Friday, 8 September 2017

ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಸೆ. 08 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಸೆ. 11 ಮತ್ತು 12 ರಂದು ಎರಡು ದಿನಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಮಂತ್ರಿಗಳು ಸೆ. 11 ರಂದು ಬೆಳಿಗ್ಗೆ 8 ಗಂಟೆಗೆ ಹಂಪಿ ಎಕ್ಸ್‍ಪ್ರೆಸ್ ರೈಲಿನ ಮೂಲಕ ಕೊಪ್ಪಳಕ್ಕೆ ಆಗಮಿಸುವರು.  ಸೆ. 22 ರ ಮುಖ್ಯಮಂತ್ರಿಗಳ ಕಾರ್ಯಕ್ರಮ ಆಯೋಜನೆ ಕುರಿತಂತೆ ಬೆ. 10 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೊಪ್ಪಳ ಮತ್ತು ಯಲಬುರ್ಗಾ ತಾಲೂಕು ಅಧಿಕಾರಿಗಳೊಂದಿಗೆ ಸಿದ್ಧತಾ ಸಭೆ ನಡೆಸುವರು.   11-30 ಗಂಟೆಗೆ ಕುಷ್ಟಗಿ ಮತ್ತು ಗಂಗಾವತಿ ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೊಪ್ಪಳದಲ್ಲಿ ವಾಸ್ತವ್ಯ ಮಾಡುವರು.  ಸೆ. 12 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರದಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕೊಪ್ಪಳ, ಗದಗ, ಬಾಗಲಕೋಟೆ, ಹೊಸಪೇಟೆ, ಬಳ್ಳಾರಿ, ರಾಯಚೂರು ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿಗಳೊಂದಿಗೆ ಸಭೆ ನಡೆಸುವರು.  ಮಧ್ಯಾಹ್ನ 01 ಗಂಟೆಗೆ ಬಳ್ಳಾರಿ ಜಿಲ್ಲೆ ಹಂಪಿ ವಿಶ್ವವಿದ್ಯಾಲಯಕ್ಕೆ ತೆರಳುವರು ಎಂದು ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
Post a Comment