Thursday, 6 October 2016

ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಯಡಿ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಕೊಪ್ಪಳ, ಅ.06 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಯಡಿ ಪ್ರೋತ್ಸಾಹ ಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
     ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ (ಹಿಜ್ರಾಗಳು, ಕೋಥಿಗಳು, ಜೋಗಪ್ಪಂದಿರು/ಎಫ್ ಟು ಎಂ/ ಎಂ ಟು ಎಫ್/ ಮಂಗಳಮುಖಿಯರು) ತಲಾ 20 ಸಾವಿರ ರೂ ಗಳ ಪ್ರೋತ್ವಾಹ ಧನಕ್ಕಾಗಿ
ಜಿಲ್ಲೆಗೆ 20 ಭೌತಿಕ ಗುರಿ ನಿಗದಿಪಡಿಸಲಾಗಿದೆ.  ಅರ್ಹ ಅಭ್ಯರ್ಥಿಗಳು ಯಾವುದೇ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷದೊಳಗಿರಬೇಕು. ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ರಾಷ್ಟ್ರೀಕೃತ ಬ್ಯಾಂಕ್ ಖಾತೆ ಹೊಂದಿರಬೇಕು. ಚುನಾವಣಾ ಗುರುತಿನ ಚೀಟಿ, ಆಧಾರ ಕಾರ್ಡ್, ಪಡಿತರ ಚೀಟಿ, ಲಿಂಗತ್ವ ಅಲ್ಪಸಂಖ್ಯಾತರಿಗೆ ಸಂಬಂಧಪಟ್ಟ ವೈದ್ಯರಿಂದ/ಸಂಬಂಧಿಸಿದ ಸಂಸ್ಥೆಯಿಂದ ದೃಢೀಕರಣ ಪತ್ರ ಹಾಗೂ ಇತ್ತೀಚಿನ 3 ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.
    ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಅ.24 ರೊಳಗಾಗಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment