Saturday, 16 September 2017

ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ


ಕೊಪ್ಪಳ ಸೆ. 16 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯವರು ನಡೆಸಿರುವ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕ್ರಮವಾಗಿ 95% ಮತ್ತು 90%  ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡುವ ಸಲುವಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
    ಅಜಿ ಸಲ್ಲಿಸಲು ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದಕ್ಕೆ ಸೇರಿದವರಾಗಿರಬೇಕು.  ವಿದ್ಯಾರ್ಥಿಗಳು ಆನ್‍ಲೈನ್ ಅರ್ಜಿಯನ್ನು   www.gokdom.kar.nic.in ನಲ್ಲಿ ಸೆಪ್ಟೆಂಬರ್. 30 ರೊಳಗಾಗಿ ಅಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ  ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ ಕೊಪ್ಪಳ ದೂರವಾಣಿ ಸಂಖ್ಯೆ 08539-225070 ಕ್ಕೆ ಅಥವಾ ಆಯಾ ತಾಲೂಕು ಕೇಂದ್ರಗಳಲ್ಲಿನ ತಾಲೂಕ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಹ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment