Thursday, 30 November 2017

ಡಿ. 02 ರಂದು ತಾಳಕೇರಿ ಮತ್ತು ಗುನ್ನಾಳದಲ್ಲಿನ ನೂತನ ಬಸ್ ನಿಲ್ದಾಣ ಉದ್ಘಾಟನೆ


ಕೊಪ್ಪಳ ನ. 30 (ಕರ್ನಾಟಕ ವಾರ್ತೆ): ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೊಪ್ಪಳ ವಿಭಾಗದ ವತಿಯಿಂದ ಯಲಬುರ್ಗಾ ತಾಲೂಕಿನ ತಾಳಕೇರಿ ಮತ್ತು ಗುನ್ನಾಳ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ನೂತನ ಬಸ್ ನಿಲ್ದಾಣಗಳ ಉದ್ಘಾಟನಾ ಸಮಾರಂಭ ಡಿ. 02 ರಂದು ಜರುಗಲಿದೆ.
ತಾಳಕೇರಿ ಬಸ್ ನಿಲ್ದಾಣ :
************* ತಾಳಕೇರಿ ನೂತನ ಬಸ್ ನಿಲ್ದಾಣದ ಉದ್ಘಾಟನೆ ಡಿ. 02 ರಂದು ಬೆಳಿಗ್ಗೆ 11-30 ಗಂಟೆಗೆ ಬಸ್ ನಿಲ್ದಾಣ ಆವರಣದಲ್ಲಿ ನೆರವೇರಲಿದ್ದು, ಜಿಲ್ಲಾ ಉಸ್ತುವಾರಿ  ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ನೆರವೇರಿಸುವರು.  ಗ್ರಾ.ಪಂ. ಅಧ್ಯಕ್ಷೆ ಗಂಗಮ್ಮ ಸಂಗಪ್ಪ ಮೇಟಿ ಅಧ್ಯಕ್ಷತೆ ವಹಿಸುವರು.  ಕಲಬುರಗಿಯ     ಈ.ಕ.ರ.ಸಾ.ಸಂಸ್ಥೆ ಅಧ್ಯಕ್ಷ ಮಹಮ್ಮದ ಇಲಿಯಾಸ್ ಸೇಠ್ ಬಾಗವಾನ್ ಜ್ಯೋತಿ ಬೆಳಗಿಸುವರು.  ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ರಾಘವೇಂದ್ರ ಹಿಟ್ನಾಳ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ, ಶಿವರಾಜ ತಂಗಡಗಿ, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ಜಿ.ಪಂ. ಸದಸ್ಯೆ ಹೊಳೆಯಮ್ಮ ಪೊಲೀಸ್ ಪಾಟೀಲ, ತಾ.ಪಂ. ಅಧ್ಯಕ್ಷೆ ಲಕ್ಷ್ಮೀ ಗೌಡ್ರ, ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ತಾ.ಪಂ. ಸದಸ್ಯ ಷಣ್ಮುಖಪ್ಪ ಬಳ್ಳಾರಿ, ಗ್ರಾ.ಪಂ. ಉಪಾಧ್ಯಕ್ಷ ಜಂಗ್ಲಿಸಾಬ್ ಕುದರಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುವರು.
ಗುನ್ನಾಳ ಬಸ್ ನಿಲ್ದಾಣ :
******** ಗುನ್ನಾಳ ಗ್ರಾಮದ ನೂತನ ಬಸ್ ನಿಲ್ದಾಣದ ಉದ್ಘಾಟನೆ ಡಿ. 02 ರಂದು ಸಂಜೆ 5 ಗಂಟೆಗೆ ನೂತನ ಬಸ್ ನಿಲ್ದಾಣ ಆವರಣದಲ್ಲಿ ನೆರವೇರಲಿದೆ.  ಜಿಲ್ಲಾ ಉಸ್ತುವಾರಿ  ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ನೆರವೇರಿಸುವರು.  ಗ್ರಾ.ಪಂ. ಅಧ್ಯಕ್ಷೆ ಜ್ಯೋತೆಮ್ಮ ಬಾಳಪ್ಪ ಗುಳೇದ ಅಧ್ಯಕ್ಷತೆ ವಹಿಸುವರು.  ಕಲಬುರಗಿಯ ಈ.ಕ.ರ.ಸಾ.ಸಂಸ್ಥೆ ಅಧ್ಯಕ್ಷ ಮಹಮ್ಮದ ಇಲಿಯಾಸ್ ಸೇಠ್ ಬಾಗವಾನ್ ಜ್ಯೋತಿ ಬೆಳಗಿಸುವರು.  ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ರಾಘವೇಂದ್ರ ಹಿಟ್ನಾಳ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ, ಶಿವರಾಜ ತಂಗಡಗಿ, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ಜಿ.ಪಂ. ಸದಸ್ಯೆ ಹೊಳೆಯಮ್ಮ ಪೊಲೀಸ್ ಪಾಟೀಲ, ತಾ.ಪಂ. ಅಧ್ಯಕ್ಷೆ ಲಕ್ಷ್ಮೀ ಗೌಡ್ರ, ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ತಾ.ಪಂ. ಸದಸ್ಯ ರುದ್ರಪ್ಪ ಹರಿಜನ, ಗ್ರಾ.ಪಂ. ಉಪಾಧ್ಯಕ್ಷೆ ರೇಣುಕಮ್ಮ ಸಿಂಗಾಪುರ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Post a Comment