Thursday, 14 September 2017

ಸೆ. 18 ರಂದು ಕೊಪ್ಪಳದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ


ಕೊಪ್ಪಳ ಸೆ. 14 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿದ ವತಿಯಿಂದ ವಿಶ್ವಕರ್ಮ ಜಯಂತೋತ್ಸವ ಆಚರಣೆ ಕಾರ್ಯಕ್ರಮವನ್ನು ಸೆ. 18 ರಂದು ಬೆಳಿಗ್ಗೆ 11-00 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು.  ಯಾದಗಿರಿ ಜಿಲ್ಲೆಯ ಶಹಪುರದ ಶ್ರೀ ಮದಾನಾಗುಂದಿ ಸಂಸ್ಥಾನ ಸರಸ್ವತಿಪೀಠ, ವಿಶ್ವಕರ್ಮ ಏಕದಂಡಗಿಮಠದ ಪೂಜ್ಯ ಕಾಳಹಸ್ತೇಂದ್ರ ಮಹಾಸ್ವಾಮಿಗಳು ಪಾವನ ಉಪಸ್ಥಿತಿ ಮತ್ತು ವಿಶ್ವಕರ್ಮ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 08-30 ಗಂಟೆಗೆ ವಿಶ್ವಕರ್ಮ ಅವರ ಭಾವಚಿತ್ರದ ಮೆರವಣಿಗೆ ಕೊಪ್ಪಳ ಸಿರಸಪ್ಪಯ್ಯನವರ ಮಠದಿಂದ ಪ್ರಾರಂಭಗೊಂಡು, ಗಡಿಯಾರ ಕಂಬದ ಮಾರ್ಗವಾಗಿ ಜವಾಹರ ರಸ್ತೆಯ ಮೂಲಕ ಸಾಹಿತ್ಯ ಭವನದ ವರೆಗೆ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.
Post a Comment