Thursday, 14 September 2017

ಸಹಕಾರ ರತ್ನ ಪ್ರಶಸ್ತಿ : ವಿವಿರ ಸಲ್ಲಿಸಲು ಮನವಿ


ಕೊಪ್ಪಳ ಸೆ. 14 (ಕರ್ನಾಟಕ ವಾರ್ತೆ): ಕೊಪ್ಪಳ ಸಹಕಾರ ಸಂಘಗಳ ಉಪನಿಬಂಧಕರ ಕಾರ್ಯಾಲಯದ ಇವರ ವತಿಯಿಂದ ಪ್ರಸಕ್ತ ಸಾಲಿನ “ಸಹಕಾರ ರತ್ನ” ಪ್ರಶಸ್ತಿಗಾಗಿ ಅರ್ಹ ಸಹಕಾರಿಗಳನ್ನು ಆಯ್ಕೆ ಮಾಡಬೇಕಾರುವುದರಿಂದ ವಿವರಗಳನ್ನು ಸಲ್ಲಿಸುವಂತೆ ಸಹಕಾರ ಸಂಘಗಳ ಉಪ ನಿಬಂಧಕರಾದ ಪಿ.ಎನ್. ಕಳಸಣ್ಣವರ್ ಮನವಿ ಮಾಡಿದ್ದಾರೆ.
ಸಹಕಾರ ರತ್ನ ಪ್ರಶಸ್ತಿ ನೀಡುವ ಸಲುವಾಗಿ ಅಧ್ಯಕ್ಷರು, ಆರ್.ಡಿ.ಸಿ.ಸಿ ಬ್ಯಾಂಕ್ ನಿ. ರಾಯಚೂರು ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯು ಪ್ರಸಕ್ತ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಅರ್ಹರಾದ ಸಹಕಾರಿಗಳನ್ನು ಆಯ್ಕೆ ಮಾಡುತ್ತದೆ.
ಪ್ರಶಸ್ತಿ ಪಡೆಯಲಿಚ್ಚಿಸುವರು ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರಬೇಕು.  ಕೊಪ್ಪಳ ಜಿಲ್ಲೆಯ ನಿವಾಸಿಗಳಾಗಿರಬೇಕು.  ತಮ್ಮ ವಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಪೂರಕ ಮಾಹಿತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸಹಕಾರ ಸಂಘಗಳ ಉಪ ನಿಬಂಧಕರು, ಕೊಪ್ಪಳ ಇವರಿಗೆ ಸೆ. 28 ರೊಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Post a Comment