Friday, 22 July 2016

ವಸತಿ ನಿಲಯಗಳಲ್ಲಿ ಶುಧ್ಧ ಹಾಗೂ ಗುಣಮಟ್ಟದ ಆಹಾರ ಒದಗಿಸಿ : ಎಂ. ಕನಗವಲ್ಲಿ


ಕೊಪ್ಪಳ ಜು.22 (ಕರ್ನಾಟಕ ವಾರ್ತೆ): ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಶುಧ್ಧ ಹಾಗೂ ಗುಣಮಟ್ಟದ ಆಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ವಸತಿ ನಿಲಯಗಳ ಪಾಲಕರು ಹಾಗೂ ಮೇಲ್ವಿಚಾರಕರಿಗೆ ಸೂಚನೆ ನೀಡಿದರು. 

    ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ  ಕಲ್ಯಾಣ ಇಲಾಖೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ನಿಲಯ ಪಾಲಕರು ಹಾಗೂ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ವಸತಿ ನಿಯಯಗಳಲ್ಲಿ ವಿದ್ಯಾರ್ಥಿಗಳಿಗೆ ಶುಧ್ದ ಮತ್ತು ಗುಣ ಮಟ್ಟದ ಆಹಾರವನ್ನು ಒದಗಿಸಲು ನಿಲಯ ಪಾಲಕರು ಹಾಗೂ ಮೇಲ್ವಿಚಾರಕರು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.  ಆಹಾರ ಸಾಮಗ್ರಿಗಳು ಉತ್ತಮ ಗುಣಮಟ್ಟದ್ದಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.  ವಿದ್ಯಾರ್ಥಿಗಳಿಗೆ ಬಿಸಿಯಾಗಿರುವ ಆಹಾರವನ್ನು ಒದಗಿಸಬೇಕು.  ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು.  ಎಲ್ಲ ವಸತಿ ಶಾಲೆಗಳಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಶೇ. 100 ರಷ್ಟು ಬರುವಂತೆ ಈಗಿನಿಂದಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.
     ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಬಿಸಿಎಂ ಇಲಾಖೆಯ ವಸರಿ ನಿಲಯಗಳ ಹೊಸ ಕಟ್ಟಡ ಹಾಗೂ ದುರಸ್ತಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ,   ಪ್ರಗತಿಯಲ್ಲಿರುವ ಕಾಮಗಾರಿಗಳು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸದಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.  ನಿಲಯ ಪಾಲಕರು ಹಾಗೂ ಮೇಲ್ವಿಚಾರಕರುಗಳು ತಮ್ಮ ನಿಲಯಗಳ ಕಟ್ಟಡಗಳ ಸ್ಥಿತಿ-ಗತಿ ಹಾಗೂ ಗುಣಮಟ್ಟದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಶೀಘ್ರ ಮಾಹಿತಿ ನೀಡಬೇಕು. ನಿಲಯ ಪಾಲಕರು ಹಾಗೂ ಮೇಲ್ವಿಚಾರಕರು ವಸತಿ ನಿಲಯಗಳಲ್ಲಿಯೇ ಇದ್ದು, ವಸತಿನಿಲಯಗಳ ಮಕ್ಕಳನ್ನು ಸ್ವಂತ ಮಕ್ಕಳೆಂದು ಭಾವಿಸಿ, ಅವರಿಗೆ ಸರ್ಕಾರದಿಂದ ದೊರೆಯುವ ಉತ್ತಮ ಸೌಲಭ್ಯಗಳನ್ನು ಒದಗಿಸಬೇಕು.  ಮಹಿಳಾ ಮೇಲ್ವಿಚಾರಕಿಯರು ಹೆಚ್ಚು ಜಾಗೃತರಾಗಿ ತಮ್ಮ ಕೆಲಸ ನಿರ್ವಹಿಸಬೇಕು.
     ವಸತಿ ಶಾಲೆಗಳಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿ, ತಮ್ಮ ಮನೆಗಳಲ್ಲಿ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಹಾಗೂ ಶೇ. 100 ರಷ್ಟು ಪ್ರಗತಿ ಸಾಧಿಸಿದ ನಿಲಯ ಪಾಲಕರು ಹಾಗೂ ಮೇಲ್ಲಿಚಾರಕರಿಗೆ ಜಿಲ್ಲಾ ಪಂಚಾಯತಿಯಿಂದ ಸೂಕ್ತ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
          ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರೇಮಸಾಗರ ದಾಂಡೇಕರ್ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗಳ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶದ ವಿವರ ಹಾಗೂ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳ ಕುರಿತು ವಿವರಿಸಿದರು. ಕಟ್ಟಡಗಳ ದುರಸ್ತಿ ಕುರಿತು ಹಾಗೂ ಸ್ವಂತ ಕಟ್ಟಡ ಕಾಮಗಾರಿಗಳ ಪ್ರಗತಿಯ ವಿವರ ನೀಡಿದರು.
    ಬಿಸಿಎಂ ಜಿಲ್ಲಾ ಅಧಿಕಾರಿ ಬಿ.ಕಲ್ಲೇಶ್ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Post a Comment