Tuesday, 21 March 2017

ಮಾ.25 ರಂದು ಕೊಪ್ಪಳದಲ್ಲಿ ಮಾವು ಬೆಳೆಗಾರರಿಗೆ ತಾಂತ್ರಿಕ ಕಾರ್ಯಾಗಾರ

ಕೊಪ್ಪಳ, ಮಾ.21 (ಕರ್ನಾಟಕ ವಾರ್ತೆ): ತೋಟಗಾರರ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಬೆಂಗಳೂರು ಇವರ ವತಿಯಿಂದ ಕೊಪ್ಪಳ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯ ಮಾವು ಬೆಳೆಗಾರರಿಗೆ ತಾಂತ್ರಿಕ ಕಾರ್ಯಗಾರ ಮಾ. 25 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳದ ಎ.ಆರ್. ಮೇಘರಾಜ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
     ಮಾವು ಬೆಳಗಾರರಿಗಾಗಿ ಏರ್ಪಡಿಸಲಾಗಿರುವ ಈ ತಾಂತ್ರಿಕ ಕಾರ್ಯಗಾರದಲ್ಲಿ ಗುಣಮಟ್ಟದ ಮಾವು ಬೇಸಾಯ, ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು ಕುರಿತು ತಜ್ಞರಿಂದ ಸೂಕ್ತ ಮಾಹಿತಿ ದೊರಕಿಸಿಕೊಡಲಾಗುವುದು.  ಹೆಚ್ಚಿನ ಸಂಖ್ಯೆಯಲ್ಲಿ ಮಾವು ಬೆಳೆಗಾರರು ಕಾರ್ಯಗಾರದಲ್ಲಿ ಪಾಲ್ಗೊಂಡು, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
Post a Comment