Monday, 17 October 2016

ವಿಕಲಚೇತನರ ಇ-ಸ್ಕಾಲರ್‍ಶಿಪ್‍ಗಾಗಿ ಅರ್ಜಿ : ಅವಧಿ ವಿಸ್ತರಣೆ

ಕೊಪ್ಪಳ, ಅ.17 (ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಿಂದ ನ್ಯಾಶನಲ್ ಇ-ಸ್ಕಾಲರ್‍ಶಿಪ್ ಮೂಲಕ ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕಾಗಿ ಜಿಲ್ಲೆಯ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಅ.31 ರವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್ ಪೂರ್ವ ಸ್ಕಾಲರ್‍ಶಿಪ್ (9 ಮತ್ತು 10 ನೇತರಗತಿ), ಪೋಸ್ಟ್ ಸ್ಕಾಲರ್‍ಶಿಪ್ (ಹನ್ನೊಂದನೆ ತರಗತಿಯಿಂದ ಮಾಸ್ಟರ್ ಡಿಗ್ರಿ ಅಥವಾ ಡಿಪ್ಲೋಮಾ), ಹಾಗೂ ಟಾಪ್ ಕ್ಲಾಸ್ ಸ್ಕಾಲರ್‍ಶಿಪ್‍ಗಾಗಿ ಅರ್ಜಿ ಸಲ್ಲಿಸುವವರು ಸೂಕ್ತ ದಾಖಲಾತಿಗಳೊಂದಿಗೆ ಆನ್‍ಲೈನ್  http://scholarship.gov.in/# ಮೂಲಕ ಅರ್ಜಿ ಸಲ್ಲಿಸಬಹುದು.
     ಅರ್ಜಿ ಸಲ್ಲಿಸಿದ ನಂತರ, ಸಲ್ಲಿಸಿದ ಅರ್ಜಿ ನಮೂನೆಯ ನಕಲು ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಆಸ್ಪತ್ರೆ ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ  www.disabliltiyaffairs.gov.in ಈ ವೆಬ್‍ಸೈಟ್‍ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ 08539-220596 ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Post a Comment