500 ರೈತರು ಇದರ ಪ್ರಯೋಜನ ಪಡೆದಿದ್ದಾರೆ.  ಈ ವರ್ಷ ರಾಜ್ಯದಲ್ಲಿ 315 ಹೊಸ ಕೇಂದ್ರಗಳನ್ನು ಮಂಜೂರು ಮಾಡಿದ್ದು, ಕೊಪ್ಪಳ ಜಿಲ್ಲೆಗೆ ಹೊಸದಾಗಿ 12 ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ.  ಪ್ರತಿ ಕೇಂದ್ರದಲ್ಲೂ 75 ಲಕ್ಷ ರೂ. ಮೊತ್ತದಂತೆ ಒಟ್ಟು 09 ಕೋಟಿ ರೂ. ಗಳ ವೆಚ್ಚದಲ್ಲಿ ಅತ್ಯಾಧುನಿಕ ವಿವಿಧ ಬಗೆಯ ಕೃಷಿ ಯಂತ್ರೋಪಕರಣಗಳನ್ನು ಇಡಲಾಗುವುದು.  ಶೀಘ್ರ ಜಿಲ್ಲೆಯ ಎಲ್ಲ 12 ಕೇಂದ್ರಗಳೂ ಸೇವೆಯನ್ನು ಪ್ರಾರಂಭಿಸಲಿವೆ.  ಮಹಿಂದ್ರಾ & ಮಹಿಂದ್ರಾ ಕಂಪನಿಗೆ ಹೊಸ 12 ಕೇಂದ್ರಗಳ ನಿರ್ವಹಣೆಯ ಜವಾಬ್ದಾರಿಯನ್ನು ನೀಡಲಾಗಿದೆ.  ಕೃಷಿ ಯಂತ್ರಧಾರೆ ಯೋಜನೆಯ ಮೂಲಕ ರಾಜ್ಯದ 10 ಲಕ್ಷ ರೈತರನ್ನು ತಲುಪುವ ಉದ್ದೇಶವನ್ನು ಇಲಾಖೆ ಹೊಂದಿದ್ದು, ಬರುವ ವರ್ಷದಲ್ಲಿ ರಾಜ್ಯದ ಎಲ್ಲ ಹೋಬಳಿ ಕೇಂದ್ರಗಳಲ್ಲೂ ಬಾಡಿಗೆ ಆಧಾರಿತ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ರೈತರಿಗೆ ವರದಾನವಾದ ಕೃಷಿಹೊಂಡ : ಒಣಭೂಮಿ ಮತ್ತು ಖುಷ್ಕಿ ಪ್ರದೇಶದ ರೈತರ ಬದುಕು ಮಳೆಯನ್ನೇ ಆಶ್ರಯಿಸಿದ್ದು, ಮಳೆ ಬಂದರೆ ಬೆಳೆ, ಇಲ್ಲದಿದ್ದರೆ ಬರ ಎದುರಿಸುವ ಸ್ಥಿತಿ.  ಇದನ್ನು ತಪ್ಪಿಸುವ ಉದ್ದೇಶದಿಂದ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದು, ಕೃಷಿ ಹೊಂಡ ನಿರ್ಮಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮುಂದಾಗುತ್ತಿದ್ದಾರೆ.  ಒಮ್ಮೆ ಕೃಷಿ ಹೊಂಡ ತುಂಬಿತೆಂದರೆ, ಕನಿಷ್ಟ 6-7 ಎಕರೆ ಜಮೀನಿನ ಬೆಳೆಯನ್ನು ಉಳಿಸಿಕೊಂಡು, ಆರ್ಥಿಕ ಲಾಭ ಪಡೆಯಬಹುದು.  ರೈತ ಸ್ವಾವಲಂಬಿಗಳಾದರೆ,  ಸ್ವಾಭಿಮಾನಿಯೂ ಆಗುತ್ತಾನೆ.  ಜಿಲ್ಲೆಯಲ್ಲಿ ಈಗಾಗಲೆ 3 ಸಾವಿರ ಕೃಷಿ ಹೊಂಡಗಳು ನಿರ್ಮಾಣವಾಗಿವೆ.  ಈ ವರ್ಷ ಇನ್ನಷ್ಟು ಹೆಚ್ಚಿನ ಕೃಷಿ ಹೊಂಡ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಸಚಿವರು ಹೇಳಿದರು.

ಎಲ್ಲ ರೈತರಿಗೆ ಮಣ್ಣು ಆರೋಗ್ಯ ಚೀಟಿ : ರೈತರು ಮಣ್ಣಿನ ಗುಣಮಟ್ಟಕ್ಕೆ ಅನುಗುಣವಾಗಿ ಗೊಬ್ಬರ ಬಳಸಬೇಕಾಗುತ್ತದೆ.  ಆದರೆ, ರೈತರು, ಕಡಿಮೆ ದರದಲ್ಲಿ ಸಿಗುವ ಗೊಬ್ಬರವನ್ನು ಹೆಚ್ಚು, ಹೆಚ್ಚು ಬಳಸುವುದರಿಂದ ಭೂಮಿಯ ಫಲವತ್ತತೆ ಹಾಳಾಗುವುದಲ್ಲದೆ, ಆರ್ಥಿಕವಾಗಿಯೂ ನಷ್ಟ ಅನುಭವಿಸುತ್ತಾರೆ.  ಇದಕ್ಕಾಗಿಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಮಣ್ಣು ಆರೋಗ್ಯ ಅಭಿಯಾನವನ್ನು ಪ್ರಾರಂಭಿಸಿದ್ದು, ಈಗಾಗಲೆ ರಾಜ್ಯದಲ್ಲಿ 10 ಲಕ್ಷ ಮಣ್ಣಿನ ಮಾದರಿಯನ್ನು ಸಂಗ್ರಹಿಸಲಾಗಿದೆ.  ಇನ್ನೆರಡು ವರ್ಷದೊಳಗೆ ರಾಜ್ಯದ ಎಲ್ಲ ರೈತರಿಗೆ   ತಮ್ಮ ಜಮೀನಿನ ಮಣ್ಣು ಆರೋಗ್ಯ ಚೀಟಿಯನ್ನು ಉಚಿತವಾಗಿ ನೀಡುವ ಗುರಿಯನ್ನು ಹೊಂದಲಾಗಿದೆ.  ಯಾವ ಮಣ್ಣಿಗೆ, ಯಾವ ಮತ್ತು ಎಷ್ಟು ಪ್ರಮಾಣದ ಗೊಬ್ಬರ ಹಾಕಬೇಕು ಎನ್ನುವುದನ್ನು ಈ ಮಣ್ಣು ಆರೋಗ್ಯ ಚೀಟಿ ತೋರಿಸುತ್ತದೆ.  ಈ ಕಾರ್ಡಿನ ಆಧಾರದ ಮೇಲೆ ರೈತರು ತಮ್ಮ ಜಮೀನಿಗೆ ಗೊಬ್ಬರ ಹಾಕುವುದನ್ನು ನಿರ್ಧರಿಸಬಹುದಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.

     ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ರೈತರ ದುಡಿಮೆಗೆ ಶಕ್ತಿ ತುಂಬುವ ಕಾರ್ಯ ಕೃಷಿ ಯಂತ್ರಧಾರೆ ಯೋಜನೆಯಿಂದ ಆಗುತ್ತಿದೆ.  ಕೃಷಿ ಭಾಗ್ಯ ಯೋಜನೆಯಂತಹ ರೈತೋಪಯೋಗಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಕೃಷಿ ಸಚಿವರು ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತಂದಿದ್ದಾರೆ ಎಂದರು.

     ವಿಧಾನಪರಿಷತ್ ಸದಸ್ಯ ಬಸವರಾಜ ಪಾಟೀಲ್ ಇಟಗಿ ಅವರು ಮಾತನಾಡಿ, ದೇಶದ ಆಧಾಯ ಪ್ರಮಾಣವು ಕೃಷಿ ಕ್ಷೇತ್ರವನ್ನು ಅವಲಂಬಿಸಿದ್ದು, ರೈತರ ಮುಖಾಂತರ ಆದಾಯ ತರುವಂತಹ ಕಾರ್ಯಕ್ರಮವನ್ನು ಹಾಕಿಕೊಳ್ಳಬೇಕಿದೆ.  ಆಹಾರಭದ್ರತೆ ಹಾಗೂ ಹಸಿವುಮುಕ್ತ ದೇಶ ನಿರ್ಮಾಣಕ್ಕಾಗಿ ಕೃಷಿ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ.  ಹೊಸ ತಂತ್ರಜ್ಞಾನ ಹಾಗೂ ಸುಧಾರಿತ ಕೃಷಿ ಪದ್ಧತಿಗಳನ್ನು ಅನುಸರಿಸಿ, ಹೆಚ್ಚಿನ ಆಹಾರ ಉತ್ಪಾದನೆ ಮಾಡುವುದು ಈಗಿನ ಪರಿಸ್ಥಿತಿಗೆ ಅನಿವಾರ್ಯವಾಗಿದೆ.  ಈ ನಿಟ್ಟಿನಲ್ಲಿ ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಕಡಿಮೆ ದರದಲ್ಲಿ ಲಭ್ಯವಾಗುವಂತೆ ಸರ್ಕಾರ ಮಾಡಿರುವುದು ಶ್ಲಾಘನೀಯವಾಗಿದೆ ಎಂದರು.

     ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದ್ರಿ, ಗ್ರಾ.ಪಂ. ಅಧ್ಯಕ್ಷ ಧರ್ಮರಾಜರಾವ್, ಜಿ.ಪಂ. ಸದಸ್ಯೆ ಬೀನಾ ಗೌಸ್, ಮಾಜಿ ಶಾಸಕ ಬಸವರಾಜ ಹಿಟ್ನಾಳ್, ಕೊಪ್ಪಳ ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ಟ್ರಿಂಗೋ ಕಂ. ಲಿ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದಕುಮಾರ, ಉಪಸ್ಥಿತರಿದ್ದರು.  ಜಂಟಿಕೃಷಿ ನಿರ್ದೇಶಕ ಡಾ. ರಾಮದಾಸ್ ಸ್ವಾಗತಿಸಿದರು, ಕೃಷಿ ಇಲಾಖೆ ಅಧಿಕಾರಿ ವೀರಣ್ಣ ಕಮತರ್ ನಿರೂಪಿಸಿ ವಂದಿಸಿದರು.
     ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು, ಭತ್ತದ ಗದ್ದೆಯಲ್ಲಿ ಭತ್ತದ ಸಸಿ ನಾಟಿ ಯಂತ್ರವನ್ನು ಚಾಲನೆಗೊಳಿಸಿ, ಖುದ್ದು, ಪ್ರಾತ್ಯಕ್ಷಿಕೆ ನಡೆಸಿದರು.  ಈ ಸಂದರ್ಭದಲ್ಲಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹಾಗೂ ಜಂಟಿಕೃಷಿ ನಿರ್ದೇಶಕ ರಾಮದಾಸ್ ಅವರು ಸಚಿವರಿಗೆ ಸಾಥ್ ನೀಡಿದರು.

ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ

ಕೊಪ್ಪಳ ಜು.28 (ಕರ್ನಾಟಕ ವಾರ್ತೆ) : ರಾಷ್ಟ್ರೀಯ ಮಾದ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಜಿಲ್ಲೆಯ ವಿಶೇಷ ನ್ಯೂನತೆವುಳ್ಳ ಮಕ್ಕಳಿಗೆ ತಜ್ಞ ವೈದ್ಯರಿಂದ ಪ್ರಸಕ್ತ ಸಾಲಿನ ವೈದ್ಯಕೀಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
     ತಪಾಸಣಾ ಶಿಬಿರ ಆಗಸ್ಟ್. 1 ರಿಂದ 4 ರವರೆಗೆ ಪ್ರತಿದಿನ ಒಂದು ತಾಲೂಕಿನಲ್ಲಿ ನಡೆಯಲಿದೆ.  ಆ. 01 ರಂದು ಸ.ಮಾ.ಹಿ ಪಾಥಮಿಕ ಶಾಲೆ ಗಂಗಾವತಿ. ಆ. 02 ರಂದು ಸ.ಹಿ.ಪ್ರಾಥಮಿಕ ಶಾಲೆ ಕುಷ್ಟಗಿ.  ಆ. 03 ರಂದು ಬಿ ಆರ್ ಸಿ ಕೇಂದ್ರ ಯಲಬುರ್ಗಾ. ಆ. 04 ರಂದು ಸ.ಹಿ.ಪ್ರಾಥಮಿಕ ಶಾಲೆ ಸರ್ದಾರಗಲ್ಲಿ ಕೊಪ್ಪಳ ಇಲ್ಲಿ ವೈದ್ಯಕೀಯ ಶಿಬಿರ ನಡೆಯಲಿದೆ.
ತಾಲೂಕಿನಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷ ನ್ಯೂನತೆವುಳ್ಳ ಮಕ್ಕಳ ಪಟ್ಟಿ ಐ.ಇ.ಆರ್.ಟಿ ಗಳು ಹಾಗೂ ವಿಶೇಷ ಶಿಕ್ಷಕರುಗಳು ಬಿಆರ್‍ಸಿ ಕೇಂದ್ರಗಳಲ್ಲಿ ಲಭ್ಯವಿದ್ದು, ಶೇ.40 ಕ್ಕಿಂತ ಹೆಚ್ಚಿನ ನ್ಯೂನತೆವುಳ್ಳ ಮಕ್ಕಳನ್ನು ಸಂಬಂಧಿಸಿದ ಸಿ.ಆರ್.ಪಿ, ಐ.ಇ.ಆರ್.ಟಿ ಗಳು ಹಾಗೂ ವಿಶೇಷ ಶಿಕ್ಷಕರು ವೈದ್ಯಕೀಯ ಶಿಬಿರಕ್ಕೆ ಕರೆತರುವ ಜವಾಬ್ದಾರಿ ವಹಿಸಿಕೊಂಡು ಶಿಬಿರದಲ್ಲಿ ಪಾಲ್ಗೊಳ್ಳಬೇಕು.
     ನಿಗದಿತ ದಿನಾಂಕಗಳಂದು ಸಂಬಂಧಿಸಿದ ಬಿ.ಇ.ಓ/ಬಿ.ಆರ್.ಸಿ ಗಳು ಹಾಜರಿದ್ದು ಶಿಬಿರವನ್ನು ಉದ್ಘಾಟಿಸಿ, ಶಿಬಿರಕ್ಕೆ ಹಾಜರಾಗುವ ಮಕ್ಕಳು ಪಾಲಕರಿಗೆ ಊಟ ನೀರಿನ ವ್ಯವಸ್ಥೆ ಹಾಗೂ ತಜ್ಞ ವೈದ್ಯರುಗಳಿಗೆ ಸಂಚಾರಕ್ಕಾಗಿ ವಾಹನ ಸೌಲಭ್ಯ ಊಟ, ಉಪಹಾರ ಮತ್ತು ಗೌರವ ಧನ ನೀಡುವುದು ಹಾಗೂ ಶಿಬಿರ ಯಶಸ್ವಿಗೊಳಿಸಲು ಸೂಕ್ತ ಕ್ರಮ ವಹಿಸುವಂತೆ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ರಾಷ್ಟ್ರೀಯ ಮಾದ್ಯಮಿಕ ಶಿಕ್ಷಣ ಅಭಿಯಾನ ಕೊಪ್ಪಳ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಂಗಾವತಿ : ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಅರ್ಜಿ

ಕೊಪ್ಪಳ ಜು.28 (ಕರ್ನಾಟಕ ವಾರ್ತೆ): ಗಂಗಾವತಿ ತಾಲೂಕ ಪರಿಶಿಷ್ಠ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಪ. ಪಂಗಡದ 1 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಬೇಕು ಎಂದು ಶಾಲೆಯ ಮುಖ್ಯೋಪಾದ್ಯಾಯರಿಗೆ ತಿಳಿಸಲಾಗಿದೆ.
 ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯೋಪಾದ್ಯಾಯರು, ಪ.ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕಾಗಿ ಪ್ರಸಕ್ತ ಸಾಲಿನ ಒಂದನೇ ತರಗತಿಯ ವಿದ್ಯಾರ್ಥಿಗಳ ಅರ್ಜಿಗಳನ್ನು ಆನ್‍ಲೈನ್ ಮೂಲಕ ಆ.15 ರೊಳಗಾಗಿ ಸಲ್ಲಿಸಬೇಕು.
ವಿದ್ಯಾರ್ಥಿಗಳು ತಮ್ಮ ಶಾಲೆಗೆ ವರ್ಗಾವಣೆಯಾಗಿ ಬಂದ ಮಾಹಿತಿಯನ್ನು ಅನುಬಂಧ-1 ರಲ್ಲಿ ಭರ್ತಿ ಮಾಡಿ ಹಾಗೂ ಇದುವರೆಗೂ ಆನ್‍ಲೈನ್ ಮೂಲಕ ನೋಂದಣಿ ಮಾಡದ 2 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ನೋಂದಣಿ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್   http://sw.kar.nic.in ಇಲ್ಲಿ ಪಡೆದು ಭರ್ತಿ ಮಾಡಿ ನಿಗದಿತ ದಾಖಲಾತಿಗಳೊಂದಿಗೆ ಆ.06 ರೊಳಗಾಗಿ ಕಾರ್ಯಲಯಕ್ಕೆ ಸಲ್ಲಿಸಬೇಕು. ಅನುಬಂಧಗಳನ್ನು ತಾಲೂಕ ಪರಿಶಿಷ್ಠ ವರ್ಗಗಳ ಕಲ್ಯಾಣ ಅಧಿಕಾರಿಗಳು, ಗಂಗಾವತಿ ಇವರ ಕಾರ್ಯಾಲಯದಲ್ಲಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯ ಮಟ್ಟದ ಹಿರಿಯ ನಾಗರಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ ಜು.28 (ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಕ್ಟೋಬರ್-1 ರಂದು ನಡೆಯುವ ವಿಶ್ವ ಹಿರಿಯ ನಾಗರಿಕ ದಿನಾಚರಣೆ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 6 ಜನ ನಾಗರಿUಕರಿಗೆ ಹಾಗೂ ಒಂದು ಸಂಸ್ಥೆಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು ಜಿಲ್ಲೆಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
    ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಸಮಾಜ ಸೇವೆÀಯನ್ನು ಒಳಗೊಂಡಂತೆ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸಿತ್ತಿರುವ ಒಂದು ಸಂಸ್ಥೆ ಸೇರಿದಂತೆ ಒಟ್ಟು 07 ರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುವುದು.  ಕೊಪ್ಪಳ ಜಿಲ್ಲೆಯಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
     ನಿಗದಿತ ಅರ್ಜಿ ನಮೂನೆಯನ್ನು ಕಛೇರಿಯಲ್ಲಿ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದ್ವಿ ಪ್ರತಿಯಲ್ಲಿ ಆ.16 ರೊಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾ ಆಸ್ಪತ್ರೆ ಕೊಪ್ಪಳ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 08539-220596 ಕ್ಕೆ ಸಂಪರ್ಕಿಸಬಹುದು.

ಶಾಲಾ ಕಾಲೇಜುಗಳಲ್ಲಿ ವಿದ್ಯುತ್ ಸಂಪರ್ಕಕ್ಕೆ ಸುರಕ್ಷತಾ ಕ್ರಮ ಕೈಗೊಳ್ಳಲು ಸೂಚನೆ

ಕೊಪ್ಪಳ ಜು. 28 (ಕರ್ನಾಟಕ ವಾರ್ತೆ) : ಎಲ್ಲ ಶಾಲಾ ಕಾಲೇಜುಗಳಲ್ಲಿ ವಿದ್ಯುತ್ ವೈರಿಂಗ್ ಸಂಪರ್ಕಕ್ಕೆ ಸಂಬಂಧಿಸಿದಂತೆ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ.
     ರಾಜ್ಯದ ಕೆಲವು ಶಾಲಾ ಕಾಲೇಜುಗಳಲ್ಲಿ ವಿದ್ಯುತ್ ತಂತಿಗಳಿಂದ ವಿದ್ಯಾರ್ಥಿಗಳಿಗೆ ಹಾನಿಯುಂಟಾಗಿರುವುದು ಇಲಾಖೆಯ ಗಮನಕ್ಕೆ ಬಂದಿದೆ.  ಈ ಹಿನ್ನೆಲೆಯಲ್ಲಿ ಎಲ್ಲ ಶಾಲಾ ಕಾಲೇಜುಗಳಲ್ಲಿ ಅರ್ಥಿಂಗ್ ಹಾಗೂ ವಿದ್ಯುತ್ ತಂತಿಗಳು, ವಿದ್ಯುತ್ ವೈರಿಂಗ್ ಸಮರ್ಪಕವಾಗಿರಬೇಕು.  ಅಲ್ಲದೆ ಮಕ್ಕಳಿಗೆ ಹಾನಿಯುಂಟು ಮಾಡುವ ವಸ್ತುಗಳನ್ನು, ವಿದ್ಯಾರ್ಥಿಗಳ ಕಣ್ಣಿಗೆ ಬೀಳದಂತೆ ಸಂಪೂರ್ಣವಾಗಿ ಮತ್ತು ಸುರಕ್ಷಿತವಾಗಿ ಮುಚ್ಚಿ ಯಾವುದೇ ಅನಾಹುತಗಳು ಉಂಟಾಗದಂತೆ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಅವರು ಸುತ್ತೋಲೆ ಮೂಲಕ ಸೂಚನೆ ನೀಡಿದ್ದಾರೆ.

ಉಪವಾಸ ಮಾಡಿ ಶೌಚಾಲಯ ಗಿಟ್ಟಿಸಿದ ಸ್ವಚ್ಛಾಗ್ರಹಿ ಮಲ್ಲಮ್ಮ

ಕೊಪ್ಪಳ ಜು. 28 (ಕರ್ನಾಟಕ ವಾರ್ತೆ): ಶೌಚಾಲಯಕ್ಕಾಗಿ ಉಪವಾಸ ಸತ್ಯಾಗ್ರಹ ಮಾಡಿ, ನಾಡಿನಾದ್ಯತ ಎಲ್ಲರ ಗಮನಸೆಳೆದಿದ್ದ ಮಲ್ಲಮ್ಮಳ ಸತ್ಯಾಗ್ರಹಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಮಲ್ಲಳ ಬಯಕೆಯಂತೆ ಶೌಚಾಲಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.
     ಗಂಗಾವತಿ ತಾಲೂಕಿನ ಡಣಾಪುರ ಗ್ರಾಮಕ್ಕೆ ಗುರುವಾರದಂದು ಭೇಟಿ ನೀಡಿದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು, 10 ನೇ ತರಗತಿ ವಿದ್ಯಾರ್ಥಿನಿ ಮಲ್ಲಮ್ಮಳ ಮನೆಗೆ ಭೇಟಿ ನೀಡಿ, ಪೂರ್ಣಗೊಂಡ ಶೌಚಾಲಯವನ್ನು ವೀಕ್ಷಿಸಿದರು.  ನಂತರ ಮಾತನಾಡಿದ ಅವರು, ಸತ್ಯಕ್ಕಾಗಿ ಹೋರಾಡುವವರು ಸತ್ಯಾಗ್ರಹಿ.  ಸ್ವಚ್ಛತೆಗಾಗಿ ಹೋರಾಡುವವರು ಸ್ವಚ್ಛಾಗ್ರಹಿ.  ಈ ದಿಸೆಯಲ್ಲಿ ಕೊಪ್ಪಳ ಜಿಲ್ಲೆಯ ಮಲ್ಲಮ್ಮ ನಿಜಕ್ಕೂ ಸ್ವಚ್ಛಾಗ್ರಹಿ ಎಂಬುದಾಗಿ ಮಲ್ಲಮ್ಮಳನ್ನು ಪ್ರಶಂಸಿದರು.  ಮಲ್ಲಮ್ಮಳ ಉಪವಾಸ ಸತ್ಯಾಗ್ರಹಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಇದೀಗ ಆಕೆಯ ಮನೆಯ ಮುಂದೆ ಶೌಚಾಲಯ ನಿರ್ಮಾಣ ಪೂರ್ಣಗೊಂಡಿದೆ.  ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗುವವರೆಗೂ, ಜಾಗೃತಿಗಾಗಿ ಗ್ರಾಮಗಳ ಭೇಟಿ ನಿರಂತರವಾಗಿರುತ್ತದೆ.  ಮಲ್ಲಮ್ಮ ವಿದ್ಯಾರ್ಥಿನಿ ಈ ನಾಡಿನ ಎಲ್ಲ ವಿದ್ಯಾರ್ಥಿಗಳಿಗೂ ಮಾದರಿಯಾಗಿದ್ದು, ಪ್ರತಿ ಗ್ರಾಮದಲ್ಲೂ ಮಲ್ಲಮ್ಮನಂತೆ ಎಲ್ಲರೂ ತಮ್ಮ ಪಾಲಕರಿಗೆ ಶೌಚಾಲಯಕ್ಕಾಗಿ ಒತ್ತಾಯಿಸುವಂತಾಗಬೇಕು.  ಶಿಕ್ಷಕರ ಮಾತನ್ನು ಮಕ್ಕಳು ವೇದವಾಕ್ಯವೆಂಬಂತೆ ನಂಬುತ್ತಾರೆ.  ಈ ನಿಟ್ಟಿನಲ್ಲಿ ಶಾಲಾ ಶಿಕ್ಷಕರು ವೈಯಕ್ತಿಕ ಶೌಚಾಲಯಕ್ಕಾಗಿ ಮಕ್ಕಳನ್ನು ಪ್ರೇರೇಪಿಸಬೇಕು ಎಂದರು.
     ಶೌಚಾಲಯ ನಿರ್ಮಾಣ ಕುರಿತು ಪ್ರತಿಕ್ರಿಯಿಸಿದ ಮಲ್ಲಮ್ಮ, ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳ ಸಹಕಾರದಿಂದ ಕೇವಲ ಒಂದು ವಾರದೊಳಗೆ ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಶೌಚಾಲಯ ನಿರ್ಮಾಣಗೊಂಡಿದ್ದು, ಇದಕ್ಕಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ.  ಎಲ್ಲ ಕುಟುಂಬಗಳಿಗೂ ಕಡ್ಡಾಯವಾಗಿ ಶೌಚಾಲಯ ಇರಲೇಬೇಕು. ಇದು ಸ್ವಾಭಿಮಾನದ ಸಂಕೇತ ಎಂದರು.
     ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಜಿ.ಪಂ. ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಯಲು ಶೌಚಕ್ಕೆ ಹೊರಟಿದ್ದವರ ತಡೆದು ಬುದ್ದಿ ಹೇಳಿದ ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ

ಕೊಪ್ಪಳ ಜು. 28 (ಕರ್ನಾಟಕ ವಾರ್ತೆ): ತಾಲೂಕಿನ ಹೊರತಟ್ನಾಳ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಬಯಲು ಬಹಿರ್ದೆಸೆಗೆ ಹೊರಟಿದ್ದ ಗ್ರಾಮಸ್ಥರನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ತಡೆದು, ವಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಬುದ್ದಿವಾದ ಹೇಳಿದರು.
     ಕೋಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಶೌಚಾಲಯ ಜಾಗೃತಿ ಅಭಿಯಾನವನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ಹಮ್ಮಿಕೊಂಡಿದ್ದು, ನಿತ್ಯ ಬೆಳಿಗ್ಗೆ ಒಂದೊಂದು ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರಲ್ಲಿ ಶೌಚಾಲಯ ಕುರಿತಂತೆ ಅರಿವು ಮೂಡಿಸುತ್ತಿದ್ದಾರೆ.  ಅಲ್ಲದೆ ಶೌಚಾಲಯ ನಿರ್ಮಾಣ ಕಾಮಗಾರಿಗೆ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸುವ ಕಾರ್ಯಕ್ರಮವನ್ನೂ ಜಾರಿಗೊಳಿಸುತ್ತಿದ್ದಾರೆ.  ಅದರಂತೆ ಹೊರತಟ್ನಾಳ ಗ್ರಾಮದಲ್ಲಿ ಗುರುವಾರದಂದು ಭೇಟಿ ನೀಡಿದ ಜಿ.ಪಂ. ಅಧ್ಯಕ್ಷರು, ಬಯಲು ಬಹಿರ್ದೆಸೆಗೆ ತೆರಳುತ್ತಿದ್ದ ಗ್ರಾಮಸ್ಥರನ್ನು ತಡೆದು, ಎಲ್ಲರ ಆರೋಗ್ಯ ದೃಷ್ಟಿಯಿಂದ ತಪ್ಪದೆ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಬುದ್ದಿವಾದ ಹೇಳಿದರು.
     ಹೊರತಟ್ನಾಳ ಗ್ರಾಮದಲ್ಲಿ ಒಟ್ಟು 177ಕುಟುಂಬಗಳಿದ್ದು ಅದರಲ್ಲಿ ಈಗಾಗಲೇ 84ಕುಟುಂಬಗಳು ಶೌಚಾಲಯ ಹೊಂದಿದ್ದು ಉಳಿದ ಕುಟುಂಬಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅವರಿಂದ ಅರ್ಜಿ ಸ್ವೀಕರಿಸಿದ್ದು ಕಾಮಗಾರಿ ಆದೇಶ ನೀಡಲಾಗಿದೆ.  ಗ್ರಾ.ಪಂ. ಅರ್ಧಯಕ್ಷೆ ಬಸಮ್ಮ ಹೆಚ್. ಪೂಜಾರ್, ಉಪಾಧ್ಯಕ್ಷೆ ಶಿವಮ್ಮ ಭೂತಣ್ಣವರ, ಪಿಡಿಓ ವೈಜನಾಥ ಸಾರಂಗಮಠ, ಕಾರ್ಯದರ್ಶಿ ಮರಿಯಪ್ಪ ಮಡಿವಾಳ, ಗಾಳೆಪ್ಪ ಪೂಜಾರ್ ಸೇರಿದಂತೆ ಹಲವರು ಜಿ.ಪಂ. ಅಧ್ಯಕ್ಷರೊಂದಿಗೆ ತೆರಳಿ ಜಾಗೃತಿ ಮೂಡಿಸಿದರು.

ಜು. 29 ರಂದು ಜಿಲ್ಲಾ ದ್ರಾಕ್ಷಿ ಬೆಳೆಗಾರರ ಸಮಾವೇಶ ಹಾಗೂ ವಿಚಾರ ಸಂಕೀರಣ

ಕೊಪ್ಪಳ ಜು. 28 (ಕರ್ನಾಟಕ ವಾರ್ತೆ): ಕೊಪ್ಪಳದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವತಿಯಿಂದ ಜಿಲ್ಲಾ ದ್ರಾಕ್ಷಿ ಬೆಳೆಗಾರರ ಸಮಾವೇಶ ಮತ್ತು ದ್ರಾಕ್ಷಿ ಬೆಳೆಯ ವಿಚಾರ ಸಂಕೀರಣ ಜು. 29 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ನಡೆಯಲಿದೆ.
     ರಾಯಚೂರಿನ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಪಿ.ಎಂ. ಸಾಲಿಮಠ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ವಿಸ್ತರಣಾ ನಿರ್ದೇಶಕ ಡಾ. ಎಸ್. ಕೆ. ಮೇಟಿ ಅವರು ಅಧ್ಯಕ್ಷತೆ ವಹಿಸುವರು.  ಅತಿಥಿಗಳಾಗಿ ಸಂಶೋಧನಾ ನಿರ್ದೇಶಕ ಡಾ. ಐ. ಶಂಕರೇಗೌಡ, ಕೊಪ್ಪಳದ ಜಿಲ್ಲಾ ಹಾಪ್‍ಕಾಂ ಅಧ್ಯಕ್ಷ ಯಂಕಣ್ಣ ಯರಾಶಿ, ಬಾಯರ್ ಕಂಪನಿಯ ಮಠದ,  ಜಂಟಿ ಕೃಷಿ ನಿರ್ದೇಶಕ ಡಾ. ಎ.ರಾಮದಾಸ ಮತ್ತು ತೋಟಗಾರಿಕೆ ಉಪ ನಿರ್ದೇಶಕ ಶಶಿಕಾಂತ ಕೋಟಿಮನಿ ಭಾಗವಹಿಸುವರು.   ಸಮಾವೇಶದಲ್ಲಿ ಬೆಂಗಳೂರಿನ ದ್ರಾಕ್ಷಿ ತಜ್ಞರುಗಳಾದ ಡಾ. ಪ್ರಕಾಶ್.ಜಿ.ಎಸ್, ಡಾ. ವಸ್ತ್ರದ, ಡಾ. ನಿಡೋಣಿ, ಡಾ. ಬದರಿಪ್ರಸಾದ ರೈತರಿಗೆ ಮಾಹಿತಿ ನೀಡುವರು.  ಈ ಕಾರ್ಯಕ್ರಮವನ್ನು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳ, ತೋಟಗಾರಿಕೆ ಇಲಾಖೆ, ಕೊಪ್ಪಳ, ಗಂಗಾವತಿ ಹಾಗೂ ಬಾಯರ್ ಸಂಸ್ಥೆಯ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.  ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳುಗಳಾದ ಡಾ. ಎಮ್.ಬಿ. ಪಾಟೀಲ ರವರು ಮನವಿ ಮಾಡಿಕೊಂಡಿದ್ದಾರೆ.  ಹೆಚ್ಚಿನ ಮಾಹಿತಿಗಾಗಿ 08539-220305 ಹಾಗೂ ಮೊಬೈಲ್ 9480696319 ಸಂಪರ್ಕಿಸಲು ಕೋರಿದೆ.  

ನಾರಿಶಕ್ತಿ ಪುರಸ್ಕಾರ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ಜು.28 (ಕರ್ನಾಟಕ ವಾರ್ತೆ): ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು 2016-17 ನೇ ಸಾಲಿಗೆ ಕೊಡಮಾಡುವ ‘ನಾರಿಶಕ್ತಿ ಪುರಸ್ಕಾರ’ ಪ್ರಶಸ್ತಿಗಳಿಗಾಗಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆಗೈದಿರುವ ವ್ಯಕ್ತಿಗಳಿಂದ ಹಾಗೂ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
    ರಾಣಿ ರುದ್ರಮ್ಮ ದೇವಿ ಪ್ರಶಸ್ತಿ: ಮಹಿಳೆಯರಿಗಾಗಿ ಸಮುದಾಯದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಗ್ರಾಮ ಪಂಚಾಯತಿಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು(ಜಿಲ್ಲಾ ಪಂಚಾಯತಿ ಮುಖಾಂತರ).
ಮಾತಾ ಜಿಜಾಬಾಯಿ ಪ್ರಶಸ್ತಿ:  ಮಹಿಳೆಯರಿಗಾಗಿ ಉತ್ತಮ ಸೇವೆ, ಹಾಗೂ ವಿಶೇಷ ಕಾಳಜಿ ವಹಿಸಿ ಕಾರ್ಯ ನಿರ್ವಹಿಸುವ ನಗರ/ಪುರಸಭೆ ಪ್ರಾಧಿಕಾರವನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು.
ಕನ್ನಗಿದೇವಿ ಹಾಗೂ ಅಹಲ್ಯ ಓಳಕರ್ ಪ್ರಶಸ್ತಿ: ಮಹಿಳೆಯರಿಗೆ ಉದ್ಯೋಗ ಅವಕಾಶ ನೀಡಿ ಅವರನ್ನು ಉತ್ತಮ ಸ್ಥಾನಕ್ಕೆ ಕೊಂಡೊಯ್ದ ಉತ್ತಮ ಖಾಸಗಿ ಸಂಸ್ಥೆ/ಕಂಪನಿಗೆ ಈ ಪ್ರಶಸ್ತಿ ನೀಡಲಾಗುವುದು.
ರಾಣಿ ಲಕ್ಷ್ಮೀ ಬಾಯಿ ಪ್ರಶಸ್ತಿ: ಸಂಶೋಧನಾ ಮತ್ತು ಅಭಿವೃದ್ಧಿ ಕುರಿತು ಮಹಿಳೆಯರಿಗೆ ಅನುಕೂಲವಾಗುವ ರೀತಿಯಲ್ಲಿ ಸೇವೆಸಲ್ಲಿಸುತ್ತಿರುವ ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಲಾಗುವುದು.
ಮಹಿಳೆಯರಿಗೆ ನೀಡುವ ವೈಯಕ್ತಿಕ ಪ್ರಶಸ್ತಿ: ಮಹಿಳೆಯರ ಸಾಮಾಜಿಕ ಆರ್ಥಿಕ ವೃತ್ತಿಪರ ಹಾಗೂ ಮಹಿಳಾ ಕಾನೂನುಗಳನ್ನು ಜಾರಿಗೆ ತರುವಲ್ಲಿ ಶ್ರಮಿಸಿರುವಂತಹ ಮಹಿಳೆಯರಿಗೆ ಕಲೆ, ವಿಜ್ಞಾನ, ಶಿಕ್ಷಣ, ತಂತ್ರಜ್ಞಾನ, ಸಾಂಸ್ಕøತಿಕ, ಕ್ರೀಡಾ ಕ್ಷೇತ್ರಗಳಲ್ಲಿ ಶ್ರಮಿಸಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು.
     ಪ್ರಸ್ತಾವನೆ ಸಲ್ಲಿಸಲು ಆ.12 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಕೊಪ್ಪಳ ಜು. 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಜು. 30 ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಸಚಿವರು ಅಂದು ಬೆಳಿಗ್ಗೆ 9-30 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು.  ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಜ್ಯ ಕಂದಾಯ ಸಚಿವರೊಂದಿಗೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು.  ಬೆಳಿಗ್ಗೆ 11-30 ಗಂಟೆಗೆ ಯಲಬುರ್ಗಾಕ್ಕೆ ತೆರಳಿ, ಸಾರ್ವಜನಿಕ ಕುಂದುಕೊರತೆ ವಿಚಾರಣೆ ಕೈಗೊಳ್ಳುವರು.  ರಾತ್ರಿ 8 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಹಂಪಿ ಎಕ್ಸ್‍ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Wednesday, 27 July 2016

ಓಜನಹಳ್ಳಿ ಗ್ರಾ.ಪಂ. ನಲ್ಲಿ ಬಾಪೂಜಿ ಸೇವಾ ಕೇಂದ್ರ ಶಾಸಕ ರಾಘವೇಂದ್ರ ಹಿಟ್ನಾಳ್‍ರಿಂದ ಉದ್ಘಾಟನೆಕೊಪ್ಪಳ ಜು. 27 (ಕರ್ನಾಟಕ ವಾರ್ತೆ) : ಪಂಚಾಯತಿ-100 ಯೋಜನೆಯಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲೇ 100 ವಿವಿಧ ಸೇವೆಗಳು ಲಭ್ಯವಾಗುವ ಬಾಪೂಜಿ ಸೇವಾ ಕೇಂದ್ರವನ್ನು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ತಾಲೂಕಿನ ಓಜನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಬುಧವಾರದಂದು ಉದ್ಘಾಟಿಸಿದರು.
     ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಗ್ರಾ.ಪಂ. ಅಧ್ಯಕ್ಷ ಬಿ.ವೈ. ಯಮನೂರಪ್ಪ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 

ಜು. 29 ರಂದು ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ

ಕೊಪ್ಪಳ ಜು. 27 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098, ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಕೋಳಿಫಾರಂ, ಹೋಟೆಲ್, ಗ್ಯಾರೇಜ್, ಸೀಡ್ಸ್ ಕಂಪನಿಗಳ ಮಾಲೀಕರುಗಳಿಗೆ ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ಜು. 29 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾ ನ್ಯಾಯಾಲಯ ಆವರಣದ ಸಾಕ್ಷಿದಾರರ ಮೊಗಸಾಲೆಯಲ್ಲಿ ಆಯೋಜಿಸಲಾಗಿದೆ.
     ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ. ದಶರಥ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ಎನ್. ತೊರವಿ, ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಬಿ. ಪಾನಘಂಟಿ, ಜಿಲ್ಲಾ ಸರ್ಕಾರಿ ವಕೀಲ ಆಸೀಫ್ ಅಲಿ ಮುಂತಾದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಕಾರ್ಯಕ್ರಮದ ಅಂಗವಾಗಿ ಯುನಿಸೆಫ್ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್ಟ, ಜಿಲ್ಲಾ ಸಂಯೋಜಕ ಹರೀಶ್ ಜೋಗಿ, ಬಾಲ ನ್ಯಾಯ ಮಂಡಳಿ ಸದಸ್ಯ ಶಶಿಕಾಂತ ಕಲಾಲ್ ವಿಶೇಷ ಉಪನ್ಯಾಸ ನೀಡುವರು.

ಜಿಲ್ಲಾ ಪಂಚಾಯತಿ ಅಧ್ಯಕ್ಷರಿಂದ ಗುನ್ನಾಳ ಗ್ರಾಮದಲ್ಲಿ ಶೌಚಾಲಯ ಜಾಗೃತಿ

ಕೊಪ್ಪಳ ಜು. 27 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕು ಕೋಳೂರು ಗ್ರಾಮ ಪಂಚಾಯತಿ ಅಕ್ಟೋಬರ್ 02 ರ ಒಳಗಾಗಿ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಪಂಚಾಯತಿಯಾಗಿಸಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಸಹಕಾರ ಅಗತ್ಯವಿದೆ.  ಈ ನಿಟ್ಟಿನಲ್ಲಿ ಎಲ್ಲರೂ ವೈಯಕ್ತಿಕ ಶೌಚಾಲಯಗಳನ್ನು ತಪ್ಪದೆ ನಿರ್ಮಿಸಿಕೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ಮನವಿ ಮಾಡಿಕೊಂಡರು.
     ಕೋಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗುನ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಶೌಚಾಲಯಗಳ ಮಹತ್ವ ಕುರಿತಂತೆ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣದ ಆದೇಶ ಪತ್ರವನ್ನು ವಿತರಿಸಿ ಅವರು ಮಾತನಾಡಿದರು.
     ಕೋಳೂರು ಗ್ರಾಮ ಪಂಚಾಯತಿಯನ್ನು ಇದೇ ಅಕ್ಟೋಬರ್ 02 ರ ಒಳಗಾಗಿ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಪಂಚಾಯತಿಯಾಗಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದಕ್ಕೆ ಪೂರಕವಾಗಿ ಗ್ರಾಮಸ್ಥರ ಸ್ಪಂದನೆಯು ಉತ್ತಮವಾಗಿದೆ.  ಇದೇ ಗುರಿಯನ್ನಿಟ್ಟುಕೊಂಡು ಆಗಸ್ಟ್ 01 ರವರೆಗೂ ಕೊಳೂರು ಗ್ರಾಮ ಪಂಚಾಯತಿಯಲ್ಲಿ ಆಗಸ್ಟ್ 01 ರವರೆಗೆ ನಿತ್ಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.  ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರೂ ಸಹ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಿದ್ದಾರೆ ಎಂದು ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.
     ಗುನ್ನಳ್ಳಿ ಗ್ರಾಮದಲ್ಲಿ 147 ಕುಟುಂಬಗಳಿದ್ದು, ಈಗಾಗಲೆ 82 ಕುಟುಂಬಗಳು ಶೌಚಾಲಯ ಹೊಂದಿವೆ.  ಉಳಿದ ಕುಟುಂಬಗಳು ಇದೀಗ ಶೌಚಾಲಯ ನಿರ್ಮಾಣಕ್ಕೆ ಕಾಮಗಾರಿ ಆದೇಶ ಪಡೆದುಕೊಂಡಿವೆ.
     ಕಾರ್ಯಕ್ರಮದಲ್ಲಿ ಗಣ್ಯರಾದ ಗಾಳೆಪ್ಪ ಪೂಜಾರ್,  ಗ್ರ್ರಾಮ ಪಂಚಾಯತಿ ಅಧ್ಯಕ್ಷೆ ಬಸಮ್ಮ ಹೆಚ್.ಪೂಜಾರ,  ಗ್ರಾ.ಪಂ ಉಪಾಧ್ಯಕ್ಷೆ ಶಿವಮ್ಮ ಎಸ್. ಭೂತಣ್ಣವರ, ಗ್ರಾ.ಪಂ ಸರ್ವ ಸದಸ್ಯರು, ಪಿಡಿಒ ವೈಜನಾಥ ಸಾರಂಗಮಠ, ಕಾರ್ಯದರ್ಶಿ ಮರಿಯಪ್ಪ ಮಡಿವಾಳರ, ಆರೋಗ್ಯ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮುಖ್ಯೋಪಾಧ್ಯಾಯರು, ಸಾರ್ವಜನಿಕರು, ಶಾಲಾ ಮಕ್ಕಳು, ಪಾಲ್ಗೊಂಡಿದ್ದರು.

