Tuesday, 28 March 2017

ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ : ಮಾ. 30 ರಂದು ಸಿದ್ಧತಾ ಸಭೆ


ಕೊಪ್ಪಳ ಮಾ. 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಏ. 02 ರಿಂದ 05 ರವರೆಗೆ ನಾಲ್ಕು ದಿನಗಳ ಕಾಲ, ಮೊದಲ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಸಿದ್ಧತೆಗಾಗಿ ಪೂರ್ವಭಾವಿ ಸಭೆ ಮಾ. 30 ರಂದು ಸಂಜೆ 4-30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
     ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ವಹಿಸುವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ತಿಳಿಸಿದ್ದಾರೆ.Post a Comment