Wednesday, 13 September 2017

ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನಾಚರಣೆ : ಜನಜಾಗೃತಿ ಜಾಥಕ್ಕೆ ಚಾಲನೆ


ಕೊಪ್ಪಳ ಸೆ. 13 (ಕರ್ನಾಟಕ ವಾರ್ತೆ): “ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನಾಚರಣೆ” ಪ್ರಯುಕ್ತ ಹಳೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ, ಜನಜಾಗೃತಿ ಜಾಥಕ್ಕೆ ಕೊಪ್ಪಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್. ರಾಮಕೃಷ್ಣ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
    ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನಾಚರಣೆಯ ಅಂಗಾವಾಗಿ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಾಥದಲ್ಲಿ ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಎಸ್.ಕೆ ದೇಸಾಯಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ವಿರುಪಾಕ್ಷಪ್ಪ ಮಾದಿನೂರ, ತಾಲೂಕ ಆರೋಗ್ಯ ಅಧಿಕಾರಿ ಡಾ. ರಾಮಾಂಜನೇಯ ಸೇರಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿ ವರ್ಗ, ಎ.ಎನ್.ಎಂ ವಿದ್ಯಾರ್ಥಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
Post a Comment