Monday, 20 March 2017

ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಪ್ರವಾಸ ಕಾರ್ಯಕ್ರಮ

ಕೊಪ್ಪಳ ಮಾ. 20 (ಕರ್ನಾಟಕ ವಾರ್ತೆ): ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಅವರು ಮಾ. 24 ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದಾರೆ.
     ಡಾ. ಮನು ಬಳಿಗಾರ್ ಅವರು, ಮಾ. 24 ರಂದು ಬೆಳಿಗ್ಗೆ 8-15 ಗಂಟೆಗೆ ಹಂಪಿ ಎಕ್ಸ್‍ಪ್ರೆಸ್ ರೈಲು ಮೂಲಕ ಕೊಪ್ಪಳಕ್ಕೆ ಆಗಮಿಸುವರು.  ನಂತರ ಬೆಳಿಗ್ಗೆ 10-30 ಗಂಟೆಗೆ ಯಲಬುರ್ಗಾ ತಾಲೂಕು ಹಿರೇವಂಕಲಕುಂಟಾ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿರುವ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ 02 ಗಂಟೆಗೆ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು.
Post a Comment