ಜಿಲ್ಲಾ ಸಂಖ್ಯಾ ಸಂಗ್ರಣಾಧಿಕಾರಿಯಾಗಿ ಕೃಷ್ಣಮೂರ್ತಿ ದೇಸಾಯಿ ಅಧಿಕಾರ ಸ್ವೀಕಾರ

  1. ಕೊಪ್ಪಳ ಜು. 27 (ಕರ್ನಾಟಕ ವಾರ್ತೆ): ಸಾಂಖ್ಯಿಕ ಮತ್ತು ಯೋಜನಾ ಇಲಾಖೆಯ ಕೊಪ್ಪಳ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಯಾಗಿ ಕೃಷ್ಣಮೂರ್ತಿ ದೇಸಾಯಿ ಅವರು ಬುಧವಾರದಂದು ಅಧಿಕಾರ ವಹಿಸಿಕೊಂಡರು.
         ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಭೀಮಶಾ ಸಿಂಗೆ ಅವರು ಯಾದಗಿರಿ ಜಿಲ್ಲೆಗೆ ವರ್ಗಾವಣೆಗೊಂಡ ಕಾರಣ, ತೆರವಾದ ಹುದ್ದೆಗೆ ಕೃಷ್ಣಮುರ್ತಿ ದೇಸಾಯಿ ಅವರನ್ನು ಸರ್ಕಾರ ನೇಮಿಸಿದ್ದು, ಬುಧವಾರದಂದು ಇವರು ಅಧಿಕಾರ ವಹಿಸಿಕೊಂಡರು.

ಹಣ್ಣುಗಳನ್ನು ಮಾಗಿಸಲು ಅಪಾಯಕಾರಿ ರಾಸಾಯನಿಕ ಬಳಸದಂತೆ ತೋಟಗಾರಿಕೆ ಇಲಾಖೆ ಸೂಚನೆ

ಕೊಪ್ಪಳ ಜು. 27 (ಕರ್ನಾಟಕ ವಾರ್ತೆ): ಹಣ್ಣುಗಳನ್ನು ಪಕ್ವಗೊಳಿಸಲು ಅಪಾಯಕಾರಿ ರಾಸಾಯನಿಕಗಳನ್ನು ಬಳಸದಂತೆ ತೋಟಗಾರಿಕೆ ಇಲಾಖೆಯು ಹಣ್ಣು ಮಾರಾಟಗಾರರಿಗೆ ಸೂಚನೆ ನೀಡಿದೆ.  
ಹಣ್ಣುಗಳು  ಸಹಜವಾಗಿ ಮಾಗಿ ಪಕ್ವವಾಗುತ್ತವೆ.  ಇದರಲ್ಲಿ ಕೆಲವು ಗಿಡದಲ್ಲಿಯೇ ಹಣ್ಣಾಗುತ್ತವೆ , ಉದಾಹರಣೆಗೆ ದ್ರಾಕ್ಷಿ, ದಾಳಿಂಬೆ, ಮುಂತಾದವು.  ಇನ್ನೂ ಕೆಲವು ಹಣ್ಣುಗಳು ಕಟಾವಿನ ನಂತರ ಪಕ್ವವಾಗುತ್ತವೆ.  ಹಣ್ಣುಗಳಲ್ಲಿ ನೈಸರ್ಗಿಕವಾಗಿ ಇಥಲಿನ್ ಎನ್ನುವ ಅನಿಲ ಅವುಗಳನ್ನು ಮಾಗಿಸುತ್ತದೆ. ಉದಾ;  ಮಾವು, ಬಾಳೆ, ಸಪೋಟ ಮುಂತಾದವು. ಈ ಹಣ್ಣುಗಳು ಕಟಾವಿನ ಹಲವಾರು ದಿನಗಳ ನಂತರ ಹಣ್ಣಾಗುತ್ತವೆ.  ಬೇಗ ಹಣ್ಣು ಮಾಡಲು ರಾಸಾಯನಿಕಗಳನ್ನು ಬಳಸಾಗುತ್ತದೆ. ಹಣ್ಣು ಮಾಗುವ ಕೊಠಡಿ (ಫ್ರುಟ್ ರೈಪನಿಂಗ ಚೇಂಬರ್) ನಲ್ಲಿ ಇಥಲೀನ್ ಅನಿಲ ಬಿಡುಗಡೆ ಮಾಡಿ ಹಣ್ಣುಗಳನ್ನು ಪಕ್ವಗೊಳಿಸಲಾಗುತ್ತದೆ. ಇದಕ್ಕೆ 3 ರಿಂದ 4 ದಿನಗಳು ಬೇಕಾಗಬಹುದು. ಇದರಿಂದ ಆರೋಗ್ಯಕ್ಕೆ ಹಾನಿ ಇಲ್ಲ. ಆದರೆ ಕೆಲ ಹಣ್ಣಿನ ವ್ಯಾಪಾರಿಗಳು ಆಕರ್ಷಕ ಬಣ್ಣ ತರಿಸಲು  ಹಾಗೂ ಬೇಗ ಹಣ್ಣು ಮಾಡಲು (72 ಗಂಟೆಯ ಒಳಗೆ) ಕ್ಯಾಲ್ಸಿಯಂ ಕಾರ್ಬೈಡ್ ನಂತಹ ಅಪಾಯಕಾರಿ ರಾಸಾಯನಿಕಗಳನ್ನು  ಉಪಯೋಗಿಸುತ್ತಿದ್ದಾರೆ.  ಇದರಿಂದ ಬಿಡುಗಡೆ ಆಗುವ ಅರ್ಸೆನಿಕ್ ಹೈಡ್ರೈಡ್ ಮತ್ತು ರಂಜಕದ ಹೈಡ್ರೈಡ್ ಅಪಾಯಕಾರಿ ಅನಿಲಗಳಿಂದಾಗಿ  ಹೃದಯ ಸಂಬಂಧಿ ಮತ್ತು ಕ್ಯಾನ್ಸರ ರೋಗ ಹರಡುವ ಸಾಧ್ಯತೆ ಇದೆ. ಅಲ್ಲದೆ ಕ್ಯಾಲ್ಸಿಯಮ್ ಕಾರ್ಬೈಡ್ ಬಳಕೆ ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ಹಣ್ಣಿನ ವ್ಯಾಪಾರಸ್ಥರು ಹಣ್ಣುಗಳನ್ನು ಮಾಗಿಸಲು ಯಾವ ಕಾರಣಕ್ಕೂ ಕ್ಯಾಲ್ಸಿಯಂ ಕಾರ್ಬೈಡ್ ರಾಸಾಯನಿಕವನ್ನು ಬಳಸಬಾರದು. ಹಾಗೇನಾದರೂ ಬಳಸಿದ್ದು ಕಂಡುಬಂದಲ್ಲಿ  ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಅವಕಾಶವಿರುತ್ತದೆ. ಗ್ರಾಹಕರು ಕೂಡ ಜಾಗ್ರತರಾಗಲು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ.) ಕೊಪ್ಪಳ ಅಥವಾ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ ಕೊಪ್ಪಳ ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡಲು ಸಂಸದ ಕರಡಿ ಸಂಗಣ್ಣ ಮನವಿ

ಕೊಪ್ಪಳ ಜು. 27 (ಕರ್ನಾಟಕ ವಾರ್ತೆ): ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಸಿಂಧನೂರು ತಾಲೂಕು ಆರ್.ಹೆಚ್. ಕ್ಯಾಂಪ್‍ಗಳಲ್ಲಿ ಸುಮಾರು 50 ವರ್ಷಗಳಿಂದ ನೆಲೆಸಿರುವ ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಕೇಂದ್ರ ಗೃಹ ಸಚಿವ ರಾಜಾನಾಥ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.  ಈ ಗ್ರಾಮವನ್ನು ಸಂಸದರ ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

ತುಂಗಭದ್ರಾಕ್ಕೆ ಒಳಹರಿವು ಕುಸಿತ : ನಿಗದಿತ ಬೆಳೆ ಮಾತ್ರ ಬೆಳೆಯಲು ರೈತರಲ್ಲಿ ಮನವಿ

ಕೊಪ್ಪಳ ಜುಲೈ 27 (ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯದ ಒಳಹರಿವು ಕ್ಷೀಣಿಸುತ್ತಿರುವುದರಿಂದ, ಮುಂಗಾರು ಹಂಗಾಮಿಗೆ ಲಭ್ಯವಾಗುವ ನೀರಿನಲ್ಲಿ ಕೊರತೆ ಉಂಟಾಗುವ ಸಾಧ್ಯತೆಗಳಿರುತ್ತವೆ.  ಆದ್ದರಿಂದ ಪ್ರಸಕ್ತ ಮುಂಗಾರು ಹಂಗಾಮಿಗೆ ಅಚ್ಚುಕಟ್ಟು ಪ್ರದೇಶದಲ್ಲಿ ನಿಗದಿತ ಬೆಳೆಗಳನ್ನು ಮಾತ್ರ ಬೆಳೆಯುವಂತೆ ಮುನಿರಾಬಾದ್, ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
     ಕಳೆದ ಜು. 18 ರಂದು ಬೆಂಗಳೂರಿನಲ್ಲಿ ಜರುಗಿದ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿಯಲ್ಲಿ ನಿರ್ಣಯ ಕೈಗೊಂಡಂತೆ ಈಗಾಗಲೆ ವಿವಿಧ ಕಾಲುವೆಗಳಿಗೆ ನೀರು ಹರಿಸಲಾಗಿದೆ.  ಸಭೆಯಲ್ಲಿ ಕೈಗೊಂಡ ನಿರ್ಣಯ ಇಂತಿದೆ.  ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಜು. 26 ರಿಂದ ನವೆಂಬರ್ 30 ರವರೆಗೆ ಸರಾಸರಿ 3200 ಕ್ಯೂಸೆಕ್‍ನಂತೆ.  ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಜು. 20 ರಿಂದ ನವೆಂಬರ್ 30 ರವರೆಗೆ ಸರಾಸರಿ 650 ಕ್ಯೂಸೆಕ್‍ನಂತೆ.  ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಜು. 20 ರಿಂದ ನವೆಂಬರ್ 30 ರವರೆಗೆ ಸರಾಸರಿ 1050 ಕ್ಯೂಸೆಕ್‍ನಂತೆ.  ರಾಯಬಸವಣ್ಣ ಕಾಲುವೆಗೆ ಜೂ. 01 ರಿಂದ ಡಿಸೆಂಬರ್ 10 ರವರೆಗೆ ಸರಾಸರಿ 152 ಕ್ಯೂಸೆಕ್‍ನಂತೆ ಹಾಗೂ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ ಜು. 26 ರಿಂದ ನವೆಂಬರ್ 30 ರವರೆಗೆ ಸರಾಸರಿ 16 ಕ್ಯೂಸೆಕ್‍ನಂತೆ.  ಅಥವಾ ಎಲ್ಲ ಕಾಲುವೆಯಡಿ ನೀರಿನ ಲಭ್ಯತೆ ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲೋ ಅದು ಅನ್ವಯಿಸುತ್ತದೆ ಎಂದು ನೀರಾವರಿ ಸಲಾ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ.
     ಆದರೆ ಜಲಾಶಯದ ಒಳಹರಿವು ಕ್ಷೀಣಿಸುತ್ತಿರುವುದರಿಂದ, ನೀರಿನ ಕೊರತೆ ಉಂಟಾಗುವ ಸಾಧ್ಯತೆಗಳಿದ್ದು, ರೈತಬಾಂಧವರು ಪ್ರಸಕ್ತ ಮುಂಗಾರು ಹಂಗಾಮಿಗೆ ಅಧಿಸೂಚಿತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗದಿತ ಬೆಳೆಗಳನ್ನು ಮಾತ್ರ ಬೆಳೆಯಬೇಕು.  ನಿಗದಿತ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆ ಉಲ್ಲಂಘನೆ ಮಾಡಿದಲ್ಲಿ ಇಲಾಖೆಯು ಜವಾಬ್ದಾರಿಯಾಗುವುದಿಲ್ಲ ಎಂದು ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಷ್ಠಿತ ಶಾಲೆ ಪ್ರವೇಶಾತಿಗೆ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಕೊಪ್ಪಳ ಜು.27 (ಕರ್ನಾಟಕ ವಾರ್ತೆ): ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಲಬುರಗಿ ಜಿಲ್ಲೆಯ ತಾಡತೆಗನೂರಿನ ಪ್ರತಿಷ್ಠಿತ ಶಾಲೆ ವಿವೇಕಾನಂದ ವಿದ್ಯಾಪೀಠ ವಸತಿ ಶಾಲೆಗೆ 6 ನೇ ತರಗತಿ ಪ್ರವೇಶಾತಿಗಾಗಿ  ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಂದ ಅರ್ಜಿ ಆಹ್ವಾನಿಸಲಾಗಿದೆ.
     ಪ್ರಸಕ್ತ ಸಾಲಿನಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಬಾಲಕ/ಬಾಲಕಿಯರು ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಬಿಸಿಎಂ ಕಛೇರಿಯಲ್ಲಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ ಅಗತ್ಯ ದಾಖಲಾತಿಗಳನ್ನು ಶಾಲಾ ಮುಖ್ಯಸ್ಥರಿಂದ ದೃಢೀಕರಿಸಿ ಲಗತ್ತಿಸಿ ಆ. 10 ರೊಳಗಾಗಿ ಜಿಲ್ಲಾ ಬಿಸಿಎಂ ಕಛೇರಿ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಬಿಸಿಎಂ ಅಧಿಕಾರಿಗಳ  ಕಚೇರಿಯಲ್ಲಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಕುಂಬಳಗೋಡದಲ್ಲಿ ಮೊಬೈಲ್ ರಿಪೇರಿ ತರಬೇತಿ ಶಿಬಿರ

ಕೊಪ್ಪಳ ಜು.27 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಇವರು ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಸ್ವಯಂ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ದಕ್ಷಿಣ ತಾಲೂಕಿನ ಕುಂಬಳಗೋಡ ನಲ್ಲಿರುವ ಯುವಜನ ತರಬೇತಿ ಕೇಂದ್ರದಲ್ಲಿ ಮೊಬೈಲ್ ರಿಪೇರಿ ತರಬೇತಿ ಶಿಬಿರ ಆಯೋಜಿಸಲಾಗಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
     ತರಬೇತಿ ಶಿಬಿರ ಜು.28 ರಿಂದ ಆ.9 ರವರೆಗೆ 13 ದಿನಗಳ ಕಾಲ ನಡೆಯಲಿದೆ. 18 ರಿಂದ 35 ವರ್ಷದೊಳಗಿನ  ಕನಿಷ್ಠ ಪಿಯುಸಿ ವರೆಗೆ ವಿದ್ಯಾರ್ಹತೆ ಪಡೆದಿರುವ  ಯುವಕ- ಯುವತಿಯರು ಶಿಬಿರದಲ್ಲಿ ಭಾಗವಹಿಸಬಹುದು. ಆಸಕ್ತರು ತಮ್ಮ ಜನ್ಮ ದಿನಾಂಕ ದಾಖಲೆ ಹಾಗೂ ರೂ.100 ಶುಲ್ಕ ಪಾವತಿಸಿ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಪ್ರಯಾಣ ಹಾಗೂ ದಿನ ಭತ್ಯೆ ನೀಡಲಾಗುವುದಿಲ್ಲ. ಊಟ ಮತ್ತು ವಸತಿ ಸೌಲಭ್ಯ ಒದಗಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರಾಜ್ಯ ಯುವ ಕೇಂದ್ರ ಬೆಂಗಳೂರು ದೂ.ಸಂ: 080-2224911 ಅಥವಾ ಮೊ.ಸಂ: 9880839295, 8453516171 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಕೊಪ್ಪಳ ಜು.27 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕ ಸಮಾಜ ಕಲ್ಯಾಣ ಇಲಾಖೆಯಿಂದ 2015-16 ಸಾಲಿನ ಪ.ಜಾತಿ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
      2015-16 ನೇ ಸಾಲಿನ ಪ.ಜಾತಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಬಹುದು.  ಅರ್ಜಿಗಳನ್ನು ಇಲಾಖೆಯ ವೆಬ್‍ಸೈಟ್  www.sw.kar.nic.in ಇಲ್ಲಿ ಆ.8 ರಿಂದ ಸೆ.6 ರವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
    ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಭಾರತ ಸರಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವ ಪ.ಜಾತಿ ವಿದ್ಯಾರ್ಥಿಗಳು  ಕಡ್ಡಾಯವಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ನೇರವಾಗಿ ವಿದ್ಯಾರ್ಥಿಗಳೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಎಂದು ಕೊಪ್ಪಳ ತಾಲೂಕ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿವೃತ್ತ ಡಿ ಗ್ರೂಪ್ ನೌಕರರಿಗೆ ಸನ್ಮಾನ ಹಾಗೂ ಹೊಸ ಅಧ್ಯಕ್ಷ ಆಯ್ಕೆ ಕಾರ್ಯಕ್ರಮ

ಕೊಪ್ಪಳ ಜು.27 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸರಕಾರಿ ಡಿ ಗ್ರೂಪ್ ನೌಕರರ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ನಿವೃತ್ತಿ ಹೊಂದಿದ ಸದಸ್ಯರಿಗೆ ಸನ್ಮಾನ ಹಾಗೂ ಜಿಲ್ಲಾ ಘಟಕಕ್ಕೆ ಹೊಸ ಅಧ್ಯಕ್ಷರ ಆಯ್ಕೆ ಕಾರ್ಯಕ್ರಮವನ್ನು ಜು.31 ರಂದು ಬೆಳಗ್ಗೆ 10.30 ಗಂಟೆಗೆ ಕೊಪ್ಪಳ ತಾ.ಪಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
      ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಎಲ್ಲಾ ಇಲಾಖೆಯ ಡಿ-ಗ್ರೂಪ್ ನೌಕರರ ಸಂಘದ ಸದಸ್ಯರುಗಳು ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ಸರಕಾರಿ ಡಿ ಗ್ರೂಪ್ ನೌಕರರ ಸಂಘದ  ಜಿಲ್ಲಾ ಘಟಕದ ಕಾರ್ಯದರ್ಶಿ ದೇವೇಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಕಳ್ಳತನ ಪ್ರಕರಣ : 3. 26 ಲಕ್ಷ ದಂಡ ವಿಧಿಸಿ ನ್ಯಾಯಾಲಯ ಆದೇಶ

ಕೊಪ್ಪಳ ಜು. 27 (ಕರ್ನಾಟಕ ವಾರ್ತೆ): ಕಳೆದ ಆರು ವರ್ಷಗಳ ಹಿಂದೆ ಗಂಗಾವತಿ ತಾಲೂಕು ಜೀರಾಳ ಗ್ರಾಮದಲ್ಲಿ ದಾಖಲಾಗಿದ್ದ ವಿದ್ಯುತ್ ಕಳ್ಳತನ ಪ್ರಕರಣವೊಂದರಲ್ಲಿ ಆರೋಪಿಗೆ 3. 26 ಲಕ್ಷ ರೂ. ಗಳ ದಂಡ ಹಾಗೂ 06 ತಿಂಗಳ ಸಜೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದು ಕೊಪ್ಪಳ ಜೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
     ಜೆಸ್ಕಾಂ ಜಾಗೃತ ದಳದ ವತಿಯಿಂದ ಕಳೆದ 2010 ರ ಮಾರ್ಚ್ 20 ರಲ್ಲಿ ಗಂಗಾವತಿ ತಾಲೂಕು ಜೀರಾಳ ಗ್ರಾಮದಲ್ಲಿನ ಕಾಂತಪ್ಪ ಜೀರಾಳ ಅವರ ಹಿಟ್ಟಿನ ಗಿರಣಿ ಭೇಟಿ ನೀಡಿ, ವಿದ್ಯುತ್ ಸಂಪರ್ಕದ ಬಗ್ಗೆ ಪರಿಶೀಲನೆ ನಡೆಸಿತ್ತು.  ಆರೋಪಿಯು ಹಿಟ್ಟಿನ ಗಿರಣಿಯನ್ನು ವಾಣಿಜ್ಯ ಉಪಯೋಗಕ್ಕೆ ಪೂರ್ವ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಸರ್ವಿಸ್ ವೈರ್ ಮೂಲಕ ವಿದ್ಯುತ್ ಸಂಪರ್ಕವನ್ನು ನೇರವಾಗಿ ಪಡೆದಿರುವುದನ್ನು ಪತ್ತೆ ಹಚ್ಚಿದೆ.  ಅನಧಿಕೃತ ವಿದ್ಯುತ್ ಸಂಪರ್ಕದ ಕಾರಣಕ್ಕೆ ಸುಮಾರು 13428 ಯುನಿಟ್‍ನಷ್ಟು ವಿದ್ಯುತ್ ನಷ್ಟವಾಗಿದೆ.  ಇದರಿಂದ 108804 ರೂ. ಗಳ ವಿದ್ಯುತ್ ಮೊತ್ತ ಹಾಗೂ ಸರ್ಕಾರಕ್ಕೆ 40000 ರೂ. ಗಳ ಕಾಂಪೌಂಡ್ ಮೊತ್ತ ನಷ್ಟವಾಗಿದ್ದು, ಆರೋಪಿಯ ಮೇಲೆ ಪ್ರಕರಣ ದಾಖಲಿಸಲಾಗಿತ್ತು.  ಜೆಸ್ಕಾಂ ಜಾಗೃತ ದಳದ ಪೊಲೀಸ್ ಇನ್ಸ್‍ಪೆಕ್ಟರ್ ಎಂ. ನಾರಾಯಣಪ್ಪ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.  ಪ್ರಕರಣದ ವಿಚಾರಣೆ ನಡೆಸಿದ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಶಿಕ್ಷೆಯ ದಂಡದ ಮೊತ್ತವನ್ನು ಮೂರು ಪಟ್ಟು ಹೆಚ್ಚುಗೊಳಿಸಿದ್ದು, 326412 ರೂ. ಗಳ ದಂಡ ಹಾಗೂ ಭಾರತೀಯ ವಿದ್ಯುತ್ ಕಾಯ್ದೆ 2003 ರ ಅಡಿ 06 ತಿಂಗಳ ಸಾದಾ ಸಜೆಯನ್ನು ವಿಧಿಸಿದೆ.  ದಂಡವನ್ನು 30 ದಿನಗಳ ಒಳಗಾಗಿ ಪಾವತಿಸದಿದ್ದಲ್ಲಿ, ಆರೋಪಿಯ ಆಸ್ತಿ ಜಪ್ತಿಗೆ ಆದೇಶ ನೀಡಿದೆ.  ನ್ಯಾಯಾಲಯ ಜು. 02 ರಂದು ತೀರ್ಪು ನೀಡಿದೆ.  ಸರ್ಕಾರಿ ಸಾರ್ವಜನಿಕ ಅಭಿಯೋಜಕ ಎಂ.ಬಿ. ಪಾಟೀಲ್ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು.

ಕಂದಾಯ ಸಚಿವರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಕೊಪ್ಪಳ ಜು. 27 (ಕರ್ನಾಟಕ ವಾರ್ತೆ): ರಾಜ್ಯ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಜು. 30 ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಸಚಿವರು ಅಂದು ಬೆಳಿಗ್ಗೆ ರಾಯಚೂರಿನಿಂದ ಹೊರಟು, 09.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು.  ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.  ಸಚಿವರು ಅದೇ ದಿನ ಮಧ್ಯಾಹ್ನ 02 ಗಂಟೆಗೆ ಬಳ್ಳಾರಿ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಜು. 28 ರಂದು ಹಿಟ್ನಾಳ್‍ನಲ್ಲಿ ಕೃಷಿ ಸಚಿವರಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮ


ಕೊಪ್ಪಳ ಜು. 27 (ಕರ್ನಾಟಕ ವಾರ್ತೆ): ಕೃಷಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ಕೃಷಿ ಯಂತ್ರಧಾರೆ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ ಸೇವಾ ಕೇಂದ್ರದ ಉದ್ಘಾಟನೆ ಹಾಗೂ ಕೃಷಿ ಹೈಟೆಕ್ ಯಂತ್ರೋಪಕರಣಗಳ ಬೃಹತ್ ವಸ್ತು ಪ್ರದರ್ಶನವನ್ನು ಜು. 28 ರಂದು ಕೊಪ್ಪಳ ತಾಲೂಕು ಹಿಟ್ನಾಳ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.
     ರಾಜ್ಯ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಅಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಕೃಷಿ ಯಂತ್ರೋಪಕರಣಗಳ ವಸ್ತು ಪ್ರದರ್ಶನದ ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಹಿಟ್ನಾಳ ಗ್ರಾ.ಪಂ. ಅಧ್ಯಕ್ಷ ಎ. ಧರ್ಮರಾಜರಾವ್, ಕೃಷಿ ಇಲಾಖೆ ಕಾರ್ಯದರ್ಶಿ ಮಹೇಶ್ವರರಾವ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಎಸ್. ವಸ್ತ್ರದ್, ರಾಯಚೂರು ಕೃಷಿ ವಿವಿ ಕುಲಪತಿ ಡಾ. ಪಿ.ಎಂ. ಸಾಲಿಮಠ, ಜಿ.ಪಂ. ಸದಸ್ಯೆ ಬೀನಾ ಗೌಸ್, ತಾ.ಪಂ. ಸದಸ್ಯ ಮೂರ್ತೆಪ್ಪ ಗಿಣಿಗೇರಿ, ಜಿಲ್ಲಾ ಕೃಷಿಕ ಸಮಾಜಧ್ಯಕ್ಷ ಶಿವಣ್ಣ ಮೂಲಿಮನಿ, ಟ್ರಿಂಗೋ ಕಂ ಲಿ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದಕುಮಾರ, ಮಹಿಂದ್ರಾ & ಮಹೀಂದ್ರಾ ಸಂಸ್ಥೆ ಹಿರಿಯ ಉಪಾಧ್ಯಕ್ಷ ಶುಭಬ್ರತಾ ಶಾಹ, ಉಪಾಧ್ಯಕ್ಷ ವಿಜಯಶರ್ಮಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. 
     ರೈತಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಂಟಿಕೃಷಿ ನಿರ್ದೇಶಕ ಡಾ. ರಾಮದಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.
 

Tuesday, 26 July 2016

ನಾರಿಶಕ್ತಿ ಪುರಸ್ಕಾರ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ಜು.26 (ಕರ್ನಾಟಕ ವಾರ್ತೆ): ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು 2016-17 ನೇ ಸಾಲಿಗೆ ಕೊಡಮಾಡುವ ‘ನಾರಿಶಕ್ತಿ ಪುರಸ್ಕಾರ’ ಪ್ರಶಸ್ತಿಗಳಿಗಾಗಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆಗೈದಿರುವ ವ್ಯಕ್ತಿಗಳಿಂದ ಹಾಗೂ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
    ರಾಣಿ ರುದ್ರಮ್ಮ ದೇವಿ ಪ್ರಶಸ್ತಿ: ಮಹಿಳೆಯರಿಗಾಗಿ ಸಮುದಾಯದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಗ್ರಾಮ ಪಂಚಾಯತಿಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು(ಜಿಲ್ಲಾ ಪಂಚಾಯತಿ ಮುಖಾಂತರ).
ಮಾತಾ ಜಿಜಾಬಾಯಿ ಪ್ರಶಸ್ತಿ:  ಮಹಿಳೆಯರಿಗಾಗಿ ಉತ್ತಮ ಸೇವೆ, ಹಾಗೂ ವಿಶೇಷ ಕಾಳಜಿ ವಹಿಸಿ ಕಾರ್ಯ ನಿರ್ವಹಿಸುವ ನಗರ/ಪುರಸಭೆ ಪ್ರಾಧಿಕಾರವನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು.
ಕನ್ನಗಿದೇವಿ ಹಾಗೂ ಅಹಲ್ಯ ಓಳಕರ್ ಪ್ರಶಸ್ತಿ: ಮಹಿಳೆಯರಿಗೆ ಉದ್ಯೋಗ ಅವಕಾಶ ನೀಡಿ ಅವರನ್ನು ಉತ್ತಮ ಸ್ಥಾನಕ್ಕೆ ಕೊಂಡೊಯ್ದ ಉತ್ತಮ ಖಾಸಗಿ ಸಂಸ್ಥೆ/ಕಂಪನಿಗೆ ಈ ಪ್ರಶಸ್ತಿ ನೀಡಲಾಗುವುದು.
ರಾಣಿ ಲಕ್ಷ್ಮೀ ಬಾಯಿ ಪ್ರಶಸ್ತಿ: ಸಂಶೋಧನಾ ಮತ್ತು ಅಭಿವೃದ್ಧಿ ಕುರಿತು ಮಹಿಳೆಯರಿಗೆ ಅನುಕೂಲವಾಗುವ ರೀತಿಯಲ್ಲಿ ಸೇವೆಸಲ್ಲಿಸುತ್ತಿರುವ ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಲಾಗುವುದು.
ಮಹಿಳೆಯರಿಗೆ ನೀಡುವ ವೈಯಕ್ತಿಕ ಪ್ರಶಸ್ತಿ: ಮಹಿಳೆಯರ ಸಾಮಾಜಿಕ ಆರ್ಥಿಕ ವೃತ್ತಿಪರ ಹಾಗೂ ಮಹಿಳಾ ಕಾನೂನುಗಳನ್ನು ಜಾರಿಗೆ ತರುವಲ್ಲಿ ಶ್ರಮಿಸಿರುವಂತಹ ಮಹಿಳೆಯರಿಗೆ ಕಲೆ, ವಿಜ್ಞಾನ, ಶಿಕ್ಷಣ, ತಂತ್ರಜ್ಞಾನ, ಸಾಂಸ್ಕøತಿಕ, ಕ್ರೀಡಾ ಕ್ಷೇತ್ರಗಳಲ್ಲಿ ಶ್ರಮಿಸಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು.
     ಪ್ರಸ್ತಾವನೆ ಸಲ್ಲಿಸಲು ಆ.12 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಶಿಶುಕ್ಷು ತರಬೇತಿ ಅರ್ಜಿ ಆಹ್ವಾನ

