Thursday, 20 October 2016

ಅ. 25 ರಂದು ಗಂಗಾವತಿ ತಾ.ಪಂ. ತ್ರೈಮಾಸಿಕ ಕೆಡಿಪಿ ಸಭೆ

ಕೊಪ್ಪಳ ಅ. 20 (ಕರ್ನಾಟಕ ವಾರ್ತೆ): ಗಂಗಾವತಿ ತಾಲೂಕಾ ಪಂಚಾಯತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಅ. 25 ರಂದು ಬೆಳಿಗ್ಗೆ 11 ಗಂಟೆಗೆ ಗಂಗಾವತಿಯ ತಾಲೂಕು ಮಂಥನ ಸಭಾಂಗಣದಲ್ಲಿ ನಡೆಯಲಿದೆ.
     ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವ ಶಿವರಾಜ ತಂಗಡಗಿ ಅವರ ಸೂಚನೆಯಂತೆ ತಾ.ಪಂ. ತ್ರೈಮಾಸಿಕ ಕೆಡಿಪಿ ಸಭೆಯನ್ನು ಅ. 25 ರಂದು ಬೆಳಿಗ್ಗೆ 11 ಗಂಟೆಗೆ ಗಂಗಾವತಿಯ ಮಂಥನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.  ತಾಲೂಕು ಮಟ್ಟದ ಎಲ್ಲ ಅನುಷ್ಠಾನಾಧಿಕಾರಿಗಳು ಏಪ್ರಿಲ್ ರಿಂದ ಸೆಪ್ಟಂಬರ್ ಅಂತ್ಯದವರೆಗಿನ ಪ್ರಗತಿ ವರದಿಯೊಂದಿಗೆ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಗಂಗಾವತಿ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
Post a Comment