Saturday, 23 July 2016

ಆ. 04 ರಂದು ಕೊಪ್ಪಳ ತಾಲೂಕ ಪಂಚಾಯತಿ ಸಾಮಾನ್ಯ ಸಭೆ

ಕೊಪ್ಪಳ ಜು.23 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕ ಪಂಚಾಯತಿಯ ಸಾಮಾನ್ಯ ಸಭೆ ಆ. 04 ರಂದು ಬೆಳಗ್ಗೆ 10.30 ಗಂಟೆಗೆ ತಾ.ಪಂ ಸಭಾಂಗಣದಲ್ಲಿ ನಡೆಯಲಿದೆ.
     ತಾ.ಪಂ ಅಧ್ಯಕ್ಷ ಬಾಲಚಂದ್ರನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನಾಧಿಕಾರಿಗಳು ತಪ್ಪದೆ ಸಭೆಗೆ ಹಾಜರಾಗಬೇಕು. ಹಾಗೂ ತಮ್ಮ ಇಲಾಖೆ ಮಾಹಿತಿ ಹಾಗೂ ಜೂನ್ ಅಂತ್ಯದವರೆಗಿನ ಪ್ರಗತಿ ವರದಿಯನ್ನು ಜು.28 ರೊಳಗಾಗಿ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
Post a Comment