Thursday, 21 July 2016

ಜು.24 ರಂದು ಸ್ಪಧಾತ್ಮಕ ಪರೀಕ್ಷೆ : ನಿಷೇದಾಜ್ಞೆ ಜಾರಿ

ಕೊಪ್ಪಳ ಜು.21 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಐಎಎಸ್, ಕೆಎಎಸ್ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಕೊಪ್ಪಳದಲ್ಲಿ ಜು.24 ರಂದು ಸ್ಪಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ದಿನದಂದು  ಬೆಳಿಗ್ಗೆ 9 ರಿಂದ ಸ.5 ಗಂಟೆಯವರೆಗೆ ಪರೀಕ್ಷಾ ಕೇಂದ್ರದ ಸುತ್ತ-ಮುತ್ತಲಿನ 200 ಮೀ ಅಂತರದ ಪ್ರದೇಶದಲ್ಲಿ ನಿಷೇದಾಜ್ಷೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
     ಪರೀಕ್ಷಾ ಕೇಂದ್ರಗಳು : ಎಸ್‍ಎಫ್‍ಎಸ್ ಪ್ರೌಢ ಶಾಲೆ, ಸರ್ಕಾರಿ ಬಾಲಕಿಯರ ಪ.ಪೂ ಕಾಲೇಜು, ಸರ್ಕಾರಿ ಬಾಲಕರ ಪ.ಪೂ ಕಾಲೇಜು, ಸಕಾರಿ ್ ಪ್ರಥಮ ದರ್ಜೆ ಕಾಲೇಜು, ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಗವಿಸಿದ್ದೇಶ್ವರ ಪದವಿ ಹಾಗೂ ಪ್ರಥಮ ದರ್ಜೆ ಕಾಲೇಜು, ಗುಳಗಣ್ಣವರ್ ಪಾಲಿಟೆಕ್ನಿಕ್ ಕಾಲೇಜು ಕೊಪ್ಪಳ. ಈ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
         ಪರೀಕ್ಷಾ ಕೇಂದ್ರದ ಒಳಗೆ ಹಾಗೂ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್‍ಟಿಡಿ, ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಿದೆ.  ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ ಅಂತರದ ಒಳಗೆ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
Post a Comment