Wednesday, 19 October 2016

ಅ. 21 ರಂದು ಕೊಪ್ಪಳದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಕೊಪ್ಪಳ ಅ. 19 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಅ. 21 ರಂದು ಬೆಳಿಗ್ಗೆ 08 ಗಂಟೆಗೆ ಕೊಪ್ಪಳದ ಜಿಲ್ಲಾ ಪೊಲೀಸ್ ಕಾರ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದೆ.
     ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾದ ಪೊಲೀಸರ ಸ್ಮರಣೆ ಹಾಗೂ ಗೌರವ ಸಮರ್ಪಣೆ ಈ ಸಂದರ್ಭದಲ್ಲಿ ನೆರವೇರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್ ಅವರು ತಿಳಿಸಿದ್ದಾರೆ.
Post a Comment