Wednesday, 28 February 2018

ಮಾ. 01 ರಂದು ಕೊಪ್ಪಳದಲ್ಲಿ ಸಂತ ಸೇವಾಲಾಲ್ ಜಯಂತಿ


ಕೊಪ್ಪಳ ಫೆ. 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಸಂತ ಸೇವಾಲಾಲ್‍ರವರ ಜಯಂತಿ ಆಚರಣೆ ಕಾರ್ಯಕ್ರಮ ಮಾರ್ಚ್. 01 ರಂದು ಬೆಳ್ಳಿಗ್ಗೆ 11-00 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
    ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು.  ಇಂಡಿಯ ಸ್ವತಂತ್ರ ಸಿಂಧೇ ಅವರು ಸಂತ ಸೇವಾಲಾಲ್‍ರವರ ಕುರಿತು ವಿಶೇಷ ಉಪನ್ಯಾಸ ನೀಡುವರು.
    ಕಾರ್ಯಕ್ರಮದ ನಂತರ ಅಂದು ಮಧ್ಯಾಹ್ನ 12-30 ಗಂಟೆಗೆ ಸಂತ ಸೇವಾಲಾಲ್‍ರವರ ಭಾವಚಿತ್ರದೊಂದಿಗೆ ಮೆರವಣಿಗೆಯು ಸಾಹಿತ್ಯ ಭವನದಿಂದ ಪ್ರಾರಂಭಗೊಂಡು, ಜವಾಹರ ರಸ್ತೆ ಮಾರ್ಗವಾಗಿ ಗಡಿಯಾರ ಕಂಬದ ಮೂಲಕ ಬಹದ್ದೂರಬಂಡಿ ಗ್ರಾಮದವರೆಗೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಹೋಳಿ ಹಬ್ಬ : ಮದ್ಯಪಾನ ನಿಷೇಧ ಜಾರಿ


ಕೊಪ್ಪಳ ಫೆ. 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಾದ್ಯಂತ ಹೋಳಿ ಹಬ್ಬದ ಪ್ರಯುಕ್ತ ಮಾರ್ಚ್. 01 ಮತ್ತು 02 ರಂದು ಮದ್ಯಪಾನ, ಮಧ್ಯ ಮಾರಾಟ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
    ಮಾ. 01 ರಂದು ಕೊಪ್ಪಳ ಜಿಲ್ಲೆಯಾದ್ಯಂತ ಕಾಮದಹನ ಹಾಗೂ ಮಾ. 02 ರಂದು ಹೋಳಿ (ಓಕಳಿ) ಹಬ್ಬವನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಮಧ್ಯಪಾನ, ಮಧ್ಯ ಮಾರಾಟ ನಿಷೇಧಿಸಲಾಗಿದ್ದು, ಮಾ 01 ರಂದು ಬೆಳಿಗ್ಗೆ 06 ಗಂಟೆಯಿಂದ ಮಾ. 02 ರ ಸಂಜೆ 06 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ವೈನ್‍ಶಾಪ್, ಬಾರ್‍ಗಳು, ಸಗಟು ಮತ್ತು ಚಿಲ್ಲರೆ ಮಧ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. 
ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು, ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲಾ ಆಸ್ಪತ್ರೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಲಿದೆ : ರಾಜಶೇಖರ ಹಿಟ್ನಾಳ


ಕೊಪ್ಪಳ ಫೆ. 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ 100 ಹಾಸಿಗೆಯ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರವು ಮಂಜೂರಾತಿ ನೀಡಿದ್ದು, ಬರುವ ದಿನಗಳಲ್ಲಿ ಜಿಲ್ಲಾ ಆಸ್ಪತ್ರೆಯು ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಹೊರಹೊಮ್ಮಲಿದೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಹೆಳಿದರು.   

    ಎಸ್.ಡಿ.ಪಿ ಮತ್ತು ಎನ್.ಹೆಚ್.ಎಂ ಯೋಜನೆಯಡಿಯಲ್ಲಿ ರೂ. 25 ಕೋಟಿಯ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ 100 ಹಾಸಿಗೆಯ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ, ಕಂಪೌಡ ಗೋಡೆ, ಸಿ.ಸಿ ರಸ್ತೆ, ವಿದ್ಯುದ್ದೀಕರಣ ಹಾಗೂ ವಾಹನ ನಿಲುಗಡೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.    

    ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಹಾಗೂ ಆಧುನಿಕ ಉಪಕರಣಗಳ ಕೊರತೆ ಇದ್ದ ಕಾರಣ ಜಿಲ್ಲೆಯ ಜನರು ಚಿಕಿತ್ಸೆಗಾಗಿ ನೆರೆಹೊರೆಯ ಜಿಲ್ಲೆಗಳಿಗೆ ಹೋಗುತ್ತಿದ್ದರು.  ರಾಜ್ಯ ಸರ್ಕಾರವು ನಮ್ಮ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜನ್ನು ನೀಡಿದ್ದು,  ಕಾಲೇಜು ಪ್ರಾರಂಭವಾದಾಗಿನಿಂದಲೂ ಜಿಲ್ಲಾ ಆಸ್ಪತ್ರೆಯಲ್ಲೇ ಅನೇಕ ಚಿಕಿತ್ಸೆಗಳು ನಡೆಯುತ್ತಿವೆ.  ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದಲು ಸರ್ಕಾರವು ಅತೀ ಹೆಚ್ಚು ಅನುದಾನವನ್ನು ಜಿಲ್ಲೆಗೆ ನೀಡಿದೆ.  ಜಿಲ್ಲಾ ಆಸ್ಪತ್ರೆಗೆ 100 ಹಾಸಿಗೆಯ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲು 25 ಕೋಟಿ ರೂ. ಅನುದಾನವನ್ನು ನೀಡಿದ್ದು, ಜಿಲ್ಲೆಯ ಜನರಿಗೆ ತುಂಬಾ ಅನುಕೂಲವಾಗಲಿದೆ.  ಮುಂದಿನ ದಿನಮಾನಗಳಲ್ಲಿ ಕೊಪ್ಪಳ ಜಿಲ್ಲಾ ಆಸ್ಪತ್ರೆಯು ಮಾದರಿ ಆಸ್ಪತ್ರೆಯಾಗಲಿದೆ ಎಂದು ಜಿ.ಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಹೇಳಿದರು.

