Friday, 22 July 2016

ಜು. 24 ರಂದು ಈಶಾನ್ಯದ ಐಸಿರಿ ಸರಣಿಯ 45 ನೇ ಸಂಚಿಕೆ ಪ್ರಸಾರ

ಕೊಪ್ಪಳ ಜು. 22 (ಕರ್ನಾಟಕ ವಾರ್ತೆ): ಹೈದ್ರಾಬಾದ್ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿ, ಇಲ್ಲಿನ ಕಲೆ, ಸಂಸ್ಕøತಿ, ಐತಿಹಾಸಿಕ ಹಾಗೂ ಪ್ರವಾಸಿ ತಾಣಗಳು, ಇಲ್ಲಿನ ಪ್ರತಿಭೆಗಳು, ಸಾಧಕರು ಮುಂತಾದ ಸಂಗತಿಗಳನ್ನು ಪರಿಚಯಿಸುವ “ಈಶಾನ್ಯದ ಐಸಿರಿ” ಸರಣಿಯ 45 ನೇ ಸಂಚಿಕೆ ಜುಲೈ 24 ರಂದು ಬೆಳಿಗ್ಗೆ 10 ಗಂಟೆಗೆ ಹೊಸಪೇಟೆ, ರಾಯಚೂರು ಹಾಗೂ ಕಲಬುರಗಿ ಆಕಾಶವಾಣಿ ಕೇಂದ್ರಗಳಿಂದ ಏಕಕಾಲಕ್ಕೆ ಪ್ರಸಾರವಾಗಲಿದೆ.
        ಹೈ.ಕ.ಪ್ರದೇಶ ಅಭಿವೃದ್ಧಿ ಮಂಡಳಿ ಈ ಸಂಪೂರ್ಣ ಸರಣಿಯನ್ನು ಪ್ರಾಯೋಜಿಸಿದ್ದು, 45 ನೇ  ಸಂಚಿಕೆಯಲ್ಲಿ ಮೂಡಿ ಬರಲಿರುವ ಕಾರ್ಯಕ್ರಮದ ವಿವರಗಳು ಹೀಗಿವೆ. ಕಲಬುರಗಿಯ ನಿವೃತ್ತ ನ್ಯಾಯ ಮೂರ್ತಿಗಳಾದ ಎಂ.ಬಿ. ಬಿರಾದರ ಅವರಿಂದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕರ ಪಾತ್ರ ಈ ಬಗ್ಗೆ ಮಾಹಿತಿ.  ಜ್ಞಾಪಕ ಶಕ್ತಿ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಎನ್.ಬಿ. ಪಾಟೀಲ ಅವರಿಂದ ಮಾಹಿತಿ.  ಎನ್.ಎಸ್.ಎಸ್.ನ ರಾಜ್ಯ ಮಟ್ಟದ ಅತ್ಯುತ್ತಮ ಸ್ವಯಂ ಸೇವಕ ಪ್ರಶಸ್ತಿ ಪಡೆದ ವಿಶ್ವನಾಥ ಎ. ಎಸ್. ಅವರೊಂದಿಗೆ ಮಾತುಕತೆ.  ಯಳವಂತಿಗಿ ‘ಬಿ’ ಗ್ರಾಮದ ಧನಲಕ್ಷ್ಮೀ ಸ್ತ್ರೀ ಶಕ್ತಿ ಸಂಘದ ಪರಿಚಯ.  ಸಂಗೀತಾ ಕಟ್ಟಿ ಕುಲಕರ್ಣಿ ಅವರಿಂದ ಹಾಡು.  ಊರು ಟೂರಿನಲ್ಲಿ ಬಳ್ಳಾರಿ ಜಿಲ್ಲೆಯ ಸಿರಗುಪ್ಪಾ ತಾಲುಕಿನ ಪ್ರವಾಸಿ ತಾಣಗಳ ದರ್ಶನ.  ಹುಮನಾಬಾದಿನ ರೇವಣಸಿದ್ದ ಮಟ್ಟ ಅವರಿಂದ ನಗೆಹನಿ.
   ಇವುಗಳಲ್ಲದೆ ಕಳೆದ ವಾರದಲ್ಲಿ ಈ ಭಾಗದ ಆರು ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಕ್ರಮಗಳು, ಘಟಿಸಿದ ಪ್ರಮುಖ ಸಂಗತಿಗಳನ್ನು ಒಳಗೊಂಡ ‘ವಾರದ ವರದಿ’, ಮಹಾತ್ಮರ, ಗಣ್ಯರ ನುಡಿಮುತ್ತುಗಳು, ನಗೆ ಹನಿ, ಸಾಮಾಜಿಕ ವಿಷಯಗಳ ಕುರಿತು ಜಿಂಗಲ್‍ಗಳು ಮೂಡಿ ಬರಲಿವೆ.   ಸರಣಿಯ ನಿರೂಪಣಾ ಸಾಹಿತ್ಯ ಹಾಗೂ ನಿರ್ಮಾಣದ ಜವಾಬ್ದಾರಿಯನ್ನು ಸೋಮಶೇಖರ ಎಸ್. ರುಳಿಯವರು ವಹಿಸಿಕೊಂಡಿದ್ದಾರೆ ಎಂದು ಕಲಬುರಗಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥೆ ಅಂಜನಾ ಯಾತನೂರ ತಿಳಿಸಿದ್ದಾರೆ.
Post a Comment