Monday, 18 July 2016

ಪ್ರತಿಯೊಬ್ಬರೂ ಪರಿಸರ ರಕ್ಷಿಸಲು ಮುಂದಾಗಿ: ಪ್ರೇಮಸಾಗರ ದಾಂಡೇಕರ್

ಕೊಪ್ಪಳ, ಜು.18 (ಕರ್ನಾಟಕ ವಾರ್ತೆ) :  ಪ್ರತಿಯೊಬ್ಬ ವಿದ್ಯಾರ್ಥಿ ಸಸಿಗಳನ್ನು ಬೆಳೆಸಿ, ಪರಿಸರ ರಕ್ಷಿಸಲು ಮುಂದಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರೇಮಸಾಗರ ದಾಂಡೇಕರ್ ಹೇಳಿದರು.
     ಗೊಂಡಬಾಳ ವಸತಿ ನಿಲಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ  ಅವರು ಮಾತನಾಡಿದರು.
     ಸಸಿಗಳನ್ನು ನೆಟ್ಟು ಬೆಳೆಸುವುದರರೊಂದಿಗೆ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸೊಣ ಎಂದು ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರೇಮಸಾಗರ ಮನವಿ ಮಾಡಿಕೊಂಡರು.
     ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಿದಾನಂದ, ವಾರ್ಡನ್ ಬಸವರಾಜ್ ಕಟಗಿ, ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Post a Comment