Thursday, 16 March 2017

ಮಾ.24 ರಂದು ಜಿ. ಪಂ ಸಾಮಾನ್ಯ ಸಭೆ

ಕೊಪ್ಪಳ, ಮಾ.16 (ಕರ್ನಾಟಕ ವಾರ್ತೆ):  ಕೊಪ್ಪಳ ಜಿಲ್ಲಾ ಪಂಚಾಯತ ಸಾಮಾನ್ಯ ಸಭೆ ಮಾ.24 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್   ಸಭಾಂಗಣದಲ್ಲಿ ನಡೆಯಲಿದೆ.
          ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ವಹಿಸುವರು.  ಸಭೆಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ.  ಬರ ಪರಿಹಾರ ಕಾಮಗಾರಿಗಳ ಅನುಷ್ಠಾನ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.   ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು  ಪ್ರಗತಿ ವರದಿಯನ್ನು ಮಾ.20 ರೊಳಗಾಗಿ   ಜಿ.ಪಂ. ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ   ಸೂಚಿಸಿದ್ದಾರೆ.
Post a Comment