Friday, 22 July 2016

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಕೊಪ್ಪಳ ಜು. 22 (ಕರ್ನಾಟಕ ವಾರ್ತೆ) : ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಅವರು ಜು. 25 ಮತ್ತು 26 ರಂದು ಎರಡು ದಿನಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಸಚಿವರು ಜು. 25 ರಂದು ಧಾರವಾಡದಿಂದ ಹೊರಟು ಸಂಜೆ 5 ಗಂಟೆಗೆ ಯಲಬುರ್ಗಾಕ್ಕೆ ಆಗಮಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಕೈಗೊಂಡು ವಾಸ್ತವ್ಯ ಮಾಡುವರು.  ಜು. 26 ರಂದು ಮಧ್ಯಾಹ್ನ 12-15 ಗಂಟೆಗೆ ಯಲಬುರ್ಗಾದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಆಯುಕ್ತರು, ಯಲಬುರ್ಗಾ ತಹಸಿಲ್ದಾರ್, ಲೋಕೋಪಯೋಗಿ, ನಿರ್ಮಿತಿ ಕೇಂದ್ರ, ಕೆಆರ್.ಐ.ಡಿ.ಎಲ್., ತಾಲೂಕು ಪಂಚಾಯತಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.  ಸಂಜೆ 05 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವ ಸಚಿವರು, ರಾತ್ರಿ 8-15 ಗಂಟೆಗೆ ಹಂಪಿ ಎಕ್ಸ್‍ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
Post a Comment