Saturday, 16 July 2016

ಕೊಪ್ಪಳ : ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆಗಾಗಿ ಅರ್ಜಿ ಆಹ್ವಾನ

ಕೊಪ್ಪಳ, ಜು.16 (ಕರ್ನಾಟಕ ವಾರ್ತೆ) : ಕೊಪ್ಪಳ ನಗರಸಭೆಯಿಂದ ಪ್ರಸಕ್ತ ಸಾಲಿನ ನಲ್ಮ ಯೋಜನೆಯಡಿ ಬೀದಿ ಬದಿ ವ್ಯಾಪಾರಸ್ಥರಿಗಾಗಿ ಉಚಿತ ಗುರುತಿನ ಚೀಟಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
     ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಸಂಚಾರಿ ಹಾಗೂ ಸ್ಥಿರ ಬೀದಿ ವ್ಯಾಪಾರಸ್ಥರ ಸಮೀಕ್ಷಾ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ವ್ಯಾಪಾರಸ್ಥರಿಗೆ ಗುರುತಿನ ಚೀಟಿ ವಿತರಿಸಲಾಗುವುದು.
      ಬೀದಿ ಬದಿ ವ್ಯಾಪಾರಸ್ಥರು ತಮ್ಮ ಕುಟುಂಬದ ಯಾದಿ ಹಾಗೂ ಕುಟುಂಬ ಸದಸ್ಯರನ್ನೊಳಗೊಂಡ ಭಾವ ಚಿತ್ರವನ್ನು ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ದಾಖಲಾತಿ ಸಲ್ಲಿಸಿದ ವ್ಯಾಪಾರಸ್ಥರಿಗೆ ಮಾತ್ರ ಗುರುತಿನ ಚೀಟಿ ವಿತರಿಸಲಾಗುವುದು. ಕುಟುಂಬದ ಫೋಟೊ ಹಾಗೂ ದಾಖಲಾತಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment