Wednesday, 31 May 2017

ಜೂ.01 ರಂದು ಕುಕನೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕಾರ್ಯಗಳಿಗೆ ಚಾಲನೆ


ಕೊಪ್ಪಳ, ಮೇ. 31 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ ಮತ್ತು ಕುಕನೂರ ಪಟ್ಟಣ ಪಂಚಾಯತ್ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಹಾಗೂ 14ನೇ ಹಣಕಾಸು ಯೋಜನೆಯ ಅಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಎಚ್.ಕೆ.ಡಿ.ಪಿ ಯೋಜನೆಯ ಬುದ್ಧ, ಬಸವ, ಅಂಬೇಡ್ಕರ ಭವನದ ಕಾಮಗಾರಿಗಳ ಅಡಿಗಲ್ಲು ಮತ್ತು ಬಾಲಕರ ವಸತಿ ನಿಲಯದ ಉದ್ಘಾಟನಾ ಸಮಾರಂಭ ಜೂ.01 ರಂದು ಬೆಳಿಗ್ಗೆ 10-00 ಗಂಟೆಗೆ ಕುಕನೂರಿನಲ್ಲಿ ನಡೆಯಲಿದೆ.  
    ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ನೆರೆವೇರಿಸುವರು.  ಕುಕನೂರ ಪ.ಪಂ. ಅಧ್ಯಕ್ಷೆ ಸುಭದ್ರಾ ಮಲಿಯಪ್ಪ ಅಣ್ಣಿಗೇರಿ ಅಧ್ಯಕ್ಷತೆ ವಹಿಸುವರು.  ಜಿ.ಪ.ಂ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ್ ಎಸ್. ತಂಗಡಗಿ, ಇಕ್ಬಾಲ್ ಅನ್ಸಾರಿ, ಕೆ.ರಾಘವೇಂದ್ರ ಹಿಟ್ನಾಳ ಹಾಗೂ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ, ಜಿ.ಪಂ ಉಪಾಧ್ಯಕ್ಷೆ ಲಕ್ಷಮ್ಮ ಎಸ್. ನೀರಲೂಟಿ, ಯಲಬುರ್ಗಾ ತಾ.ಪಂ. ಅಧ್ಯಕ್ಷೆ ಲಕ್ಷ್ಮೀ ದ್ಯಾಮಣ್ಣ ಗೌಡರ್, ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ್, ಜಿಲ್ಲಾಧಿಕಾರಿ ಎಂ.ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನುಪ್ ಕೆ.ಶೆಟ್ಟಿ,  ಅಪರ ಜಿಲ್ಲಾಧಿಕಾರಿ ರುದ್ರೇಶ ಎಸ್.ಘಾಳಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ವಿಜಯ ಕುಮಾರ ಮೆಕ್ಕಳಕಿ, ಸಹಾಯಕ ಕಾರ್ಯಪಾಲಕ ಅಭಿಯಂತ ಮಂಜುನಾಥ ಪಿ.ಎ. ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Post a Comment