ಜಿಲ್ಲಾ ಆಸ್ಪತ್ರೆಗೆ 100 ಹಾಸಿಗೆಯ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ, ಕಂಪೌಡ ಗೋಡೆ, ಸಿ.ಸಿ ರಸ್ತೆ, ವಿದ್ಯುದ್ದೀಕರಣ ಹಾಗೂ ವಾಹನ ನಿಲುಗಡೆ ಕಾಮಗಾರಿಯ ಭೂಮಿ ಪೂಜೆ ನೆರೆವೇರಿಸಿ ಮತ್ತು ಸಮಾರಂಭದ ಅಧ್ಯಕ್ಷತೆ ವಹಿಸಿದ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳ ಮರಣ ಪ್ರಮಾಣ ಹೆಚ್ಚಾಗುತ್ತಿದೆ ಎಂದು ವರದಿಯಾಗಿತ್ತು.  ಇದನ್ನು ನಿಯಂತ್ರಿಸಲು ಕೊಪ್ಪಳದಲ್ಲಿ ಹೆಚ್ಚುವರಿಯಾಗಿ ಮಕ್ಕಳ ಆಸ್ಪತ್ರೆ ಸ್ಥಾಪಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು.  ಇದೀಗ ಜಿಲ್ಲಾ ಕೇಂದ್ರದಲ್ಲಿ 100 ಹಾಸಿಗೆಯ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಮತ್ತು ಇದರ ಜೊತೆಯಲ್ಲಿ ಜಿಲ್ಲಾ ಆಸ್ಪತ್ರೆಯ ಕಂಪೌಡ, ಸಿ.ಸಿ ರಸ್ತೆ, ವಿದ್ಯುದ್ದೀಕರಣ ಹಾಗೂ ವಾಹನ ನಿಲುಗಡೆ ಕಾಮಗಾರಿಗಳಿಗೆ ರೂ. 25 ಕೋಟಿ ಅನುದಾನವನ್ನು ಸರ್ಕಾರವು ನೀಡಿದೆ.  ಜಿಲ್ಲಾ ಆಸ್ಪತ್ರೆಗೆ ಹೆಚ್.ಕೆ.ಆರ್.ಡಿ.ಬಿ ನಲ್ಲಿ ಅನೇಕ ಉಪಕರಣಗಳನ್ನು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ.  ಜಿಲ್ಲಾ ಆಸ್ಪತ್ರೆಗೆ ಸರ್ಕಾರವು ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಇಲ್ಲಿ ಸುಸಜ್ಜಿತವಾದ ಮತ್ತು ಯಶಸ್ವಿ ಚಿಕಿತ್ಸೆ ನಡೆಯಬೇಕಿದೆ.  ಮುಂದಿನ ದಿನಮಾನಗಳಲ್ಲಿ ಜಿಲ್ಲಾ ಆಡಳಿತ ಭವನದಲ್ಲಿ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಕೂಡ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.   ಕೊಪ್ಪಳ ಜಿಲ್ಲೆಯು ಅತೀ ಹಿಂದುಳಿದ ಪ್ರದೇಶವಾಗಿದ್ದು, ಸರ್ಕಾರವು 135 ಕೋಟಿ ರೂ. ಅನುದಾನದಲ್ಲಿ ಕೊಪ್ಪಳಕ್ಕೆ ಮೇಡಿಕಲ್ ಕಾಲೇಜುನ್ನು ನೀಡಿದ್ದಲ್ಲದೇ ವೈದ್ಯಕೀಯ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಪೈಕಿ ಹೈದ್ರಾಬಾದ ಕರ್ನಾಟಕ ಭಾಗಕ್ಕೆ ಶೇ. 75 ರಷ್ಟು ಸ್ಥಾನಗಳನ್ನು ಮೀಸಲಿಟ್ಟಿದೆ.  ಜಿಲ್ಲೆಯ ತಳಕಲ್ ಹಾಗೂ ಗಂಗಾವತಿಯಲ್ಲಿ ಇಂಜಿನಿಯರಿಂಗ್ ಕಾಲೇಜುಗಳ ನಿರ್ಮಾಣ ಹೀಗೆ ಅನೇಕ ಯೋಜನೆಗಳನ್ನು ನಮ್ಮ ಜಿಲ್ಲೆಗೆ ನೀಡಿ, ಜಿಲ್ಲೆಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ದಿದೆ.  ಜಿಲ್ಲೆಯನ್ನು ಆರೋಗ್ಯ ಕ್ಷೇತ್ರದಲ್ಲಿ ಮಾದರಿ ಜಿಲ್ಲೆಯನ್ನಾಗಿಸಲು ಶ್ರಮಿಸಲಾಗುವುದು.  ಪ್ರತಿಯೊಬ್ಬರಿಗೂ ಸರ್ಕಾರದ ಸೌಲಭ್ಯ ದೊರಕಬೇಕು.  ಮುಂದಿನ ದಿನಮಾನಗಳಲ್ಲಿ ಜಿಲ್ಲಾ ಆಸ್ಪತ್ರೆಗೆ ರೋಗಿಗಳ ಜೊತೆ ಬರುವ ಜನರಿಗೆ ಕೊಠಡಿಯ ವ್ಯವಸ್ಥೆಯನ್ನು ಸಹ ಮಾಡಲಾಗುವುದು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.  

    ಕಾರ್ಯಕ್ರಮದಲ್ಲಿ ತಾ.ಪಂ ಅಧ್ಯಕ್ಷ ಬಾಲಚಂದ್ರನ್, ನಗರಸಭೆ ಸದಸ್ಯರಾದ ಅಮ್ಜದ್ ಪಟೇಲ್, ರಾಮಣ್ಣ ಹದ್ದಿನ, ಮುತ್ತುರಾಜ ಕುಷ್ಟಗಿ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್., ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್.ಕೆ ದಾನರಡ್ಡಿ ಜಿಲ್ಲಾ ಆಸ್ಪತ್ರೆಯ ಸಲಹಾ ಸಮಿತಿಯ ಸದಸ್ಯರಾದ ಮಾನ್ವಿ ಪಾಶಾ, ಮಲ್ಲಿಕಾರ್ಜುನ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ವೈಜ್ಞಾನಿಕ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿ : ಮಾ. 03 ರವರೆಗೆ ಅವಧಿ ವಿಸ್ತರಣೆ


ಕೊಪ್ಪಳ ಫೆ. 28 (ಕರ್ನಾಟಕ ವಾರ್ತೆ): ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿಗಳ ಹೈದ್ರಾಬಾದ್-ಕರ್ನಾಟಕ ಮೀಸಲಾತಿಗೊಳಪಡುವ 15 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್. 03 ರವರೆಗೆ ವಿಸ್ತರಿಸಲಾಗಿದೆ. 
ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿಗಳ ಹೈದ್ರಾಬಾದ್-ಕರ್ನಾಟಕ ಮೀಸಲಾತಿಗೊಳಪಡುವ 15 ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅಧಿಸೂಚನೆಯನ್ನು ಪ್ರಕಟಿಸಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ಅರ್ಜಿ ಸಲ್ಲಿಸಲು ಜ. 31 ರಿಂದ ಫೆ. 14 ರವರೆಗೆ ಅವಧಿ ವಿಸ್ತರಿಸಲಾಗಿತ್ತು.  ಆದರೆ ನಿರೀಕ್ಷಿತ ಮಟ್ಟದಲ್ಲಿ ಅರ್ಜಿಗಳು ಸಲ್ಲಿಕೆಯಾಗಿರುವುದಿಲ್ಲ.  ಅಭ್ಯರ್ಥಿಗಳ ಹಿತದೃಷ್ಟಿಯಿಂದ ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ಪುನಃ ವಿಸ್ತರಿಸಲಾಗಿದೆ.  ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ. 03 ರವರೆಗೆ ಮತ್ತು ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸುವ ದಿನಾಂಕವನ್ನು ಮಾ. 05 ರವರೆಗೆ ವಿಸ್ತರಿಸಲಾಗಿದೆ.  ಅಧಿಸೂಚನೆಯಲ್ಲಿನ ಇತರೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಕೊಪ್ಪಳ ಜಿಲ್ಲಾ ಪೆÇಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ. 13 ರಂದು ಕೊಪ್ಪಳ ತಾ.ಪಂ ಸಾಮಾನ್ಯ ಸಭೆ


ಕೊಪ್ಪಳ ಫೆ. 28 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕ ಪಂಚಾಯತಿಯ ಸಾಮಾನ್ಯ ಸಭೆ ಮಾರ್ಚ್. 13 ರಂದು ಬೆಳಿಗ್ಗೆ 10-30 ಗಂಟೆಗೆ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ.
    ಸಭೆಯ ಅಧ್ಯಕ್ಷತೆಯನ್ನು ತಾ.ಪಂ. ಅಧ್ಯಕ್ಷ ಬಾಲಚಂದ್ರನ್ ಅವರು ವಹಿಸಲಿದ್ದಾರೆ.  ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಗೆ ತಪ್ಪದೇ ಹಾಜರಾಗಬೇಕು.  ಫೆಬ್ರವರಿ ತಿಂಗಳ ಅಂತ್ಯದ ವರೆಗೆ ತಮ್ಮ ಇಲಾಖಾ ಪ್ರಗತಿ ವರದಿಯನ್ನು ಮಾ. 05 ರೊಳಗಾಗಿ ತಾ.ಪಂ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

ವಸತಿ ಶಾಲೆ : 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ


ಕೊಪ್ಪಳ ಫೆ. 28 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಣೆಯಾಗುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ನವೋದಯ ಮಾದರಿಯ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶವನ್ನು ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಮಾ. 10 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು 5ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿರಬೇಕು.  ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷಕ್ಕೆ ಮೀರಿರಬಾರದು.  ಪ್ರತಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಲಾ 50 ಆಸನಗಳಂತೆ ಒಟ್ಟು 350 ಆಸನಗಳನ್ನು ನಿಗದಿ ಪಡಿಸಲಾಗಿದ್ದು, ಇದರಲ್ಲಿ ಶೇ.75 ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ರಷ್ಟು ಇತರೆ ವರ್ಗದವರಿಗೆ ವಿತರಿಸಲಾಗುವುದು.  ಅಲ್ಪಸಂಖ್ಯಾತರ ನವೋದಯ ಮಾದರಿ ವಸತಿ ಶಾಲೆಯಲ್ಲಿ 80 ಆಸನಗಳಿದ್ದು, ಇದರಲ್ಲಿ ಶೇ.75 ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ರಷ್ಟು ಇತರೆ ವರ್ಗದವರಿಗೆ ವಿತರಿಸಲಾಗುವುದು.  ಅಂಗವಿಕಲ ವಿದ್ಯಾರ್ಥಿಗಳು, ವಿಶೇಷ ಗುಂಪಿಗೆ ಸೇರಿದ ಅಂದರೆ ಅನಾಥ ಮಕ್ಕಳು, ವಿಧವೆಯರ ಮಕ್ಕಳು, ಪೌರ ಕಾರ್ಮಿಕರ ಮಕ್ಕಳು ಇತ್ಯಾದಿಗಳಿಗೆ ಶೇ.03 ರಷ್ಟು ಆಸನಗಳನ್ನು ಕಾಯ್ತಿರಸಲಾಗಿದೆ.
ಸೌಲಭ್ಯಗಳು : ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ನವೋದಯ ಮಾದರಿಯ ವಸತಿ ಶಾಲೆಗಳಲ್ಲಿ, ನುರಿತ ಅನುಭವಿ ಖಾಯಂ ಶಿಕ್ಷಕರು/ ಉಪನ್ಯಾಸಕರಿಂದ ಉತ್ತಮ ಗುಣಮಟ್ಟದ ಶಿಕ್ಷಣ.  ಉಚಿತ ಸಮವಸ್ತ್ರ, 2 ಜೊತೆ ಶೂ ಮತ್ತು ಸಾಕ್ಸ್.  ಪ್ರತಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು, ಬ್ಯಾಗ್ ಮತ್ತು ಲೇಖನ ಸಾಮಾಗ್ರಿಗಳು.  ರುಚಿಯಾದ, ಶುಚಿಯಾದ ಪೌಷ್ಠಿಕಾಂಶಗಳುಳ್ಳ ಊಟ (ಬಾಳೆ ಹಣ್ಣು, ಮೊಟ್ಟೆ, ಚಿಕನ್ ಇತರೆ).  ಮಂಚ ಹಾಸಿಗೆ, ಹೊದಿಕೆಗಳೊಂದಿಗೆ ಸುಸಜ್ಜಿತ ಕಟ್ಟಡದಲ್ಲಿ ವಸತಿ ಸೌಲಭ್ಯ. ಸ್ಪರ್ಧಾತ್ಮಕ ಕ್ರೀಡಾ ಚಟುವಟಿಕೆಗಳು, ಜಿಮ್ ಸೌಲಭ್ಯವಿರುತ್ತದೆ.  ಸುಸಜ್ಜಿತ ವಿಜ್ಞಾನ ಪ್ರಯೋಗಾಲಯಗಳು ಹಾಗೂ ಗ್ರಾಂಥಾಲಯ.  ಉತ್ಕøಷ್ಟ ದರ್ಜೆಯ ಡಿಜಿಟಲ್ ಲೈಬ್ರರಿ ಸೌಲಭ್ಯ.  ಕಂಪ್ಯೂಟರ್ ಶಿಕ್ಷಣ ಹಾಗೂ ಸ್ಪೋಕನ್ ಇಂಗ್ಲೀಷ್ ತರಬೇತಿಗಳು.  ಉರ್ದು-ಭಾಷೆಯನ್ನು ತೃತೀಯ ಭಾಷೆಯಾಗಿ ಕಲಿಯಲು ಅವಕಾಶ.  ಮುಸ್ಲಿಂ ವಿದ್ಯಾರ್ಥಿಗಳಿಗೆ ಅರೇಬಿಕ್ ಕಲಿಕೆಯ ಸೌಲಭ್ಯ ಕಿಟ್ ಮತ್ತು ಇತರೆ ಸೌಲಭ್ಯಗಳನ್ನು ಇಲಾಖೆಯು ನೀಡಲಿದೆ.      
ಅರ್ಜಿಯನ್ನು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಯಲಬುರ್ಗಾ/ ಕುಷ್ಟಗಿ/ ಗಂಗಾವತಿ, ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕುಕನೂರು, ತಳಕಲ್, ಕುದರಿಮೋತಿ, ಟಣಕನಕಲ್, ಹಿರೇಬೆಣಕಲ್, ಹಾಗೂ ಅಲ್ಪಸಂಖ್ಯಾತರ ನವೋದಯ ಮಾದರಿಯ ವಸತಿ ಶಾಲೆ ಕೊಪ್ಪಳ ಇಲ್ಲಿಂದ ಪಡೆದು ಭರ್ತಿ ಮಾಡಿ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ದೃಢೀಕರಿಸಿದತ ಪ್ರತಿ, ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕ ಪಟ್ಟಿಯ ದೃಢೀಕರಿಸಿದ ಪ್ರತಿ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ ಹಾಗೂ ವಿದ್ಯಾರ್ಥಿಯ ಪಾಸ್ ಪೊರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರಗಳೊಂದಿಗೆ ಮಾರ್ಚ್. 10 ರೊಳಗಾಗಿ ಸಲ್ಲಿಸಬೇಕು.  ಅರ್ಜಿಯನ್ನು ವೆಬ್‍ಸೈಟ್  http://dom.karnataka.gov.in/koppal  ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ ಕೊಪ್ಪಳ ದೂರವಾಣಿ ಸಂಖ್ಯೆ : 08539-225070, ಅಥವಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖಾ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Monday, 26 February 2018

ಅಂಗನವಾಡಿ : ಗಂಗಾವತಿ 8ನೇ ವಾರ್ಡ್‍ಗೆ ಅರ್ಜಿ ಸಲ್ಲಿಸದಿರಲು ಸೂಚನೆ


ಕೊಪ್ಪಳ ಫೆ. 26 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಗಂಗಾವತಿ ನಗರದ 8ನೇ ವಾರ್ಡ್‍ನ 8ನೇ ಕೇಂದ್ರಕ್ಕೆ ಅರ್ಜಿ ಸಲ್ಲಿಸದಿರುವಂತೆ ಸೂಚನೆ ನೀಡಲಾಗಿದೆ.
ಕೊಪ್ಪಳ ಜಿಲ್ಲೆಯ ಐದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಆಯ್ಕೆ ಪ್ರಕ್ರಿಯೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಗಂಗಾವತಿ ನಗರದ 8ನೇ ಕೇಂದ್ರದ ಸಹಾಯಕಿ ಹುದ್ದೆಯ ನೇಮಕಾತಿ ಪ್ರಕ್ರಿಯೆಯು ಪ್ರಗತಿಯಲ್ಲಿರುವುದರಿಂದ ಆನ್‍ಲೈನ್‍ನಲ್ಲಿ 8ನೇ ವಾರ್ಡ್ 8ನೇ ಕೇಂದ್ರವು ಕಣ್ತಪ್ಪಿನಿಂದ ನಮೂದಿಸಲಾಗಿದೆ. ಹೀಗಾಗಿ ಆನ್‍ಲೈನ್ ಪ್ರಕ್ರಿಯೆಯಲ್ಲಿ ಗಂಗಾವತಿ ನಗರದ 8ನೇ ವಾರ್ಡ್‍ನ 8ನೇ ಕೇಂದ್ರಕ್ಕೆ ಅರ್ಜಿ ಸಲ್ಲಿಸದಿರಲು   ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಂಗಾವತಿ ನಗರದಲ್ಲಿ ನೀರು ಪೂರೈಕೆ ಸ್ಥಗಿತ : ಸಹಕರಿಸಲು ಮನವಿ


