Wednesday, 13 September 2017

ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಸೆ. 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಸೆ. 16 ರಿಂದ 18 ರವರೆಗೆ ಮೂರು ದಿನಗಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಮಂತ್ರಿಗಳು ಸೆ. 16 ರಂದು ಹಂಪಿ ಎಕ್ಸ್‍ಪ್ರೆಸ್ ರೈಲಿನ ಮೂಲಕ ಬೆಳಿಗ್ಗೆ 8 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ಹನಮನಾಳ ಗ್ರಾಮದಲ್ಲಿ ಪಕ್ಷದ ಬೂತ್ ಪಂಚಾಯತಿ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ 2 ಗಂಟೆಗೆ ಯಲಬುರ್ಗಾಕ್ಕೆ ತೆರಳಿ ಸಿದ್ದರಾಮೇಶ್ವರ ಪ್ರೌಢಶಾಲೆಯಲ್ಲಿ ಬೈಸಿಕಲ್ ವಿತರಣಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.  ಸಂಜೆ 04 ಗಂಟೆಗೆ ಯಲಬುರ್ಗಾದ ಮದೀನಾ ಮಸ್ಜಿದ್ ಅಹಲೆ ಸುನ್ನತ್ ವ ಜಮಾತ್ ಕಮಿಟಿಯಲ್ಲಿ ಜರುಗುವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವರು.  ರಾತ್ರಿ 7 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.  ಸೆ. 17 ರಂದು ಕೊಪ್ಪಳದಲ್ಲಿ ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ ಹೈದ್ರಾಬಾದ್- ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಳ್ಳುವರು.  ಬೆಳಿಗ್ಗೆ 11 ಗಂಟೆಗೆ ನಗರದ ಶಿವಶಾಂತವೀರ ಮಂಗಳ ಭವನದಲ್ಲಿ ಜರುಗುವ ಅನುದಾನಿತ ಶಾಲೆಗಳ ಸಂಘದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಮಧ್ಯಾಹ್ನ 03 ಗಂಟೆಗೆ ಪಕ್ಷದ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ಕೈಗೊಂಡು, ಕೊಪ್ಪಳದಲ್ಲಿ ವಾಸ್ತವ್ಯ ಮಾಡುವರು.  ಸೆ. 18 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶಿವಶಾಂತವೀರ ಮಂಗಲ ಭವನದಲ್ಲಿ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಬೆಳಿಗ್ಗೆ 11-30 ಗಂಟೆಗೆ ಗಂಗಾವತಿಯಲ್ಲಿ ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸುವರು.  ಮಧ್ಯಾಹ್ನ 03 ಗಂಟೆಗೆ ಕುಷ್ಟಗಿಗೆ ತೆರಳಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.  ಸಂಜೆ 06 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವ ಮಂತ್ರಿಗಳು ರಾತ್ರಿ 08 ಗಂಟೆಗೆ ಹಂಪಿ ಎಕ್ಸ್‍ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
Post a Comment