Thursday, 9 March 2017

ಜಲಸಂಪನ್ಮೂಲ ಸಚಿವರ ಪ್ರವಾಸ ಕಾರ್ಯಕ್ರಮ

ಕೊಪ್ಪಳ ಮಾ. 09 (ಕರ್ನಾಟಕ ವಾರ್ತೆ): ರಾಜ್ಯ ಜಲಸಂಪನ್ಮೂಲ ಸಚಿವರಾದ ಎಂ.ಬಿ. ಪಾಟೀಲ್ ಅವರು. ಮಾ. 10 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಸಚಿವರು ಅಂದು ಬೆಳಿಗ್ಗೆ ಹೊಸಪೇಟೆಯಿಂದ ಹೊರಟು ಬೆ. 11 ಗಂಟೆಗೆ ಕೊಪ್ಪಳ ತಾಲೂಕು ಬೆಟಗೇರಿ ಗ್ರಾಮಕ್ಕೆ ಆಗಮಿಸಲಿದ್ದಾರೆ.  ನಂತರ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ 02 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
Post a Comment