Thursday, 16 March 2017

ವಿಶ್ವ ಗ್ರಾಹಕರ ದಿನಾಚರಣೆ : ಮಾ.20 ರಂದು ಕೊಪ್ಪಳದಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆ


ಕೊಪ್ಪಳ, ಮಾ.16 (ಕರ್ನಾಟಕ ವಾರ್ತೆ): ವಿಶ್ವ ಗ್ರಾಹಕರ ದಿಣಾಚರಣೆ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಮಾ.20 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳದ ವಿಜಯನಗರ ಶ್ರೀ ಕೃಷ್ಣ ದೇವರಾಯ ಸ್ನಾತಕೋತರ ಕೇಂದ್ರದಲ್ಲಿ (ಹಳೆ ಜಿಲ್ಲಾಸ್ಪತ್ರೆ ಆವರಣ) ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಪುಷ್ಪ ಪ್ರದರ್ಶನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತ ಸ್ಪರ್ಧಾಳುಗಳು ತಮ್ಮ ಹೆಸರುಗಳನ್ನು ನೊಂದಾಯಿಸಿ, ಸ್ಪರ್ಧೆಯಲ್ಲಿ ಭಾಗವಹಿಸಬಹುದು.   ಸ್ಪರ್ಧಾಕಾಂಕ್ಷಿಗಳು ಹೆಸರು ನೊಂದಾಯಿಸಲು ಮೊಬೈಲ್ ಸಂಖ್ಯೆ 9886922815 ಅಥವಾ 9481937264 ಕ್ಕೆ ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Post a Comment