Tuesday, 30 May 2017

ವಿಜಯಪುರ ಮಹಿಳಾ ವಿವಿಗೆ ಅಕ್ಕಮಹಾದೇವಿ ವಿವಿ ಎಂದು ನಾಮಕರಣ: ಪೂರ್ವಭಾವಿ ಸಭೆ


ಕೊಪ್ಪಳ, ಮೇ. 29 (ಕರ್ನಾಟಕ ವಾರ್ತೆ): ವಿಜಯಪುರದ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡುವ ಸಂಬಂಧ ಜೂ. 11 ರಂದು ವಿಜಯಪುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕುರಿತಂತೆ ಪೂರ್ವಭಾವಿ ಸಭೆ ಜೂ. 01 ರಂದು ಮಧ್ಯಾಹ್ನ 12-30 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
       ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ವಹಿಸುವರು.  ಮಹಿಳಾ ಜಾಗೃತಿ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯಿಂದ ಭಾಗವಹಿಸುವುದರ ಕುರಿತಂತೆಯೂ ಚರ್ಚೆ ನಡೆಯಲಿದೆ.   ಸಭೆಯಲ್ಲಿ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ತಿಳಿಸಿದ್ದಾರೆ.
Post a Comment