Wednesday, 8 March 2017

ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ನಾಮನಿರ್ದೇಶನ : ಅರ್ಜಿ ಆಹ್ವಾನ


ಕೊಪ್ಪಳ, ಮಾ.08 (ಕರ್ನಾಟಕ ವಾರ್ತೆ):  ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ/ಅರೆ ಅಲೆಮಾರಿ ಅಥವಾ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ರಚಿಸಲಾಗುತ್ತಿದ್ದು, ಜಿಲ್ಲಾ ಮಟ್ಟದ ಸಮಿತಿಗೆ ನಾಮನಿರ್ದೇಶನ ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
    ಈ ಹಿಂದೆಯೂ ಸಹ ನಾಮನಿರ್ದೇಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು.  ಆದರೆ ಸಂಬಂಧಪಟ್ಟ ಸಮುದಾಯದ ಮುಖಂಡರಿಂದ ಸಾಕಷ್ಟು ಪ್ರಮಾಣದಲ್ಲಿ ಅರ್ಜಿಗಳು ಸ್ವೀಕೃತವಾಗದೇ ಇರುವ ಕಾರಣಕ್ಕಾಗಿ, ಸಮುದಾಯದ ಮುಖಂಡರಿಂದ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ.  ಇಚ್ಛೆಯುಳ್ಳವರು ಮಾ.18 ರೊಳಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಛೇರಿಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
Post a Comment