Tuesday, 19 July 2016

ಮಂಗಳೂರು ಐಟಿಐ : ಖಾಲಿ ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ, ಜು.18 (ಕರ್ನಾಟಕ ವಾರ್ತೆ) : ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಂಗಳೂರು ಗ್ರಾಮದಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಸಿ.ಟಿ.ಎಸ್ ಯೋಜನೆಯಡಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯುತ್ ಶಿಲ್ಪಿ-02 ಹಾಗೂ ಜೋಡಣೆಗಾರ-01 ಸ್ಥಾನಗಳು ಖಾಲಿ ಉಳಿದಿದ್ದು, ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಜು.24 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಂಗಳೂರು ಗ್ರಾಮ ದೂ. ಸಂ: 08534-259225 ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Post a Comment