Wednesday, 20 July 2016

ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ: ಅರ್ಜಿ ಆಹ್ವಾನ

ಕೊಪ್ಪಳ, ಜು.20 (ಕರ್ನಾಟಕ ವಾರ್ತೆ) : ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ದೇವರಾಜ ಅರಸು ವಸತಿ ಯೋಜನೆಯಡಿ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಅಭ್ಯರ್ಥಿಗಳಿಗೆ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
    ಅರ್ಜಿ ಸಲ್ಲಿಸುವವರು ಅಲೆಮಾರಿ/ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು.   ವಾರ್ಷಿಕ ಆದಾಯ, ಗ್ರಾಮೀಣ ಪ್ರದೇಶದವರಿಗೆ ರೂ.32000 ಹಾಗೂ ನಗರ ಪ್ರದೇಶದವರ ವಾರ್ಷಿಕ ಆದಾಯ  ರೂ. 87600 ರೊಳಗಿರಬೇಕು.  ಸ್ವಂತ ಮನೆ ಹೊಂದಿರಬಾರದು. ಸ್ವಂತ ನಿವೇಶನ ಹೊಂದಿರಬೇಕು.
     ನಿಗದಿತ ಅರ್ಜಿ ನಮೂನೆಯನ್ನು ಆಯಾ ತಾಲೂಕ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಛೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ  ತಹಸಿಲ್ದಾರರಿಂದ ಪಡೆದ ಜಾತಿ ಆದಾಯ ಪ್ರಮಾಣ ಪತ್ರ, ಮನೆ ಹೊಂದಿರದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಪ್ರಮಾಣ ಪತ್ರ,  ನಿವೇಶನ ಹೊಂದಿರುವ ಅಗತ್ಯ ದಾಖಲಾತಿಗಳು, ಬೇರೆ ಯಾವುದೇ ಇಲಾಖೆ ಅಥವಾ ಯೋಜನೆಯಲ್ಲಿ ಈಗಾಗಲೇ ವಸತಿ ಸೌಲಭ್ಯ ಪಡೆದಿಲ್ಲವೆಂದು ಸಂಬಂಧಿಸಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ,  ಸ್ವಂತ ಮನೆ ಹೊಂದಿರದ ಕುರಿತ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಆಗಸ್ಟ್ 5 ರೊಳಗಾಗಿ ಸಲ್ಲಿಸಬೇಕು.
     ಹೆಚ್ಚಿನ ಮಾಹಿತಿಯನ್ನು ಆಯಾ ತಾಲೂಕ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಛೇರಿಯಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಬಿಸಿಎಂ ಅಧಿಕಾರಿ ಬಿ. ಕಲ್ಲೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment