Tuesday, 30 January 2018

ರಾಷ್ಟ್ರೀಯ ಸ್ವಚ್ಛತೆ ದಿನಾಚರಣೆ : ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಜಾಗೃತಿ


ಕೊಪ್ಪಳ ಜ. 30 (ಕರ್ನಾಟಕ ವಾರ್ತೆ): ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ವಕೀಲರ ಸಂಘದ ಸಹಯೋಗದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಆರ್.ಜಿ. ಜೋಶಿ ಅವರ ನೇತೃತ್ವದಲ್ಲಿ ಮಂಗಳವಾರದಂದು ಜಿಲ್ಲಾ ನ್ಯಾಯಾಲಯ ಆವರಣದ ಸ್ವಚ್ಛತೆ ಕೈಗೊಂಡು ಜಾಗೃತಿ ಮೂಡಿಸಲಾಯಿತು.

     ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದಂತೆ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತು.  ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಆರ್.ಜಿ. ಜೋಶಿ ಅವರು ಖುದ್ದಾಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಕಸ ಗುಡಿಸಿ, ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದು ಇತರೆ ನ್ಯಾಯಾಧೀಶರು ಹಾಗೂ ವಕೀಲರುಗಳಿಗೆ ಉತ್ತೇಜನ ನೀಡಿದಂತಾಯಿತು.  

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ, ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ್ ಎಸ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮನುಶರ್ಮಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಕಂಪ್ಲಿ, ಉಪಾಧ್ಯಕ್ಷ ಎಸ್.ಹೆಚ್. ಇಂಗಳದಾಳ, ಕಾರ್ಯದರ್ಶಿ ಕೆ.ಯು. ಪೋಚಗುಂಡಿ, ನಗರಸಭೆ ಪೌರಾಯುಕ್ತ ಪರಮೇಶಪ್ಪ, ಹಿರಿಯ ವಕೀಲರುಗಳಾದ ವಿ.ಎಂ. ಭೂಸನೂರ ಮಠ, ಆಸಿಫ್ ಅಲಿ, ಶರಣಪ್ಪ, ಎ.ವಿ. ಕಣವಿ., ಎಂ.ಸಿ. ಸಜ್ಜನ, ಪಿ.ಆರ್. ಹೊಸಳ್ಳಿ, ಎಸ್.ಹೆಚ್. ಸುರಪುರ ಸೇರಿದಂತೆ ವಕೀಲರ ಸಂಘದ ಸದಸ್ಯರುಗಳು, ಪ್ರಾಧಿಕಾರದ ಪ್ಯಾನಲ್ ವಕೀಲರು, ಮಧ್ಯಸ್ಥಗಾರರು, ನ್ಯಾಯಾಲಯದ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನ್ಯಾಯಾಲಯ ಆವರಣವನ್ನು ಸ್ವಚ್ಛಗೊಳಿಸಿದರು.  ಅಲ್ಲದೆ ಸ್ವಚ್ಛತೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಸಮಾಜವನ್ನು ಸಹ ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಮನಸ್ಸು ಸ್ವಚ್ಛವಾಗಿರುತ್ತದೆ ಎಂಬ ಜಾಗೃತಿ ಮೂಡಿಸಿದರು.
Post a Comment