Tuesday, 30 May 2017

ಮೇ. 31 ರಂದು ಕೊಪ್ಪಳದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ


ಕೊಪ್ಪಳ, ಮೇ. 29 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಇವರ ಸಹಯೋಗದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಮೇ. 31 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾ ಕೋರ್ಟ್ ಹಿಂಬಾಗ ಸಾಕ್ಷಿದರ ಮೊಗಸಾಲೆ ಆವರಣದಲ್ಲಿ ಏರ್ಪಡಿಸಲಾಗಿದೆ.
    ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ “ತಂಬಾಕು-ಅಭಿವೃದ್ಧಿಗೆ ಮಾರಕ” ಎಂಬ ಘೋಷ ವಾಕ್ಯದಡಿ, ಕಾನೂನು ಅರಿವು-ನೆರವು ಕಾರ್ಯಕ್ರಮ ಮೇ. 31 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾ ಕೋರ್ಟ್ ಹಿಂಬಾಗದ ಸಾಕ್ಷಿದರ ಮೊಗಸಾಲೆ ಆವರಣದಲ್ಲಿ ನಡೆಯಲಿದೆ.
    ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಿಜಯಲಕ್ಷ್ಮೀ ಎಸ್. ಉಪನಾಳ ಅವರು ಉದ್ಘಾಟನೆ ನೆರೆವೇರಿಸುವರು.  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್. ರಾಮಕೃಷ್ಣ  ಅಧ್ಯಕ್ಷತೆ ವಹಿಸುವರು.   ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಶ್ರೀನಿವಾಸ, ಕಿರಿಯ ಸಿವಿಲ್ ನ್ಯಾಯಾಧೀಶ ವಿಜಯ ಕುಮಾರ ಕನ್ನೂರು, ಜಿಲ್ಲಾ ಸರ್ಕಾರಿ ವಕೀಲ ಆಸೀಫ್ ಅಲಿ, ವಕೀಲರ ಸಂಘದ ಜಿಲ್ಲಾಧ್ಯಕ್ಷ ದೊಡ್ಡಬಸಪ್ಪ ಕಂಪ್ಲಿ, ಉಪಾಧ್ಯಕ್ಷ ಶೇಖರಪ್ಪ ಹೆಚ್. ಇಂಗಳದಾಳ, ಕಾರ್ಯದರ್ಶಿ ಕೊಟ್ರೇಶ ಯು.ಪೋಚಗುಂಡಿ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಪಾಲ್ಗೊಳ್ಳುವರು.
    ಕಾನೂನು ಅರಿವು-ನೆರವು ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಎಂ.ಎಂ. ಕಟ್ಟಿಮನಿ ಅವರು ತಂಬಾಕು ಉತ್ಪನ್ನಗಳ ಅಧಿನಿಯಮ-2003 ಹಾಗೂ ತಂಬಾಕು ಸೇವೆನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.     
Post a Comment