Wednesday, 8 March 2017

ಜಿಲ್ಲಾ ಪಂಚಾಯತಿ ತ್ರೈಮಾಸಿಕ ಕೆ.ಡಿ.ಪಿ. ಸಭೆ ಮಾ. 13 ಕ್ಕೆ ಮುಂದೂಡಿಕೆ

ಕೊಪ್ಪಳ, ಮಾ.08 (ಕರ್ನಾಟಕ ವಾರ್ತೆ):  ಕೊಪ್ಪಳ ಜಿಲ್ಲಾ ಪಂಚಾಯತಿ 3ನೇ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಮಾ.13 ರಂದು ಬೆಳಿಗ್ಗೆ 10-00 ಗಂಟೆಗೆ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು.  ಸಭೆಯನ್ನು ಮಾ. 10 ರಂದು ನಿಗದಿಪಡಿಸಲಾಗಿತ್ತು.  ಇದೀಗ ಅನಿವಾರ್ಯ ಕಾರಣಗಳಿಗಾಗಿ ಮಾ. 13 ಕ್ಕೆ ಮುಂದೂಡಲಾಗಿದೆ.  ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಗೆ, ಪ್ರಗತಿ ವರದಿಗಳ ವಿವರವಾದ ಮಾಹಿತಿಯೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಹಾಜರಾಗಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ.
Post a Comment