Friday, 22 July 2016

ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ

ಕೊಪ್ಪಳ ಜು.22 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕ ಸಮಾಜ ಕಲ್ಯಾಣ ಇಲಾಖೆಯಿಂದ ಪ.ಜಾತಿ ಹಾಗೂ ಪ.ಪಂಗಡದ 01 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿದ್ಯಾರ್ಥಿ ವೇತನಕ್ಕೆ ಮಾತ್ರ ಆನ್‍ಲೈನ್ ಮೂಲಕ ಅರ್ಜಿ ಹಾಕಲು ಆಗಸ್ಟ್ 15 ಕೊನೆಯ ದಿನಾಂಕವಾಗಿದೆ.
 ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಿರಿಯ, ಹಿರಿಯ ಹಾಗೂ ಪ್ರೌಢ ಶಾಲೆಗಳ ಮುಖ್ಯೋಪಾದ್ಯಾಯರುಗಳು ಪ.ಜಾತಿ ಹಾಗೂ ಪ.ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕಾಗಿ ಪ್ರಸಕ್ತ ಸಾಲಿನ ಒಂದನೇ ತರಗತಿಯ ವಿದ್ಯಾರ್ಥಿಗಳ ಅರ್ಜಿಗಳನ್ನು ಮಾತ್ರ ಆನ್‍ಲೈನ್ ಮೂಲಕ ಅ.15 ರೊಳಗಾಗಿ ಸಲ್ಲಿಸಬೇಕು.
ಇದುವರೆಗೂ ಆನ್‍ಲೈನ್ ಮೂಲಕ ನೋಂದಣಿ ಮಾಡದ 2 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ನೋಂದಣಿ ಅರ್ಜಿ ನಮೂನೆ, ನವೀಕರಣ ವಿದ್ಯಾರ್ಥಿಗಳು ಅನುಬಂಧ-2 ರಲ್ಲಿ ಹಾಗೂ ವರ್ಗಾವಣೆಯಾಗಿ ಬಂದ ವಿದ್ಯಾರ್ಥಿಗಳು ಅನುಬಂಧ-1 ರಲ್ಲಿ ಮಾಹಿತಿ ಭರ್ತಿ ಮಾಡಿ ಕಾರ್ಯಲಯಕ್ಕೆ ಸಲ್ಲಿಸಲು ತಿಳಿಸಲಾಗಿದೆ. ಅನುಬಂಧಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ ಪಡೆಯಬಹುದು. ಅರ್ಜಿಯೊಂದಿಗೆ ಮುಖ್ಯೋಪಾದ್ಯಾಯರ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸದೆ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಮಂಜೂರಾಗದಿದ್ದಲ್ಲಿ ಸಂಬಂಧಿಸಿದ ಶಾಲಾ ಮುಖ್ಯ ಗುರುಗಳನ್ನೆ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಕೊಪ್ಪಳ ತಾಲೂಕ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment