Monday, 17 October 2016

ನ.4 ರಂದು ಕೊಪ್ಪಳ ತಾಲೂಕಾ ಪಂಚಾಯತ್ ಸಾಮಾನ್ಯ ಸಭೆ

ಕೊಪ್ಪಳ, ಅ.17 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕ ಪಂಚಾಯಿತಿ ಸಾಮಾನ್ಯ ಸಭೆ ನ.4 ರಂದು ಬೆಳಿಗ್ಗೆ 10.30 ಗಂಟೆಗೆ ತಾ.ಪಂ ಸಭಾಂಗಣದಲ್ಲಿ ಜರುಗಲಿದೆ.
     ಕೊಪ್ಪಳ ತಾಲೂಕ ಪಂಚಾಯಿತಿ ಅಧ್ಯಕ್ಷ ಬಾಲಚಂದ್ರನ್ ಅವರು ಸಭೆಯ ಅಧ್ವಕ್ಷತೆ ವಹಿಸುವರು. ತಾಲೂಕ ಮಟ್ಟದ ಎಲ್ಲಾ ಅನುಷ್ಠಾನಾಧಿಕಾರಿಗಳು ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು ಹಾಗೂ ತಮ್ಮ ಇಲಾಖೆಯ ಪ್ರಗತಿ ವರದಿಯನ್ನು ಅ.21 ರೊಳಗಾಗಿ ಕಾರ್ಯಲಯಕ್ಕೆ ಸಲ್ಲಿಸಬೇಕು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment