Saturday, 18 March 2017

ಮಾ.20 ರಂದು ಕೊಪ್ಪಳದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

ಕೊಪ್ಪಳ, ಮಾ.18 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಇವರ ಸಹಯೋಗದಲ್ಲಿ ವಿಶ್ವ ಗ್ರಾಹಕರ ದಿನಾಚರಣೆಯನ್ನು ಮಾ.20 ರಂದು ಬೆಳಿಗ್ಗೆ 10:30 ಗಂಟೆಗೆ ಕೊಪ್ಪಳದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ.
    ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ. ಕನಗವಲ್ಲಿ ಅವರು ಉದ್ಘಾಟನೆ ನೆರೆವೇರಿಸುವರು.  ಜಿಲ್ಲಾ ಗ್ರಾಹಕರ ವ್ಯಾಜಗಳ ಪರಿಹಾರ ವೇದಿಕೆ ಅಧ್ಯಕ್ಷೆ ಏಕತಾ ಹೆಚ್.ಡಿ. ಅವರು ಅಧ್ಯಕ್ಷತೆ ವಹಿಸುವರು.  ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ವಿಶೇಷ ಆಹ್ವಾನಿತರಾಗಿ ಜಿಲ್ಲಾ ಗ್ರಾಹಕರ ವೇದಿಕೆ ಸದಸ್ಯ ರವಿರಾಜ ಕುಲಕರ್ಣಿ ಭಾಗವಹಿಸುವರು.
    ವಿಶ್ವ ಗ್ರಾಹಕರ ದಿನಾಚರಣೆಯ ಅಂಗವಾಗಿ ಕೊಪ್ಪಳ ಜಿಲ್ಲಾ ಗ್ರಾಹಕರ ವೇದಿಕೆ ಸಹಾಯಕ ನೊಂದಣಾಧಿಕಾರಿ ಪಿ.ಎಸ್. ಅಮರದೀಪ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
Post a Comment