ಕೊಪ್ಪಳ ಫೆ. 26 (ಕರ್ನಾಟಕ ವಾರ್ತೆ): ಗಂಗಾವತಿ ನಗರಕ್ಕೆ ನೀರು ಪೂರೈಕೆ ಮಾಡುವ ಘಟಕದ ವ್ಯಾಪ್ತಿಯಲ್ಲಿ ಜೆಸ್ಕಾಂ ನವರು ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.  ದುರಸ್ತಿ ಪೂರ್ಣಗೊಳ್ಳುವವರೆಗೆ ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಮನವಿ ಮಾಡಿದ್ದಾರೆ. 
    ಜೆಸ್ಕಾಂ ನವರು ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯ ಕೈಗೊಂಡಿದ್ದು, ಗಂಗಾವತಿ ನಗರಸಭಾ ವ್ಯಾಪ್ತಿಯಲ್ಲಿ ನೀರು ಪೂರೈಕೆ ಘಟಕಗಳಿಗೆ ಕಳೆದ ಗುರುವಾರ ಫೆ. 22 ರ ಮಧ್ಯಾಹ್ನ 1-45 ರಿಂದ ವಿದ್ಯುತ್ ಪೂರೈಕೆ ಸ್ಥಗಿತವಾಗಿರುತ್ತದೆ.  ವಿದ್ಯುತ್ ಪೂರೈಕೆ ಸ್ಥಗಿತಗೊಂಡಿರುವುದರಿಂದ ಗಂಗಾವತಿ ನಗರದಲ್ಲಿ ನೀರು ಪೂರೈಕೆ ಮಾಡುವ ಜಾಕ್‍ವೆಲ್ ಪಂಪ್‍ಹೌಸ್ ಮತ್ತು ನೀರು ಶುದ್ಧೀಕರಣ ಘಟಕದ ಮೋಟಾರ್‍ಗಳಿಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ.  ಹೀಗಾಗಿ ನಗರ ವ್ಯಾಪ್ತಿಯಲ್ಲಿ ಸಿಹಿ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.  ಜೆಸ್ಕಾಂ ಇಲಾಖೆಯವರು ವಿದ್ಯುತ್‍ಚ್ಛಕ್ತಿ ಪೂರೈಕೆಯ ಪರಿವರ್ತಕರಗಳನ್ನು ದುರಸ್ತಿಪಡಿಸಿ ನೀಡುವವರೆಗೂ ನಗರಸಭೆ ಯಿಂದ ನೀರು ಪೂರೈಕೆ ಮಾಡಲು ಸಾಧ್ಯವಾವಿರುವುದಿಲ್ಲ.  ಗಂಗಾವತಿ ನಗರದ ಸಾರ್ವಜನಿಕರು ಸಹಕರಿಸಬೇಕೆಂದು ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಾ. 01 ರಂದು ಕುಕನೂರನಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ


ಕೊಪ್ಪಳ ಫೆ. 26 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಮೆ. ಎಂ.ಎಸ್.ಪಿ.ಎಲ್ ಪೈಲೆಟ್ ಪ್ಲಾಂಟ್ ಹಾಲವರ್ತಿ, ಇವರಿಂದ ಐಟಿಐ ತರಬೇತಿ ಪಡೆದ ಅಭ್ಯರ್ಥಿಗಳಿಗಾಗಿ ಶಿಶಿಕ್ಷು (ಅಪ್ರೆಂಟಿಸ್) ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಮಾ. 01 ರಂದು ಬೆಳಿಗ್ಗೆ 10-00 ಗಂಟೆಗೆ ಜಿಲ್ಲೆಯ ಕುಕನೂರು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ.
ಭಾಗವಹಿಸಲು ಐಟಿಐನಲ್ಲಿ ಎನ್.ಸಿ.ವಿ.ಟಿ ಅಡಿಯಲ್ಲಿ ಎಲೆಕ್ಟ್ರೀಷಿಯನ್, ಫಿಟ್ಟರ್, ಟರ್ನರ್ ಮತ್ತು ವೆಲ್ಡರ್ ವೃತ್ತಿಯಲ್ಲಿ ಉತ್ತೀರ್ಣರಾಗಿರಬೇಕು.  18 ರಿಂದ 25 ವರ್ಷ ವಯೋಮಿತಿಯಲ್ಲಿರಬೇಕು.  ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.   ಸ್ಟೈಪೆಂಡ್ ಕಂಪನಿಯ ನಿಯಮಾನುಸಾರ ದೊರೆಯಲಿವೆ.  ಅಭ್ಯಥಿಗಳು ಎಸ್.ಎಸ್.ಎಲ್.ಸಿ ಮತ್ತು ಐ.ಟಿ.ಐ ಪಾಸಾದ ಮಾಕ್ರ್ಸ್ ಕಾರ್ಡ್ ಮತ್ತು ಎನ್.ಸಿವಿ.ಟಿ ಪ್ರಮಾಣ ಪತ್ರಗಳ ಝರಾಕ್ಸ್ ಪ್ರತಿ, ಹಾಗೂ ಭಾವಚಿತ್ರಗಳೊಂದಿಗೆ ಹಾಜರಾಗಬೇಕು.  ತಮ್ಮ ಸ್ವಂತ ಖರ್ಚಿನಲ್ಲಯೇ ಸಂದರ್ಶನಕ್ಕೆ ಆಗಮಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9449517426 ಅಥವಾ 9964247098 ಕ್ಕೆ ಸಂಪರ್ಕಿಸಬಹುದು ಎಂದು ಕುಕನೂರು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ದಾಖಲಾತಿ ಪರಿಶೀಲನಾ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ


ಕೊಪ್ಪಳ ಫೆ. 26 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದವರ ದಾಖಲಾತಿ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ. 
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 34 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಸ್ವೀಕೃತವಾದ ಅರ್ಜಿಗಳ ಪೈಕಿ 1:5 ಅನುಪಾತದಲ್ಲಿ ದಾಖಲಾತಿ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಿ 2017ರ ಡಿ. 16 ರಂದು ದಾಖಲಾತಿ ಪರಿಶೀಲನೆಯನ್ನು ಮಾಡಲಾಗಿದೆ.  ದಾಖಲಾತಿ ಪರಿಶೀಲನೆಗೆ ಹಾಜರಾದ ಅಭ್ಯರ್ಥಿಗಳ ಪೈಕಿ 33 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಹಾಗೂ ನೇಮಕಾತಿ ಪ್ರಕ್ರಿಯೆಯಿಂದ ಕೈಬಿಡಲಾದ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ವೆಬ್‍ಸೈಟ್  www.koppal.nic.in ನಲ್ಲಿ ಪ್ರಚುರ ಪಡಿಸಲಾಗಿದೆ.  ಈ ಅಂತಿಮ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಫೆ. 28 ರೊಳಗಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.  

ಸ್ವಚ್ಛ ಭಾರತ ಮಿಷನ್ : ನಗರ ಪ್ರದೇಶದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ


ಕೊಪ್ಪಳ ಫೆ. 26 (ಕರ್ನಾಟಕ ವಾರ್ತೆ): ಪೌರಾಡಳಿತ ಇಲಾಖೆ ವತಿಯಿಂದ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಹಮ್ಮಿಕೊಂಡಿರುವ ವಿಶೇಷ ಜನಜಾಗೃತಿ ಆಂದೋಲನಕ್ಕೆ ಕೊಪ್ಪಳ ನಗರಸಭೆ ಪೌರಾಯುಕ್ತರು ಕೊಪ್ಪಳದಲ್ಲಿ ಚಾಲನೆ ನೀಡಿದರು.     ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛತೆ ಮತ್ತು ಶೌಚಾಲಯದ ಮಹತ್ವ ಕುರಿತಂತೆ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲು ಪೌರಾಡಳಿತ ಇಲಾಖೆ ಮುಂದಾಗಿದ್ದು, ಇದೀಗ ಜಿಲ್ಲೆಯ ಎಲ್ಲ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಜನಜಾಗೃತಿ ಆಂದೋಲನ ಜರುಗಲಿದೆ.  ಬೀದಿನಾಟಕ ಮತ್ತು ಜಾಗೃತಿ ಗೀತೆಗಳ ಮೂಲಕ ಜನರಲ್ಲಿ ಸ್ವಚ್ಛತೆ ಮತ್ತು ಶೌಚಾಲಯದ ಅಗತ್ಯತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ.  ಕೊಪ್ಪಳ ನಗರದ ಗಾಂಧಿನಗರದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಪೌರಾಯುಕ್ತ ಸುನೀಲ್ ಪಾಟೀಲ್, ಪರಿಸರ ಅಭಿಯಂತರ ಅಶೋಕ್ ಕುಮಾರ ಸಜ್ಜನ, ನಗರಸಭೆ ಸದಸ್ಯರಾದ ಜನಾಬಾಯಿ ಜಕಲಿ, ಕಿರಿಯ ಆರೋಗ್ಯ ನಿರೀಕ್ಷಕ ರಾಘವೇಂದ್ರ ಚೌವಾಣ್, ಜಯಶೀಲಾ, ಹನುಮಂತಪ್ಪ ಸೀತಾಮನೆ ಮುಂತಾದವರಿದ್ದರು. 

Saturday, 24 February 2018

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ


ಕೊಪ್ಪಳ ಫೆ. 24 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆನ್‍ಲೈನ್‍ನಲ್ಲಿಯೇ ಅರ್ಜಿ ಸಲ್ಲಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. 
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಪ್ಪಳ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಡಿ, ವಿವಿಧ ಕಾರಣಗಳಿಂದ ಖಾಲಿ ಇರುವ 02 ಅಂಗನವಾಡಿ ಕಾರ್ಯಕರ್ತೆಯರ ಮತ್ತು 21 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ವೆಬ್‍ಸೈಟ್   www.anganwadirecruit.kar.nic.in  ನಲ್ಲಿ ಆನ್‍ಲೈನ್ ಮೂಲಕ ಮಾರ್ಚ್. 16 ರೊಳಗಾಗಿ ಅರ್ಜಿ ಆಹ್ವಾನಿಸಿದ್ದು, ಆನ್‍ಲೈನ್ ಮೂಲಕವೇ ಸಲ್ಲಿಸಬೇಕು,  ಕಛೇರಿಯಲ್ಲಿ ಯಾವುದೇ ರೀತಿಯ ಅರ್ಜಿಯನ್ನು ಸ್ವೀಕರಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಗ್ರಾಮೀಣ ಪ್ರದೇಶದಲ್ಲಿನ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿದೆ- ಇಕ್ಬಾಲ್ ಅನ್ಸಾರಿ

ಕೊಪ್ಪಳ ಫೆ. 24 (ಕರ್ನಾಟಕ ವಾರ್ತೆ): ಗ್ರಾಮೀಣ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ಭಾರೀ ಪ್ರಮಾಣದಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿ, ಶುಧ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಶಾಸಕರಾದ ಇಕ್ಬಾಲ್ ಅನ್ಸಾರಿ ಹೇಳಿದರು.

     ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ  1 ಕೋಟಿ 53 ಲಕ್ಷ ವೆಚ್ಚದ ಸಿಸಿ ರಸ್ತೆ, ಶಾಲಾ ಕೊಠಡಿ, ಚೆಕ್ ಡ್ಯಾಂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

     ಗಂಗಾವತಿ ಕ್ಷೇತ್ರದ ಗ್ರಾಮೀಣದ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರೀ ಪ್ರಮಾಣದಲ್ಲಿ ಅನುದಾನ ತಂದಿದ್ದು ಪ್ರತಿ ಗ್ರಾಮದಲ್ಲಿ ಕೋಟಿ ರೂ.ಗೂ ಹೆಚ್ಚಿನ ಮೊತ್ತದ ಕಾಮಗಾರಿ ಆಗಿವೆ. ಆನೆಗೊಂದಿ ಭಾಗದ ಪುರಾತನ ವಿಜಯನಗರ ಕಾಲುವೆ ಶಾಸ್ವತ ದುರಸ್ತಿಗೆ 104 ಕೋಟಿ ರೂ.ಗಳು ಬಿಡುಗಡೆಯಾಗಿವೆ. ಕ್ಷೇತ್ರದ ಜನರಿಗೆ ಒಟ್ಟಾರೆ ಮೂಲಭೂತ ಸೌಕರ್ಯ ಒದಗಿಸಲು ಮೊದಲ ಆಧ್ಯತೆ ನೀಡಲಾಗಿದೆ ಎಂದು ಶಾಸಕರು ಹೇಳಿದರು. ಇದೇ ಸಂದರ್ಭದಲ್ಲಿ ‘ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ’ ಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಗ್ಯಾಸ್ ಸ್ಟವ್ ವಿತರಿಸಿದರು.

     ನಂತರ ಶಾಸಕರು ನಾಗೇಶಹಳ್ಳಿಯಲ್ಲಿ 1 ಕೋಟಿ ವೆಚ್ಚದ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಕಾಮಗಾರಿ, 45 ಲಕ್ಷ ವೆಚ್ಚದ ಸಿಸಿ ರಸ್ತೆ, ಚೆಕ್ ಡ್ಯಾಂ ಕಾಮಗಾರಿ, ಹಳೇ ಕುಮಟಾದಲ್ಲಿ 20 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಬಿಳೇಭಾವಿ ತಾಂಡಾದಲ್ಲಿ 15 ಲಕ್ಷದಲ್ಲಿ ನಿರ್ಮಾಣಗೊಂಡ ಸೇವಾಲಾಲ್ ಸಮುದಾಯ ಭವನ ಉದ್ಘಾಟಿಸಿದರು.
     ಈ ಸಂದರ್ಭದಲ್ಲಿ  ತಾಪಂ ಸದಸ್ಯ ಬಸವರಾಜ ಪಿ, ತಾಪಂ ಮಾಜಿ ಸದಸ್ಯ ಹನುಮಂತಪ್ಪ ವನಬಳ್ಳಾರಿ, ಗಣ್ಯರಾದ ಫಕೀರಪ್ಪ ಎಮ್ಮಿ, ಮಲ್ಲೇಶಪ್ಪ ಗುಮಗೇರಿ, ಎಸ್.ಬಿ. ಖಾದ್ರಿ, ಗ್ರಾಪಂ ಅಧ್ಯಕ್ಷರು, ಸದಸ್ಯರು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಯಮನೂರ ರಾಜಾಭಾಗಸವಾರ ದೇವರ ಜಾತ್ರೆ : ವಿಶೇಷ ವಾಹನ ವ್ಯವಸ್ಥೆ


ಕೊಪ್ಪಳ ಫೆ. 24 (ಕರ್ನಾಟಕ ವಾರ್ತೆ) ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೊಪ್ಪಳ ವಿಭಾಗವು ಯಮನೂರ ಚಾಂಗದೇವ ಉರ್ಫ್ ರಾಜಾಭಾಗಸವಾರ ದೇವರ ಜಾತ್ರೆಯ ನಿಮಿತ್ಯ ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಗಂಗಾವತಿ ಹಾಗೂ ಕುಕನೂರು ಘಟಕಗಳಿಂದ “ಯಮನುರ ಜಾತ್ರಾ ವಿಶೇಷ ವಾಹನ” ಸೌಲಭ್ಯವನ್ನು ಕಲ್ಪಿಸಿದೆ. 
    ಯಮನೂರ ಚಾಂಗದೇವ ಉರ್ಫ್ ರಾಜಾಭಾಗಸವಾರ ದೇವರ ಜಾತ್ರೆಯ ನಿಮಿತ್ಯ ಯಮನೂರಿಗೆ ಹೋಗಲು ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಗಂಗಾವತಿ ಹಾಗೂ ಕುಕನೂರು ಘಟಕದಿಂದ “ಯಮನುರ ಜಾತ್ರಾ ವಿಶೇಷ ವಾಹನ” ಸೌಲಭ್ಯವನ್ನು ಕಲ್ಪಿಸಲಾಗಿದ್ದು, ವಿಶೇಷ ಬಸ್ ಸೌಕರ್ಯ ಮಾ. 04 ರಿಂದ 09 ರವರೆಗೆ ಕಲ್ಪಿಸಲಾಗಿದೆ.  ಜಿಲ್ಲೆಯ ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಘಟಕದ ಅಧಿಕಾರಿಗಳ ದೂರವಾಣಿ ಸಂಖ್ಯೆ ಕೊಪ್ಪಳ-7760992413, ಕುಷ್ಟಗಿ-7760992414, ಯಲಬುರ್ಗಾ-7760992415, ಗಂಗಾವತಿ-7760992416, ಕುಕನೂರ-8197831224 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ವಿಶೇಷ ಚೇತನರಿಗೆ ಮತ ಚಲಾಯಿಸಲು ಈ ಬಾರಿ ವಿಶೇಷ ವ್ಯವಸ್ಥೆ : ವೆಂಕಟರಾಜಾಕೊಪ್ಪಳ ಫೆ. 23 (ಕರ್ನಾಟಕ ವಾರ್ತೆ): ವಿಶೇಷ ಚೇತನರಿಗೆ ಈ ಬಾರಿಯ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಚುನಾವಣಾ ಆಯೋಗ ವಿಶೇಷ ವ್ಯವಸ್ಥೆ ಕೈಗೊಳ್ಳಲಿದ್ದು, ಜಿಲ್ಲೆಯ 18 ವರ್ಷ ಮೇಲ್ಪಟ್ಟ ವಿಶೇಷ ಚೇತನರು ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಹೇಳಿದರು.  

    ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಸಾಮಥ್ರ್ಯ ಸಂಸ್ಥೆ ಇವರ ಸಹಯೋಗದಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ವಿ.ಆರ್.ಡಬ್ಲ್ಯೂ ಮತ್ತು ಎಂ.ಆರ್.ಡಬ್ಲ್ಯೂ ಕಾರ್ಯಕರ್ತರಿಗೆ ಏರ್ಪಡಿಸಲಾಗಿದ್ದ, ಒಂದು ದಿನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 


ಸಂವಿಧಾನ ಬದ್ಧವಾಗಿ ದೊರೆತಿರುವ ಮತದಾನದ ಹಕ್ಕನ್ನು ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.  ಸರ್ಕಾರವು ವಿಶೇಷ ಚೇತನರಿಗೆ ಅದರಲ್ಲೂ ತೀವ್ರತರ ವಿಶೇಷ ಚೇತನರಿಗೆ ಈ ಬಾರಿ ಚುನಾವಣೆಯಲ್ಲಿ ಮತ ಚಲಾಯಿಸುವುದಕ್ಕೆ ನೆರವಾಗಲು ಸ್ವಯಂ ಕಾರ್ಯಕರ್ತರನ್ನು ನೇಮಿಸುತ್ತಿದೆ.  ಮತ್ತು ವಿಶೇಷ ಚೇತನರಿಗೆ ಮತದಾನ ಕೇಂದ್ರಗಳಲ್ಲಿ ಅಡೆತಡೆ ರಹಿತ ಮಾರ್ಪಾಡುಗಳನ್ನು ಮಾಡುತ್ತಿದ್ದು, ಈಗಾಗಲೇ ಶೇ. 80% ರಷ್ಟು ಕಾರ್ಯ ಮುಕ್ತಾಯವಾಗಿದೆ.  ಜಿಲ್ಲೆಯ 18 ವರ್ಷ ಮೇಲ್ಪಟ್ಟ ವಿಶೇಷ ಚೇತನರು ಶೇ 100 ರಷ್ಟು ಮತ ಚಲಾಯಿಸಬೇಕು ಮತ್ತು ಮತದಾನ ಗುರುತಿನ ಚೀಟಿ ಇಲ್ಲದವರು ಕೂಡಲೇ ಅರ್ಜಿ ಸಲ್ಲಿಸಿ, ಮತದಾನ ಗುರುತಿನ ಚೀಟಿ  ಪಡೆದುಕೊಳ್ಳಬೇಕು ಎಂದು ಜಿ.ಪಂ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದರು.
ಸಾಮಥ್ರ್ಯ ಸಂಸ್ಥೆಯ ನಿರ್ದೇಶಕರಾದ ಬಿ. ಹಂಪಣ್ಣ ಅವರು ಮಾತನಾಡಿ, ವಿಶೇಷ ಚೇತನರು ಮತದಾನದಿಂದ ದೂರ ಉಳಿಯಬಾರದು.  ಸಮುದಾಯದಲ್ಲಿ ಗ್ರಾಮ ಪಂಚಾಯಿತಿಯ ವಿ.ಆರ್.ಡಬ್ಲ್ಯೂ ಕಾರ್ಯಕರ್ತರು ಮತ್ತು ಪ್ರತಿ ತಾಲ್ಲೂಕಿನ ಎಂ.ಆರ್.ಡಬ್ಲ್ಯೂ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ವಿಶೇಷ ಚೇತನರು ಮತದಾನ ಮಾಡುವಂತೆ ಜಾಗೃತಿ ಮೂಡಿಸಿ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಲು ನೆರವಾಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ-ನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ವಹಿಸಿದ್ದರು.  ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ, ಜಿಲ್ಲಾ ವಿಕಲಚೇತನರ ಒಕ್ಕೂಟದ ಅಧ್ಯಕ್ಷ ಶಿವಯೋಗೆಪ್ಪ ಉಪಸ್ಥಿತರಿದ್ದರು.  ಹಾಗೂ ತರಬೇತಿ ಕಾರ್ಯಕ್ರಮದಲ್ಲಿ 100 ಕ್ಕೂ ಹೆಚ್ಚು ವಿ.ಆರ್.ಡಬ್ಲ್ಯೂ ಮತ್ತು ಎಂ.ಆರ್.ಡಬ್ಲ್ಯೂ ಕಾರ್ಯಕರ್ತರು ಭಾಗವಹಿಸಿದ್ದರು. 

ಕುಕನೂರಿನಲ್ಲಿ ಕ್ಯಾಂಪಸ್ ಸಂದರ್ಶನ ಫೆ. 28 ಕ್ಕೆ ಮುಂದೂಡಿಕೆ


ಕೊಪ್ಪಳ ಫೆ. 24 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಜ್ ಪ್ರೈ.ಲಿ. ಬೇವಿನಹಳ್ಳಿ, ಇವರಿಂದ ಐಟಿಐ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಶಿಶಿಕ್ಷು (ಅಪ್ರೆಂಟಿಸ್) ತರಬೇತಿಗಾಗಿ ಫೆ. 26 ರಂದು ಕೊಪ್ಪಳ ಜಿಲ್ಲೆಯ ಕುಕನೂರು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಕ್ಯಾಂಪಸ್ ಸಂದರ್ಶನವನ್ನು ಫೆ. 28 ಕ್ಕೆ ಮುಂದೂಡಲಾಗಿದೆ.
ಫೆ. 28 ರಂದು ಬೆಳಿಗ್ಗೆ 10 ಗಂಟೆಗೆ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದ್ದು, ಭಾಗವಹಿಸಲು ಐಟಿಐನಲ್ಲಿ ಎನ್.ಸಿ.ವಿ.ಟಿ ಅಡಿಯಲ್ಲಿ ಎಲೆಕ್ಟ್ರೀಷಿಯನ್, ಫಿಟ್ಟರ್, ಟರ್ನರ್ ಅಥವಾ ವೆಲ್ಡರ್ ವೃತ್ತಿಯಲ್ಲಿ ಉತ್ತೀರ್ಣರಾಗಿರಬೇಕು.  18 ರಿಂದ 25 ವರ್ಷ ವಯೋಮಿತಿಯಲ್ಲಿರಬೇಕು.  ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.   ಸ್ಟೈಪೆಂಡ್ ