Thursday, 12 July 2018

ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡ ಕೊಪ್ಪಳ ಜಿಲ್ಲೆಯ ಶೌಚಾಲಯ ಕ್ರಾಂತಿ : ಕೀನ್ಯಾದಲ್ಲಿ ನಡೆದ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲೆಯ ಪ್ರಗತಿಗೆ ಪ್ರಶಂಸೆ ವ್ಯಕ್ತ



ಕೊಪ್ಪಳ ಜು. 12 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಬಯಲು ಶೌಚ ಮುಕ್ತಗೊಳಿಸುವ ನಿಟ್ಟಿನಲ್ಲಿ ವಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಜನಸಮುದಾಯ ಜಾಗೃತಿಗೆ ಕೈಗೊಂಡ ಹೊಸ ಬಗೆಯ ತಂತ್ರಗಳು ಹಾಗೂ ಎದುರಿಸಲಾದ ಸವಾಲುಗಳ ಕುರಿತಂತೆ ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಜು. 11 ರಂದು ಕೀನ್ಯಾ ದೇಶದ ನಾಕೂರನ ಲೊಗ್‍ಬೊರೋ ವಿಶ್ವವಿದ್ಯಾಲಯದಲ್ಲಿ ಜರುಗಿದ 41 ನೇ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡಿಸಿದ ವಿಚಾರಗಳಿಗೆ ವಿದೇಶಿ ಪ್ರತಿನಿಧಿಗಳಿಂದ ಪ್ರಶಂಸೆ ವ್ಯಕ್ತವಾಗಿದೆ.

     ಶೌಚಾಲಯಗಳ ನಿರ್ಮಾಣ ಹಾಗೂ ಬಳಕೆ ಕುರಿತಂತೆ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಹಲವು ಬಗೆಯ ತಂತ್ರಗಳನ್ನು ಅನುಸರಿಸಿ, ರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಕೊಪ್ಪಳ ಜಿಲ್ಲೆಯನ್ನು ಇಡೀ ವಿಶ್ವ ಮಟ್ಟದಲ್ಲಿ ಗುರುತಿಸುವಂತಾಗಿದೆ.   ಸ್ವಚ್ಛತೆ ಮತ್ತು ಆರೋಗ್ಯ ಕುರಿತಂತೆ ಕೀನ್ಯಾ ದೇಶದಲ್ಲಿ ಜು. 09 ರಿಂದ 13 ರವರೆಗೆ ನಡೆದಿರುವ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಯಶಸ್ವಿ ಶೌಚಾಲಯ ನಿರ್ಮಾಣ ಹಾಗೂ ಸ್ವಚ್ಛತೆಯ ಕ್ರಾಂತಿ ಕುರಿತು ವಿಶೇಷ ಉಪನ್ಯಾಸ ನೀಡಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಭಾರತ ದೇಶದ ಏಕೈಕ ಪ್ರತಿನಿಧಿಯಾಗಿ ಆಯ್ಕೆಯಾಗಿ, ಕೀನ್ಯಾಕ್ಕೆ ತೆರಳಿದ್ದಾರೆ.

    ಇಂಗ್ಲೇಂಡ್ ಮೂಲದ ಲೊಗ್‍ಬೊರೊ ವಿಶ್ವವಿದ್ಯಾಲಯ ಪ್ರತಿ ವರ್ಷ ಇಂತಹ ಸಮ್ಮೇಳನವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸುತ್ತದೆ.  ಈ ಬಾರಿ ಜು. 09 ರಿಂದ 13 ರವರೆಗೆ ಐದು ದಿನಗಳ ಕಾಲ ಕೀನ್ಯಾ ದೇಶದಲ್ಲಿ ಏರ್ಪಡಿಸಿದ್ದು, ಸುಮಾರು 40 ದೇಶಗಳಿಂದ 400 ವಿವಿಧ ತಜ್ಞರು, ವಿಷಯ ಪರಿಣಿತರು ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.  ಈ ಸಮ್ಮೇಳನದಲ್ಲಿ ಕೊಪ್ಪಳದಂತಹ ಹಿಂದುಳಿದ ಜಿಲ್ಲೆಯಲ್ಲಿ ಸರ್ಕಾರ ಹಾಗೂ ಆಡಳಿತ ವರ್ಗವು ಸಾರ್ವಜನಿಕರ ಸಹಭಾಗಿತ್ವದಲ್ಲಿ ಆರೋಗ್ಯ ಹಾಗೂ ಸ್ವಚ್ಛತೆಯ ಬಗ್ಗೆ ಪರಿಣಾಮಕಾರಿಯಾಗಿ ಹೇಗೆ ಜಾಗೃತಿ ಮೂಡಿಸುವಲ್ಲಿ ಯಶಸ್ಸು ಕಂಡಿದೆ, ಇದಕ್ಕೆ ಎದುರಾದ ಸವಾಲುಗಳು ಯಾವುವು, ಕೈಗೊಂಡ ಕ್ರಮಗಳೇನು ಎನ್ನುವುದರ ಕುರಿತು ಕೊಪ್ಪಳ ಸಿಇಒ ವೆಂಕಟ್‍ರಾಜಾ ಅವರು ವಿಶೇಷ ಉಪನ್ಯಾಸ ನೀಡಿದರು.  ಕೊಪ್ಪಳ ಜಿಲ್ಲೆಯಲ್ಲಿನ ಸಾಧನೆಯ ಕುರಿತು ಪವರ್ ಪಾಯಿಂಟ್ ಪ್ರೆಸೆಂಟೇಶನ್ ಮೂಲಕ ವಿಷಯ ವೆಂಕಟ್ ರಾಜಾ ಅವರು ಸಮ್ಮೇಳನದಲ್ಲಿ ವಿಷಯ ಮಂಡಿಸಿದರು.

     ಶೌಚಾಲಯದ ನಿರ್ಮಾಣ ಹಾಗೂ ಅದರ ಮಹತ್ವ ಕುರಿತಂತೆ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಕೈಗೊಂಡ ಹಾಗೂ ಅನುಸರಿಸಿದ ತಂತ್ರಗಾರಿಕೆ ಎಲ್ಲ ಹಂತಗಳ ಜನಪ್ರತಿನಿಧಿಗಳು, ಅಧಿಕಾರಿಗಳು ಇಂತಹ ಜನಜಾಗೃತಿಗೆ ನೀಡಿದ ಬೆಂಬಲ ಹಾಗೂ ಹಿಂದುಳಿದ ಪ್ರದೇಶವಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಬೇರೂರಿದ್ದ ಬಯಲು ಶೌಚ ಪದ್ಧತಿಗೆ ಇತಿಶ್ರೀ ಹಾಡಲು ಜನರ ಮನಸ್ಸು ಪರಿವರ್ತಿಸಲು ಕೈಗೊಂಡ ಹಲವು ಬಗೆಯ ಕ್ರಮಗಳ ಕುರಿತು ಹಾಗೂ ಈ ಸಾಧನೆಯ ಹಾದಿಯಲ್ಲಿ ಎದುರಾದ ಸವಾಲುಗಳು ಮತ್ತು ಕೈಗೊಂಡ ಪರಿಹಾರ ಕ್ರಮಗಳ ಕುರಿತು ವೆಂಕಟ್ ರಾಜಾ ಅವರು ಸಮ್ಮೇಳನದಲ್ಲಿ ಸಮಗ್ರವಾಗಿ ವಿವರಿಸಿದರು.   ಗ್ರಾಮೀಣ ಪ್ರದೇಶಗಳಲ್ಲಿ ಜನರ ಮನವೊಲಿಸಿ, ಶೌಚಾಲಯ ನಿರ್ಮಿಸಲು ಪ್ರೇರಣೆ ನೀಡುವುದಕ್ಕೆ ಹಲವು ಜನಪ್ರತಿನಿಧಿಗಳು, ನೌಕರರು, ಅಧಿಕಾರಿಗಳು ಅನೇಕ ಆಂದೋಲನಗಳನ್ನೇ ಕೈಗೊಳ್ಳಬೇಕಾಯಿತು.  ಈ ಪೈಕಿ ಶಾಲಾ ಮಕ್ಕಳಿಂದ ಪಾಲಕರಿಗೆ ಪತ್ರ ಚಳುವಳಿ, ಸುಮಾರು 12 ಸಾವಿರ ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಿಸಿ ದಾಖಲೆ ಕೈಗೊಂಡಿದ್ದು, ಮಿಷನ್ 200 ಹೆಸರಿನಲ್ಲಿ 200 ಗಂಟೆಗಳಲ್ಲಿ 20 ಸಾವಿರ ಶೌಚಾಲಯಗಳನ್ನು ನಿರ್ಮಿಸುವ ಕಠಿಣ ಸವಾಲನ್ನು ಹಾಕಿಕೊಂಡು, ಕೊಪ್ಪಳ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕೈಗೊಂಡಿದ್ದು, ಗಂಗಾವತಿ ತಾಲೂಕಿನ ಢಣಾಪುರ ಗ್ರಾಮದ ವಿದ್ಯಾರ್ಥಿನಿ ಮಲ್ಲಮ್ಮ, ಶೌಚಾಲಯಕ್ಕಾಗಿ ಉಪವಾಸ ಕುಳಿತು, ಕೊನೆಗೆ ಶೌಚಾಲಯ ನಿರ್ಮಿಸಿಕೊಳ್ಳುವ ಮೂಲಕ ಹಠ ಸಾಧಿಸಿ, ಪ್ರಧಾನಮಂತ್ರಿಗಳಿಂದ ಪ್ರಶಂಸೆ ಪಡೆದಿದ್ದು, ಕೊಪ್ಪಳ ಜಿಲ್ಲೆಯ ಹೆಸರು, ಇಡೀ ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾಗಿದ್ದು ಅಲ್ಲದೆ, ಇತ್ತೀಚೆಗೆ ಕೊಪ್ಪಳ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದ್ದು, ಈ ಎಲ್ಲ ಘಟನಾವಳಿಗಳನ್ನು ವಿದೇಶಿ ಪ್ರತಿನಿಧಿಗಳ ಸಮ್ಮುಖದಲ್ಲಿ ಹಂಚಿಕೊಂಡರು.    


       ಕೊಪ್ಪಳ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಆದ ಪ್ರಗತಿಯ ಸಮಗ್ರ ಮಾಹಿತಿಯನ್ನು ಒಳಗೊಂಡ ಕಿರುಹೊತ್ತಿಗೆಯನ್ನು ಸಮ್ಮೇಳನದ ಆಯೋಜಕರು ಹಾಗೂ ವಿವಿಧ ದೇಶಗಳ ಪ್ರತಿನಿಧಿಗಳಿಗೆ ನೀಡಲಾಯಿತು.   ಕೊಪ್ಪಳ ಜಿಲ್ಲೆಯಲ್ಲಿ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿಸಲು ಕೈಗೊಂಡ ಕ್ರಮಗಳ ಕುರಿತು ಮಂಡಿಸಿದ ವಿಷಯಗಳನ್ನು ಆಲಿಸಿದ ಹಲವು ದೇಶಗಳ ಪ್ರತಿನಿಧಿಗಳು, ಪ್ರಶಂಸೆ ವ್ಯಕ್ತಪಡಿಸಿದರಲ್ಲದೆ, ಭಾರತ ದೇಶ ಬಯಲು ಬಹಿರ್ದೆಸೆ ಮುಕ್ತಗೊಳಿಸಲು ಕೈಗೊಳ್ಳುತ್ತಿರುವ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಸಂತಸ ಹಂಚಿಕೊಂಡಿದ್ದಾರೆ. 

Wednesday, 11 July 2018

ವಿಶ್ವ ಜನಸಂಖ್ಯಾ ದಿನಾಚರಣೆ : ಜನಜಾಗೃತಿ ಜಾಥಕ್ಕೆ ಅಕ್ಷಯ್ ಶ್ರೀಧರ್ ಚಾಲನೆ



ಕೊಪ್ಪಳ ಜು. 11 (ಕರ್ನಾಟಕ ವಾರ್ತೆ): ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಕೊಪ್ಪಳ ಹಳೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬುಧವಾರದಂದು ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಕ್ಕೆ ಐಎಎಸ್ ಪ್ರೊಬೆಷನರಿ ಅಧಿಕಾರಿ ಅಕ್ಷಯ್ ಶ್ರೀಧರ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.  

     ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್. ಅವರು ಮಾತನಾಡಿ, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, "ಒಂದು ಸಾರ್ಥಕತೆಯ ನಾಳೆಯ ಜೀವನಕ್ಕಾಗಿ ಕುಟುಂಬ ಕಲ್ಯಾಣ ಯೋಜನೆಗಳ ಬಳಕೆ" ಎಂಬುವುದು ಈ ವರ್ಷದ ಘೋಷಣೆ ವಾಕ್ಯವಾಗಿದೆ.  ಭಾರತ ದೇಶದ ಜನಸಂಖ್ಯೆಯು ಸದ್ಯ 110 ಕೋಟಿ ದಾಟಿದ್ದು, ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ.  ವಿಶ್ವದ ಜನಸಂಖ್ಯೆಯು 700 ಕೋಟಿ ದಾಟಿದ್ದು, ಹಾಗೆಯೇ 2050 ಕ್ಕೆ ಸುಮಾರು ಒಂದು ಸಾವಿರ ಕೋಟಿಯಾಗುತ್ತದೆ ಎಂದು ಅಂದಾಜಿಸಬಹುದಾಗಿದೆ.  ಇದರಿಂದ ಬಡತನ, ನಿರುದ್ಯೋಗಗಳಂತಹ ಹತ್ತು ಹಲವಾರು ಸಮಸ್ಯೆಗಳು ಉದ್ಬವವಾಗಬಹುದು.  ಪ್ರತಿ 8 ಸೆಕೆಂಡ್‍ಗೆ ಒಂದು ಜನನ ಹಾಗೂ ಒಂದು ಮರಣವಾಗುತ್ತಿದೆ.  ಜನನ-ಮರಣ ಪ್ರಮಾಣ ಸಮನಾಗಿದ್ದರು ಸಹ ಜನಸಂಖ್ಯೆ ಪ್ರಮಾಣ ಕಡಿಮೆ ಯಾಗದೇ ಹೆಚ್ಚಾಗುತ್ತಿದೆ.  ಜನಸಂಖ್ಯೆ ನಿಯಂತ್ರಣಕ್ಕಾಗಿ ಜಾಗೃತಿ ಮೂಡಿಸಲು ಜಗತ್ತಿನಾದ್ಯಂತ 1999 ರಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಗುತ್ತಿದೆ.  ಈ ನೀಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂ ಕಲ್ಯಾಣ ಇಲಾಖೆಯು ಹಲವಾರು ಯೋಜನೆಗಳನ್ನು ಹಾಗೂ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ.  ಕುಟುಂಬ ಕಲ್ಯಾಣ ವಿಧಾನವನ್ನು ಅಳವಡಿಸಿಕೊಂಡು ಜನಸಂಖ್ಯೆಯನ್ನು ನಿಯಂತ್ರಣ ಮಾಡಬಹುದಾಗಿದೆ ಎಂದರು.
    ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದಾನರಡ್ಡಿ, ಜಿಲ್ಲಾ ಮಾನಸಿಕ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಎಸ್.ಕೆ ದೇಸಾಯಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಅಲಕನಂದಾ ಮಳಗಿ, ಕುಟುಂಬ ಕಲ್ಯಾಣಾಧಿಕಾರಿ ಡಾ. ಜಂಬಯ್ಯ, ತಾಲೂಕ ಆರೋಗ್ಯಾಧಿಕಾರಿ ರಾಮಾಂಜನೇಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ, ಪೊಲೀಸ್ ಇಲಾಖೆಯ ಸಿ.ಕೆ ಮೂರ್ತಿ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಟ್ರೈನಿಂಗ್ ಎ.ಎನ್.ಎಂ ಸೆಂಟರ್‍ನ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.  ಜನಜಾಗೃತಿ ಜಾಥವು ನಗರದ ಅಶೋಕ ಸರ್ಕಲ್, ಹಸನ್ ರಸ್ತೆ, ದಿವಟರ್ ವೃತ್ತ, ನಗರ ಪೊಲೀಸ್ ಠಾಣೆ, ಡಾ. ಸಿಂಪಿಲಿಂಗಣ್ಣ ರಸ್ತೆ ಮಾರ್ಗವಾಗಿ ಹಳೇ ಜಿಲ್ಲಾ ಆಸ್ಪತ್ರೆ ಆವರಣದವರೆಗೆ ಸಂಚರಿಸಿ ಜಾಗೃತಿ ಗೀತೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿತು.


ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ


ಕೊಪ್ಪಳ ಜು. 11 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ 35 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
     ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಂ4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದು. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ.
    ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560 002 - ಈ ವಿಳಾಸಕ್ಕೆ ಜುಲೈ 21 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ವೆಬ್ ಸೈಟ್ :  www.kannadapustakapradhikara.com ದೂರವಾಣಿ ಸಂಖ್ಯೆ: 080-22484516 / 22017704  ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಡೆಹರಾಡೂನ್ ಮಿಲಿಟರಿ ಶಾಲೆ 8ನೇ ತರಗತಿ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ


ಕೊಪ್ಪಳ ಜು. 11 (ಕರ್ನಾಟಕ ವಾರ್ತೆ): ರಾಷ್ಟ್ರೀಯ ಇಂಡಿಯನ್ ಮಿಲಿಟರಿ, ಡೆಹರಾಡೂನ್ ಕಾಲೇಜ್, 8ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕ ರಾಜ್ಯದ ಬಾಲಕರಿಗೆ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
    ಜನೇವರಿ-2019ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನ್‍ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಡಿಸೆಂಬರ್. 01 ಮತ್ತು 02 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿವೆ.  ಪರೀಕೆಗಾಗಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು 01-01-2019 ರಂತೆ 11.5 ರಿಂದ 13 ವರ್ಷದೊಳಗಿರಬೇಕು (ಅಂದರೆ ದಿನಾಂಕ 02-07-2006 ರಿಂದ 01-01-2008 ರೊಳಗೆ ಜನಿಸಿರಬೇಕು).  ಬಾಲಕರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಾಗಿರುತ್ತಾರೆ.  ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಸರ್ವರೀತಿಯ ವಿದ್ಯಾಭ್ಯಾಸ/ ತರಬೇತಿ ನೀಡುವುದು.  ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿದ್ಯಾಭ್ಯಾಸ ಶುಲ್ಕ ರೂ. 42,400 ಆಗಿರುತ್ತದೆ.  
ವಿವರಣೆ ಪತ್ರ ಹಾಗೂ ಹಳೇ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಅರ್ಜಿ ನಮೂನೆಯನ್ನು ಕೋರಿಕೆ ಪತ್ರದ ಮೇರೆಗೆ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು 560025, ಇಲ್ಲಿಂದ ದಿ ಕಮಾಂಡೆಂಟ್, ಆರೈಎಂಸಿ ಡೆಹ್ರಾಡೂನ್ (ಪೇಯಬಲ್ ಅಟ್ ಎಸ್‍ಬಿಐ ಟೆಲ್ ಭವನ್, ಡೆಹ್ರಾಡೂನ್- ಬ್ಯಾಂಕ್ ಕೋಡ್- 01576), ಇವರ ಹೆಸರಿನಲ್ಲಿ ಸೆಳೆದ ರೂ. 600 (ಸಾಮಾನ್ಯ ಅಭ್ಯರ್ಥಿಗಳಿಗೆ) ಮತ್ತು ರೂ. 555 (ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳಿಗೆ) ಡಿಮಾಂಡ್ ಡ್ರಾಪ್ಟ್ ಮೂಲಕ ಖುದ್ದಾಗಿ ಪಡೆಯಬಹುದಾಗಿದೆ.  ರಿಜಿಸ್ಟರ್ಡ್ ಪಾರ್ಸಲ್ ಮೂಲಕ ಅರ್ಜಿ ನಮೂನೆಗಳನ್ನು ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಮೇಲೆ ತಿಳಿಸಿದ ಬ್ಯಾಂಕ್ ಡ್ರಾಪ್ಟ್‍ನೊಂದಿಗೆ 11" ಉದ್ದ ಮತ್ತು 9" ಅಳತೆಯ ಸೈಜಿನ ಸ್ವವಿಳಾಸದ ಲಕೋಟೆಯ ಮೇಲೆ ರೂ. 40 ಮೌಲ್ಯದ ಅಂಚೆ ಚೀಟಿ ಲಗತ್ತಿಸಿ ಕಳುಹಿಸಬೇಕು.  ಲಕೋಟೆಯ ಮೇಲೆ ಅಭ್ಯರ್ಥಿಯ ಪೂರ್ಣ ಅಂಚೆ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು.
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಮುನ್ಸಿಪಾಲಿಟಿ ಅಥವಾ ಗ್ರಾಮ ಪಂಚಾಯತ್ ಪ್ರಾಧಿಕಾರದಿಂದ ಪಡೆದ ಆಂಗ್ಲ ಭಾಷೆಯ ಜನನ ಪ್ರಮಾಣ ಪತ್ರ, ಪಾಸ್‍ಪೆÇೀರ್ಟ್ ಸೈಜಿನ 5 ಭಾವಚಿತ್ರ, ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರ ನೀಡಿದ ಜಾತಿ ಪ್ರಮಾಣ ಪತ್ರದ ಧೃಢಿಕರಣ ಪ್ರತಿ (ಆಂಗ್ಲ ಭಾಷೆಯ), ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ/ ನೊಂದಾಯಿತ ಅಂಚೆದ್ವಾರ ರವಾನಿಸಲು ರೂ. 40 ರ ಅಂಚೆ ಚೀಟಿ ಅಂಟಿಸಿದ ಸ್ವವಿಳಾಸ ಲಕೋಟೆ, ಶಾಲಾ ಮುಖ್ಯೋಪಾಧ್ಯಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರ ಮೂಲ ಪ್ರತಿ ಹಾಗೂ ತಹಶಿಲ್ದಾರರಿಂದ ಪಡೆದ ರಾಜ್ಯದ ವಾಸ ಸ್ಥಾಳ ಧೃಢಿಕರಣ ಪತ್ರ ಲಗತ್ತಿಸಿ ಸೆಪ್ಟೆಂಬರ್. 30 ರ ಒಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಕ್ಕೆ ಅಥವಾ ಸಮೀಪದಲ್ಲಿರುವ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಬಾಗಲಕೋಟೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tuesday, 10 July 2018

ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ : ಜು. 11 ರಂದು ಕೊಪ್ಪಳದಲ್ಲಿ ಜಾಗೃತಿ ಜಾಥಾ


ಕೊಪ್ಪಳ ಜು. 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಮಟ್ಟದ "ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ" ಕಾರ್ಯಕ್ರಮ ಜು. 11 ರಿಂದ ಹಮ್ಮಿಕೊಳ್ಳಲಾಗಿದ್ದು, ಜಾಥಾ ಕಾರ್ಯಕ್ರಮವನ್ನು ಜು. 11 ರಂದು ಬೆಳಿಗ್ಗೆ 9 ಗಂಟೆಗೆ ಹಳೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದೆ. 
    ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಬಸವರಾಜ ದಢೇಸೂಗೂರು, ಪರಣ್ಣ ಮುನವಳ್ಳಿ ಹಾಗೂ ಹಾಲಪ್ಪ ಬಸಪ್ಪ ಆಚಾರ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಜಿ.ಪಂ. ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತಾ ರಮೇಶ ನಾಯಕ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು.
    ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜು. 11 ರಿಂದ 24 ರವರೆಗೆ ಜನಸಂಖ್ಯಾ ಸ್ಥಿರೀಕರಣ ಪಾಕ್ಷಿಕ (ಜನಸಂಖ್ಯೆ ಸ್ಥಿರೀಕರಣ) ಕಾರ್ಯಕ್ರಮ ಜರುಗಲಿದೆ.  "ಒಂದು ಸಾರ್ಥಕತೆಯ ನಾಳೆಯ ಜೀವನಕ್ಕಾಗಿ ಕುಟುಂಬ ಕಲ್ಯಾಣ ಯೋಜನೆಗಳ ಬಳಕೆ" ಎಂಬುವುದು ಘೋಷ ವಾಕ್ಯವಾಗಿದೆ.  ಜಾಗೃತಿ ಜಾಥಾ ಕಾರ್ಯಕ್ರಮವು ಹಳೇ ಜಿಲ್ಲಾ ಆಸ್ಪತ್ರೆಯಿಂದ ಪ್ರಾರಂಭಗೊಂಡು ಅಶೋಕ ಸರ್ಕಲ್, ಹಸನ್ ರಸ್ತೆ, ದಿವಟರ್ ವೃತ್ತ, ನಗರ ಪೊಲೀಸ್ ಠಾಣೆ, ಡಾ. ಸಿಂಪಿಲಿಂಗಣ್ಣ ರಸ್ತೆ ಮಾರ್ಗವಾಗಿ ಮರಳಿ ಹಳೇ ಜಿಲ್ಲಾ ಆಸ್ಪತ್ರೆ ಆವರಣಕ್ಕೆ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬಾಲಕನ ಪೋಷಕರ ಪತ್ತೆಗಾಗಿ ಮನವಿ


ಕೊಪ್ಪಳ ಜು. 10 (ಕರ್ನಾಟಕ ವಾರ್ತೆ): ಕೊಪ್ಪಳದ ವಿಜಯನಗರ ಬಡಾವಣೆ ಹತ್ತಿರ ಜು. 06 ರಂದು ಸುಮಾರು 14 ವರ್ಷ ವಯಸ್ಸಿನ ಬುದ್ದಿಮಾಂದ್ಯ ಬಾಲಕನು ಪತ್ತೆಯಾಗಿದ್ದು, ಬಾಲಕನ ಪೋಷಕರ ಪತ್ತೆಗಾಗಿ ಸಹಕರಿಸುವಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
    ವಿಜಯನಗರ ಬಡಾವಣೆ ಹತ್ತಿರ ಜು. 06 ರಂದು ಬೆಳಿಗ್ಗೆ 6-45 ಗಂಟೆ ಸುಮಾರಿಗೆ ಅಂದಾಜು 14 ವರ್ಷ ವಯಸ್ಸಿನ ಬುದ್ದಿಮಾಂದ್ಯ ಬಾಲಕ ತಿರುಗಾಡುತ್ತಿದ್ದನ್ನು ಗಮನಿಸಿದ ಸುನೀಲ್‍ಕುಮಾರ ಎ.ಎಂ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೊಪ್ಪಳ ಅವರು, ಬಾಲಕನ್ನು ರಕ್ಷಣೆ ಮಾಡಿ, ಬಾಲಮಂದಿರಕ್ಕೆ ದಾಖಲಿಸಿರುತ್ತಾರೆ.  ಬಾಲಕನನ್ನು ಸಮಾಲೋಚಿಸಿದಾಗ ಬಾಲಕನು ಮಾನಸಿಕ ಅಸಾಮಾನ್ಯ ಮತ್ತು ಪೋಷಕರ ನಿರ್ಲಕ್ಷ್ಯತನದಿಂದ ಮನೆ ಬಿಟ್ಟಿರಬಹುದು.  ಈ ಬಾಲಕನು ಬುದ್ದಿಮಾಂದ್ಯನಾಗಿದ್ದು, ಮಾತನಾಡಲು ಸಹ ಬಂದಿರುವುದಿಲ್ಲ ಎಂಬುದನ್ನು ಗಮನಿಸಲಾಗಿದೆ.  ಬಾಲಕನನ್ನು ಜಿಲ್ಲಾ ಆಸ್ಪತ್ರೆ ಮಾನಸಿಕ ತಜ್ಞರಲ್ಲಿ ಆರೋಗ್ಯ ತಪಾಸಣೆ ಮಾಡಿಸಿದಾಗ ವೈದ್ಯರು, ಬಾಲಕನು ಬುದ್ದಿಮಾಂದ್ಯನಾಗಿರುತ್ತಾನೆ ಎಂಬುದಾಗಿ ವರದಿ ನೀಡಿದ್ದಾರೆ.
ಬಾಲಕನ ವಿವರ : ಬಾಲಕನಿಗೆ ಮಾತನಾಡಲು ಬಾರದೇ ಇದ್ದ ಕಾರಣ ಬಾಲಕನ ಹಾಗೂ ಪೊಷಕರ ಹೆಸರು ತಿಳಿದು ಬಂದಿರುವುದಿಲ್ಲ.  ಬಾಲಕನಿಗೆ ಮಾತನಾಡಲು ಬರುವುದಿಲ್ಲ ಆದರೆ ಕನ್ನಡ ಮತ್ತು ಹಿಂದಿ ಭಾಷೆಗೆ ಸ್ಪಂದಿಸುತ್ತಾನೆ.  ಜಾತಿ ಮುಸ್ಲಿಂ ಎಂದು ಊಹಿಸಬಹುದಾಗಿದೆ.  ಅಂದಾಜು 14 ವರ್ಷ, ತೂಕ-28 ಕೆ.ಜಿ., 147 ಸೆಂ.ಮೀ. ಎತ್ತರ, ಕೆಂಪು ಮೈ ಬಣ್ಣ, ಸಾಧಾರಣ ಮೈಕಟ್ಟು, ಮುಖದ ಎಡ ಬಾಗದಲ್ಲಿ ಕಲೆಯ ಗುರುತು ಮತ್ತು ತೆಲೆಯ ಹಿಂಭಾಗದಲ್ಲಿ ಗಾಯದ ಕಲೆಗಳ ಗುರುತುಗಳಿವೆ.  ಬಾಲಕನು ಸದ್ಯ ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸರಕಾರಿ ಬಾಲಕರ ಬಾಲಮಂದಿರ (ವಿಜಯನಗರ ಬಡಾವಣೆ, ಅನ್ನಪೂರ್ಣೇಶ್ವರಿ ದೇವಸ್ಥಾನ ಹಿಂದುಗಡೆ ಕಿನ್ನಾಳ ರಸ್ತೆ ಕೊಪ್ಪಳ ದೂ.ಸಂ. 08539-225030 7259351515, 9972524215,) ಇಲ್ಲಿ ಇದ್ದು, ಬಾಲಕನ ಪೋಷಕರ ಪತ್ತೆಗಾಗಿ ಸಹಕರಿಸುವಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಜು. 18 ರಿಂದ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ಇಂದ್ರಧನುಷ್ ಅಭಿಯಾನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅರ್ಹ ಎಲ್ಲ ಮಕ್ಕಳಿಗೆ ತಲುಪಲಿ : ಎಂ. ಕನಗವಲ್ಲಿ

ಕೊಪ್ಪಳ ಜು. 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ 3ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನವನ್ನು ಜು. 18 ರಿಂದ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, 0-2 ಹಾಗೂ 5-6 ವರ್ಷದ ಎಲ್ಲ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಿಗೆ ಲಸಿಕೆ ಹಾಕಬೇಕಾಗಿದ್ದು, ಎಲ್ಲ ಅರ್ಹರಿಗೂ ತಪ್ಪದೆ ಲಸಿಕೆ ತಲುಪುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.

     ತೀವ್ರತರ ವಿಶೇಷ ಇಂದ್ರಧನುಷ್ ಲಸಿಕಾ ಅಭಿಯಾನ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಿದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೆ ಎರಡು ಸುತ್ತು ವಿಶೇಷ ಇಂದ್ರಧನುಷ್ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ.  ಇದೀಗ ಬಾಕಿ ಉಳಿದವರಿಗೆ ಲಸಿಕೆ ತಲುಪುವಂತಾಗಲು ಮೂರನೆ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನವು ಜು. 18, 20 ಮತ್ತು 21 ರಂದು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಡೆಯಲಿದ್ದು, ಅಂಗನವಾಡಿ ಕೇಂದ್ರಗಳನ್ನು ತೆರೆಯುವಂತೆ ಹಾಗೂ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರು ಲಸಿಕಾ ಕಾರ್ಯಕ್ರಮಕ್ಕೆ ಬರುವಂತೆ ನೋಡಿಕೊಳ್ಳಿ.  ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕೀಯರು ಲಸಿಕಾ ಟೀಮ್‍ನ ಒಂದು ಭಾಗವಾಗಿದ್ದು, ಕಾರ್ಯಕ್ರಮಕ್ಕೆ ಅವರು ತಪ್ಪದೇ ಹಾಜರಾಗುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು.  ಅಲ್ಲದೇ ಅಂಗನವಾಡಿ ಕೇಂದ್ರಗಳಲ್ಲಿ ಪ್ರಚಾರ ಫಲಕಗಳನ್ನು ಪ್ರದರ್ಶಿಸಬೇಕು.  ಕಾರ್ಯಕ್ರಮ ನಡೆಯುವ ಗ್ರಾಮಗಳ ಸ್ತೀಶಕ್ತಿ ಹಾಗೂ ಸ್ವಶಕ್ತಿ ಗುಂಪುಗಳ ಪದಾಧಿಕಾರಿಗಳು ಭಾಗವಹಿಸಲು ಸೂಚಿಸಬೇಕು.  ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನದಡಿ ನೀಡಲಾಗುತ್ತಿರುವ ಲಸಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ.  ಕಾರ್ಯಕ್ರಮ ದಿನದಂದು ಜಿಲ್ಲೆಯಾದ್ಯಂತ ವಿದ್ಯುತ್ ನಿಲುಗಡೆಯಾಗದಂತೆ ಜೆಸ್ಕಾಂ ಇಲಾಖೆ ಎಚ್ಚರ ವಹಿಸಬೇಕು.  ಇದು ಕೊನೆಯ ಸುತ್ತು ಆಗಿರುವುದರಿಂದ, ಯಾವುದೇ ಅರ್ಹರು ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.
    ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಮಾತನಾಡಿ, ಇಂದ್ರಧನುಷ್ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಗಳನ್ನು ಹಾಕಿಸುವುದು ಪೋಷಕರ ಕರ್ತವ್ಯವಾಗಿದೆ.  ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನದಡಿಯಲ್ಲಿ ಗರ್ಭಿಣಿಯರಿಗೆ ಟಿಟಿ ಲಸಿಕೆ (ಧನುರ್ವಾಯು), ಎರಡು ವರ್ಷದ ಒಳಗಿನ ಮಕ್ಕಳಿಗೆ ಬಿಸಿಜಿ, ಪೋಲಿಯೋ, ದರಾಡ ಮತ್ತು ರುಬೆಲ್ಲಾ ಪ್ರತ್ಯೇಕ ಲಸಿಕೆ ಹಾಗೂ ಡಿಪಿಟಿ, ಹೆಪಟೈಟಿಸ್-ಬಿ, ಇನ್‍ಫ್ಲಯೆಂಜಾ-ಬಿ ಸೇರಿರುವ ಪೆಂಟಾವೆಲಂಟ್.  5 ರಿಂದ 6 ವರ್ಷದ ಮಕ್ಕಳಿಗೆ ಡಿಪಿಟಿ ಬೂಸ್ಟರ್ ನೀಡಲಾಗುವುದು.  ಎಲ್ಲಾ ಹಂತದ ಸಕಾರಿ ಆಸ್ಪತ್ರೆ ಹಾಗೂ ಉಪಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಲಾಗುವುದು.  ಕಳೆದ ಮೇ. ಮತ್ತು ಜೂನ್ ತಿಂಗಳಲ್ಲಿ ಮೊದಲನೇ ಮತ್ತು ಎರಡನೇ ಹಂತದ ಅಭಿಯಾನವನ್ನು ಆಯೋಜಿಸಲಾಗಿದ್ದು, ಸಮೀಕ್ಷೆಗೂ ಮೀರಿ ಅಧಿಕ ಸಂಖ್ಯೆಯಲ್ಲಿ ಲಸಿಕೆಯನ್ನು ಹಾಕಲಾಗಿದೆ.  ಅದೇ ರೀತಿ 3ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನವನ್ನು  ಜು. 18, 20 ಮತ್ತು 21 ರಂದು ಜಿಲ್ಲೆಯ 17 ಗ್ರಾಮಗಳಲ್ಲಿ ಆಯೋಜಿಸಿದ್ದು, 0-2 ವರ್ಷದ ಮಕ್ಕಳು-208 ಹಾಗೂ 5-6 ವರ್ಷದ ಮಕ್ಕಳು-06 ಸೇರಿ ಒಟ್ಟು 214 ಮಕ್ಕಳು ಮತ್ತು 21 ಗರ್ಭಿಣಿ ಮಹಿಳೆಯರಿಗೆ ಲಸಿಕೆಯನ್ನು ಹಾಕಿಸಲು ಗುರಿ ನಿಗದಿಪಡಿಸಲಾಗಿದೆ.  ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ಸಹಕಾರ ಅತ್ಯವಶ್ಯಕವಾಗಿದೆ ಎಂದರು.
    ಸಭೆಯಲ್ಲಿ ಐಎಎಸ್  ಪ್ರೊಬೆಷನರಿ ಅಧಿಕಾರಿ ಅಕ್ಷಯ್ ಶ್ರೀಧರ್, ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್., ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದಾನರಡ್ಡಿ, ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ. ಎಸ್.ಕೆ. ದೇಸಾಯಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಮ್.ಎಮ್ ಕಟ್ಟಿಮನಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ. ಜಂಬಯ್ಯ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಟಿ.ಹೆಚ್.ಒ.ಗಳು, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ : ಅರ್ಜಿ ಆಹ್ವಾನ


ಕೊಪ್ಪಳ ಜು. 10 (ಕರ್ನಾಟಕ ವಾರ್ತೆ): ರಾಜ್ಯ ಸಹಕಾರ ಮಹಾಮಂಡಳವು ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕಲಬುರಗಿ ತರಬೇತಿ ಕೇಂದ್ರದ ಮೂಲಕ ಸಹಕಾರ ಸಂಘ/ ಸಂಸ್ಥೆಗಳ ಮತ್ತು ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ ಆರು ತಿಂಗಳ ಅಥವಾ 180 ದಿನಗಳ ದೂರ ಶಿಕ್ಷಣದ ಮೂಲಕ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
     ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಸಲ್ಲಿಸಲು ಜು. 16 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಆದರ್ಶ ನಗರ, ಸೇಡಂ ರಸ್ತೆ ಕಲಬುರಗಿ-585105, ದೂರವಾಣಿ ಸಂಖ್ಯೆ 08472-245340, ಮೊ.ಸಂ – 9916726886/ 8495893192, ಇವರನ್ನು ಸಂಪರ್ಕಿಸಬಹುದು ಕೊಪ್ಪಳ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ


ಕೊಪ್ಪಳ ಜು. 10 (ಕರ್ನಾಟಕ ವಾರ್ತೆ): ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯು ಹೈದರಾಬಾದಿನ ನ್ಯಾಷನ್ ಇನ್‍ಸ್ಟಿಟ್ಯೂಷನ್ ಆಫ್ ಅಗ್ರಿಕಲ್ಚರಲ್ ಎಕ್ಸ್‍ಟೆಂಷನ್ ಮ್ಯಾನೆಜ್‍ಮೆಂಟ್ (ಎಂ.ಎ.ಎನ್.ಎ.ಜಿ.ಇ) ಇವರ ಸಹಯೋಗದೊಂದಿಗೆ ಎರಡು ತಿಂಗಳ ಅಗ್ರಿಕ್ಲಿನಿಕ್ & ಅಗ್ರಿ ಬಿಜ್‍ನೆಸ್ ಎಂಬ ತರಬೇತಿಯನ್ನು ಆಗಸ್ಟ್ ತಿಂಗಳಿನಲ್ಲಿ ಹಮ್ಮಿಕೊಂಡಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
    ಅರ್ಜಿ ಸಲ್ಲಿಸಲು ಕೃಷಿ ಅಥವಾ ತತ್ಸಮಾನ ಪದವಿಗಳಾದ ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರಬೇಕು.  2017 ಅಥವಾ ಅದಕ್ಕಿಂತ ಪೂರ್ವದಲ್ಲಿ ಪದವಿ ಹೊಂದಿರಬೇಕು.  "ಕೃಷಿಕರು ಸುಭದ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗುವುದು" ಎಂಬುವುದೇ ತರಬೇತಿಯ ಮುಖ್ಯ ಉದ್ದೇಶವಾಗಿದೆ.  ತರಬೇತಿಯ ನಂತರ ಕೃಷಿಯಲ್ಲಿ ಸ್ವಾವಲಂಬನೆ ಹೊಂದಲು ಬೇಕಾದ ಬ್ಯಾಂಕ್ ನೆರವನ್ನು ಪಡೆಯಲು ಸಹಾಯ ಮಾಡಲಾಗುತ್ತದೆ.  ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು, ತರಬೇತಿ ಪಡೆಯಲಿಚ್ಚಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾನಗರ, ದಾಂಡೇಲಿ ರಸ್ತೆ, ಹಳಿಯಾಳ (ಉತ್ತರ ಕರ್ನಾಟಕ ಜಿಲ್ಲೆ), ಈ ವಿಳಾಸಕ್ಕೆ ಕೂಡಲೇ ಸಂಪರ್ಕಿಸಲು ಕೋರಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 9482188780, 9483485489 ಕ್ಕೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಜು. 16 ರಂದು ಕೊಪ್ಪಳದಲ್ಲಿ ಮಿನಿ ಉದ್ಯೋಗ ಮೇಳ


ಕೊಪ್ಪಳ ಜು. 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಮಿನಿ ಉದ್ಯೋಗ ಮೇಳವನ್ನು  ಜು. 16 ರಂದು ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 2-30 ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
    ಮಿನಿ ಉದ್ಯೋಗ ಮೇಳದಲ್ಲಿ ಯುರೇಕಾ ಫೋಭ್ರ್ಸ ಬೆಂಗಳೂರ, ರಾಶಿ ಎಕೋ ಟುಟೋರಿಸ್ಕ್ ಲಿ. ಬೆಂಗಳೂರ, ಶ್ರೀಸಾಯಿ ಬಯೋ ಫರ್ಟಿಲೈಜರ್ಸ ಹುಬ್ಬಳ್ಳಿ, ಎಲ್&ಟಿ ಕನ್ಸ್ಟ್ರಕ್ಷನ್ ಸಿ.ಎಸ್.ಟಿ.ಐ. ಲಿ. ಬೆಂಗಳೂರ, ಓರಿಯಂಟ್ ಬೆಲ್ ಲಿ. ಬೆಂಗಳೂರ ಹಾಗೂ  ಪ್ರೀಮಿಯರ್ ಪ್ಲಾಸ್ ಮೊಟಿಕ್ ಪ್ರೈ.ಲಿ ಬೆಂಗಳೂರ, ಕಂಪನಿಗಳು ಭಾಗವಹಿಸಿ ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು, ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.
     ಯುರೇಕಾ ಫೋಭ್ರ್ಸ ಬೆಂಗಳೂರ ಇವರು ಕಸ್ಟಮರ್ ಸೇಲ್ಸ್ ಸ್ಪೇಷಲಿಸ್ಟ, ಹೆಚ್.ಆರ್. ಹುದ್ದೆಗೆ 18 ರಿಂದ 30 ವರ್ಷ ವಯೋಮಿತಿಯಲ್ಲಿರುವ ಪಿಯುಸಿ, ಐಟಿಐ ಯಾವುದೇ ಪದವಿ, ಎಂ.ಬಿ.ಎ/ ಎಂ.ಎಸ್.ಡಬ್ಲ್ಯೂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.  ರಾಶಿ ಎಕೋ ಟುಟೋರಿಸ್ಮ್ ಲಿ. ಬೆಂಗಳೂರ ಇವರು ಪ್ರೋಡಕ್ಷನ್ಸ್ ಸರ್ವಿಸ್. ಮಾರ್ಕೆಟಿಂಗ್, ಹೌಸಕೀಪರ್ ಹುದ್ದೆಗೆ 18 ರಿಂದ 30 ವರ್ಷ ವಯೋಮಿತಿಯಲ್ಲಿರುವ ಎಸ್.ಎಸ್.ಎಲ್.ಸಿ., ಪಿಯುಸಿ, ಹೋಟೆಲ್ ಮ್ಯಾನೆಜಮೆಂಟ್  ವಿದ್ಯಾರ್ಹತೆಯ ಅಭ್ಯರ್ಥಿಗಳು.  ಶ್ರೀಸಾಯಿ ಬಯೋ ಫರ್ಟಿಲೈಜರ್ಸ ಹುಬ್ಬಳ್ಳಿ ಇವರು ಫೀಲ್ಡರ್ ಆಫೀಸರ್ ಗ್ರೂಪ್ ಲೀಡರ್. ಮಾನವ ಸಂಪನ್ಮೂಲ ಅಭಿವೃದ್ಧಿ ಹುದ್ದೆಗೆ 18 ರಿಂದ 30 ವರ್ಷ ವಯೋಮಿತಿಯಲ್ಲಿರುವ ಎಸ್.ಎಸ್.ಎಲ್.ಸಿ., ಪಿಯುಸಿ ಯಾವುದೇ ಪದವಿ ಬಿ.ಎಸ್ಸಿ(ಅಗ್ರಿ), ಎಂ.ಬಿ.ಎ (ಹೆಚ್.ಆರ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು.  ಎಲ್&ಟಿ ಕನ್ಸ್ಟ್ರಕ್ಷನ್ ಸಿ.ಎಸ್.ಟಿ.ಐ. ಲಿ. ಬೆಂಗಳೂರ ಇವರು ಫಾರ್ಮ ವರ್ಕ. ಕಾರ್ಪೆಂಟರ್ ಹುದ್ದೆಗೆ 18 ರಿಂದ 30 ವರ್ಷ ವಯೋಮಿತಿಯಲ್ಲಿರುವ ಎಸ್.ಎಸ್.ಎಲ್.ಸಿ., ಐ.ಟಿ.ಐ (ವೆಲ್ಡರ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು.  ಮಷಿನ್ ಆಪರೇಟರ್. ಹೆಲ್ಪರ್ಸ್ ಹುದ್ದೆಗೆ ಓರಿಯಂಟ್ ಬೆಲ್ ಲಿ. ಬೆಂಗಳೂರ ಇವರು 18 ರಿಂದ 40 ವರ್ಷ ವಯೋಮಿತಿ ಹಾಗೂ ಪ್ರೀಮಿಯರ್ ಪ್ಲಾಸ್ ಮೊಟಿಕ್ ಪ್ರೈ.ಲಿ ಬೆಂಗಳೂರ ಇವರು 18 ರಿಂದ 30 ವರ್ಷ ವಯೋಮಿತಿಯಲ್ಲಿರುವ ಎಸ್.ಎಸ್.ಎಲ್.ಸಿ. ಐ.ಟಿ.ಐ (ಎಲ್ಲಾ ಟ್ರೇಡಗಳು) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮತ್ತು ಯುರೇಕಾ ಫೋಭ್ರ್ಸ ಬೆಂಗಳೂರ ಇವರು ಸರ್ವಿಸ್ ಟೆಕ್ನಿಷಿಯನ್ಸ್ ಗ್ರೂಪ್ ಲೀಡರ್. ಹುದ್ದೆಗೆ 18 ರಿಂದ 37 ವರ್ಷ ವಯೋಮಿತಿಯಲ್ಲಿರುವ ಎಸ್.ಎಸ್.ಎಲ್.ಸಿ. ಪಿ.ಯು.ಸಿ. ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. 
ಆಸಕ್ತರು ತಮ್ಮ ವಿದ್ಯಾರ್ಹತೆಯ ಎಲ್ಲ ದಾಖಲೆಗಳೊಂದಿಗೆ ಬಯೋಡೇಟಾ (ರೆಸ್ಯೂಮ್) ದೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ ಕೊಪ್ಪಳ ದೂರವಾಣಿ ಸಂಖ್ಯೆ 08539-220859, ಮೊ.ಸಂ 8105848991 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Monday, 9 July 2018

ಶಾಲಾ ಶುಲ್ಕ ವಿವರ ಪ್ರದರ್ಶಿಸಿ, ಇಲ್ಲವೆ ಕ್ರಮ ಎದುರಿಸಿ : ಎಂ. ಕನಗವಲ್ಲಿ ಕಟ್ಟುನಿಟ್ಟಿನ ಸೂಚನೆ


ಕೊಪ್ಪಳ ಜು.09 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಖಾಸಗಿ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ತಾವು ಪಡೆಯುವ ಶುಲ್ಕದ ವಿವರವನ್ನು ಶಾಲೆಯ ಗೋಡೆ ಮೇಲೆ ಬರೆಯಿಸಬೇಕು ಮತ್ತು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.  ಈ ಕಾರ್ಯ ಮೂರು ದಿನಗಳ ಒಳಗಾಗಿ ಆಗಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
     ಶಾಲೆಗಳಲ್ಲಿ ಶುಲ್ಕದ ವಿವರವನ್ನು ಇದುವರೆಗೂ ಪ್ರದರ್ಶಿಸದ ಶಾಲಾ ಮುಖ್ಯಸ್ಥರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಕೈಗೊಂಡ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲ ಖಾಸಗಿ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ,  ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಸಿ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನಿಗದಿಪಡಿಸಿರುವ ಶುಲ್ಕದ ವಿವರಗಳನ್ನು ಶಾಲಾ ಸೂಚನಾ ಫಲಕದಲ್ಲಿ ಸಾರ್ವಜನಿಕವಾಗಿ ಪ್ರಕಟಿಸದೆ, ಸರ್ಕಾರದ ಶುಲ್ಕ ನೀತಿಯನ್ನು ಜಿಲ್ಲೆಯಲ್ಲಿ ಒಟ್ಟು 39 ಶಾಲೆಗಳು ಉಲ್ಲಂಘಿಸಿದ್ದು, ಅಂತಹ ಶಾಲೆಗಳು, ಶುಲ್ಕದ ವಿವರವನ್ನು ಶಾಲೆಯ ಗೋಡೆ ಮೇಲೆ ಬರೆಯಿಸಬೇಕು ಮತ್ತು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.  ಇದಕ್ಕೆ ಮೂರು ದಿನಗಳ ಗಡುವು ನೀಡಲಾಗಿದೆ.  ಮೂರು ದಿನಗಳ ಒಳಗಾಗಿ ಶಾಲಾ ಶುಲ್ಕದ ವಿವರವನ್ನು ಗೋಡೆ ಬರಹದಲ್ಲಿ ಬರೆಯಿಸಬೇಕು.  ಮತ್ತು ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು.  ಈ ಕುರಿತು ಫೋಟೋ ಸಹಿತ ವರದಿಯನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಬೇಕು.  ಸಭೆಗೆ ಗೈರು ಹಾಜರಾದ 09 ಶಾಲೆಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿ, ಅಗತ್ಯ ಕ್ರಮ ಕೈಗೊಳ್ಳಬೇಕು.  ಯಾವುದೇ ಶಾಲೆಯವರು ನಿಯಮಬಾಹಿರವಾಗಿ ಶುಲ್ಕ ಸಂಗ್ರಹ ಮಾಡಿ, ಸರ್ಕಾರದ ಶುಲ್ಕ ನೀತಿ ಉಲ್ಲಂಘಿಸಿದಲ್ಲಿ, ಅಂತಹ ದೂರುಗಳ ಕುರಿತು, ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ವರದಿಯೊಂದಿಗೆ ಜಿಲ್ಲಾ ಶೈಕ್ಷಣಿಕ ಕ್ರಮಬದ್ಧತಾ ಪ್ರಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳಿಗೆ ಕ್ರಮಕ್ಕಾಗಿ ಶಿಫಾರಸು ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಾಕೀತು ಮಾಡಿದರು.
     ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ. ಶ್ಯಾಮಸುಂದರ್, ಜಿಲ್ಲಾ ನೋಡಲ್ ಅಧಿಕಾರಿ ಎಂ. ಬಡದಾನಿ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನಿಯಮ ಉಲ್ಲಂಘಿಸಿದ ಜಿಲ್ಲೆಯ 30 ಶಾಲೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಮಹಿಳೆಯರೇ ನಡೆಸುವ ಸವಿರುಚಿ ಸಂಚಾರಿ ಕ್ಯಾಂಟೀನ್‍ಗೆ ಚಾಲನೆ : ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮಹಿಳೆಯರು ಮುಂದಾಗಿ- ಡಿ.ಸಿ. ಕನಗವಲ್ಲಿ

ಕೊಪ್ಪಳ ಜು. 09 (ಕರ್ನಾಟಕ ವಾರ್ತೆ): ಮಹಿಳೆಯರು ಯಾವುದೇ ಉದ್ಯಮವನ್ನು ನಡೆಸಲು ಸಶಕ್ತರಾಗಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮಹಿಳೆಯರು ಮುಂದಾಗಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.

     ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮೂಲಕ ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರಾಯೋಗಿಕ ಯೋಜನೆಯಾದ ‘ಸವಿರುಚಿ ಸಂಚಾರಿ ಕ್ಯಾಂಟೀನ್’ಗೆ ಸೋಮವಾರದಂದು ಜಿಲ್ಲಾಡಳಿತ ಭವನ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

     ಇಂದಿನ ಕಾಲದಲ್ಲಿ ಮಹಿಳೆಯರು ಯಾವುದೇ ಕ್ಷೇತ್ರದಲ್ಲಿ ತಮ್ಮ ಪ್ರತಿಭೆ ಹಾಗೂ ಸಾಮಥ್ರ್ಯ ತೋರಿಸಲು ಸಶಕ್ತರಾಗಿದ್ದು, ಈ ದಿಸೆಯಲ್ಲಿ ಸರ್ಕಾರ ಮಹಿಳೆಯರಿಗೆ ಬೆಂಬಲ ನೀಡುತ್ತಿದೆ.  ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ವತಿಯಿಂದ, ಸಂಪೂರ್ಣ ಮಹಿಳೆಯರೇ ನಡೆಸುವ ‘ಸವಿರುಚಿ ಸಂಚಾರಿ ಕ್ಯಾಂಟೀನ್’ ಕೂಡ ಇಂತಹದೇ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ ಇದನ್ನು ಪ್ರಾಯೋಗಿಕವಾಗಿ ಸದ್ಯ ಚಾಲನೆ ನೀಡಲಾಗುತ್ತಿದೆ.  ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಊಟ ಮತ್ತು ಉಪಹಾರ ನೀಡುವ ಯೋಜನೆ ಇದಾಗಿದ್ದು, ಮಹಿಳೆಯರು ಉತ್ತಮ ಗುಣಮಟ್ಟದ ಊಟೋಪಹಾರ ನೀಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಮಹಿಳಾ ಸಬಲೀಕರಣಕ್ಕೆ ಇದು ಪೂರಕ ಯೋಜನೆಯಾಗಿದೆ.  ಇಂತಹ ಯೋಜನೆಗಳ ಸದುಪಯೋಗವನ್ನು ಮಹಿಳೆಯರು ಪಡೆದುಕೊಂಡು, ಯೋಜನೆ ಯಶಸ್ವಿಗೊಳಿಸಬೇಕು.  ಯೋಜನೆ ಯಶಸ್ಸುಗೊಂಡಲ್ಲಿ, ಇಂತಹ ಕ್ಯಾಂಟೀನ್‍ಗಳನ್ನು ಇನ್ನಷ್ಟು ವಿಸ್ತರಿಸಲು ಸಾಧ್ಯವಾಗಲಿದೆ.  ಸವಿರುಚಿ ಕ್ಯಾಂಟೀನ್‍ನಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿಅ ಕೊರತೆಯಾಗದಂತೆ ಮಹಿಳೆಯರು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.

     ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಭಾರಿ ಉಪನಿರ್ದೇಶಕಿ ಸಿ.ಡಿ. ಗೀತಾ ಅವರು, ಸವಿರುಚಿ ಕ್ಯಾಂಟೀನ್‍ನಲ್ಲಿ 40 ರೂ. ದರದಲ್ಲಿ ಉತ್ತಮ ಊಟ ದೊರೆಯಲಿದ್ದು, ಇದರಲ್ಲಿ ರೊಟ್ಟಿ/ಚಪಾತಿ, ಎರಡು ಬಗೆಯ ಪಲ್ಯೆ, ಅನ್ನ, ಸಾಂಬಾರ್ ಕೂಡ ನೀಡಲಾಗುತ್ತದೆ.  ಅಲ್ಲದೆ 20 ರೂ. ದರದಲ್ಲಿ ಉಪಹಾರ ನೀಡಲಾಗುವುದು.  ಇದು ಸಂಚಾರಿ ಕ್ಯಾಂಟೀನ್ ಆಗಿರುವುದರಿಂದ, ಜಿಲ್ಲಾಡಳಿತ ಭವನ, ಜಿಲ್ಲಾಸ್ಪತ್ರೆ, ಕೋರ್ಟ್ ಆವರಣ, ಬಸ್‍ಸ್ಟ್ಯಾಂಡ್ ಹೀಗೆ ಎಲ್ಲೆಲ್ಲಿ ಜನಸಂದಣಿ ಹೆಚ್ಚಿದ್ದು, ಊಟೋಪಹಾರದ ಬೇಡಿಕೆ ಲಭ್ಯವಾಗುವ ಸಾಧ್ಯತೆಳಿರುತ್ತವೆಯೋ, ಅಂತಹ ಸ್ಥಳಗಳಿಗೆ ತೆರಳಿ, ಕ್ಯಾಂಟೀನ್‍ನಲ್ಲಿ ಊಟೋಪಹಾರ ನೀಡಲಾಗುವುದು.  ಸವಿರುಚಿ ಸಂಚಾರಿ ಕ್ಯಾಂಟೀನ್ ಯೋಜನೆಗೆ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟಕ್ಕೆ 10 ಲಕ್ಷ ರೂ. ಗಳ ಬಡ್ಡಿರಹಿತ ಸಾಲವನ್ನು ಸರ್ಕಾರದ ವತಿಯಿಂದ ನೀಡಲಾಗಿದ್ದು, 9 ರಿಂದ 11 ಸದಸ್ಯರನ್ನೊಳಗೊಂಡ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದವರು, ಈ ಹಣದಲ್ಲಿ ಸಂಚಾರಿ ವಆಹನ, ಪಾಕೋಪಕರಣ ಅಲ್ಲದೆ ಅಗತ್ಯ ಸಲಕರಣೆಗಳನ್ನು ಖರೀದಿಸಿ, ರುಚಿ-ಶುಚಿಯಾದ ಉಪಹಾರ, ಊಟ, ಕಾಫಿ, ಟೀ ಪೂರೈಸಬಹುದಾಗಿದೆ.  ಬಂದಂತಹ ಲಾಭಾಂಶದಲ್ಲಿ ಪ್ರತಿ ತಿಂಗಳು 15000 ರೂ. ಗಳಂತೆ 67 ಕಂತುಗಳನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಕ್ಕೆ ಸಾಲ ಮರುಪಾವತಿ ಮಾಡಬೇಕಾಗುತ್ತದೆ.  ಸವಿರುಚಿ ಸಂಚಾರಿ ಕ್ಯಾಂಟೀನ್ ಅನ್ನು ಸುಸಜ್ಜಿತ ವಾಹನದಲ್ಲಿ ಅಳವಡಿಸಲಾಗಿದ್ದು, ವಾಹನವನ್ನು ಕ್ಯಾಂಟೀನ್ ಮಾಡಲು ಅಗತ್ಯವಿರುವ ವಿನ್ಯಾಸದಲ್ಲಿ ಸಿದ್ಧಪಡಿಸಲಾಗಿದೆ.  ಸ್ವಸಹಾಯ ಮಹಿಳಾ ಗುಂಪುಗಳು ತಯಾರಿಸುವ ಉಪ್ಪಿನಕಾಯಿ, ವಿವಿಧ ಬಗೆಯ ಚಟ್ನಿ, ಹಪ್ಪಳ, ರೊಟ್ಟಿ ಮುಂತಾದ ತಿನಿಸುಗಳನ್ನು ಸ್ತ್ರೀಶಕ್ತಿ ಒಕ್ಕೂಟದವರಿಂದ ಖರೀದಿಸಿ, ಕ್ಯಾಂಟೀನ್‍ಗೆ ಬಳಕೆ ಮಾಡುವ ಕುರಿತಂತೆ ಯೋಜಿಸಲಾಗುತ್ತಿದ್ದು, ಇದರಿಂದಾಗಿ ಮಹಿಳೆಯರ ಆರ್ಥಿಕ ಸಬಲತೆಗೆ ಪೂರಕವಾಗಲಿದೆ ಎಂದರು.

     ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಸುಧಾ ಚಿದ್ರಿ ಸೇರಿದಂತೆ ಇಲಾಖೆಯ ಹಲವು ಅಧಿಕಾರಿಗಳು, ಸ್ತ್ರೀಶಕ್ತಿ ಒಕ್ಕೂಟದ ಸದಸ್ಯರುಗಳು, ವಾರ್ತಾ ಇಲಾಖೆಯ ಎಂ. ಅವಿನಾಶ ಉಪಸ್ಥಿತರಿದ್ದರು.  ಜಿಲ್ಲಾಡಳಿತ ಭವನದಲ್ಲಿ ಪ್ರಾರಂಭಗೊಂಡ ಸವಿರುಚಿ ಕ್ಯಾಂಟೀನ್‍ನಲ್ಲಿ ಸಾರ್ವಜನಿಕರು, ರುಚಿ ರುಚಿಯಾದ ಊಟ ಸವಿದು ಖುಷಿ ಪಟ್ಟರು.  40 ರೂ. ದರದಲ್ಲಿ ರೊಟ್ಟಿ, ಚಪಾತಿ, ಪಲ್ಯೆ, ಅನ್ನ ಸಾಂಬಾರ್ ದೊರೆಯುತ್ತಿದ್ದು, ಊಟ ಕೂಡ ರುಚಿಯಾಗಿದೆ.  ಕಡಿಮೆ ದರದಲ್ಲಿ ಭರಪೂರ ಊಟ ದೊರೆಯುತ್ತಿರುವುದು ಸಂತಸ ತಂದಿದೆ ಎಂದು ಊಟ ಸವಿದ ಸಾರ್ವಜನಿಕರು ಅಭಿಪ್ರಾಯಪಟ್ಟರು.

ಬಾಲಮಂದಿರ ಮಕ್ಕಳಿಗೆ ಸಿದ್ದ ಉಡುಪುಗಳ ಖರೀದಿ : ದರಪಟ್ಟಿ ಆಹ್ವಾನ



ಕೊಪ್ಪಳ ಜು. 09 (ಕರ್ನಾಟಕ ವಾರ್ತೆ): ಕೊಪ್ಪಳ ಸರಕಾರಿ ಬಾಲಕಿಯರ ಬಾಲಮಂದಿರ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಮಕ್ಕಳಿಗೆ ಸಿದ್ದ ಉಡುಪುಗಳನ್ನು ಖರೀದಿಸಬೇಕಿದ್ದು, ಆಸಕ್ತ ಅಂಗಡಿ ಮಾಲಿಕರಿಂದ ದರಪಟ್ಟಿ ಆಹ್ವಾನಿಸಲಾಗಿದೆ. 
    ಕೊಪ್ಪಳ ಸರಕಾರಿ ಬಾಲಕಿಯರ ಬಾಲಮಂದಿರ ಸಂಸ್ಥೆಯ 6 ರಿಂದ 10 ವರ್ಷ ವಯೋಮಿತಿ ಹಾಗೂ 11 ರಿಂದ 15 ವರ್ಷ ವಯೋಮಿತಿಯ ಮಕ್ಕಳಿಗೆ ಪ್ರತ್ಯೇಕ ಅಳತೆಯಲ್ಲಿ ಒಳಲಂಗ (ಪೆಡಿಕೋಟ), ಚೂಡಿದಾರ, ಉಲ್ಲನ್ ಸ್ವೇಟರ್, ಕಾಟನ್ ಪ್ರಾಕ್, ನೈಟ್ ಡ್ರೆಸ್ ಸೇರಿದಂತೆ ಇನ್ನಿತರ ಉಡುಪುಗಳನ್ನು ಖರೀದಿಸಬೇಕಿದೆ.  ಆಸಕ್ತ ಅಂಗಡಿ ಮಾಲಿಕರು ಉಡುಪುಗಳ ಪ್ರತಿಯೊಂದಕ್ಕೆ ದರ ನಮೂದಿಸಿ ದರಪಟ್ಟಿಯನ್ನು ಅಧೀಕ್ಷಕರು, ಸರಕಾರಿ ಬಾಲಕಿಯರ ಬಾಲಮಂದಿರ ಅಡವಿ ಆಂಜನೇಯ ಬಡಾವಣೆ ಕಿನ್ನಾಳ ರಸ್ತೆ ಭಾಗ್ಯಬಗರ ಕೊಪ್ಪಳ ಇವರಿಗೆ ಜು. 17 ರೊಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ಸರಕಾರಿ ಬಾಲಕಿಯರ ಬಾಲಮಂದಿರದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ : ಜು. 10 ರಂದು ಜಾಗೃತ ಸಮಿತಿ ಸಭೆಗೆ


ಕೊಪ್ಪಳ ಜು. 09 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮೂರನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ ಹಮ್ಮಿಕೊಳ್ಳುವ ಕುರಿತು ಜಿಲ್ಲಾ ಮಟ್ಟದ ಜಾಗೃತ ಸಮಿತಿಯ ಸಭೆಯನ್ನು ಜು. 10 ರಂದು ಮಧ್ಯಾಹ್ನ 3-45 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.    
    ಜಿಲ್ಲೆಯಾದ್ಯಂತ ಜು. 18 ರಿಂದ 21 ರವರೆಗೆ ಮೂರನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನವನ್ನು ಹಮ್ಮಿಕೊಳ್ಳುವ ಕುರಿತು ಪೂರ್ವಭಾವಿ ಸಿದ್ದತೆಗಾಗಿ ಜಿಲ್ಲಾ ಮಟ್ಟದ ಜಾಗೃತ ಸಮಿತಿಯ ಸಭೆಯನ್ನು ಆಯೋಜಿಸಲಾಗಿದ್ದು, ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್. ಅವರು ತಿಳಿಸಿದ್ದಾರೆ. 

Saturday, 7 July 2018

ಜಿಲ್ಲಾ ಪಂಚಾಯತಿಯಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ


ಕೊಪ್ಪಳ ಜು. 07 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯ 30 ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನಗಳನ್ನು ಶನಿವಾರದಂದು ಜಿಲ್ಲಾ ಪಂಚಾಯತಿ ಆವರಣದಲ್ಲಿ ಅಧ್ಯಕ್ಷರಾದ ರಾಜಶೇಖರ ಹಿಟ್ನಾಳ ಅವರು ವಿತರಿಸಿದರು.
     ಜಿಲ್ಲಾ ಪಂಚಾಯತಿ ಅಧ್ಯಕ್ಷರ 2017-18 ನೇ ಸಾಲಿನ ಅನಿರ್ಬಂಧಿತ ಅನುದಾನದ ಪೈಕಿ ಶೇ. 03 ರ ಅನುದಾನವನ್ನು ಅಂಗವಿಕಲರಿಗಾಗಿ ಮೀಸಲಿರಿಸಿದ್ದು, ಇದೀಗ ಜಿಲ್ಲೆಯ 30 ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನವನ್ನು ವಿತರಿಸಲಾಗಿದೆ.  ಕೊಪ್ಪಳ ತಾಲೂಕಿನ 09 ಫಲಾನುಭವಿಗಳು, ಗಂಗಾವತಿ-08, ಕುಷ್ಟಗಿ-07 ಹಾಗೂ ಯಲಬುರ್ಗಾ ತಾಲೂಕಿನ 06 ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನ ವಿತರಿಸಲಾಯಿತು.  ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನದ ಕೀ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 
     ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ ಸೇರಿದಂತೆ ಜಿಲ್ಲಾ ಪಂಚಾಯತಿಯ ಹಲವು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನ ವಿತರಿಸಿದರು.

ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ


ಕೊಪ್ಪಳ ಜು. 07 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ 35 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
     ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಂ4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದು. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ.
    ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560 002 - ಈ ವಿಳಾಸಕ್ಕೆ ಜುಲೈ 21 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ವೆಬ್ ಸೈಟ್ :  www.kannadapustakapradhikara@gmail.com  ದೂರವಾಣಿ ಸಂಖ್ಯೆ: 080-22484516 / 22017704  ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸಸಿ ನಾಟಿ ಮಾಡಲು ರೈತರಿಗೆ ತೋಟಗಾರಿಕೆ ಇಲಾಖೆಯ ಸಲಹೆ


ಕೊಪ್ಪಳ ಜು. 07 (ಕರ್ನಾಟಕ ವಾರ್ತೆ): ಸಸ್ಯ ಸಂತೆ ಕಾರ್ಯಕ್ರಮ ಏರ್ಪಡಿಸಿ, ಸಸಿಗಳನ್ನು ವಿತರಿಸಿದ್ದ, ತೋಟಗಾರಿಕೆ ಇಲಾಖೆ, ಇದೀಗ ಸಸಿ ನಾಟಿ ಮಾಡಲು ರೈತರಿಗೆ ಉಪಯುಕ್ತ ಸಲಹೆಗಳನ್ನು ನೀಡಿದೆ.
     ಇತ್ತೀಚಿಗೆ ತೋಟಗಾರಿಕೆ ಇಲಾಖೆಯಿಂದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ-2018 ನ್ನು ಹಮ್ಮಿಕೊಳ್ಳಲಾಗಿತ್ತು.  10 ದಿನಗಳ ಕಾಲ ನಡೆದ ಈ ಸಸ್ಯಸಂತೆಯಲ್ಲಿ ತೋಟಗಾರಿಕೆ ಇಲಾಖೆಯ ವಿವಿಧ ಕ್ಷೇತ್ರಗಳಲ್ಲಿ ಉತ್ಪಾದಿಸಿದ ಸಸಿ/ಕಸಿಗಳನ್ನು ರೈತರಿಗೆ/ಸಾರ್ವಜನಿಕರಿಗೆ ನೇರವಾಗಿ ಯೋಗ್ಯ ದರದಲ್ಲಿ ಪೂರೈಸುವ ಉದ್ದೇಶದಿಂದ ಆರಂಭಿಸಿದ ಈ ಸಸ್ಯಸಂತೆಯಲ್ಲಿ ಮಾವು, ಸೀಬೆ, ಸಪೋಟ, ವಿವಿಧ ಹೂವಿನ ಸಸಿಗಳು ಅಲಂಕಾರಿಕ ಸಸಿಗಳು, ತೆಂಗು ಮುಂತಾದವುಗಳನ್ನು ರೈತರು/ನಾಗರಿಕರು ಖರೀದಿಸಿದ್ದಾರೆ.
    ಬಹು ವಾರ್ಷಿಕ ಬೆಳೆಗಳಾದ ಮಾವು, ಸೀಬೆ, ಸಪೋಟ, ತೆಂಗು ಮುಂತಾದ ಬೆಳೆಗಳನ್ನು ನಾಟಿ ಮಾಡುವ ವಿಧಾನ ಬಹು ಮುಖ್ಯ. ಕಟ್ಟಡಕ್ಕೆ ಅಡಿಪಾಯ ಇದ್ದಂತೆ ಬಹುವಾರ್ಷಿಕ ಬೆಳೆಗಳ ಬೇರು ಬೆಳವಣಿಗೆ ಅತೀ ಮುಖ್ಯ. ಸುಮಾರು 30-40 ವರ್ಷಗಳವರೆಗೆ ಇಳುವರಿ ಕೊಡುವ ಈ ಬೆಳೆಗಳು ಸಧೃಡವಾಗಬೇಕಾದಲ್ಲಿ ಸೂಕ್ತ ನಾಟಿ ವಿಧಾನ ಅನುಸರಿಸಬೇಕು.  ಯಲಬುರ್ಗಾದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಲಿಂಗನಗೌಡ, ಸಹಾಯಕ ತೋಟಗಾರಿಕೆ ಅಧಿಕಾರಿ ಉಮೇಶ ಕಾಳೆ ಹಾಗೂ ಹಾರ್ಟಿಕ್ಲಿನಿಕ್ ವಿಷಯ ತಜ್ಞ ವಾಮನಮೂರ್ತಿರವರು ಇತ್ತೀಚೆಗೆ ಮಾವು ನಾಟಿ ವಿಧಾನದ ಪ್ರಾತ್ಯಕ್ಷಿತೆಯನ್ನು ಹಮ್ಮಿಕೊಂಡಿದ್ದರು.
     ಅದರಂತೆ ರೈತರು ತೋಟಗಾರಿಕೆ ಮಾಡಬೇಕಾದ ಜಮೀನಿನಲ್ಲಿ ಮಾಗಿ ಉಳುಮೆ ಮಾಡಿ, ಹೆಂಟೆಗಳನ್ನು ಒಡೆದು ಭೂಮಿ ಹದ ಮಾಡಿಕೊಳ್ಳಬೇಕು. ನಂತರ ನಾಟಿ ಮಾಡಿದ ಒಂದು ತಿಂಗಳು ಮೊದಲೇ ನಿರ್ಧಾರಿತ ಅಂತರ (5 ಮೀ ಅಥವಾ 8 ಮೀ ಅಥವಾ 10 ಮೀ) ದಲ್ಲಿ 2 1/2 ಯಿಂದ 3 ಘನ ಅಡಿ ಗಾತ್ರದ ಗುಂಡಿಗಳನ್ನು ಪೂರ್ವ-ಪಶ್ಚಿಮ ದಿಕ್ಕಿನಲ್ಲಿ ತೆರದಿಟ್ಟುಕೊಳ್ಳಬೇಕು. ಇದರಲ್ಲಿ ಬೇವು, ಹೊಂಗೆ ಮುಂತಾದ ಸೊಪ್ಪುಗಳನ್ನು 5-10 ಕಿಲೊ ಗ್ರಾಂ ನಷ್ಟು ಕತ್ತರಿಸಿ ಹಾಕಿ ಮೇಲಿನ ಮಣ್ಣನ್ನು ಅರ್ಧದಷ್ಟು ತುಂಬಿ ನೀರು ಹಾಯಿಸಿ ಬಿಸಿಲು, ಗಾಳಿಗೆ ಚೆನ್ನಾಗಿ ಹದವಾಗುವಂತೆ ಮಾಡಬೇಕು.  ಆಯ್ದ ಬೆಳೆ, ಆಯ್ದ ತಳಿ ಸಸಿ/ಕಸಿಗಳನ್ನು ತಂದು 15 ದಿನಗಳವರೆಗೆ ನೆರಳಲ್ಲಿ ಸಾಲಾಗಿಟ್ಟು ಸಂಜೆ ಹೊತ್ತು ತೆಳುವಾಗಿ ರೋಸ್ ಕ್ಯಾನ್‍ನಿಂದ ನೀರುಣಿಸಬೇಕು. ಗುಂಡಿ ತೆಗೆದು 3-4 ವಾರಗಳ ನಂತರ ನಾಟಿ ಮಾಡುವುದು ಸೂಕ್ತ.
ನಾಟಿ ಮಾಡುವ ಬಗೆ : ನಾಟಿ ಮಾಡುವ ಹಿಂದಿನ ದಿನ ಗುಂಡಿಗಳನ್ನು ನೀರಿನಿಂದ ತುಂಬಿಸಿಡಬೇಕು. ಸಮ ಪ್ರಮಾಣ (1:1:1) ಮಣ್ಣು, ಮರಳು ಮತ್ತು ಕೊಟ್ಟಿಗೆ ಗೊಬ್ಬರ, ಫೊರೇಟ 10 ಜಿ. ಗುಳಿಗೆ, ಸಿಂಗಲ ಸುಪರ ಫಾಸ್ಪೇಟ ಗೊಬ್ಬರ ಸಿದ್ಧಪಡಿಸಿಕೊಳ್ಳಬೇಕು. ಆಸರೆಗಾಗಿ ಕೋಲು ಮತ್ತು ಕಟ್ಟಲು ದಾರ ಇವುಗಳು ಇರುವುದು ಸೂಕ್ತ.    ನಾಟಿ ಮಾಡುವಾಗ 1:1:1 ಮಣ್ಣು, ಮರಳು ಮತ್ತು ಕೊಟ್ಟಿಗೆ ಗೊಬ್ಬರ ಬೆರೆಸಿರಿ. ನಂತರ ಸಸಿ/ಕಸಿಯನ್ನು ಪ್ಲಾಸ್ಟಿಕ ಚೀಲದಿಂದ ಬೇರ್ಪಡಿಸಿ ಗುಂಡಿಯ ಮಧ್ಯಭಾಗದಲ್ಲಿ ಸಸಿ ಸುತ್ತ ಮಣ್ಣು ಇರುವಷ್ಟು ತೆಗ್ಗು ಮಾಡಿ ಮಣ್ಣಿನ ಉಂಡೆಯ ಜೊತೆಗೆ ಕಸಿ ಮಾಡಿದ ಭಾಗ ಮಣ್ಣಿನ ಮೇಲೆ ಇರುವಂತೆ ನೆಟ್ಟು ಸುತ್ತಲೂ ಕಾಲಿನಿಂದ ಚೆನ್ನಾಗಿ ತುಳಿಯಬೇಕು. ಗುಂಡಿಯಲ್ಲಿ 6 ಇಂಚಿನಷ್ಟು ಜಾಗವನ್ನು ಮೇಲೆ ಖಾಲಿ ಬಿಟ್ಟು ಆಸರೆ ಕೋಲನ್ನು ನೆಟ್ಟು ದಾರದಿಂದ ಕಟ್ಟಬೇಕು. 10-15 ಗ್ರಾಂ ನಷ್ಟು  ಫೋರೇಟ ಜಿ. ಮತ್ತು 25 ಗ್ರಾಂ ಗುಳಿಗೆಯನ್ನು ಸುತ್ತಲೂ ಉದುರಿಸಿ ರೋಸ್ ಕ್ಯಾನ್‍ನಿಂದ ನೀರುಣಿಸಬೇಕು. ಕಸಿ ಮಾಡಿದ ಜಾಗದಲ್ಲಿ ಅಂಟಿಕೊಂಡ ಪ್ಲಾಸ್ಟಿಕ್‍ನ್ನು ನಿಧಾನವಾಗಿ ಕಸಿ ಭಾಗಕ್ಕೆ ಹಾನಿಯಾಗದಂತೆ ತೆಗೆದು ಹಾಕಬೇಕು.  ಹೀಗೆ ನಾಟಿ ಮಾಡಿದ ಸಸಿಗಳು ಆರು ತಿಂಗಳಲ್ಲಿ ಚೆನ್ನಾಗಿ ಬೇರು ಬಿಟ್ಟು ಸಮೃದ್ಧವಾಗಿ ಬೆಳೆಯುತ್ತವೆ. 6 ತಿಂಗಳ ನಂತರ ಶಿಫಾರಿತ ಪ್ರಮಾಣದಲ್ಲಿ  ಗೊಬ್ಬರ ನೀಡಬೇಕು.
    ವಿವಿಧ ಸಸಿಗಳನ್ನು ನೆಡಲು ವಿವಿಧ ಗಾತ್ರದ ಗುಂಡಿಗಳನ್ನು ತೆಗೆಯ ಬೇಕಾಗುತ್ತದೆ. ಇದನ್ನು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ತಿಳಿದುಕೊಳ್ಳಬೇಕು.  ಬೆಳವಣಿಗೆ ಹಂತದಲ್ಲಿ ನೀರು/ಪೋಷಕಾಂಶಗಳ ನಿರ್ವಹಣೆ, ಸಸ್ಯ ಸಂರಕ್ಷಣೆ ಅತೀ ಮುಖ್ಯ.  ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖಾ ಅಧಿಕಾರಿಗಳು ಹಾಗೂ ವಿಷಯ ತಜ್ಞರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.

ಯಶಸ್ವಿ ತಂತ್ರದಿಂದ ಕೊಪ್ಪಳ ಜಿಲ್ಲೆಯಲ್ಲಿ ಶೌಚಾಲಯ ಕ್ರಾಂತಿ : ಕೀನ್ಯಾದಲ್ಲಿ ಏರ್ಪಡಿಸಿರುವ ಸಮ್ಮೇಳನದಲ್ಲಿ ಉಪನ್ಯಾಸ ನೀಡಲು ಕೊಪ್ಪಳ ಸಿಇಒ ಭಾಗಿ


ಕೊಪ್ಪಳ ಜು. 07 (ಕರ್ನಾಟಕ ವಾರ್ತೆ): ಶೌಚಾಲಯಗಳ ನಿರ್ಮಾಣ ಹಾಗೂ ಬಳಕೆ ಕುರಿತಂತೆ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಹಲವು ಬಗೆಯ ತಂತ್ರಗಳನ್ನು ಅನುಸರಿಸಿ, ರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಕೊಪ್ಪಳ ಜಿಲ್ಲೆಗೆ ಇದೀಗ ಮತ್ತೊಂದು ಗರಿ ಮೂಡಿದೆ.  ಸ್ವಚ್ಛತೆ ಮತ್ತು ಆರೋಗ್ಯ ಕುರಿತಂತೆ ಕೀನ್ಯಾ ದೇಶದಲ್ಲಿ ಜು. 09 ರಿಂದ 13 ರವರೆಗೆ ಜರುಗುವ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಯಶಸ್ವಿ ಶೌಚಾಲಯ ನಿರ್ಮಾಣ ಹಾಗೂ ಸ್ವಚ್ಛತೆಯ ಕ್ರಾಂತಿ ಕುರಿತು ವಿಶೇಷ ಉಪನ್ಯಾಸ ನೀಡಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಭಾರತ ದೇಶದ ಏಕೈಕ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.
 
     ಕೀನ್ಯಾ ದೇಶದಲ್ಲಿರುವ ಲೊಗ್‍ಬೊರೋ ವಿಶ್ವವಿದ್ಯಾಲಯದಲ್ಲಿ ಜು. 09 ರಿಂದ 13 ರವರೆಗೆ ನಡೆಯಲಿರುವ ಯುನಿಸೆಫ್‍ನ 41 ನೇ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತ ಸರ್ಕಾರದ ಪ್ರತಿನಿಧಿಯಾಗಿ ಭಾಗಿಯಾಗಲು ಕೊಪ್ಪಳ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಆಯ್ಕೆಗೊಂಡಿದ್ದು, ಕೀನ್ಯಾ ದೇಶಕ್ಕೆ ತೆರಳಲು ಸಿದ್ಧತೆ ನಡೆಸಿದ್ದಾರೆ. 
     ಯು.ಕೆ. ನ ಲೊಗ್‍ಬೊರೊ ವಿಶ್ವವಿದ್ಯಾಲಯ ಪ್ರತಿ ವರ್ಷ ಅಂತರಾಷ್ಟ್ರೀಯ ಸಮ್ಮೇಳನಗಳನ್ನು ಆಯೋಜಿಸುತ್ತದೆ.  ಈ ಬಾರಿಯ ಸಮ್ಮೇಳನ 41 ನೆಯದಾಗಿದ್ದು, ಜು. 09 ರಿಂದ 13 ರವರೆಗೆ ಐದು ದಿನಗಳ ಕಾಲ ಕೀನ್ಯಾ ದೇಶದಲ್ಲಿ ನಡೆಸಲು ಉದ್ದೇಶಿಸಿದ್ದು, ಸುಮಾರು 40 ದೇಶಗಳಿಂದ 400 ವಿವಿಧ ತಜ್ಞರು, ವಿಷಯ ಪರಿಣಿತರು ಸಮ್ಮೇಳನದಲ್ಲಿ ಭಾಗವಹಿಸಿ, ತಮ್ಮ ವಿಷಯ ಮಂಡಿಸಲಿದ್ದಾರೆ.  ಈ ಸಮ್ಮೇಳನದಲ್ಲಿ ಕೊಪ್ಪಳದಂತಹ ಹಿಂದುಳಿದ ಜಿಲ್ಲೆಯಲ್ಲಿ ಸರ್ಕಾರ ಹಾಗೂ ಆಡಳಿತ ವರ್ಗವು ಸಾರ್ವಜನಿಕರ ಸಹಭಾಗಿತ್ವದಲ್ಲಿ ಆರೋಗ್ಯ ಹಾಗೂ ಸ್ವಚ್ಛತೆಯ ಬಗ್ಗೆ ಪರಿಣಾಮಕಾರಿಯಾಗಿ ಹೇಗೆ ಜಾಗೃತಿ ಮೂಡಿಸುವಲ್ಲಿ ಯಶಸ್ಸು ಕಂಡಿದೆ, ಇದಕ್ಕೆ ಎದುರಾದ ಸವಾಲುಗಳು ಯಾವುವು, ಕೈಗೊಂಡ ಕ್ರಮಗಳೇನು ಎನ್ನುವುದರ ಕುರಿತು ಕೊಪ್ಪಳ ಸಿಇಒ ವೆಂಕಟ್‍ರಾಜಾ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
     ಶೌಚಾಲಯದ ನಿರ್ಮಾಣ ಹಾಗೂ ಅದರ ಮಹತ್ವ ಕುರಿತಂತೆ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಕೈಗೊಂಡ ಹಾಗೂ ಅನುಸರಿಸಿದ ತಂತ್ರಗಾರಿಕೆ ಅಷ್ಟಿಷ್ಟಲ್ಲ.  ಜಿಲ್ಲಾ ಪಂಚಾಯತಿಯ ಅಧ್ಯಕ್ಷರುಗಳು, ಸದಸ್ಯರು, ತಾ.ಪಂ., ಗ್ರಾ.ಪಂ. ಗಳನ್ನು ಮೊದಲುಗೊಂಡು ಎಲ್ಲ ಹಂತಗಳ ಜನಪ್ರತಿನಿಧಿಗಳು, ಅಧಿಕಾರಿಗಳು ಇಂತಹ ಜನಜಾಗೃತಿಗೆ ಸಾಕಷ್ಟು ಬೆಂಬಲಿಸಿ, ತಮ್ಮದೇ ಆದ ಕೊಡುಗೆಯನ್ನು ನೀಡಿದರು.  ಕೊಪ್ಪಳ ಜಿಲ್ಲಾ ಪಂಚಾಯತಿಯ ಅಧ್ಯಕ್ಷರ ಹುದ್ದೆಗೇರಿದ್ದ ಟಿ. ಜನಾರ್ಧನ ಹುಲಿಗಿ ಅವರು ಈ ದಿಸೆಯಲ್ಲಿ ಮುಂಚೂಣಿಯಲ್ಲಿ ನಿಂತು, ಜನಜಾಗೃತಿಗೆ ಹಲವು ಬಗೆಯ ತಂತ್ರಗಾರಿಕೆ ಅನುಸರಿಸಿದ್ದು, ರಾಷ್ಟ್ರಮಟ್ಟದಲ್ಲಿ ಕೊಪ್ಪಳ ಜಿಲ್ಲೆಯ ಹೆಸರು ಕೇಳಿ ಬರಲು ಪ್ರಾರಂಭವಾಯಿತು.  ಅವರು ಬೆಳ್ಳಂಬೆಳಿಗ್ಗೆ ಗ್ರಾಮಗಳಿಗೆ ತೆರಳಿ, ಬಯಲು ಬಹಿರ್ದೆಸೆಗೆ ಹೋಗುವವರ ಕಾಲಿಗೆರಗಿ, ದಯವಿಟ್ಟು ಬಯಲು ಶೌಚಕ್ಕೆ ಹೋಗಬೇಡಿ, ಶೌಚಾಲಯ ಕಟ್ಟಿಸಿಕೊಳ್ಳಿ, ಇದಕ್ಕೆ ಬೇಕಾದ ಅನುದಾನ ಸರ್ಕಾರವೇ ಕೊಡಲಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದು, ರಾಷ್ಟ್ರ ಮಟ್ಟದಲ್ಲಿ ಕೊಪ್ಪಳ ಜಿಲ್ಲೆಯ ಬಗ್ಗೆ ಚರ್ಚೆ ಪ್ರಾರಂಭ ಮಾಡುವಂತಾಯಿತು.  ಇದಾದ ಬಳಿಕ, ವಿಸಲ್ ಅಭಿಯಾನ ಕೂಡ ಜನ ಜಾಗೃತಿ ಮೂಡಿಸಲು ಅಷ್ಟೇ ಪರಿಣಾಮವನ್ನು ಬೀರಿತು.  ಹಿಂದುಳಿದ ಜಿಲ್ಲೆಗಳ ಪೈಕಿ ಒಂದಾದ, ಕೊಪ್ಪಳ ಜಿಲ್ಲೆಯಲ್ಲಿ ಜನರ ಮನಸ್ಥಿತಿಯನ್ನು ಬದಲಾಯಿಸಿ, ಬಯಲು ಬಹಿರ್ದೆಸೆಯನ್ನು ಸಂಪೂರ್ಣವಾಗಿ ತೊಡೆದುಹಾಕುವುದು ನಿಜಕ್ಕೂ ಸವಾಲಿನ ಸಂಗತಿ.  ಗ್ರಾಮೀಣ ಪ್ರದೇಶಗಳಲ್ಲಿ ಜನರ ಮನವೊಲಿಸಿ, ಶೌಚಾಲಯ ನಿರ್ಮಿಸಲು ಪ್ರೇರಣೆ ನೀಡುವುದಕ್ಕೆ ಹಲವು ಜನಪ್ರತಿನಿಧಿಗಳು, ನೌಕರರು, ಅಧಿಕಾರಿಗಳು ಅನೇಕ ಆಂದೋಲನಗಳನ್ನೇ ಕೈಗೊಳ್ಳಬೇಕಾಯಿತು.  ಈ ಪೈಕಿ ಶಾಲಾ ಮಕ್ಕಳಿಂದ ಪಾಲಕರಿಗೆ ಪತ್ರ ಚಳುವಳಿ, ಸುಮಾರು 12 ಸಾವಿರ ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಿಸಿ ದಾಖಲೆ ಕೈಗೊಂಡಿದ್ದು, ಮಿಷನ್ 200 ಹೆಸರಿನಲ್ಲಿ 200 ಗಂಟೆಗಳಲ್ಲಿ 20 ಸಾವಿರ ಶೌಚಾಲಯಗಳನ್ನು ನಿರ್ಮಿಸುವ ಕಠಿಣ ಸವಾಲನ್ನು ಹಾಕಿಕೊಂಡು, ಕೊಪ್ಪಳ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕೈಗೊಳ್ಳಲಾಯಿತು.  ಇವೆಲ್ಲವುಗಳ ಮಧ್ಯೆ ಗಂಗಾವತಿ ತಾಲೂಕಿನ ಢಣಾಪುರ ಗ್ರಾಮದ ವಿದ್ಯಾರ್ಥಿನಿ ಮಲ್ಲಮ್ಮ, ಶೌಚಾಲಯಕ್ಕಾಗಿ ಉಪವಾಸ ಕುಳಿತು, ಕೊನೆಗೆ ಶೌಚಾಲಯ ನಿರ್ಮಿಸಿಕೊಳ್ಳುವ ಮೂಲಕ ಹಠ ಸಾಧಿಸಿದ್ದು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಂದಲೂ ಕೂಡ ಮನ್‍ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಪ್ರಸ್ತಾಪವಾಗಿ, ಕೊಪ್ಪಳ ಜಿಲ್ಲೆಯ ಹೆಸರು, ಇಡೀ ರಾಷ್ಟ್ರ ಮಟ್ಟದಲ್ಲಿ ಮತ್ತೊಮ್ಮೆ ತೀವ್ರ ಸಂಚಲನ ಉಂಟು ಮಾಡಿತು.  ಇತ್ತೀಚೆಗಷ್ಟೇ ಕೊಪ್ಪಳ ಜಿಲ್ಲೆಯನ್ನು ಬೇಸ್ ಲೈನ್ ಸಮೀಕ್ಷೆಯನ್ವಯ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.  ಕೊಪ್ಪಳ ತಾಲೂಕಿನ ಹೊಸಳ್ಳಿ-ಹುಲಿಗಿ ಬಳಿ ನಿರ್ಮಿಸಲಾಗಿರುವ ಬಹುಗ್ರಾಮ ಘನತ್ಯಾಜ್ಯ ವಿಲೇವಾರಿ ಘಟಕ, ಇಂದು ರಾಜ್ಯದಲ್ಲಿಯೇ ಒಂದು ಮಾದರಿ ಘಟಕವಾಗಿ ರೂಪುಗೊಂಡಿದ್ದು, ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳ ಜಿಲ್ಲಾ ಪಂಚಾಯತಿಯ ಜನಪ್ರತಿನಿಧಿಗಳು ಈ ಘಟಕಕ್ಕೆ ಭೇಟಿ ನೀಡಿ, ಮೆಚ್ಚುಗೆ ವ್ಯಕ್ತಪಡಿಸಿ ಹೋಗಿದ್ದಾರೆ.  ಇತ್ತೀಚೆಗೆ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಗೃಹ ಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರು ಕೂಡ ಘಟಕಕ್ಕೆ ಭೇಟಿ ನೀಡಿ ಪ್ರಶಂಸೆ ವ್ಯಕ್ತಪಡಿಸಿದರಲ್ಲದೆ, ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಸುಮಾರು 110 ಗ್ರಾಮಗಳಿಗೆ ಇಂತಹ ಬಹುಗ್ರಾಮ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸುವ ಯೋಜನೆ ರೂಪಿಸುವುದಾಗಿ ಆಶಯ ವ್ಯಕ್ತಪಡಿಸಿದ್ದಾರೆ.
     ರಾಜ್ಯದಲ್ಲಿ ಹಲವಾರು ಮುಂದುವರಿದ ಜಿಲ್ಲೆಗಳು ಇನ್ನೂ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗಳಾಗಿ ಘೋಷಣೆಯಾಗಲು ಪರದಾಡುತ್ತಿರುವಾಗ, ಹಿಂದುಳಿದಂತಹ ಕೊಪ್ಪಳ ಜಿಲ್ಲೆ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಘೋಷಿತಗೊಂಡಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ.  ವಯಕ್ತಿಕ ಶೌಚಾಲಯಗಳ ನಿರ್ಮಾಣ, ಸ್ವಚ್ಛತೆ ಕುರಿತಂತೆ ಕೊಪ್ಪಳ ಜಿಲ್ಲೆಯಲ್ಲಿ ಕೈಗೊಂಡ ಹಲವು ಬಗೆಯ ಕಾರ್ಯಕ್ರಮಗಳು, ಆಂದೋಲನಗಳ ಕುರಿತು ರಾಷ್ಟ್ರ ಮಟ್ಟದಲ್ಲಿ ಜಿಲ್ಲೆಗೆ ಹೆಸರನ್ನು ತಂದುಕೊಟ್ಟಿದೆ.  ಅಲ್ಲದೆ ಹಲವು ಬಾರಿ ದೇಶದ ವಿವಿಧೆಡೆ ಸ್ವಚ್ಛತೆ ಹಾಗೂ ಆರೋಗ್ಯ ಕುರಿತ ಉಪನ್ಯಾಸ ಕಾರ್ಯಕ್ರಮಗಳಿಗೆ ಕೊಪ್ಪಳ ಜಿಲ್ಲೆಯ ಜಿಲ್ಲಾ ಪಂಚಾಯತಿ ಅಧಿಕಾರಿಗಳು ತೆರಳಿ, ಉಪನ್ಯಾಸ ನೀಡಿಬಂದಿದ್ದಾರೆ.  ಇದರ ಮುಂದುವರಿದ ಭಾಗವಾಗಿ, ಇದೀಗ ಕೀನ್ಯಾ ದೇಶದಲ್ಲಿ ಜು. 09 ರಿಂದ 13 ರವರೆಗೆ ಜರುಗುವ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಯಶಸ್ವಿ ಶೌಚಾಲಯ ನಿರ್ಮಾಣ ಹಾಗೂ ಸ್ವಚ್ಛತೆಯ ಕ್ರಾಂತಿ ಕುರಿತು ವಿಶೇಷ ಉಪನ್ಯಾಸ ನೀಡಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಭಾರತ ದೇಶದ ಏಕೈಕ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.  ಈ ಮೂಲಕ ಕೊಪ್ಪಳ ಜಿಲ್ಲೆಯ ಯಶೋಗಾಥೆ ವಿದೇಶಕ್ಕೂ ವ್ಯಾಪಿಸಿದಂತಾಗಿದೆ.
     ಕೀನ್ಯಾ ದೇಶದಲ್ಲಿ ಜರುಗುವ ಅಂತರರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಆರೋಗ್ಯ ಹಾಗೂ ಸ್ವಚ್ಛತೆ ಕುರಿತಂತೆ ವಿಷಯ ಮಂಡಿಸಲು ಕೀನ್ಯಾಕ್ಕೆ ತೆರಳುತ್ತಿದ್ದು, ಜು. 09 ರಿಂದ 13 ರವರೆಗೆ ಐದು ದಿನಗಳ ಕಾಲ ಸಮ್ಮೇಳನ ನಡೆಯಲಿದೆ.  ವಿವಿಧ ದೇಶಗಳ ಜನರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.  ಅಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಯಶೋಗಾಥೆ ಹಾಗೂ ಎದುರಾದ ಸಮಸ್ಯೆಗಳ ಕುರಿತು ವಿವರಣೆ ನೀಡಲು ಸಿದ್ದತೆ ಕೈಗೊಂಡಿದ್ದೇನೆ ಎನ್ನುತ್ತಾರೆ ಕೊಪ್ಪಳ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್‍ರಾಜಾ ಅವರು.

ಹುಲಿಗಿ : ಕೃಷಿ ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿ



ಕೊಪ್ಪಳ ಜು. 07 (ಕರ್ನಾಟಕ ವಾರ್ತೆ): ಕೊಪ್ಪಳ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ "ಕೃಷಿ ಅಭಿಯಾನ" ಕಾರ್ಯಕ್ರಮದ ಸಮಾರೋಪ ಸಮಾರಂಭವು ಶನಿವಾರದಂದು ಹುಲಿಗಿ ಗ್ರಾಮದಲ್ಲಿ ಯಶಸ್ವಿಯಾಗಿ ಜರುಗಿತು. 

    ತಾಲೂಕ ಪಂಚಾಯತ್ ಸದಸ್ಯ ವೆಂಕಪ್ಪ ಹೊಸಳ್ಳಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.  ಕೃಷಿ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥರಾದ ಡಾ. ಎಂ.ಬಿ ಪಾಟೀಲ ಅವರು ಸಮಗ್ರ ಕೃಷಿ ಪದ್ಧತಿ ಹಾಗೂ ಭತ್ತದಲ್ಲಿ ನೀರಿನ ಸಮರ್ಪಕ ನಿರ್ವಹಣೆ ಕುರಿತು, ಸಹಾಯಕ ಕೃಷಿ ನಿರ್ದೇಶಕ ತುಕಾರಾಮ ಎನ್., ರೇಷ್ಮೆ ಇಲಾಖೆ ಅಧಿಕಾರಿ ದೇವೆಂದರ್ರ ಕುಮಾರ ಅವರು ತಮ್ಮ ತಮ್ಮ ಇಲಾಖೆಯ ಕಾರ್ಯಕ್ರಮ, ಅನುಷ್ಠಾನಗಳ ವಿವರಿಸಿ ಮತ್ತು ಅದರ ಪ್ರಯೋಜನೆಗಳನ್ನು ಪಡೆದುಕೊಳ್ಳುವಂತೆ ರೈತರಿಗೆ ಸಲಹೆ ನೀಡಿದರು.  ಕೃಷಿ ವಿಸ್ತರಣಾ ಘಟಕದ ತೋಟಗಾರಿಕಾ ಬೆಳೆಗಳ ವಿಷಯತಜ್ಞರಾದ ಡಾ. ಪ್ರದೀಪ ಬಿರಾದರ್ ಅವರು ರೈತರಿಗೆ ತೋಟಗಾರಿಕಾ ಬೆಳೆಗಳ ಬಗ್ಗೆ ತಿಳಿಸಿದರು.  ಪ್ರಗತಿಪರ ರೈತರಾದ ಕಾಶಿಮಲಿ ಸಾಬ ಮತ್ತು ಹುಸೆನಪೀರ ಜವಳಿ ಅವರು ರೈತರಿಗೆ ಇಲಾಖೆಗಳಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಲು ಸಲಹೆ ನೀಡಿದರು. 


    ಕಾರ್ಯಕ್ರಮದಲ್ಲಿ ಎನ್.ಎಫ್.ಎಸ್.ಎಮ್ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಶಶಿಕುಮಾರ, ರೈತ ಅನುವುಗಾರರಾದ ಹನುಮೇಶ, ಮಂಜುನಾಥ ಮತ್ತು ಬೀರಪ್ಪ ಉಪಸ್ಥಿತರಿದ್ದರು.  ಎನ್.ಎಫ್.ಎಸ್.ಎಂ ತಾಂತ್ರಿಕ ಸಹಾಯಕ ಮಾರುತಿ ಪೂಜಾರ ಕಾರ್ಯಕ್ರಮ ನಿರೂಪಿಸಿದರು, ಹಿಟ್ನಾಳ (ಹುಲಿಗಿ) ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಕೆ. ವಿದ್ಯಾಧರ ಅವರು ಕೊನೆಯಲ್ಲಿ ವಂದಿಸಿದರು. 

ಖಾಸಗಿ ವಾಹನಗಳ ಮೇಲೆ ಕರ್ನಾಟಕ ಸರ್ಕಾರ ಎಂದು ಬರೆಸುವಂತಿಲ್ಲ : ಎಂ. ಕನಗವಲ್ಲಿ


ಕೊಪ್ಪಳ ಜು. 07 (ಕರ್ನಾಟಕ ವಾರ್ತೆ): ಖಾಸಗಿ ವಾಹನಗಳ ಮೇಲೆ "ಕರ್ನಾಟಕ ಸರ್ಕಾರ", Government of Karnataka ಎಂದು ಫಲಕದ ಮೇಲೆ ಅಥವಾ ವಾಹನದ ಮೇಲೆ ಅಳವಡಿಸಿರುವುದನ್ನು ತೆಗೆದು ಹಾಕುವಂತೆ ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದ್ದಾರೆ.   
    ಸರ್ಕಾರದ ಸುತ್ತೋಲೆ ಅನ್ವಯ ಹಾಗೂ ಸಾರಿಗೆ ಇಲಾಖೆಯ ಸೂಚನೆಯಂತೆ ಕರ್ನಾಟಕ ಮೋಟರ್ ವಾಹನ ನಿಯಮವಳಿಗಳು 1989 ನಿಯಮ 145ಎ ರ ನಿಯಮದನ್ವಯ ಖಾಸಗಿ ವಾಹನಗಳ ಮೇಲೆ ಈ ರೀತಿಯ ಬರಹಗಳನ್ನು ಅಳವಡಿಸಿರುವುದನ್ನೆ ತೆಗೆದುಹಾಕಬೇಕು.  ಕೊಪ್ಪಳ ಜಿಲ್ಲೆಯ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ಸರ್ಕಾರಿ ಕಛೇರಿಗಳಿಗೆ ಹೊರ ಗುತ್ತಿಗೆ ಆಧಾರದ ಮೇರೆಗೆ ಪಡೆದ ಖಾಸಗಿ ವಾಹನಗಳ ಮೇಲೆ ‘ಕರ್ನಾಟಕ ಸರ್ಕಾರ’/ ‘ಸರ್ಕಾರದ ಸೇವೆಯಲ್ಲಿ’, ‘ಸರ್ಕಾರಿ ಕರ್ತವ್ಯದ ಮೇರೆಗೆ’ ಎಂಬುದಾಗಿ ಅಥವಾ ಇಂಗ್ಲೀಷ್ ಭಾಷೆಯಲ್ಲಿ  Government of Karnataka,  On Government Duty, On Special Duty,  Government of India, Government Of India Undertaking,  Government of Karnataka Undertaking      ಎಂದು ಅಳವಡಿಸಿರುವ ಬರಹಗಳನ್ನು ಕೂಡಲೇ ತೆಗೆದು ಹಾಕಲು ಆದೇಶಿಸಲಾಗಿದೆ.  ತಪ್ಪಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಎಚ್ಚರಿಕೆ ನೀಡಿದ್ದಾರೆ. 

Friday, 6 July 2018

ಜು. 14 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್


ಕೊಪ್ಪಳ ಜು. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು "ರಾಷ್ಟ್ರೀಯ ಲೋಕ್ ಅದಾಲತ್" ಕಾರ್ಯಕ್ರಮವನ್ನು ಜು. 14 ರಂದು ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಆದೇಶದ ಮೇರಗೆ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಈಗಾಗಲೆ ಖಾಯಂ ಸದಸ್ಯ ಕಾರ್ಯದರ್ಶಿಗಳ ಸ್ಥಾನವನ್ನು ಹೊಂದಿ ಕಾರ್ಯನಿರ್ವಹಿಸುತ್ತಿದೆ.  ನ್ಯಾಯಾಧೀಶರಾದ ಟಿ. ಶ್ರೀನಿವಾಸ್ ಅವರು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.    ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪಾಧಿಕಾರ ಇವರ ನಿರ್ದೇಶನದ ಮೇರಗೆ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ನ್ಯಾಯಾಲಯಕ್ಕೆ ಇನ್ನೂ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಅಂತಾ ಪರಿಗಣಿಸಿ ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮೀನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಜು. 14 ರಂದು ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಏರ್ಪಡಿಸಿಕೊಳ್ಳಲಾಗಿದೆ.  ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕಲಕರ್ಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು


ಕೊಪ್ಪಳ ಜು. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಗ್ರಾಮದ ಅಪ್ರಾಪ್ತೆಯ ಬಾಲ್ಯ ವಿವಾಹವೊಂದನ್ನು ತಡೆದು, ಬಾಲಕಿಯನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಗ್ರಾಮದ ಬಾಲಕಿಯನ್ನು ಅದೇ ಗ್ರಾಮದ ವರನೊಂದಿಗೆ ಗಂಗಾವತಿ ತಾಲೂಕಿನ ಮುಸ್ಟೂರು ಗ್ರಾಮದ ಉಧ್ಬವ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿವಾಹ ಮಾಡಲಾಗುತ್ತಿದ್ದು, ಬಾಲಕಿಗೆ ಸುಮಾರು 15 ವರ್ಷ ಇದ್ದು ಅವಳು ಅಪ್ರಾಪ್ತ ವಯಸ್ಕಳಾಗಿದ್ದಾಳೆ.  ಆದ್ದರಿಂದ ಈ ಬಾಲ್ಯವಿವಾಹನ್ನು ತಡೆಗಟ್ಟಿ ಎಂಬ ಮಾಹಿತಿ/ ವಿನಂತಿಯು ಗಂಗಾವತಿ ಗ್ರಾಮೀಣ ಪೋಲಿಸ್ ಠಾಣೆಗೆ ಬಂದ ಹಿನ್ನೆಲೆಯಲ್ಲಿ ಗಂಗಾವತಿ ಗ್ರಾಮೀಣ ಪೋಲಿಸ್ ಠಾಣೆಯ ಮಹಿಳಾ ಎ.ಎಸ್.ಐ ಶೈನಜಾ ಬೇಗಂ, ಠಾಣೆಯ ಅಧಿಕಾರಿಗಳಾದ ಮಹಾದೇವಿ, ಈರಪ್ಪ ಎಚ್.ಸಿ. ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆ ಯಮನಮ್ಮ ಒಳಗೊಂಡ ತಂಡವು ವಿವಾಹ ದಿನದಂದು ರಾತ್ರಿ 10-30 ಸುಮಾರಿಗೆ ಸ್ಥಳಕ್ಕೆ ಧಾವಿಸಿದ್ದಾರೆ.  ಸ್ಥಳದಲ್ಲಿ ಬಾಲಕಿ ಕಂಡುಬರದ ಕಾರಣ, ಮಕ್ಕಳ ಕಲ್ಯಾಣ ಸಮಿತಿಯು ಅಲ್ಲಿಯೇ ಕಾಯುತ್ತಿರುವಾಗ  ಮಧ್ಯರಾತ್ರಿ 2-30 ರ ಸುಮಾರಿಗೆ ಬಾಲಕಿಯೊಂದಿಗೆ ಎರಡು ಟಂಟಂ ವಾಹನದಲ್ಲಿ ವರ ಮತ್ತು ಅವರ ಇತರೆ ಸಂಬಂಧಿಕರು ವಿವಾಹಕ್ಕೆ ಆಗಮಿಸಿದ್ದು, ಬಾಲಕಿಗೆ 16 ವರ್ಷ ವಯಸ್ಸು ಎಂದು ತಿಳಿದು ಬಂದಿದ್ದು, ಬಾಲಕಿಗೆ 18 ವರ್ಷ ಪೂರ್ಣಗೊಳ್ಳದ ಕಾರಣ ಬಾಲಕಿಯನ್ನು ವಶಕ್ಕೆ ಪಡೆದು ಮುಂದಿನ ಆರೈಕೆ ಮತ್ತು ಪೋಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ದಾಖಲಿಸಲಾಗಿದೆ.
ಬಾಲ್ಯ ವಿವಾಹ ಮಾಡುವುದು, ವಿವಾಹದಲ್ಲಿ ಪಾಲ್ಗೊಳ್ಳುವುದು ಕೂಡ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜು. 18 ರಂದು ಜಿ.ಪಂ ಮಾಸಿಕ ಕೆ.ಡಿ.ಪಿ ಸಭೆ


ಕೊಪ್ಪಳ ಜು. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತಿ ಮಾಸಿಕ ಕೆ.ಡಿ.ಪಿ. (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆ ಜು. 18 ರಂದು ಬೆಳಿಗ್ಗೆ 10 ಗಂಟೆಗೆ ಜಿ.ಪಂ. ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದೆ.
    ಸಭೆಯ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ವಹಿಸುವರು.  ಜೂನ್ ಅಂತ್ಯಕ್ಕೆ ಸಾಧಿಸಿದ ಪ್ರಗತಿಯ ಮಾಹಿತಿಯೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಹಾಜರಾಗಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. ದೇವರಾಜ ಅರಸು ನಿಗಮದಡಿ ವಿವಿಧ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಜು. 06 (ಕರ್ನಾಟಕ ವಾರ್ತೆ): ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕೊಪ್ಪಳ, ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಸಾಲ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗದ ಜನರ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಲಾಗಿರುವ ವಿವಿಧ ಸಾಲ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಸರ್ಕಾರದ ಯೋಜನೆಗಳ ವಿವರ ಇಂತಿದೆ. 
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ : ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಜನರ ಸ್ವಯಂ ಉದ್ಯೋಗಕ್ಕೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಚಟುವಟಿಕೆ ಅನುಸಾರ ಗರಿಷ್ಠ ರೂ. 2 ಲಕ್ಷಗಳ ವರೆಗೆ ಆರ್ಥಿಕ ನೆರವು.  ಇದರಲ್ಲಿ, ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ.
ಕಿರುಸಾಲ ಯೋಜನೆ : ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಸ್ವ-ಸಹಾಯ ಗುಂಪುಗಳ ಸದಸ್ಯರು ಕೈಗೊಳ್ಳುವ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರದ ಚಟುವಟಿಕೆಗಳಿಗೆ ಅಂದರೆ, ಹಣ್ಣು, ತರಕಾರಿ, ಹಾಲು, ಹೂ ಮಾರುವವರು, ತಳ್ಳುವ ಗಾಡಿ ವ್ಯಾಪಾರಿಗಳು ಮುಂತಾದ ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳಿಗೆ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಗರಿಷ್ಠ ರೂ. 10 ಸಾವಿರ ಸಾಲ ಹಾಗೂ ರೂ. 5 ಸಾವಿರಗಳ ಸಹಾಯಧನ ಸೌಲಭ್ಯ ನೀಡಲಾಗುವುದು.  ಅರ್ಜಿದಾರರು ಬಿಪಿಎಲ್ ಕುಟುಂಬಕ್ಕೆ ಸೇರಿರಬೇಕು ಹಾಗೂ ಸರ್ಕಾರಿ/ ಅರೆ ಸರ್ಕಾರಿ ಉದ್ಯೋಗದಲ್ಲಿ ಇರಬಾರದು. 
ಸಾಂಪ್ರದಾಯಿಕ ಕಾರ್ಯಗಳಿಗೆ ಸಾಲ ಮತ್ತು ಸಹಾಯಧನ : ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಮತ್ತು ಸಹಾಯಧನ ವದಗಿಸಲಾಗುತ್ತಿದ್ದು, ವಿವರ ಇಂತಿದೆ.  ಹಿಂದುಳಿದ ವರ್ಗಗಳ ಸಾಂಪ್ರದಾಯಿಕ ವೃತ್ತಿದಾರರು ಅಥವಾ ವೃತ್ತಿ ಕಸುಬುದಾರರು ತಮ್ಮ ವೃತ್ತಿಯ ಅಭಿವೃದ್ಧಿಗಾಗಿ, ಆಧುನಿಕ ಉಪಕರಣಗಳನ್ನು ಖರೀದಿಸಲು, ತಾಂತ್ರಿಕತೆಯನ್ನು ಮೇಲ್ದರ್ಜೆಗೇರಿಸಲು, ವೃತ್ತಿ ಅನುಸಾರ ಗರಿಷ್ಠ ರೂ. 2 ಲಕ್ಷಗಳ ವರೆಗೆ ಆರ್ಥಿಕ ನೆರವು.  ಇದರಲ್ಲಿ ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ಶೇ.2ರ ಬಡ್ಡಿದರದಲ್ಲಿ ಸಾಲ. 
ಬಡ್ಡಿರಹಿತ ಸಾಲ ಯೋಜನೆ : ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಯೋಜನೆ.  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಗಳಾದ ಪೋಸ್ಟ್‍ಡಾಕ್ಟ್ರಲ್, ಪಿ.ಹೆಚ್.ಡಿ., ಮಾಸ್ಟರ್ ಡಿಗ್ರಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ವಾರ್ಷಿಕ ರೂ. 3.50 ಲಕ್ಷಗಳಂತೆ, ಮೂರು ವರ್ಷಗಳ ಕೋರ್ಸ್‍ನ ಅವಧಿಗೆ, ಗರಿಷ್ಠ ರೂ. 10 ಲಕ್ಷಗಳ ಬಡ್ಡಿರಹಿತ ಸಾಲ ಮಂಜೂರು.  ಅರ್ಜಿದಾರರು ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿರಬೇಕು.  ವಾರ್ಷಿಕ ವರಮಾನ ರೂ. 3.50 ಲಕ್ಷಕ್ಕೆ ಮೀರಿರಬಾರದು ಹಾಗೂ ಅರ್ಹತಾ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕಗಳಿಸಿರಬೇಕು. 
ಗಂಗಾ ಕಲ್ಯಾಣ :  ಈ ಯೋಜನೆಯಲ್ಲಿ ವೈಯಕ್ತಿಕ ಕೊಳವೆಬಾವಿ ಯೋಜನೆ ಹಾಗೂ ಸಾಮೂಹಿಕ ನೀರಾವರಿ ಯೋಜನೆ ಸೌಲಭ್ಯ ನೀಡಲಾಗಿದೆ.  ವೈಯಕ್ತಿಕ ಕೊಳವೆಬಾವಿ ಯೋಜನೆಯಡಿ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್‍ಸೆಟ್ಟು, ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.  ಘಟಕ ವೆಚ್ಚ ರೂ. 2.50 ಲಕ್ಷಗಳಲ್ಲಿ ರೂ. 2 ಲಕ್ಷಗಳ ಸಹಾಯಧನ ಹಾಗೂ ರೂ. 50 ಸಾವಿರಗಳ ಶೇ.4ರ ಬಡ್ಡಿದರದಲ್ಲಿ ಸಾಲ.
    ಸಾಮೂಹಿಕ ನೀರಾವರಿ ಯೋಜನೆಯಡಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.  ಕನಿಷ್ಠ 3 ಜನರು ಹೊಂದಿರುವ 8 ರಿಂದ 15 ಎಕರೆ ಜಮೀನಿಗೆ ರೂ. 4 ಲಕ್ಷಗಳ ವೆಚ್ಚದಲ್ಲಿ ಎರಡು ಕೊಳವೆ ಬಾವಿ, 15 ಎಕರೆಗಿಂತ ಹೆಚ್ಚಿನ ಜಮೀನಿಗೆ ರೂ. 6 ಲಕ್ಷಗಳ ವೆಚ್ಚದಲ್ಲಿ ಮೂರು ಕೊಳವೆ ಬಾವಿ ಕೊರೆಯಿಸಿ ಪಂಪ್ ಸೇಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡಿ ನೀರಾವರಿ ಸೌಲಭ್ಯ ವಿದ್ಯುದೀಕರಣಕ್ಕೆ ಪ್ರತಿ ಕೊಳವೆ ಬಾವಿಗೆ ರೂ. 50 ಸಾವಿರಗಳನ್ನು ವಿದ್ಯುತ್ ಸರಬರಾಜು ಕಂಪನಿಗೆ ಪಾವತಿಸಲಾಗುವುದು.  ಮಲೆನಾಡು ಪ್ರದೇಶಗಳಲ್ಲಿ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚದಲ್ಲಿ ತೆರೆದ ಬಾವಿಗಳ ಮಂಜೂರು.  ಭೂ ಮಟ್ಟದಲ್ಲಿ ದೊರೆಯುವ ನದಿ ಮತ್ತು ಜಲಾಶಯಗಳ ನೀರಾವರಿ ಸಂಪನ್ಮೂಲಗಳಿಂದ ಏತ ನಿರಾವರಿ ಮೂಲಕ ನೀರಾವರಿ ಸೌಲಭ್ಯ.
    ಅರ್ಜಿಯನ್ನು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ತಾಲೂಕಿ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಅಥವಾ ನಿಗಮದ ವೆಬ್ ಸೈಟ್    www.karnataka.gov.in/dbcdc  ನಲ್ಲಿ ಜು. 16 ರೊಳಗೆ ಪಡೆಯಬೇಕು.  ಭರ್ತಿಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜು. 31 ರೊಳಗಾಗಿ ಸಲ್ಲಿಸಬೇಕು.  ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.  ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್‍ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಸಲ್ ಭೀಮಾ ಯೋಜನೆ ಮುಂಗಾರು ಹಂಗಾಮು : ರೈತರು ಬೆಳೆವಿಮೆ ನೊಂದಾಯಿಸಿಕೊಳ್ಳಿ


ಕೊಪ್ಪಳ ಜು. 06 (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ನೊಂದಾಯಿಸಿಕೊಳ್ಳುವಂತೆ ಕೊಪ್ಪಳ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
        ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಬೆಳೆಗಳಿಗೆ ವಿಮೆ ನೊಂದಾಯಿಸುವ ಬೆಳೆಗಳ ವಿವರ ಇಂತಿದೆ.  ನೀರಾವರಿ ಹತ್ತಿ ಹಾಗೂ ಮಳೆ ಆಶ್ರಿತ ಹೆಸರು, ಈ ಬೆಳೆಗಳಿಗೆ ಬೆಳೆವಿಮೆ ನೊಂದಾಯಿಸಲು ಜು. 16 ಕೊನೆಯ ದಿನವಾಗಿದೆ.  ಮಳೆ ಆಶ್ರಿತ ಮತ್ತು ನೀರಾವರಿ ಭತ್ತ, ಜೋಳ, ಮುಸುಕಿನ ಜೋಳ, ಸಜ್ಜೆ ಹಾಗೂ ಸೂರ್ಯಕಾಂತಿ, ಮಳೆ ಆಶ್ರಿತ ಅಲಸಂದಿ ಹಾಗೂ ನವಣೆ, ಮಳೆ ಆಶ್ರಿತ ಮತ್ತು ನೀರಾವರಿ ತೊಗರಿ, ಮಳೆ ಆಶ್ರಿತ ಹುರಳಿ ಹಾಗೂ ಎಳ್ಳು,  ಮಳೆ ಆಶ್ರಿತ ಮತ್ತು ನೀರಾವರಿ ನೆಲಗಡಲೆ (ಶೇಂಗಾ), ಮಳೆ ಆಶ್ರಿತ ಹತ್ತಿ, ಮಳೆ ಆಶ್ರಿತ ಮತ್ತು ನೀರಾವರಿ ಈರುಳ್ಳಿ ಮತ್ತು ಟೊಮೆಟೊ, ಈ ಬೆಳೆಗಳಿಗೆ ಬೆಳೆವಿಮೆ ನೊಂದಾಯಿಸಲು ಜುಲೈ. 31 ಕೊನೆಯ ದಿನವಾಗಿದ್ದು, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಎಲ್ಲಾ ವರ್ಗದ ರೈತರು ಬೆಳೆವಿಮೆ ಪ್ರೀಮಿಯಂ ತುಂಬಿ ಯೋಜನೆಯ ಪ್ರಯೋಜನೆ ಪಡೆಯಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರಿ ಇಲಾಖೆ, ಸ್ಥಳೀಯ ವಾಣಿಜ್ಯ ಗ್ರಾಮೀಣ ಬ್ಯಾಂಕ್ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ : ಅರ್ಜಿ ಆಹ್ವಾನ


ಕೊಪ್ಪಳ ಜು. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಯೋಜನೆಯಡಿ ದ್ವಿತೀಯ ಪಿಯುಸಿ ಓದುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದಡಿ ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ) ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ಯೋಜನೆಯಡಿ ಅರ್ಜಿ ಸಲ್ಲಿಸಲು ಜು. 16 ಕೊನೆಯ ದಿನವಾಗಿದೆ.  ಆಸಕ್ತರು ಅರ್ಜಿಯನ್ನು ಆಯಾ ತಾಲೂಕ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಂದ ಪಡೆದು ಭರ್ತಿ ಮಾಡಿ, ತಾಲೂಕ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಯಲಬುರ್ಗಾ, ಗಂಗಾವತಿ, ಕುಷ್ಟಗಿ ಕಛೇರಿಯಲ್ಲಿ ಅಥವಾ ಎ.ಜೆ. ಎಸ್.ಕೆ ಸೊಸೈಟಿ (ದದೇಗಲ್) ಎನ್.ಹೆಚ್-63, ಕೊಪ್ಪಳ ಹಾಗೂ ಎಸಿಸಿಪಿಎಲ್ ಟ್ರೈನಿಂಗ್ ಡಿವಿಜೆನ್ (ಸ್ಮಾರ್ಟ್ ಕರಿಯರ್ ಅಕಾಡೆಮಿ, ವರ್ಣೇಕರ್ ಕಾಂಪ್ಲೇಕ್ಸ್, 2ನೇ ಮಹಡಿ, ಬಸ್ ಸ್ಯಾಂಡ್ ಎದರುಗಡೆ, ಕೊಪ್ಪಳ) ಕ್ಕೆ ಸಲ್ಲಿಸಬೇಕು.  ವೆಬ್‍ಸೈಟ್‍ನಲ್ಲಿ   http://dom.karnataka.gov.in/koppal ನಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ


ಕೊಪ್ಪಳ ಜು. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 
    2017-18 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ90% ಅದಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಕ್ರಮವಾಗಿ ರೂ.10000/- ಮತ್ತು ರೂ.20000/-ಗಳ ಪ್ರೋತ್ಸಾಹಧನ ನೀಡಲಾಗುವುದು.  ಅರ್ಜಿ ಸಲ್ಲಿಸಲು ಆಗಸ್ಟ್. 05 ಕೊನೆಯ ದಿನವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ವೆಬ್‍ಸೈಟ್  https://gokdom.kar.nic.in  ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಆಡಳಿತ ಭವನ, ಕೊಪ್ಪಳ ದೂರವಾಣಿ ಸಂಖ್ಯೆ: 08539-225070 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಲಬುರ್ಗಾ : ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಜು. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಯಲಬುರ್ಗಾ ಪಟ್ಟಣ ಪಂಚಾಯತ್ ವತಿಯಿಂದ ಪ್ರಸಕ್ತ ಸಾಲಿನ ದೀನ್‍ದಯಾಳ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಹಾಗೂ ಸ್ವ-ಸಹಾಯ ಗುಂಪಿಗೆ ಮತ್ತು ವಿವಿಧ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
    ಯೋಜನೆಯಡಿ ಯಲಬುರ್ಗಾ ಪಟ್ಟಣ ಪಂಚಾಯತ್‍ಯಿಂದ ಸ್ವಂತ ಉದ್ಯೋಗಕ್ಕಾಗಿ ಸಾಲ ಸೌಲಭ್ಯಕ್ಕಾಗಿ 4 ಜನ ಫಲಾನುಭವಿಗಳಿಗೆ ಮತ್ತು ಸ್ವ-ಸಹಾಯ ಗುಂಪಿಗೆ 1, ಹಾಗೂ ಸ್ವ-ಸಹಾಯ 3, ಗುಂಪಿಗೆ ಕ್ರೇಡಿಟ್ ಲಿಂಕೇಜ್ 5, ಸ್ವ-ಸಹಾಯ ಸಂಘಗಳ ರಚನೆ ಹಾಗೂ ವಿವಿಧ ತರಬೇತಿಗಾಗಿ 24 ಗುರಿಯನ್ನು ನಿಗದಿ ಪಡಿಸಲಾಗಿದ್ದು, ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು.  ಆಸಕ್ತರು ಅರ್ಜಿಯನ್ನು ಪ.ಪಂ. ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿ, ಜಾತಿ, ಆದಾಯ, ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಮತದಾರರ ಭಾವಚಿತ್ರ ವಿರುವ ಕಾರ್ಡ್, ಬಿ.ಪಿ.ಎಲ್. ರೇಶನ್ ಕಾರ್ಡ್, 2 ಭಾವಚಿತ್ರ ಹಾಗೂ ಆಧಾರ ಕಾರ್ಡ್, ಈ ಎಲ್ಲಾ ದಾಖಲೆಗಳನ್ನು ಕಡ್ಡಾಯವಾಗಿ ದೃಢೀಕರಿಸಿ ಲಗತ್ತಿಸಿ, ದ್ವಿ ಪ್ರತಿಯಲ್ಲಿ ಜು. 20 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ವೇಳೆಯಲ್ಲಿ ವಿಷಯ ನಿರ್ವಾಹಕರ ಹತ್ತಿರ ಪಡೆಯಬಹುದಾಗಿದೆ ಎಂದು  ಯಲಬುರ್ಗಾ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Thursday, 5 July 2018

ಬಜೆಟ್‍ನಲ್ಲಿ ಕೊಪ್ಪಳ ಜಿಲ್ಲೆಗೆ ಬಂಪರ್ ಕೊಡುಗೆ : ಕೃಷಿ ಅಭಿವೃದ್ಧಿಗೆ ಇಸ್ರೇಲ್ ಮಾದರಿ ನೀರಾವರಿ, ಆಟಿಕೆ ತಯಾರಿಕಾ ಕ್ಲಸ್ಟರ್ ಸ್ಥಾಪನೆ, 450 ಹಾಸಿಗೆ ಆಸ್ಪತ್ರೆ


ಕೊಪ್ಪಳ ಜು.05 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರದಂದು ಮಂಡಿಸಿರುವ ಬಜೆಟ್‍ನಲ್ಲಿ ಕೊಪ್ಪಳ ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ್ದು, ಕೊಪ್ಪಳ ಜಿಲ್ಲೆಯಲ್ಲಿ 5000 ಹೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಇಸ್ರೇಲ್ ಮಾದರಿಯಲ್ಲಿ ನೀರಾವರಿ ಸೌಲಭ್ಯ.  ಜಿಲ್ಲೆಯಲ್ಲಿ ಆಟಿಕೆ ತಯಾರಿಕಾ ಕ್ಲಸ್ಟರ್ ಸ್ಥಾಪನೆ ಹಾಗೂ ಕಿಮ್ಸ್‍ಗೆ 450 ಹಾಸಿಗೆ ಆಸ್ಪತ್ರೆ ನಿರ್ಮಾಣದ ಘೋಷಣೆ ಮಾಡಿದ್ದಾರೆ. 
     ವಿಧಾನಸಭೆಯಲ್ಲಿಂದು 2018-19ನೇ ಸಾಲಿನ ರಾಜ್ಯದ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ  ಕೊಪ್ಪಳ, ಕೋಲಾರ, ಚಿತ್ರದುರ್ಗ ಮತ್ತು ಗದಗ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ತಲಾ ಐದು ಸಾವಿರ ಹೆಕ್ಟೇರ್ ಖುಷ್ಕಿ ಜಮೀನಿನಲ್ಲಿ ಇಸ್ರೇಲ್ ಮಾದರಿ ನೀರಾವರಿ ಸೌಲಭ್ಯ ಒದಗಿಸಲು 150 ಕೋಟಿ ರೂ. ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.
     ಕೊಪ್ಪಳ, ಗದಗ, ಚಾಮರಾಜನಗರ, ಮತ್ತು ಹಾಸನ ನಗರಗಳ ವೈದ್ಯಕೀಯ ಕಾಲೇಜುಗಳಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ನಿರ್ಮಾಣಕ್ಕೆ 200 ಕೋಟಿ ರೂ. ಒದಗಿಸಲಾಗಿದೆ. 
     ಪ್ರಸ್ತುತ ದೇಸಿ ಆಟಿಕೆಗಳನ್ನು ಸಣ್ಣ ಸಣ್ಣ ಉದ್ಯಮಗಳು ತಯಾರಿಸುತ್ತಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಬ್ಯಾಟರಿ ಮತ್ತು ವಿದ್ಯುತ್ ಚಾಲಿತ ಆಟಿಕೆಗಳು ಮಾರುಕಟ್ಟೆಗೆ ಬಂದಿದ್ದು, ಅವುಗಳಲ್ಲಿ

ICB, Chip, Micro DC Motor ಗಳನ್ನುಅಳವಡಿಸಿರುತ್ತಾರೆ. ಇಂತಹ ಆಟಿಕೆಗಳಿಗೆ ಜಾಗತಿಕವಾಗಿ  ಮಾರುಕಟ್ಟೆ ಇದೆ.  ಚೀನಾ ದೇಶದಲ್ಲಿ ಯಾಂತ್ರಿಕ ಆಟಿಕೆಗಳು ತಯಾರಾಗಿ ಇಡೀ ಪ್ರಪಂಚಕ್ಕೆ ಸರಬರಾಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚೀನಾ ಆಟಿಕೆಗಳಿಗೆ ಸವಾಲೊಡ್ಡುವಂತೆ ಕೊಪ್ಪಳ ಜಿಲ್ಲೆಯಲ್ಲಿ, ಆಟಿಕೆ ತಯಾರಿಕಾ ಕ್ಲಸ್ಟರ್‍ಗಳನ್ನು ಹುಟ್ಟುಹಾಕಲು ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗಿದೆ.
     ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯವನ್ನು ತ್ವರಿತ ಗತಿಯಲ್ಲಿ ಕೈಗೆತ್ತಿಕೊಳ್ಳಲಾಗುವುದು ಹಾಗೂ ಆಲಮಟ್ಟಿ ಜಲಾಶಯದಲ್ಲಿ ಹೆಚ್ಚುವರಿ ನೀರು ಸಂಗ್ರಹಣೆ ಮಾಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
     ಬಡಜನರು ವೃದ್ಧಾಪ್ಯದಲ್ಲಿ ತೊಂದರೆ ಅನುಭವಿಸಬಾರದು ಎನ್ನುವುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಪ್ರಸ್ತುತ ಸಂಧ್ಯಾ ಸುರಕ್ಷಾ ಯೋಜನೆಯಡಿಯಲ್ಲಿ ಫಲಾನುಭವಿಗಳು ಪಡೆಯುತ್ತಿರುವ 600 ರೂ.ಗಳ ಮಾಸಾಶನವನ್ನು 1000 ರೂ.ಗಳಿಗೆ ಹೆಚ್ಚಿಸಿ, 1ನೇ ನವೆಂಬರ್ 2018ರಿಂದ ಜಾರಿಗೊಳಿಸಲಾಗುವುದು. ಇದರಿಂದಾಗಿ 65 ವರ್ಷ ಮೀರಿದ 32.92 ಲಕ್ಷ ವೃದ್ಧರು ಆರ್ಥಿಕ ಪ್ರಯೋಜನ ಪಡೆಯಲಿದ್ದಾರೆ.
     ಧಾರ್ಮಿಕ ಪರಂಪರೆಯ ಮೇರು ವ್ಯಕ್ತಿಗಳಾದ ಆದಿ ಶಂಕರಾಚಾರ್ಯರ ಜಯಂತಿ ರಾಜ್ಯಾದ್ಯಂತ ಆಚರಿಸುವುದಾಗಿ ಘೋಷಣೆ.
     ಒಟ್ಟಾರೆ 2,18,488 ಕೋಟಿ ರೂ.ಗಳ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಮೊದಲ ಹಂತದಲ್ಲಿ 31-12-2017ರವರೆಗೆ ರೈತರು ಮಾಡಿದ ಎಲ್ಲ ಸುಸ್ತಿ ಬೆಳೆಸಾಲ ಒಂದೇ ಹಂತದಲ್ಲಿ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಸಕಾಲದಲ್ಲಿ ಸಾಲ ಮರುಪಾವತಿ ಮಾಡಿರುವ ಸುಸ್ತಿದಾರರಲ್ಲದ ರೈತರ ಪ್ರತಿ ಸಾಲ ಖಾತೆಗೆ ಮಾರುಪಾತಿ ಮಾಡಿರುವ ಸಾಲದ ಮೊತ್ತ ಅಥವಾ 25 ಸಾವಿರ ರೂ.ಗಳಲ್ಲಿ ಯಾವುದೇ ಕಡಿಮೆ ಅದನ್ನು ತುಂಬಲು ತೀರ್ಮಾನಿಸುವುದಾಗಿ ಘೋಷಿಸಿದ್ದಾರೆ. ಸಾಲದ ಮೊತ್ತವನ್ನು ಪ್ರತಿ ರೈತ ಕುಟುಂಬಕ್ಕೆ 2 ಲಕ್ಷ ರೂ.ಗಳಿಗೆ ಮಿತಿಗೊಳಿಸಲಾಗಿದ್ದು,   ಈ ಬೆಳೆ ಸಾಲ ಮನ್ನಾ ಯೋಜನೆಯಿಂದ ಸುಮಾರು 34,000 ಕೋಟಿ ರೂ.ಗಳ ಮೊತ್ತದ ಪ್ರಯೋಜನ ರೈತರಿಗೆ ದೊರೆಯಲಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸಹಕಾರಿ ಕ್ಷೇತ್ರದ ಅಧಿಕಾರಿಗಳ ಕುಟುಂಬಗಳು ಹಾಗೂ ಕಳೆದ 3 ವರ್ಷಗಳಲ್ಲಿ ಆದಾಯ ತೆರಿಗೆ ಕಟ್ಟಿರುವಂತಹ ರೈತರುಗಳು ಹಾಗೂ ಇತರೆ ಅನರ್ಹ ಕೃಷಿ ಸಾಲಗಾರರು ಈ ಸಾಲ ಮನ್ನಾ ಯೋಜನೆಯಿಂದ ಹೊರಗುಳಿಯಲಿದ್ದಾರೆ.
     ರೈತರು ಹೊಸ ಸಾಲ ಪಡೆಯಲು ಅನುಕೂಲವಾಗುವಂತೆ ಸರ್ಕಾರ ಅವರ ಸುಸ್ತಿ ಖಾತೆಯಲ್ಲಿರುವ ಬಾಕಿ ಮನ್ನಾಮಾಡಿ ಋಣಮುಕ್ತ ಪತ್ರ ನೀಡಲು ತೀರ್ಮಾನಿಸಲಾಗಿದೆ. ಹಿಂದಿನ ಸರ್ಕಾರ ಮಾಡಿದ ಸಹಕಾರಿ ಬ್ಯಾಂಕುಗಳ ರೈತರ ಸಾಲ ಮನ್ನಾದ ಬಾಕಿ ಹಣವನ್ನು ಪಾವತಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.  ಶೂನ್ಯ ಬಂಡವಾಳ ಕೃಷಿ ಪದ್ಧತಿಗೆ ತಾಂತ್ರಿಕ ಸಹಾಯ ನೆರವು ಪಡೆದು ಯೋಜನೆ ಅನುಷ್ಠಾನಗೊಳಿಸಲು 50 ಕೋಟಿ ರೂ. ಒದಗಿಸಲಾಗಿದೆ.
     ರೈತರ ಸಹಭಾಗಿತ್ವದಲ್ಲಿ ಕೃಷಿ ವಲಯದ ಚಟುವಟಿಕೆಗಳಿಗೆ ಆದ್ಯತೆ ನೀಡಲು ಪ್ರತಿ ಜಿಲ್ಲೆಯ ಇಬ್ಬರು ಪ್ರಗತಿಪರ ರೈತರನ್ನೊಳಗೊಂಡ ಕರ್ನಾಟಕ ರಾಜ್ಯ ರೈತರ ಸಲಹಾ ಸಮಿತಿ ರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಸಮನ್ವಯ ಉನ್ನತ ಸಮಿತಿ ರಚನೆ, ರೈತ ಸಂಘಟನೆ ಮತ್ತು ಸಾಮಥ್ರ್ಯ ಬಲವರ್ಧನೆ ಮಾಡಲು ರಾಜ್ಯ ರೈತ ಉತ್ಪಾದನೆ ನೀತಿ ಜಾರಿಗೆ ಕ್ರಮ, ಕೃಷಿ ಪೂರಕ ತಂತ್ರಜ್ಞಾನ ನವ ಉದ್ಯಮಗಳಿಗೆ ಉತ್ತೇಜನ, ಎಣ್ಣೆ ಗಾಣಗಳಿಗೆ ಪ್ರೋತ್ಸಾಹ, ಅಂಟುವಾಳಕಾಯಿ ಮರ ಬೆಳೆಸಲು ಪ್ರೋತ್ಸಾಹ, ನಿರ್ವಾತ ತಂತ್ರಜ್ಞಾನ ಬಳಕೆ ಕುರಿತಂತೆ ರೈತರಿಗೆ ಅರಿವು, ಆಂದ್ರಪ್ರದೇಶ ಮಾದರಿಯಲ್ಲಿ ಶೂನ್ಯ ಬಂಡವಾಳ, ಸಹಜ ಕೃಷಿಗೆ ಉತ್ತೇಜನ, ಸಾವಯವ ಹಾಗೂ ಸಾವಯವ ಬೀಜ ಪ್ರಮಾಣಕರಣ ದೃಢೀಕರಣ ಕೇಂದ್ರ ಸ್ಥಾಪನೆ, ತೆಂಗಿನ ಬೆಳಗಾರರ ಹಿತರಕ್ಷಣೆ ಮಾಡುವುದಾಗಿ ಘೋಷಿಸಿದ್ದಾರೆ.
     ಬಡವರ ಬಂಧು ಯೋಜನೆಯಡಿ ಬೀದಿ ವ್ಯಾಪಾರಿ, ಸಣ್ಣ ವ್ಯಾಪಾರಿಗಳಿಗೆ ಕಿರು ಸಾಲ, ಕಾಯಕ ಯೋಜನೆಯಡಿ ಸ್ವ ಸಹಾಯ ಗುಂಪುಗಳಿಗೆ ನೆರವು, ಎಲ್ಲ ಜಿಲ್ಲೆಗಳಿಗೂ ದಿಶಾ ಯೋಜನೆ ವಿಸ್ತರಣೆ, ಸಂಭಾವ್ಯ ಉದ್ಯಮಿದಾರರಿಗೆ ತರಬೇತಿ, ವಿದೇಶದಲ್ಲಿ ಉದ್ಯೋಗ ಹೊಂದಲು ಅಗತ್ಯ ತರಬೇತಿ ನೀಡುವುದಾಗಿ ಘೋಷಿಸಿದ್ದಾರೆ.
     ಒಂದು ಸಾವಿರ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ಆರಂಭ, ಸರ್ಕಾರಿ ಶಾಲೆಗಳ ಶಿಕ್ಷಕರು ಹಾಗೂ ಮಕ್ಕಳ ಹಾಜರಾತಿ ನಿಗಾವಹಿಸಲು ಬಯೋಮೆಟ್ರಿಕ್ ವ್ಯವಸ್ಥೆ ಜಾರಿ, ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಆರಂಭಿಸುವುದಾಗಿ ಘೋಷಿಸಿದ್ದಾರೆ.
     ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳು ಹಾಗೂ ತಾಂಡಾಗಳ ಸಮಗ್ರ ಅಭಿವೃದ್ಧಿಗೆ ಪ್ರಗತಿ ಕಾಲೋನಿ ಯೋಜನೆ ಜಾರಿ, ಈ ವರ್ಗದ ಜನರಿಗಾಗಿ ಆಯ್ದ ಜಿಲ್ಲೆಗಳಲ್ಲಿ ನವಗ್ರಾಮ ನಿರ್ಮಾಣ, ವಿವಿಧ ಧಾರ್ಮಿಕ ಸಂಸ್ಥೆಗಳು, ಸಾಮಾಜಿಕ ಸೇವೆ ಮಾಡುವ ಸಂಘ-ಸಂಸ್ಥೆಗಳಿಗೆ, ಧಾರ್ಮಿಕ ಪೀಠಗಳಿಗೆ 25 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.
     ಬಿ.ಪಿ.ಎಲ್. ಕುಟುಂಬದ ಗರ್ಭಿಣಿ ಹಾಗೂ ಬಾಣಂತಿಯರಿಗೆ ಮೂರು ತಿಂಗಳವರೆಗೆ ತಲಾ ಒಂದು ಸಾವಿರ ರೂ. ಪ್ರೋತ್ಸಾಹ ಹಣ ನೀಡುವ ಮುಖ್ಯಮಂತ್ರಿ ಮಾತೋಶ್ರೀ ಯೋಜನೆ ಜಾರಿ, ರಾಜ್ಯದ ಎಲ್ಲ ಉಪವಿಭಾಗಗಳಿಗೆ ಒಂದರಂತೆ ವೃದ್ಧಾಶ್ರಮ ಸ್ಥಾಪನೆ, ವಿಕಲಚೇತನರ ಉನ್ನತ ಶಿಕ್ಷಣ, ವಿಶೇಷ ಶಿಕ್ಷಕರಿಗೆ ತರಬೇತಿ, ವಿಕಲಚೇತನರ ಪಾಲನೆ ಹಾಗೂ ನಿರ್ವಹಣೆಗೆ ವಿಕಲಚೇತನರ ಕ್ಯಾಂಪಸ್ ಆರಂಭ, ಸಂಧ್ಯಾ ಸುರಕ್ಷಾ ಯೋಜನೆಯಡಿ 65 ವರ್ಷ ಪೂರೈಸಿದ ಹಿರಿಯರಿಗೆ 1000 ರೂ. ಮಾಶಾಸನ ಹೆಚ್ಚಿಳಮಾಡಿ ಘೋಷಿಸಿದ್ದಾರೆ.
     ಆಂದೋಲನ ಮಾದರಿಯಲ್ಲಿ ಅರಣ್ಯ ಬೆಳವಣಿಗೆಗೆ ಹಸಿರು ಕರ್ನಾಟಕ ಯೋಜನೆ ಈ ಕಾರ್ಯಕ್ರಮ ಅನುಷ್ಠಾನಕ್ಕೆ 10 ಕೋಟಿ ರೂ. ಅನುದಾನ, ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಎಲ್ಲ ಜಿಲ್ಲೆಗಳಲ್ಲೂ ನಿರಂತರ ಪರಿವೇಷ್ಠಕ ವಾಯುಮಾಲಿನ್ಯ ನಿಯಂತ್ರಣ ಘಟಕಗಳ ಸ್ಥಾಪನೆ, ಗ್ರಾಮ ಪಂಚಾಯತಿಯಲ್ಲಿ ವಿಡಿಯೋ ಸಂವಾದ ಸೌಲಭ್ಯ, ಸಾರ್ವಜನಿಕ ಕುಂದುಕೊರತೆ ನಿರ್ವಹಣೆಗೆ ಕಾಲಸೆಂಟರ್, ಮೊಬೈಲ್ ಆಪ್, ವೆಬ್‍ಆಪ್, ಸಾಮಾಜಿಕ ಜಾಲತಾಣಗಳ ಮೂಲಕ ನಾಗರಿಕ ಸಮಸ್ಯೆಗಳ ನೋಂದಣಿಗೆ ಅವಕಾಶ, ಗ್ರಾಮೀಣ ಕುಡಿಯುವ ನೀರು ಪೂರೈಕೆಗಾಗಿ ಜಲಧಾರೆ ಯೋಜನೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ದಾಖಲೆಯಲ್ಲಿರುವ ಎಲ್ಲ ಆಸ್ತಿಗಳನ್ನು ಜಿ.ಐ.ಎಸ್. ಆಧಾರಿತ ಮ್ಯಾಪಿಂಗ್ ಮಾಡಲು ಕ್ರಮ ಸೇರಿದಂತೆ ಹಲವು ಯೋಜನೆಗಳನ್ನು ಬಜೆಟ್‍ನಲ್ಲಿ ಘೋಷಿಸಲಾಗಿದೆ.  ಒಟ್ಟಾರೆ ಈ ಬಾರಿಯ ಬಜೆಟ್‍ನಲ್ಲಿ ಕೊಪ್ಪಳ ಜಿಲ್ಲೆಗೆ ಒಳ್ಳೆಯ ಯೋಜನೆಗಳು ದೊರಕಿವೆ.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ


ಕೊಪ್ಪಳ ಜು. 05 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ, ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಹಾಗೂ ಸಂಸ್ಥೆಗಳಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳಿಗೆ ತಲಾ 25 ಸಾವಿರ ರೂ. ಹಾಗೂ ಸಂಸ್ಥೆಗಳಿಗೆ ತಲಾ 1 ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು.  ಅರ್ಜಿ ಸಲ್ಲಿಸಲು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರಬೇಕು.  ಆಸಕ್ತರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಆಗಸ್ಟ್. 20 ರೊಳಗಾಗಿ ಸಲ್ಲಿಸಬೇಕು.
ಅರ್ಜಿಯನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಪರ್ಕಿಸಬಹುದು ಎಂದು ಇಲಾಖಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಂಗಾವತಿ ನಗರಸಭೆ ವತಿಯಿಂದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ


ಕೊಪ್ಪಳ ಜು. 05 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಗಂಗಾವತಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ದೀನ್‍ದಯಾಳ ಅಂತ್ಯೋದಯ (ಡೇ-ನಲ್ಮ) ಬಿ.ಪಿ.ಎಲ್. ರಹಿವಾಸಿಗಳಿಗೆ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಮತ್ತು ಪ್ರದೇಶ ಮಟ್ಟದ ಒಕ್ಕೂಟಗಳಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸಿಕೊಳ್ಳಲು ಮತ್ತು ಗುಂಪು ಚಟುವಟಿಕೆ ನಿರ್ವಹಿಸುವವರಿಗೆ ಸಾಲ ಸೌಲಭ್ಯಕ್ಕಾಗಿ, ವಿವಿಧ ತರಬೇತಿಗಳಿಗಾಗಿ ಹಾಗೂ ಸ್ವ-ಸಹಾಯ ಸಂಘಗಳನ್ನು ರಚಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಗಂಗಾವತಿ ನಗರಸಭೆಯು ಸ್ವಯಂ ಉದ್ಯೋಗ ಕಾರ್ಯಕ್ರಮ (ವ್ಯಯಕ್ತಿಕ / ಗುಂಪು)- 33/ 04, ಸ್ವ-ಸಹಾಯ ಗುಂಪುಗಳಿಗೆ ಸಾಲ ಮತ್ತು ಬಡ್ಡಿ ಸಹಾಯ ಧನ-24, ಕೌಶಲ್ಯಾಭಿವೃದ್ಧಿ ತರಬೇತಿ ಮೂಲಕ ಉದ್ಯೋಗ ನಿಯುಕ್ತಿ-178, ಸ್ವ -ಸಹಾಯ ಗುಂಪುಗಳ ರಚನೆ-15 ಹಾಗೂ ನಗರ ಬೀದಿ ವ್ಯಾಪಾರಿಗಳಿಗೆ ಬೆಂಬಲ (ಸಮಿಕ್ಷೆ ಮೂಲಕ ಗುರುತಿಸಿದ)-143, ಗುರಿಯನ್ನು ನಿಗದಿಪಡಿಸಿದ್ದು, ಅರ್ಜಿಯನ್ನು ನಗರಸಭೆ ಕಾರ್ಯಾಲಯದ ನಲ್ಮ್ ವಿಭಾಗದಿಂದ ಪಡೆದು ಭರ್ತಿ ಮಾಡಿ, ಜಾತಿ, ಆದಾಯ, ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಮತದಾರರ ಭಾವಚಿತ್ರ ವಿರುವ ಕಾರ್ಡ್, ಬಿ.ಪಿ.ಎಲ್. ರೇಶನ್ ಕಾರ್ಡ್, ಆಧಾರ ಕಾರ್ಡ್ ಹಾಗೂ ಅನ್ವಯಿಸುವ ಇತರೆ ದಾಖಲೆಗಳನ್ನು ಕಡ್ಡಾಯವಾಗಿ ಸ್ವಯಂ ದೃಢೀಕರಿಸಿ ಲಗತ್ತಿಸಿ, ದ್ವಿ ಪ್ರತಿಯಲ್ಲಿ ಜು. 31 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು ಎಂದು ಗಂಗಾವತಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿರೂಪಾಪುರ : ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಜು. 05 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರ ಕೇಂದ್ರೀಯ ವಿದ್ಯಾಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿರೂಪಾಪುರ ಕೇಂದ್ರೀಯ ವಿದ್ಯಾಲಯದಲ್ಲಿ 1 ರಿಂದ 5 ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜು. 09 ಕೊನೆಯ ದಿನವಾಗಿದೆ.  ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್   www.kvkoppal.org ಅನ್ನು ವೀಕ್ಷಿಸಬಹುದು.  ಅಥವಾ ದೂರವಾಣಿ ಸಂಖ್ಯೆ 08539-230006 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗದವರಿಗೆ ವಿವಿಧ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಜು. 05 (ಕರ್ನಾಟಕ ವಾರ್ತೆ): ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕೊಪ್ಪಳ, ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಸಾಲ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗದ ಜನರ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಲಾಗಿರುವ ವಿವಿಧ ಸಾಲ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಸರ್ಕಾರದ ಯೋಜನೆಗಳ ವಿವರ ಇಂತಿದೆ. 
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ :
********** ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಜನರ ಸ್ವಯಂ ಉದ್ಯೋಗಕ್ಕೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಚಟುವಟಿಕೆ ಅನುಸಾರ ಗರಿಷ್ಠ ರೂ. 2 ಲಕ್ಷಗಳ ವರೆಗೆ ಆರ್ಥಿಕ ನೆರವು.  ಇದರಲ್ಲಿ, ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ.
ಕಿರುಸಾಲ ಯೋಜನೆ :
******** ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಸ್ವ-ಸಹಾಯ ಗುಂಪುಗಳ ಸದಸ್ಯರು ಕೈಗೊಳ್ಳುವ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರದ ಚಟುವಟಿಕೆಗಳಿಗೆ ಅಂದರೆ, ಹಣ್ಣು, ತರಕಾರಿ, ಹಾಲು, ಹೂ ಮಾರುವವರು, ತಳ್ಳುವ ಗಾಡಿ ವ್ಯಾಪಾರಿಗಳು ಮುಂತಾದ ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳಿಗೆ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಗರಿಷ್ಠ ರೂ. 10 ಸಾವಿರ ಸಾಲ ಹಾಗೂ ರೂ. 5 ಸಾವಿರಗಳ ಸಹಾಯಧನ ಸೌಲಭ್ಯ ನೀಡಲಾಗುವುದು.  ಅರ್ಜಿದಾರರು ಬಿಪಿಎಲ್ ಕುಟುಂಬಕ್ಕೆ ಸೇರಿರಬೇಕು ಹಾಗೂ ಸರ್ಕಾರಿ/ ಅರೆ ಸರ್ಕಾರಿ ಉದ್ಯೋಗದಲ್ಲಿ ಇರಬಾರದು. 
ಸಾಂಪ್ರದಾಯಿಕ ಕಾರ್ಯಗಳಿಗೆ ಸಾಲ ಮತ್ತು ಸಹಾಯಧನ :
*************** ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಮತ್ತು ಸಹಾಯಧನ ವದಗಿಸಲಾಗುತ್ತಿದ್ದು, ವಿವರ ಇಂತಿದೆ.  ಹಿಂದುಳಿದ ವರ್ಗಗಳ ಸಾಂಪ್ರದಾಯಿಕ ವೃತ್ತಿದಾರರು ಅಥವಾ ವೃತ್ತಿ ಕಸುಬುದಾರರು ತಮ್ಮ ವೃತ್ತಿಯ ಅಭಿವೃದ್ಧಿಗಾಗಿ, ಆಧುನಿಕ ಉಪಕರಣಗಳನ್ನು ಖರೀದಿಸಲು, ತಾಂತ್ರಿಕತೆಯನ್ನು ಮೇಲ್ದರ್ಜೆಗೇರಿಸಲು, ವೃತ್ತಿ ಅನುಸಾರ ಗರಿಷ್ಠ ರೂ. 2 ಲಕ್ಷಗಳ ವರೆಗೆ ಆರ್ಥಿಕ ನೆರವು.  ಇದರಲ್ಲಿ ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ಶೇ.2ರ ಬಡ್ಡಿದರದಲ್ಲಿ ಸಾಲ. 
ಬಡ್ಡಿರಹಿತ ಸಾಲ ಯೋಜನೆ :
********** ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಯೋಜನೆ.  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಗಳಾದ ಪೋಸ್ಟ್‍ಡಾಕ್ಟ್ರಲ್, ಪಿ.ಹೆಚ್.ಡಿ., ಮಾಸ್ಟರ್ ಡಿಗ್ರಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ವಾರ್ಷಿಕ ರೂ. 3.50 ಲಕ್ಷಗಳಂತೆ, ಮೂರು ವರ್ಷಗಳ ಕೋರ್ಸ್‍ನ ಅವಧಿಗೆ, ಗರಿಷ್ಠ ರೂ. 10 ಲಕ್ಷಗಳ ಬಡ್ಡಿರಹಿತ ಸಾಲ ಮಂಜೂರು.  ಅರ್ಜಿದಾರರು ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿರಬೇಕು.  ವಾರ್ಷಿಕ ವರಮಾನ ರೂ. 3.50 ಲಕ್ಷಕ್ಕೆ ಮೀರಿರಬಾರದು ಹಾಗೂ ಅರ್ಹತಾ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕಗಳಿಸಿರಬೇಕು. 
ಗಂಗಾ ಕಲ್ಯಾಣ :
*******  ಈ ಯೋಜನೆಯಲ್ಲಿ ವೈಯಕ್ತಿಕ ಕೊಳವೆಬಾವಿ ಯೋಜನೆ ಹಾಗೂ ಸಾಮೂಹಿಕ ನೀರಾವರಿ ಯೋಜನೆ ಸೌಲಭ್ಯ ನೀಡಲಾಗಿದೆ.  ವೈಯಕ್ತಿಕ ಕೊಳವೆಬಾವಿ ಯೋಜನೆಯಡಿ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್‍ಸೆಟ್ಟು, ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.  ಘಟಕ ವೆಚ್ಚ ರೂ. 2.50 ಲಕ್ಷಗಳಲ್ಲಿ ರೂ. 2 ಲಕ್ಷಗಳ ಸಹಾಯಧನ ಹಾಗೂ ರೂ. 50 ಸಾವಿರಗಳ ಶೇ.4ರ ಬಡ್ಡಿದರದಲ್ಲಿ ಸಾಲ.
    ಸಾಮೂಹಿಕ ನೀರಾವರಿ ಯೋಜನೆಯಡಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.  ಕನಿಷ್ಠ 3 ಜನರು ಹೊಂದಿರುವ 8 ರಿಂದ 15 ಎಕರೆ ಜಮೀನಿಗೆ ರೂ. 4 ಲಕ್ಷಗಳ ವೆಚ್ಚದಲ್ಲಿ ಎರಡು ಕೊಳವೆ ಬಾವಿ, 15 ಎಕರೆಗಿಂತ ಹೆಚ್ಚಿನ ಜಮೀನಿಗೆ ರೂ. 6 ಲಕ್ಷಗಳ ವೆಚ್ಚದಲ್ಲಿ ಮೂರು ಕೊಳವೆ ಬಾವಿ ಕೊರೆಯಿಸಿ ಪಂಪ್ ಸೇಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡಿ ನೀರಾವರಿ ಸೌಲಭ್ಯ ವಿದ್ಯುದೀಕರಣಕ್ಕೆ ಪ್ರತಿ ಕೊಳವೆ ಬಾವಿಗೆ ರೂ. 50 ಸಾವಿರಗಳನ್ನು ವಿದ್ಯುತ್ ಸರಬರಾಜು ಕಂಪನಿಗೆ ಪಾವತಿಸಲಾಗುವುದು.  ಮಲೆನಾಡು ಪ್ರದೇಶಗಳಲ್ಲಿ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚದಲ್ಲಿ ತೆರೆದ ಬಾವಿಗಳ ಮಂಜೂರು.  ಭೂ ಮಟ್ಟದಲ್ಲಿ ದೊರೆಯುವ ನದಿ ಮತ್ತು ಜಲಾಶಯಗಳ ನೀರಾವರಿ ಸಂಪನ್ಮೂಲಗಳಿಂದ ಏತ ನಿರಾವರಿ ಮೂಲಕ ನೀರಾವರಿ ಸೌಲಭ್ಯ.
    ಅರ್ಜಿಯನ್ನು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ತಾಲೂಕಿ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಅಥವಾ ನಿಗಮದ ವೆಬ್ ಸೈಟ್    www.karnataka.gov.in/dbcdc   ನಲ್ಲಿ ಜು. 16 ರೊಳಗೆ ಪಡೆಯಬೇಕು.  ಭರ್ತಿಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜು. 31 ರೊಳಗಾಗಿ ಸಲ್ಲಿಸಬೇಕು.  ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.  ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್‍ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ : ಅರ್ಜಿ ಆಹ್ವಾನ


ಕೊಪ್ಪಳ ಜು. 05 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಯೋಜನೆಯಡಿ ದ್ವಿತೀಯ ಪಿಯುಸಿ ಓದುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದಡಿ ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ) ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ಯೋಜನೆಯಡಿ ಅರ್ಜಿ ಸಲ್ಲಿಸಲು ಜು. 16 ಕೊನೆಯ ದಿನವಾಗಿದೆ.  ಆಸಕ್ತರು ಅರ್ಜಿಯನ್ನು ಆಯಾ ತಾಲೂಕ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಂದ ಪಡೆದು ಭರ್ತಿ ಮಾಡಿ, ತಾಲೂಕ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಯಲಬುರ್ಗಾ, ಗಂಗಾವತಿ, ಕುಷ್ಟಗಿ ಕಛೇರಿಯಲ್ಲಿ ಅಥವಾ ಎ.ಜೆ. ಎಸ್.ಕೆ ಸೊಸೈಟಿ (ದದೇಗಲ್) ಎನ್.ಹೆಚ್-63, ಕೊಪ್ಪಳ ಹಾಗೂ ಎಸಿಸಿಪಿಎಲ್ ಟ್ರೈನಿಂಗ್ ಡಿವಿಜೆನ್ (ಸ್ಮಾರ್ಟ್ ಕರಿಯರ್ ಅಕಾಡೆಮಿ, ವರ್ಣೇಕರ್ ಕಾಂಪ್ಲೇಕ್ಸ್, 2ನೇ ಮಹಡಿ, ಬಸ್ ಸ್ಯಾಂಡ್ ಎದರುಗಡೆ, ಕೊಪ್ಪಳ) ಕ್ಕೆ ಸಲ್ಲಿಸಬೇಕು.  ವೆಬ್‍ಸೈಟ್‍ನಲ್ಲಿ   http://dom.karnataka.gov.in/koppal ನಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ


ಕೊಪ್ಪಳ ಜು. 05 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 
    2017-18 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ90% ಅದಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಕ್ರಮವಾಗಿ ರೂ.10000/- ಮತ್ತು ರೂ.20000/-ಗಳ ಪ್ರೋತ್ಸಾಹಧನ ನೀಡಲಾಗುವುದು.  ಅರ್ಜಿ ಸಲ್ಲಿಸಲು ಆಗಸ್ಟ್. 05 ಕೊನೆಯ ದಿನವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ವೆಬ್‍ಸೈಟ್  https://gokdom.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಆಡಳಿತ ಭವನ, ಕೊಪ್ಪಳ ದೂರವಾಣಿ ಸಂಖ್ಯೆ: 08539-225070 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Wednesday, 4 July 2018

ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಿ- ಕರಡಿ ಸಂಗಣ್ಣ



ಕೊಪ್ಪಳ ಜು. 04 (ಕರ್ನಾಟಕ ವಾರ್ತೆ): ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದು, ಸದ್ಯ ಕೊಪ್ಪಳ ತಾಲೂಕು ಹೊರತುಪಡಿಸಿ, ಉಳಿದೆಡೆ ಮಳೆಯಾಗಿದೆ,  ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಯಾವುದೇ ಕೊರತೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಸೂಚನೆ ನೀಡಿದರು.

     ಕೊಪ್ಪಳದ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಕೊಪ್ಪಳ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮೇ ಮತ್ತು ಜೂನ್ ತಿಂಗಳಿನಲ್ಲಿ ಉತ್ತಮ ಮಳೆಯಾಗಿದೆ.  ಸದ್ಯ ಕೊಪ್ಪಳ ತಾಲೂಕು ಹೊರತುಪಡಿಸಿ, ಉಳಿದ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ.  ರೈತರು ಉತ್ತಮ ಬೆಳೆಯ ಭರವಸೆಯೊಂದಿಗೆ ಬಿತ್ತನೆ ಪ್ರಾರಂಭಿಸಿದ್ದು, ಜಿಲ್ಲೆಯ ಯಾವುದೇ ತಾಲೂಕುಗಳಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಕೊರತೆಯಾಗಬಾರದು.  ಇದರ ಜೊತೆಗೆ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ನೊಂದಾಯಿಸುವ ಕುರಿತು ರೈತರಿಗೆ ಮಾಹಿತಿ ನೀಡಬೇಕು.  ಈ ಬಗ್ಗೆ ಹೆಚ್ಚಿನ ಪ್ರಚಾರಕ್ಕೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ ಸಂಸದರು,  ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆ ಯೋಜನೆ ವಿಳಂಬವಾಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಂಟಿಕೃಷಿ ನಿರ್ದೇಶಕ ಹೊನ್ನಪ್ಪಗೌಡ ಅವರು, ಜಿಲ್ಲೆಯಲ್ಲಿ ಜನವರಿಯಿಂದ ಮೇ ತಿಂಗಳಿನವರೆಗೆ ಪೂರ್ವ ಮುಂಗಾರು ಮಳೆ ಉತ್ತಮವಾಗಿದ್ದು, 81 ಮಿ.ಮೀ. ವಾಡಿಕೆ ಮಳೆ ಬದಲಿಗೆ 120 ಮಿ.ಮೀ. ಆಗಿದ್ದು ಶೇ. 45 ರಷ್ಟು ಹೆಚ್ಚಾಗಿದೆ.  ಜೂನ್ ತಿಂಗಳಿನಲ್ಲಿ 153 ಮಿ.ಮೀ. ಬದಲಿಗೆ 207 ಮಿ.ಮೀ. ಮಳೆಯಾಗಿದೆ.  ಈ ತಿಂಗಳಿನಲ್ಲಿ ಕೊಪ್ಪಳ ತಾಲೂಕಿನಲ್ಲಿ ಮಾತ್ರ ಮೂರು ವಾರಗಳಿಂದ ಮಳೆಯಾಗದಿರುವುದರಿಂದ ಶೇ. 30 ರಷ್ಟು ಮಳೆಯ ಕೊರತೆ ಕಂಡುಬಂದಿದ್ದು, ಉಳಿದಂತೆ ಯಲಬುರ್ಗಾ, ಕುಷ್ಟಗಿ ಮತ್ತು ಗಂಗಾವತಿ ತಾಲೂಕಿನಲ್ಲಿ ಮಳೆಯಾಗಿದೆ.  ಜಿಲ್ಲೆಯಲ್ಲಿ ಸದ್ಯ ಮುಂಗಾರು ಹಂಗಾಮಿನಲ್ಲಿ ಶೇ. 57 ರಷ್ಟು ಬಿತ್ತನೆಯಾಗಿದೆ.  ಮೆಕ್ಕೆಜೋಳ, ಜೋಳ, ತೊಗರಿ, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳ 8400 ಕ್ವಿಂ. ಬಿತ್ತನೆ ಬೀಜ ದಾಸ್ತಾನಿದ್ದು, 10500 ಮೆ.ಟನ್ ರಸಗೊಬ್ಬರ ದಾಸ್ತಾನು ಇದೆ.  ಇನ್ನೂ ಒಂದು ರೇತ್ ರಸಗೊಬ್ಬರ ಈ ತಿಂಗಳಿನಲ್ಲಿ ಬರಲಿದೆ.  ಹೀಗಾಗಿ ಜಿಲ್ಲೆಯಲ್ಲಿ ಬೀಜ ಹಾಗೂ ಗೊಬ್ಬರದ ಕೊರತೆ ಸಾಧ್ಯತೆ ಇಲ್ಲ.  ಮಣ್ಣು ಆರೋಗ್ಯ ಕಾರ್ಡ್ ವಿತರಣೆ ಯೋಜನೆಯಡಿ 1. 40 ಲಕ್ಷ ಕಾರ್ಡ್ ವಿತರಿಸಲಾಗಿದ್ದು, ರೈತರ ಭೂಮಿಯ ಸರ್ವೆ ನಂ. ಡೌನ್‍ಲೋಡ್‍ನಲ್ಲಿ ತೊಂದರೆ ಆಗುತ್ತಿರುವುದರಿಂದ ವಿಳಂಬವಾಗಲು ಕಾರಣವಾಗಿದೆ.  ಶೀಘ್ರದಲ್ಲಿಯೇ ಎಲ್ಲರಿಗೂ ಮಣ್ಣು ಆರೋಗ್ಯಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.  ರೈತರಿಗೆ ನೀಡುವ ಪ್ರೋತ್ಸಾಹಧನ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ.  2016-17 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 34433 ರೈತರಿಗೆ 53. 25 ಕೋಟಿ ಪರಿಹಾರಧನ ಪಾವತಿಸಲಾಗಿದ್ದು, 4097 ರೈತರಿಗೆ 5. 27 ಕೋಟಿ ಪರಿಹಾರ ನೀಡಬೇಕಿದೆ.  16-17 ರ ಹಿಂಗಾರು ಹಂಗಾಮಿನಲ್ಲಿ 33877 ರೈತರಿಗೆ 30. 55 ಕೋಟಿ ರೂ ಪರಿಹಾರಧನ ನೀಡಿದ್ದು, ಇನ್ನೂ 31643 ರೈತರಿಗೆ 46. 96 ಕೋಟಿ ರೂ. ಪಾವತಿಸಬೇಕಾಗಿದೆ ಎಂದರು.
ಬಹುಗ್ರಾಮ ಯೋಜನೆ ವಿಳಂಬ :
*********** ಜಿಲ್ಲೆಯಲ್ಲಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕೆನ್ನುವ ಆಶಯದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಜಾರಿಗೆ ತಂದಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಹಲವು ಯೋಜನೆಗಳು ಇನ್ನೂ ಪೂರ್ಣಗೊಂಡಿಲ್ಲ.  ಮುಂಡರಗಿ ಮತ್ತು 87 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಬೇಕಿದ್ದ ಯೋಜನೆ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯದಿಂದಾಗಿ ಹಂತ-01 ಮತ್ತು 02 ರ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ.  ಅವೈಜ್ಞಾನಿಕವಾಗಿ ಡಿಸೈನ್ ಮಾಡಿರುವುದರಿಂದ, ಪೈಪ್‍ಲೈನ್ ಕಾಮಗಾರಿ ಕೈಗೊಂಡಿದ್ದು, ಕೋಟ್ಯಾಂತರ ರೂ. ನಷ್ಟವಾಗಿದ್ದು, ಇದಕ್ಕೆ ಯಾರು ಹೊಣೆ.  ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ, ಸರ್ಕಾರದ ಹಣ ಪೋಲಾಗುತ್ತಿರುವುದು ಅಲ್ಲದೆ, ಅನಗತ್ಯ ವಿಳಂಬವಾಗಿ, ಜನರು ಶುದ್ಧ ನೀರಿನಿಂದ ವಂಚಿತರಾಗುತ್ತಿರುವುದು ವಿಷಾದನೀಯ.  ಕೂಡಲೆ ಈ ಯೋಜನೆಗೆ ಕೈಗೊಂಡ ಡಿಸೈನ್, ಕಾಮಗಾರಿ ವಿವರ, ಅನುದಾನ ಬಿಡುಗಡೆ ಮತ್ತು ವೆಚ್ಚದ ವಿವರವುಳ್ಳ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸಂಸದ ಕರಡಿ ಸಂಗಣ್ಣ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ತಾಕೀತು ಮಾಡಿದರು.
ಕೊಪ್ಪಳ ಪ್ರಮುಖ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ :
***************** ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಿಂದ, ಜಿಲ್ಲಾಡಳಿತ ಭವನವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಸಿಮೆಂಟ್ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಳಿಸಿಲ್ಲ.  ನಾಲ್ಕು ತಿಂಗಳ ಒಳಗಾಗಿ ಪೂರ್ಣಗೊಳಿಸುವ ಭರವಸೆ ನೀಡಲಾಗಿತ್ತು.  ಆದರೆ ಇನ್ನೂ ಪೂರ್ಣಗೊಂಡಿಲ್ಲ.  ಕೆಲವೆಡೆ ಕಾಮಗಾರಿಯನ್ನು ಕೈಗೊಳ್ಳದೆ ಬಾಕಿ ಉಳಿಸಲಾಗಿದೆ.  ಯು.ಜಿ.ಡಿ. ಕಾಮಗಾರಿಯೂ ಪೂರ್ಣಗೊಳ್ಳದಿರುವುದು, ಇನ್ನಷ್ಟು ತೊಂದರೆ ಉಂಟುಮಾಡುತ್ತಿದೆ ಎಂದು ಸಂಸದರು ತಿಳಿಸಿದರು.  ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಪ್ರತಿಕ್ರಿಯಿಸಿ,  ಈಗಾಗಲೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಹಗಲು-ರಾತ್ರಿ ಕಾಮಗಾರಿ ಕೈಗೊಂಡರೂ ಸರಿ, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.  ಕಾಮಗಾರಿ ಕೈಗೊಳ್ಳುವ ವೇಳೆ ಸೂಕ್ತ ಸುರಕ್ಷತಾ ವ್ಯವಸ್ಥೆಯನ್ನು ಕೈಗೊಳ್ಳಬೇಕು.  ರಸ್ತೆಯಲ್ಲಿ ಬೀದಿ ದೀಪಗಳಿಲ್ಲದ ಕಾರಣದಿಂದ, ರಾತ್ರಿ ವೇಳೆಯಲ್ಲಿ ವಾಹನ ಸವಾರರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ.  ಅಪಘಾತಕ್ಕೂ ಕಾರಣವಾಗುವ ಸಾಧ್ಯತೆ ಇದೆ.  ಹೀಗಾಗಿ ಕೂಡಲೆ ಬೀದಿ ದೀಪದ ವ್ಯವಸ್ಥೆಯನ್ನಾದರೂ ತ್ವರಿತವಾಗಿ ಕೈಗೊಂಡು, ಸುರಕ್ಷಾ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉದ್ಯೋಗಖಾತ್ರಿಯಲ್ಲಿ ಹಿಂದೆ :
************ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಕಳೆದ ವರ್ಷ ಜಿಲ್ಲೆಯಲ್ಲಿ 29. 87 ಲಕ್ಷ ಮಾನವ ದಿನಗಳನ್ನು ಸೃಜಿಸಿದ್ದು, 140. 83 ಕೋಟಿ ರೂ. ಆರ್ಥಿಕ ಗುರಿಯ ಬದಲಿಗೆ  105. 88 ಕೋಟಿ ರೂ. ವೆಚ್ಚ ಮಾಡಿದ್ದು, ಶೇ. 75 ರಷ್ಟು ಸಾಧನೆಯಾಗಿದೆ.  ಗಂಗಾವತಿ ಮತ್ತು ಕುಷ್ಟಗಿ ತಾಲೂಕುಗಳಲ್ಲಿ ಶೇ. 100 ಕ್ಕಿಂತ ಹೆಚ್ಚು ಸಾಧನೆಯಾಗಿದೆ.  ಆದರೆ ಕೊಪ್ಪಳ ತಾಲೂಕಿನಲ್ಲಿ 33. 58 ಕೋಟಿ ರೂ. ಬದಲಿಗೆ 14. 92 ಕೋಟಿ ರೂ. ಮಾತ್ರ ವೆಚ್ಚವಾಗಿದ್ದು, ಶೇ. 44. 43 ರಷ್ಟು ಸಾಧನೆಯಾಗಿದೆ.  ಯಲಬುರ್ಗಾ ತಾಲೂಕಿನಲ್ಲಿ 30. 54 ಕೋಟಿ ರೂ. ಖರ್ಚಾಗುವ ಬದಲಿಗೆ 10. 35 ಕೋಟಿ ರೂ. ಮಾತ್ರ ವೆಚ್ಚವಾಗಿದ್ದು ಕೇವಲ ಶೇ. 33. 91 ರಷ್ಟು ಮಾತ್ರ ಸಾಧನೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಕೊಪ್ಪಳ ಮತ್ತು ಯಲಬುರ್ಗಾ ತಾಲೂಕುಗಳಲ್ಲಿ ಉದ್ಯೋಗಖಾತ್ರಿ ಯೋಜನೆಯಡಿ ನಿರೀಕ್ಷಿತ ಮಟ್ಟದಲ್ಲಿ ಸಾಧನೆಯಾಗದಿರುವುದಕ್ಕೆ ಅಧಿಕಾರಿಗಳು ವಿವರಣೆ ನೀಡಬೇಕು ಎಂದು ಸಂಸದರು ಸೂಚನೆ ನೀಡಿದರು.
ಬೆಳೆ ಉಳಿಸಿಕೊಳ್ಳಲು ರೈತರಿಗೆ ನೆರವಾಗಿ :
************ ಕೊಪ್ಪಳ ತಾಲೂಕಿನಲ್ಲಿ ಸದ್ಯ ಮಳೆಯ ಕೊರತೆ ಉಂಟಾಗಿದೆ.  ಸಿಂಗಟಾಲೂರು ಏತನೀರಾವರಿ ಯೋಜನೆಯಡಿ ಕೊಪ್ಪಳ ತಾಲೂಕಿನ ಮೈನಳ್ಳಿ, ಬಿಕನಳ್ಳಿ, ಗುಡಿಗೇರಿ, ಕವಲೂರು ಭಾಗಗಳಲ್ಲಿ ಈಗಾಗಲೆ ಕಾಲುವೆ ಇದೆ.  ಸಿಂಗಟಾಲೂರು ನೀರಾವರಿ ಯೋಜನೆಯಡಿ ಕಾಲುವೆಗೆ ಸ್ವಲ್ಪ ಪ್ರಮಾಣದಲ್ಲಿ ನೀರು ಹರಿಸಿದಲ್ಲಿ, ರೈತರು ಕೃಷಿ ಇಲಾಖೆ ನೀಡಿರುವ ಪಂಪ್‍ಸೆಟ್ ಬಳಸಿ, ನೀರು ಪೂರೈಸಿಕೊಂಡು, ಒಣಗುತ್ತಿರುವ ಬೆಳೆಗಳನ್ನು ಉಳಿಸಿಕೊಳ್ಳುವುದಾಗಿ ರೈತರು ಬೇಡಿಕೆ ಇಟ್ಟಿದ್ದಾರೆ.  ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲ ಮಾಡಿಕೊಡಿ ಎಂದು ಸಂಸದ ಕರಡಿ ಸಂಗಣ್ಣ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
     ಸಭೆಯಲ್ಲಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ದಿಶಾ ಸಮಿತಿ ಸದಸ್ಯ ವೀರೇಶ ಸಜ್ಜನ, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.