ಕೊಪ್ಪಳ ಜು.26 (ಕರ್ನಾಟಕ ವಾರ್ತೆ): ಹೆಚ್ ಎ ಎಲ್ ಕಂಪನಿ, ಬೆಂಗಳೂರು ಇವರಿಂದ ಕೊಪ್ಪಳ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ಪಾಸಾದ ಅಭ್ಯರ್ಥಿಗಳಿಗೆ ಶಿಶುಕ್ಷು (ಅಪ್ರೆಂಟಿಸ್) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
     ಅಡ್ವಾನ್ಸ್ ಆಪರೇಟರ್ ಮಶೀನ್ ಟೂಲ್ ವಿಷಯದಲ್ಲಿ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸುವವರು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನದಲ್ಲಿ ಪಾಸಾಗಿರಬೇಕು. ಸಾಮಾನ್ಯ ಅಭ್ಯರ್ಥಿಗಳು ಶೇ. 60 ಹಾಗೂ ಪ.ಜಾತಿ, ಪ.ಪಂ, ಒಬಿಸಿ ಅಭ್ಯರ್ಥಿಗಳು ಶೇ.50 ಅಂಕಗಳೊಂದಿಗೆ ಪಾಸಾಗಿರಬೇಕು.  ವಯೋಮಿತಿ 2016 ರ ಅಕ್ಟೋಬರ್ 1 ಕ್ಕೆ   15 ರಿಂದ 18 ವರ್ಷದೊಳಗಿರಬೇಕು.  ಕರ್ನಾಟಕದವರಾಗಿದ್ದು ಆರ್ಥಿಕವಾಗಿ ಹಿಂದುಳಿರುವ (ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಿದ) ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
    ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ, ಶಿಕ್ಷಣ ನೀಡಲಾಗುವುದು. ತರಬೇತಿ ವೇಳೆ ವಸತಿ ಹಾಗೂ ಸಂಬಳ ಮತ್ತು ಭತ್ಯೆ ನೀಡಲಾಗುವುದು.  ಮೀಸಲಾತಿಗೆ ಆಯ್ಕೆಯಾದ ಅಭ್ಯರ್ಥಿಗಳು, ಮಾಹಿತಿಯನ್ನು ಅರ್ಜಿಯಲ್ಲಿ ಕೋಟಾವನ್ನು ಸ್ಪಷ್ಟವಾಗಿ ನಮೂದಿಸಬೇಕು. ಹಾಗೂ ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಅಂಗವಿಕಲತೆ ಪ್ರಮಾಣ ಪತ್ರ(ಇದ್ದಲ್ಲಿ), ಹಾಗೂ ಎರಡು ಪಾಸ್‍ಪೊರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.
     ನಿಗದಿತ ಅರ್ಜಿ ನಮೂನೆಯನ್ನ ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಢಳಿತ ಭವನ ಮೊದಲನೇ ಮಹಡಿ, ಕೊಪ್ಪಳ ಇಲ್ಲಿ ಪಡೆದು. ಭರ್ತಿ ಮಾಡಿ ಆ.10 ರೊಳಗಾಗಿ ಜಿಲ್ಲಾ ಕಛೇರಿಯಲ್ಲಿ ಅಥವಾ ಮ್ಯಾನೇಜರ್ (ಹೆಚ್ ಆರ್) ಟೆಕ್ನಿಕಲ್ ಟ್ರೈನಿಂಗ್ ಇನ್ಸ್‍ಟ್ಯೂಟ್ ಹಿಂದುಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್, ವಿಮಾನಪುರ, ಬೆಂಗಳೂರು-560017 ಇಲ್ಲಿಗೆ ಸಲ್ಲಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ 76 ಗ್ರಾ.ಪಂ. ಗಳಲ್ಲಿ ಪಹಣಿ ಸೇರಿದಂತೆ 100 ಸೇವೆಗಳು ಲಭ್ಯ- ಬಸವರಾಜ ರಾಯರಡ್ಡಿ


ಕೊಪ್ಪಳ ಜು. 26 (ಕರ್ನಾಟಕ ವಾರ್ತೆ): ಗ್ರಾಮ ಪಂಚಾಯತಿಗಳ ಮುಖಾಂತರ ಕಂದಾಯ ಇಲಾಖೆಗೆ ಸಂಬಂಧಿಸಿದ 40 ಸೇವೆಗಳು ಹಾಗೂ ವಿವಿಧ ಸೇವೆಗಳನ್ನೊಳಗೊಂಡಂತೆ ಒಟ್ಟು 100 ವಿವಿಧ ಸೇವೆಗಳನ್ನು ಒದಗಿಸುವ ಬಾಪೂಜಿ ಸೇವಾ ಕೇಂದ್ರಗಳನ್ನು ಜಿಲ್ಲೆಯ 76 ಗ್ರಾಮ ಪಂಚಾಯತಿಗಳಲ್ಲಿಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಹೇಳಿದರು.

     ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಬಾಪೂಜಿ ಸೇವಾ ಕೇಂದ್ರದ ಉದ್ಘಾಟನೆ ಹಾಗೂ ನವೀಕರಣಗೊಂಡ ಸರ್ಕಾರಿ ಮಾಧರಿಯ ಹಿ.ಪ್ರಾ.ಶಾಲೆ ಕಟ್ಟಡ ಉದ್ಘಾಟನೆ, ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಕಟ್ಟಡ ಶಂಕುಸ್ಥಾಪನೆ ಹಾಗೂ ಆರ್.ಎಂ.ಎಸ್.ಎ. ಬಾಲಕಿಯರ ವಸತಿ ನಿಲಯ ಕಟ್ಟಡ ಉದ್ಘಾಟನೆ ನೆರವೇರಿಸಿದ ನಂತರ, ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರದಂದು ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

     ಗ್ರಾಮ ಪಂಚಾಯತಿಗಳ ಮುಖಾಂತರ ಪಹಣಿ ವಿತರಿಸಲು ಸರ್ಕಾರ ಅನುಮೋದನೆ ನೀಡಿದ್ದು, ಜಿಲ್ಲೆಯ 76 ಗ್ರಾಮ ಪಂಚಾಯತಿಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡು, ಈ ಗ್ರಾಮ ಪಂಚಾಯತಿಗಳಲ್ಲಿ ಪಹಣಿ ವಿತರಣೆ ಸೇರಿದಂತೆ, ಕಂದಾಯ ಇಲಾಖೆಗೆ ಸಂಬಂಧಿಸಿದ 40 ಬಗೆಯ ಸೇವೆಗಳ ಅರ್ಜಿಗಳನ್ನು ಸ್ವೀಕರಿಸಲು ಬಾಪೂಜೀ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.  ಸಾರ್ವಜನಿಕರು ವಿವಿಧ ಸೇವೆಗಳಿಗೆ ನಾಡಕಚೇರಿ ಹಾಗೂ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಇಂತಹ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದು, ಇನ್ನು ಮುಂದೆ ಗ್ರಾಮ ಪಂಚಾಯತಿ ಮಟ್ಟದಲ್ಲಿಯೇ ಈ ಸೇವೆಗಳನ್ನು ಪಡೆಯಬಹುದಾಗಿದೆ.  ಕೇವಲ 10 ರೂ. ಗಳನ್ನು ಪಾವತಿಸಿ ಗ್ರಾಮ ಪಂಚಾಯತಿಯಲ್ಲಿನ ಬಾಪೂಜಿ ಸೇವಾ ಕೇಂದ್ರದಲ್ಲಿ ಪಹಣಿ ಪತ್ರಿಕೆಯನ್ನು ಪಡೆಯಬಹುದು.  ಅಲ್ಲದೆ ಜಾತಿ, ಆದಾಯ ಪ್ರಮಾಣಪತ್ರ, ಸಣ್ಣ ಅತಿಸಣ್ಣ ಹಿಡುವಳಿದಾರರ ಪತ್ರ, ವಿವಿಧ ಪಿಂಚಣಿ ಮಂಜೂರಾತಿ ಅರ್ಜಿ ಹೀಗೆ ಕಂದಾಯ ಇಲಾಖೆಗೆ ಸಂಬಂಧಿಸಿದ 40 ಸೇವೆಗಳು, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸೇವೆಗಳು, ಫಲಾನುಭವಿ ಸಂಬಂಧಿತ ಸೇವೆಗಳು, ವ್ಯಾಪಾರ ಪರವಾನಗಿ ಸಂಬಂಧಿತ ಸೇವೆಗಳು, ನಿರ್ವಹಣೆ ಸಂಬಂಧಿತ ಸೇವೆಗಳು, ತೆರಿಗೆ ಪಾವತಿ, ವಿದ್ಯುತ್ ಬಿಲ್ ಪಾವತಿ, ಬಸ್, ರೈಲುಗಳ ಟಿಕೆಟ್ ಬುಕಿಂಗ್ ಮುಂತಾದ ಸೇವೆಯನ್ನೂ ಸಹ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೇ ಪಡೆಯಬಹುದಾಗಿದೆ.  ಸಾರ್ವಜನಿಕರು ಇಂತಹ ಸರಳೀಕೃತ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.
     ಜನಸಾಮಾನ್ಯರ ಹಿತಕಾಯಲು ಸರ್ಕಾರ ಉಚಿತ ಅಕ್ಕಿ, ಮಕ್ಕಳಿಗೆ ಉಚಿತ ಸಮವಸ್ತ್ರ, ಪುಸ್ತಕ, ಹಾಲು ವಿತರಣೆ, ಮಧ್ಯಾಹ್ನದ ಬಿಸಿಯೂಟ ಹೀಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.  ಯಾವುದೇ ಯೋಜನೆಗಳನ್ನು ರೂಪಿಸುವಾಗ ಜನಸಂಖ್ಯೆಯ ಆಧಾರದಲ್ಲಿ ನಾವು ಸಿದ್ಧಪಡಿಸಬೇಕಾಗುತ್ತದೆ.  ದೇಶದಲ್ಲಿ ಜನಸಂಖ್ಯೆಯ ಹೆಚ್ಚಳ ತೀವ್ರವಾಗಿದ್ದು, ಪ್ರತಿ ವರ್ಷ ದೇಶದ ಜನಸಂಖ್ಯೆಗೆ ಕನಿಷ್ಟ 02 ಕೋಟಿ ಜನಸಂಖ್ಯೆ ಸೇರ್ಪಡೆಯಾಗುತ್ತಿದೆ.  ಇದರಿಂದ ಯೋಜನೆಗಳ ಅನುಷ್ಠಾನದಲ್ಲಿ ತೊಂದರೆಯಾಗುತ್ತಿರುವುದು ವಾಸ್ತವವಾಗಿದೆ ಎಂದು ಸಚಿವರು ಹೇಳಿದರು.

     ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಅತ್ಯಂತ ಹಿಂದುಳಿದ ತಾಲೂಕು ಎಂದು ಹೇಳಲಾಗುವ ಯಲಬುರ್ಗಾ ತಾಲೂಕಿನಲ್ಲಿ ತಳಕಲ್ ಗ್ರಾಮದ ಅಭಿವೃದ್ಧಿಯು ಇತರೆ ಗ್ರಾಮಗಳಿಗೆ ಮಾದರಿಯಾಗಿದೆ ಎಂದರು.

     ಜಿ.ಪಂ. ಮುಖ್ಯ ಕಾರ್ಯನಿವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಬಸವರಾಜ ರಾಯರಡ್ಡಿ ಅವರು ವ್ಯಾಸಂಗ ಮಾಡಿರುವ ತಳಕಲ್ ಗ್ರಾಮದ ಶಾಲೆಯನ್ನು ಇದೀಗ ನವೀಕರಿಸಿ, ವಿದ್ಯಾರ್ಜನೆಗೆ ಒದಗಿಸಿರುವುದು ಸಂತಸ ತಂದಿದೆ.  ತಳಕಲ್ ಗ್ರಾಮವನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ಗ್ರಾಮದಲ್ಲಿಯೂ ಸಹ ಅನೇಕ ಕುಟುಂಬಗಳು ಶೌಚಾಲಯ ರಹಿತವಾಗಿದ್ದು, ಎಲ್ಲ ಕುಟುಂಬಗಳು ತಪ್ಪದೆ ಶೌಚಾಲಯ ಕಟ್ಟಿಸಿ, ಬಳಸುವಂತಾಗಬೇಕು.  ಇಲ್ಲಿನ ಎಲ್ಲ ವಿದ್ಯಾರ್ಥಿಗಳು ತಮ್ಮ ಪಾಲಕರಿಗೆ ಶೌಚಾಲಯ ಕಟ್ಟಿಸಲು ಒತ್ತಾಯಿಸುವಂತೆ ಮನವಿ ಮಾಡಿದರು.
     ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶಾಂತಮ್ಮ ವಾಲ್ಮೀಕಿ ಅಧ್ಯಕ್ಷತೆ ವಹಿಸಿದ್ದರು.  ಜಿ.ಪಂ. ಸದಸ್ಯ ಹನುಮಂತಗೌಡ ಪಾಟೀಲ್, ತಾ.ಪಂ. ಅಧ್ಯಕ್ಷೆ ಲಕ್ಷ್ಮೀ ದ್ಯಾಮಪ್ಪ ಗೌಡ್ರ, ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ತಾ.ಪಂ. ಸದಸ್ಯ ಶಿವಕುಮಾರ ಆದಾಪುರ, ಗ್ರಾ.ಪಂ. ಉಪಾಧ್ಯಕ್ಷ ತಿಮ್ಮಣ್ಣ ಚೌಡಿ, ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ಡಿಡಿಪಿಐ ಶ್ಯಾಮಸುಂದರ್ ಸೇರಿದಂತೆ ತಳಕಲ್ ಗ್ರಾಮದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Monday, 25 July 2016

ಜು. 28 ರಂದು ಕೊಪ್ಪಳ ಜಿಲ್ಲೆಗೆ ಕೃಷಿ ಸಚಿವರ ಪ್ರವಾಸ ಕಾರ್ಯಕ್ರಮ

ಕೊಪ್ಪಳ ಜು. 25 (ಕರ್ನಾಟಕ ವಾರ್ತೆ) : ರಾಜ್ಯ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಜು. 28 ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಸಚಿವರು ಅಂದು ಬೆಳಿಗ್ಗೆ ಗದುಗಿನಿಂದ ಹೊರಟು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ತಾಲೂಕಿನ ಹಿಟ್ನಾಳ್ ಗ್ರಾಮಕ್ಕೆ ಆಗಮಿಸುವರು.  ನಂತರ ಯಂತ್ರದ ಮೂಲಕ ಭತ್ತದ ಸಸಿಗಳನ್ನು ನಾಟಿ ಮಾಡುವ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ತರುವಾಯ ಅದೇ ಗ್ರಾಮದಲ್ಲಿ ಕೃಷಿ ಯಂತ್ರಧಾರೆ ನೂತನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.  ಸಚಿವರು ಅಂದು ಮಧ್ಯಾಹ್ನ 1-45 ಗಂಟೆಗೆ ಬಳ್ಳಾರಿ ಜಿಲ್ಲೆ ಕಂಪ್ಲಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಜು.27 ರಂದು ಹೆಣ್ಣು ಮಕ್ಕಳ ರಕ್ಷಣೆ ಕುರಿತ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮ

ಕೊಪ್ಪಳ ಜು.25 (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಕುರಿತು ಕಾನೂನು ವಿದ್ಯಾಪ್ರಸಾರ ಕಾರ್ಯಾಕ್ರಮ ಜು.27 ರಂದು ಬೆಳಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾ ಕೋರ್ಟ್ ಆವರಣದ ಸಾಕ್ಷಿದಾರರ ಮೊಗಸಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
    ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ದಶರಥ ಅವರು ಕಾರ್ಯಕ್ರಮ ಉದ್ಘಾಟಿಸುವರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ ಎಸ್ ಕಲಾದಗಿ ಅಧ್ಯಕ್ಷತೆ ವಹಿಸುವರು. ಸಿವಿಲ್ ನ್ಯಾಯಾಧೀಶರಾದ ವಿಜಯಕುಮಾರ ಕನ್ನೂರು,  ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಬಿ ಪಾನಘಂಟಿ, ಜಿಲ್ಲಾ ಸರ್ಕಾರಿ ವಕೀಲ ಅಸೀಫ್ ಅಲೀ, ಕೊಪ್ಪಳ ತಹಸೀಲ್ದಾರ ಪುಟ್ಟರಾಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವ್ಹಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಯು.ಎ. ಮಾಳೇಕೊಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
     ವಕೀಲರಾದ ನೇತ್ರಾ ಬಿ.ಪಾಟೀಲ್ ಹೆಣ್ಣುಮಕ್ಕಳ ರಕ್ಷಣೆ ಮತ್ತು ಸಮಾಜದ ಹೊಣೆ ಕುರಿತು ಹಾಗೂ ಎಂ.ಹನುಮಂತರಾವ್ ಮಹಿಳೆ ಮತ್ತು ಹೆಣ್ಣು ಮಗುವಿನ ರಕ್ಷಣೆ ಕುರಿತು ವಿಷೇಶ ಉಪನ್ಯಾನ ನೀಡುವರು.

ಜು. 29 ರಂದು ಜಿಲ್ಲಾ ದ್ರಾಕ್ಷಿ ಬೆಳೆಗಾರರ ಸಮಾವೇಶ ಹಾಗೂ ವಿಚಾರ ಸಂಕಿರಣ

ಕೊಪ್ಪಳ ಜು. 25 (ಕರ್ನಾಟಕ ವಾರ್ತೆ): ಕೊಪ್ಪಳದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವತಿಯಿಂದ ಜಿಲ್ಲಾ ದ್ರಾಕ್ಷಿ ಬೆಳೆಗಾರರ ಸಮಾವೇಶ ಮತ್ತು ದ್ರಾಕ್ಷಿ ಬೆಳೆಯ ವಿಚಾರ ಸಂಕಿರಣ ಜು. 29 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ನಡೆಯಲಿದೆ.
     ರಾಯಚೂರಿನ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಪಿ.ಎಂ. ಸಾಲಿಮಠ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ವಿಸ್ತರಣಾ ನಿರ್ದೇಶಕ ಡಾ. ಎಸ್. ಕೆ. ಮೇಟಿ ಅವರು ಅಧ್ಯಕ್ಷತೆ ವಹಿಸುವರು.  ಅತಿಥಿಗಳಾಗಿ ಸಂಶೋಧನಾ ನಿರ್ದೇಶಕ ಡಾ. ಐ. ಶಂಕರೇಗೌಡ, ಕೊಪ್ಪಳದ ಜಿಲ್ಲಾ ಹಾಪ್‍ಕಾಂ ಅಧ್ಯಕ್ಷ ಯಂಕಣ್ಣ ಯರಾಶಿ, ಬಾಯರ್ ಕಂಪನಿಯ ಮಠದ,  ಜಂಟಿ ಕೃಷಿ ನಿರ್ದೇಶಕ ಡಾ. ಎ.ರಾಮದಾಸ ಮತ್ತು ತೋಟಗಾರಿಕೆ ಉಪ ನಿರ್ದೇಶಕ ಶಶಿಕಾಂತ ಕೋಟಿಮನಿ ಭಾಗವಹಿಸುವರು.   ಸಮಾವೇಶದಲ್ಲಿ ಬೆಂಗಳೂರಿನ ದ್ರಾಕ್ಷಿ ತಜ್ಞರುಗಳಾದ ಡಾ. ಪ್ರಕಾಶ್.ಜಿ.ಎಸ್, ಡಾ. ವಸ್ತ್ರದ, ಡಾ. ನಿಡೋಣಿ, ಡಾ. ಬದರಿಪ್ರಸಾದ ರೈತರಿಗೆ ಮಾಹಿತಿ ನೀಡುವರು.  ಈ ಕಾರ್ಯಕ್ರಮವನ್ನು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳ, ತೋಟಗಾರಿಕೆ ಇಲಾಖೆ, ಕೊಪ್ಪಳ, ಗಂಗಾವತಿ ಹಾಗೂ ಬಾಯರ್ ಸಂಸ್ಥೆಯ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.  ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳುಗಳಾದ ಡಾ. ಎಮ್.ಬಿ. ಪಾಟೀಲ ರವರು ಮನವಿ ಮಾಡಿಕೊಂಡಿದ್ದಾರೆ.  ಹೆಚ್ಚಿನ ಮಾಹಿತಿಗಾಗಿ 08539-220305 ಹಾಗೂ ಮೊಬೈಲ್ 9480696319 ಸಂಪರ್ಕಿಸಲು ಕೋರಿದೆ.

ಜು. 26 ರಂದು ತಳಕಲ್‍ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕೊಪ್ಪಳ ಜು. 25 (ಕರ್ನಾಟಕ ವಾರ್ತೆ): ಶಿಕ್ಷಣ ಇಲಾಖೆ ಅನುದಾನದಲ್ಲಿ ನವೀಕರಣಗೊಂಡ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಉದ್ಘಾಟನೆ, ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ, ಆರ್.ಎಂ.ಎಸ್.ಎ. ಬಾಲಕಿಯರ ವಸತಿ ನಿಲಯ ಕಟ್ಟಡ ಉದ್ಘಾಟನೆ ಹಾಗೂ ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಜು. 26 ರಂದು ಸಂಜೆ 4-30 ಗಂಟೆಗೆ ಯಲಬುರ್ಗಾ ತಾಲೂಕು ತಳಕಲ್ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.
     ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಗ್ರಾ.ಪಂ. ಅಧ್ಯಕ್ಷೆ ಶಾಂತಮ್ಮ ಉಡಚಪ್ಪ ವಾಲ್ಮೀಕಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.  ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಸಂಸದ ಕರಡಿ ಸಂಗಣ್ಣ, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಶರಣಪ್ಪ ಮಟ್ಟೂರ, ಅಮರನಾಥ ಪಾಟೀಲ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ಜಿ.ಪಂ. ಸದಸ್ಯ ಹನುಮಂತಗೌಡ ಪಾಟೀಲ್, ತಾ.ಪಂ. ಅಧ್ಯಕ್ಷೆ ಲಕ್ಷ್ಮಿ ದ್ಯಾಮಪ್ಪ ಗೌಡ್ರ, ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ತಾ.ಪಂ. ಸದಸ್ಯ ಶಿವಕುಮಾರ ಆದಾಪುರ, ಗ್ರಾ.ಪಂ. ಉಪಾಧ್ಯಕ್ಷ ತಿಮ್ಮಣ್ಣ ಚೌಡಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೆ. ತಿಮ್ಮಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಾರಿಗೆ ನೌಕರರ ಮುಷ್ಕರ : ಜು. 26 ರಂದು ಶಾಲೆಗಳಿಗೆ ರಜೆ ಮುಂದುವರಿಕೆ

ಕೊಪ್ಪಳ ಜು. 25 (ಕರ್ನಾಟಕ ವಾರ್ತೆ): ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಪ್ಪಳ ಜಿಲ್ಲೆಯಲ್ಲಿ ಈ.ಕ.ರ.ಸಾ.ಸಂಸ್ಥೆ ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜು. 26 ರಂದು ಸಹ ರಜೆಯನ್ನು ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
     ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ತೊಂದರೆಯಾಗಲಿದ್ದು, ಜು. 25 ರಂದು ಒಂದು ದಿನದ ರಜೆಯನ್ನು ಘೋಷಿಸಲಾಗಿತ್ತು.  ಇದೀಗ ಮುಷ್ಕರ ಮುಂದುವರೆದಿರುವ ಕಾರಣದಿಂದ ಜು. 26 ರಂದು ರಜೆಯನ್ನು ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರ : ನಿಷೇಧಾಜ್ಞೆ ಜಾರಿ

ಕೊಪ್ಪಳ ಜು.25 (ಕರ್ನಾಟಕ ವಾರ್ತೆ): ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಪ್ಪಳ ಜಿಲ್ಲೆಯಲ್ಲಿ ಈ.ಕ.ರ.ಸಾ.ಸಂಸ್ಥೆ ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ವಿವಿಧ ಬಸ್‍ನಿಲ್ದಾಣ ಹಾಗೂ ಡಿಪೋ ಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ ಶಿರಹಟ್ಟಿ ಅವರು ಆದೇಶ ಹೊರಡಿಸಿದ್ದಾರೆ.
     ಜುಲೈ 24 ರ ಮಧ್ಯರಾತ್ರಿಯಿಂದ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಗಂಗಾವತಿ ನಗರದ ಬಸ್ ನಿಲ್ದಾಣ, ಬಸ್ ಡಿಪೋ ಸುತ್ತ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಸಿಆರ್‍ಪಿಸಿ 144 ನೇ ಕಲಂ ಅನ್ವಯ ಜುಲೈ 24 ರ ಮಧ್ಯರಾತ್ರಿಯಿಂದ ಜುಲೈ 26 ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  ಅಲ್ಲದೆ ಕೊಪ್ಪಳ ನಗರದ ಬಸ್‍ನಿಲ್ದಾಣ, ಬಸ್ ಡಿಪೋ, ಕುಕನೂರು, ಯಲಬುರ್ಗಾ ಬಸ್ ನಿಲ್ದಾಣ ಹಾಗೂ ಡಿಪೋಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಜುಲೈ 24 ರ ಮಧ್ಯರಾತ್ರಿಯಿಂದ ಮುಷ್ಕರ ಮುಕ್ತಾಯಗೊಳ್ಳುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಕೊಪ್ಪಳ ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಆದೇಶದಲ್ಲಿ ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳು : ರೈತರಿಂದ ಅರ್ಜಿ ಆಹ್ವಾನ

ಕೊಪ್ಪಳ ಜು.25 (ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆಯು ರೈತರಿಗೆ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳನ್ನು  ಅನುಷ್ಠಾನಗೊಳಿಸುತ್ತಿದ್ದು ಜಿಲ್ಲೆಯ ರೈತರಿಂದ  ಅರ್ಜಿ ಆಹ್ವಾನಿಸಲಾಗಿದೆ.
     ರಾಷ್ಟ್ರೀಯ ತೋಟಗಾರಿಕೆ ಮಿಷನ್(ಎನ್‍ಹೆಚ್‍ಎಂ), ರಾಷ್ಟ್ರೀಯ ಸೂಕ್ಷ್ಮ ಹನಿ ನೀರಾವರಿ (ಪಿಎಂಕೆಎಸ್‍ವೈ), ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ(ಆರ್‍ಕೆವಿವೈ), ರಾಷ್ಟ್ರೀಯ ಆಯುಷ ಮಿಷನ್(ಎನ್‍ಎಎಂ), ಸಮಗ್ರ ತೋಟಗಾರಿಕೆ ಯೋಜನೆ(ಸಿಹೆಚ್‍ಡಿ), ಮದುವನ ಮತ್ತು ಜೇನು ಸಾಕಾಣಿಕೆ ಯೋಜನೆ(ಬೀ ಕೀಪಿಂಗ್), ತೋಟಗಾರಿಕೆ ಬೆಳೆಗಳ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆ ಮತ್ತು ಇತರೆ ಯೋಜನೆಗಳ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು ಜಿಲ್ಲೆಯ ರೈತರು ಅರ್ಜಿ ಸಲ್ಲಿಸಬಹುದು.
    ಅಭ್ಯರ್ಥಿಗಳ ಆಯ್ಕೆಗೆ ಸರ್ಕಾರ ನಿಯಮಗಳನ್ನು ರೂಪಿಸಿದ್ದು, ಆಯಾ ಯೋಜನೆಯಡಿ ಕಾರ್ಯಕ್ರಮವಾರು ಮತ್ತು ಹೋಬಳಿವಾರು ಗುರಿಯಂತೆ ರೈರಿಂದ ಅರ್ಜಿ ಆಹ್ವಾನಿಸಿ ಲಾಟರಿ ಮುಖಾಂತರ ನಿಗದಿತ ಅವಧಿಯೊಳಗೆ ಆಯ್ಕೆ ಮಾಡಲಾಗುವುದು.
     ಆಸಕ್ತ ರೈತರು ತಮ್ಮ ಹೋಬಳಿ ಹಾಗೂ ತಾಲೂಕ ತೋಟಗಾರಿಕೆ ಕಚೇರಿಗೆ ಭೇಟಿ ನೀಡಿ ಯೋಜನೆಗಳ ಸಮಗ್ರ ಮಾಹಿತಿ ಪಡೆಯುವಂತೆ ಕೋರಲಾಗಿದೆ.
     ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ಕೊಪ್ಪಳ-08539-231304, ಗಂಗಾವತಿ-08533-230358, ಕುಷ್ಟಗಿ-08536-267498, ಯಲಬುರ್ಗಾ-08534-220429 ಅಥವಾ ಉಪನಿರ್ದೇಶಕರ ಕಚೇರಿ ಕೊಪ್ಪಳ-08539-231530 ಇಲ್ಲಿಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Saturday, 23 July 2016

ಹೆಚ್‍ಎಎಲ್ ನಲ್ಲಿ ಶಿಶುಕ್ಷು ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ ಜು.23 (ಕರ್ನಾಟಕ ವಾರ್ತೆ): ಹಿಂದುಸ್ತಾನ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರು.(ಹೆಚ್‍ಎಎಲ್) ಇವರು ವಿವಿಧ ವೃತ್ತಿಗಳಲ್ಲಿ ಬರುವ ಅಕ್ಟೋಬರ್ ತಿಂಗಳಿನಲ್ಲಿ ಶಿಶುಕ್ಷು (ಅಪ್ರೆಂಟಿಸ್) ತರಬೇತಿ ಹಮ್ಮಿಕೊಂಡಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
    ಐಟಿಐ ಪರೀಕ್ಷೆಯನ್ನು ಮಶಿನಿಷ್ಟ (ಗ್ರೈಂಡರ್), ಮೆಕಾನಿಕ್ (ರೆಫಿಜರೇಟರ್ ಮತ್ತು ಏರ್ ಕಂಡಿಷನರ್), ಡ್ರಾಪ್ಟಮ್ಯಾನ್ (ಮೆಕಾನಿಕಲ್), ಎಲೆಕ್ಟ್ರಾನಿಕ್ ಮೆಕಾನಿಕ್, ಪೆಂಟರ್, ವೆಲ್ಡರ್(ಜಿ.ಎಂ.ಡಬ್ಲೂ & ಜಿ.ಟಿ.ಎ.ಡಬ್ಲೂ), ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‍ವರ್ಕ್ ಮೆಂಟೈನೆನ್ಸ್, ಟೂಲ್ & ಡೈ ಮೇಕರ್ (ಪ್ರೆಸ್ ಟೂಲ್, ಜಿಗ್ಸ್ & ಫಿಕ್ಷರ್), ಇನ್ಸ್‍ಟ್ರೂಮೆಂಟ್ ಮೆಕಾನಿಕ್, ಮೆಕಾನಿಕ್ ಮಶಿನ್ ಟೂಲ್ ಮೆಂಟೆನನ್ಸ್, ಪ್ಲಾಸ್ಟಿಕ್ ಪ್ರೋಸೆಸಿಂಗ್ ಆಪರೇಟರ್, ಪ್ಲಂಬರ್, ರಬ್ಬರ್ ಟೆಕ್ನಿಕ್, ಲ್ಯಾಬೋರೆಟರಿ ಅಸಿಸ್ಟಂಟ್, ವೈರ್‍ಮ್ಯಾನ್, ಫಿಟ್ಟರ್, ಟರ್ನರ್, ಮಿಶಿನಿಷ್ಟ್, ಎಲೆಕ್ಟ್ರಿಷನ್, ಶೀಟ್ ಮೆಟಲ್ ವರ್ಕರ್ ವೃತ್ತಿಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
     ಅರ್ಹ ಅಭ್ಯರ್ಥಿಗಳು 
www.apprenticeship.gov.in ನಲ್ಲಿ ನೊಂದಣಿ ಮಾಡಿ ನಂತರ ನೊಂದಣಿ ಸಂಖ್ಯೆ ಹಾಗೂ ವಿದ್ಯಾರ್ಹತೆಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾನ ಪತ್ರಗಳ ಜೆರಾಕ್ಸ್ ಪ್ರತಿ ಹಾಗೂ ಎರಡು ಭಾವಚಿತ್ರಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕೊಪ್ಪಳ ಇಲ್ಲಿಗೆ ಆಗಸ್ಟ್ 04 ರೊಳಗಾಗಿ ಸಲ್ಲಿಸಬಹುದು.
     ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕೊಪ್ಪಳ ದೂ.ಸಂ : 08539-220859 ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಅಭಿಯಾನ ಸರಣಿ-7 : ಮಣ್ಣಿನ ಸತ್ವ ಹೆಚ್ಚಿಸಲು ಕೃಷಿ ಇಲಾಖೆಯ ವಿಶೇಷ ಯೋಜನೆ


ಕೊಪ್ಪಳ ಜು. 23 (ಕರ್ನಾಟಕ ವಾರ್ತೆ): ಸತತವಾಗಿ ರಸಾಯನಿಕ ಗೊಬ್ಬರಗಳ ಬಳಕೆಯಾಗಿರುವ ಭೂಮಿಯ ಮಣ್ಣಿನ ಸತ್ವ ಹೆಚ್ಚಿಸುವುದು ಹಾಗೂ ಸಾವಯವ ಕೃಷಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೃಷಿ ಇಲಾಖೆಯು ಪೂರಕ ಕೃಷಿ ಸಾಮಗ್ರಿಗಳನ್ನು ರಿಯಾಯಿತಿ ದರದಲ್ಲಿ ವಿತರಿಸುವ ಯೋಜನೆಯನ್ನು ಜಾರಿಗೊಳಿಸಿದೆ.
ರೈತರ ಜಮೀನಿನ ಮಣ್ಣಿನ ಸತ್ವ ಹೆಚ್ಚಿಸುವುದು ಮತ್ತು ರೈತರ ಆರ್ಥಿಕ ಮಟ್ಟ ಸುಧಾರಿಸುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ ಅಲ್ಲದೆ ಸಾವಯವ ಕೃಷಿಯನ್ನು ಪ್ರೋತ್ಸಾಹಿಸುವ ಸಲುವಾಗಿ ಸಾವಯವ ಗೊಬ್ಬರ ಉತ್ಪಾದನೆ ಮತ್ತು ಬಳಕೆ ಉತ್ತೇಜಿಸುವುದು ಸಹ ಉದ್ದೇಶವಾಗಿರುತ್ತದೆ.

1. ಕೃಷಿಗೆ ಪೂರಕ ಸಾಮಗ್ರಿಗಳ ವಿತರಣೆ- ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ರಿಯಾಯಿತಿ ದರ ಹಾಗೂ ಪ.ಜಾತಿ ಮತ್ತು ಪ.ಪಂಗಡದವರಿಗೆ ಶೇ. 75 ರ ರಿಯಾಯಿತಿ ದರದಲ್ಲಿ ವಿತರಿಸುವ ಯೋಜನೆ ಇದಾಗಿದೆ. ಕೃಷಿ ಸಾಮಗ್ರಿಗಳ ಮೂಲ ಬೆಲೆಗೆ ಕೃಷಿ ಇಲಾಖೆಯ ವತಿಯಿಂದ ದೊರೆಯುವ ರಿಯಾಯಿತಿ ವಿವರ ಇಂತಿದೆ.
• ಹಸಿರೆˉÉ ಗೊಬ್ಬರ ಬೀಜ ವಿತರಣೆಯಡಿ ಪ್ರತಿ ಹೆ. ಗೆ ರೂ. 2000/-(ಸಾಮಾನ್ಯ) ಹಾಗೂ ರೂ.3000/-(ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ).
• ಜಿಪ್ಸಂ/ಕೃಷಿ ಸುಣ್ಣ/ಡೋˉÉೂೀಮೈಟ್ ವಿತರಣೆ ಹೆ.ಗೆ ರೂ.750/- (ಸಾಮಾನ್ಯ) ಹಾಗೂ ರೂ.1125/-(ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ).
• ಲಘು ಪೋಷಕಾಂಶಗಳ ವಿತರಣೆ ಹೆ.ಗೆ ರೂ. 500/-(ಸಾಮಾನ್ಯ) ಹಾಗೂ ರೂ.750/-(ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ).
• ಜೈವಿಕ ಗೊಬ್ಬರಗಳ ವಿತರಣೆ ಹೆ.ಗೆ ರೂ. 100/-(ಸಾಮಾನ್ಯ) ಹಾಗೂ ರೂ.150/-(ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ).
• ಎರೆಹುಳು ಗೊಬ್ಬರ ವಿತರಣೆ ಹೆ.ಗೆ ರೂ. 2200/-(ಸಾಮಾನ್ಯ) ಹಾಗೂ ರೂ.3300/-(ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ).
• ಸಿಟಿ ಕಾಂಪೋಸ್ಟ್ ವಿತರಣೆ ಹೆ.ಗೆ ರೂ. 2000/- (ಸಾಮಾನ್ಯ) ಹಾಗೂ ರೂ.3000/- /-(ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ).
• ಸಾವಯವ ಗೊಬ್ಬರ(ಆರ್ಗಾನಿಕ್ ಮೆನ್ಯೂರ್) ವಿತರಣೆ ಹೆ.ಗೆ ರೂ.2200/-(ಸಾಮಾನ್ಯ) ಹಾಗೂ ರೂ.3300/-(ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡ).
• ರಂಜಕಯುಕ್ತ ಸಾವಯವ ಗೊಬ್ಬರ (ಪಾಸ್ಫೇಟ್ ರಿಚ್ ಆರ್ಗಾನಿಕ್ ಮೆನ್ಯೂರ್) ವಿತರಣೆ ಹೆ.ಗೆ ರೂ. 3000/- (ಸಾಮಾನ್ಯ) ಹಾಗೂ ರೂ.4000/- (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ).
• ಹರಳು ರೂಪದ ಸಂಪದ್ಭ್ಭರಿತ ಸಾವಯವ ಗೊಬ್ಬರ-ಕರ್ನಾಟಕ ಅಗ್ರಿಗೋˉï್ಡ ವಿತರಣೆ ಪ್ರತಿ ಹೆ.ಗೆ ರೂ.4000/-(ಸಾಮಾನ್ಯ) ಹಾಗೂ ರೂ.6000/- (ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡ).
• ಶೇ.100ರ ನೀರಿನಲ್ಲಿ ಕರಗುವ ಎನ್.ಪಿ.ಕೆ. ರಸಗೊಬ್ಬರ ಹೆ.ಗೆ ರೂ.500/-(ಸಾಮಾನ್ಯ) ಹಾಗೂ ರೂ.750/-(ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ).

2. ಸಾವಯವ ಗೊಬ್ಬರ ಉತ್ಪಾದನೆ : ಕೃಷಿಕರು ಸಾವಯವ ಗೊಬ್ಬರ ಉತ್ಪಾದನೆಗೆ ಕೃಷಿ ಇಲಾಖೆ ವತಿಯಿಂದ ಪ್ರೋತ್ಸಾಹಧನ ನೀಡುವ ಯೋಜನೆ ಜಾರಿಗೊಂಡಿದ್ದು, ಸಾಮಾನ್ಯ ವರ್ಗದ ರೈತರಿಗೆ ಶೇ.50 ರಷ್ಟು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಶೇ.75 ರ ಪ್ರೋತ್ಸಾಹ ಧನ ಲಭ್ಯವಾಗಲಿದೆ.
• ಬಯೋಡೈಜೆಸ್ಟರ್ ಘಟಕ ಸ್ಥಾಪನೆ: ಪ್ರತಿ ಘಟಕಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ 50 ರ ಸಹಾಯಧನ ಅಥವಾ ರೂ.30,000/- ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ 75 ರ ಸಹಾಯಧನ ಅಥವಾ ರೂ.45,000/- ಮೀರದಂತೆ ಪ್ರೋತ್ಸಾಹ ಧನ. ಡೈಜೆಸ್ಟರ್ ತೊಟ್ಟಿಯ ಅಳತೆ: 15'*8'*4', ಶೇಖರಣಾ ತೊಟ್ಟಿಯ ಅಳತೆ : 8'*6'*3’ ನಿಗದಿಪಡಿಸಿದೆ.
• ಎರೆಹುಳು ಗೊಬ್ಬರ ಉತ್ಪಾದನಾ ಘಟಕ ಸ್ಥಾಪನೆ- ಪ್ರತಿ ಎರಡು ಅಂಕಣದ ಎರೆಹುಳು ಗೊಬ್ಬರ ಘಟಕ ಸ್ಥಾಪನೆಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 50 ಭಾಗ ಅಥವಾ ಪ್ರತಿ ಘನ ಅಡಿಗೆ ರೂ. 47.3/- ಮೀರದಂತೆ ಗರಿಷ್ಠ ರೂ. 8500/- ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ. 75 ಭಾಗ ಅಥವಾ ಪ್ರತಿ ಘನ ಅಡಿಗೆ ರೂ.70.95/ ಮೀರದಂತೆ ಗರಿಷ್ಟ ರೂ.12750/ ಪ್ರೋತ್ಸಾಹ ಧನ ವಿತರಿಸಲಾಗುವುದು.

3. ಸಾವಯವ ಗೊಬ್ಬರಗಳ ಯೋಜನೆ : ಮಣ್ಣಿನ ಫಲವತ್ತೆತೆ ಹೆಚ್ಚಿಸುವ ಮೂಲಕ ರೈತರ ಆರ್ಥಿಕ ಮಟ್ಟ ಸುಧಾರಿಸುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ ಹಾಗೂ ಸಾವಯವ ಕೃಷಿಯನ್ನು ಪ್ರೋತ್ಸಾಹಿಸುವ ಸಲುವಾಗಿ ಸಾವಯವ ಗೊಬ್ಬರ ಬಳಕೆ ಉತ್ತೇಜಿಸುವುದು ಸಹ ಈ ಯೋಜನೆಯ ಉದ್ದೇಶವಾಗಿರುತ್ತದೆ. ಈ ಯೋಜನೆಯಡಿ ರೈತರಿಗೆ ಶೇ. 50 ರ ರಿಯಾಯಿತಿ ದರದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗುವುದು. ಹರಳು ರೂಪದ ಸಂಪದ್ಭ್ಭರಿತ ಸಾವಯವ ಗೊಬ್ಬರ- ಕರ್ನಾಟಕ ಅಗ್ರಿ ಗೋˉï್ಡ ವಿತರಣೆ. (ಪ್ರತಿ ಹೆಕ್ಟೇರ್‍ಗೆ ಗರಿಷ್ಠ ರೂ.4000/-). ಎರೆಹುಳು ಗೊಬ್ಬರ ವಿತರಣೆ ಹೆಕ್ಟೇರ್‍ಗೆ ಗರಿಷ್ಠ ರೂ.2200/-. ಸಿಟಿ ಕಾಂಪೋಸ್ಟ್ ವಿತರಣೆ ಹೆಕ್ಟೇರ್‍ಗೆ ಗರಿಷ್ಠ ರೂ.2000. ಹಸಿರೆˉÉ ಗೊಬ್ಬರ ಬೀಜ ವಿತರಣೆ ಹೆಕ್ಟೇರ್‍ಗೆ ಗರಿಷ್ಠ ರೂ.2000/- ನಿಗದಿಪಡಿಸಿದೆ.
ರೈತರು ಕೃಷಿ ಇಲಾಖೆಯ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕು. ಹೆಚ್ಚಿನ ವಿವರಗಳನ್ನು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಂದ ಪಡೆಯಬಹುದು ಎಂದು ಜಂಟಿಕೃಷಿ ನಿರ್ದೇಶಕ ಡಾ. ರಾಮದಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.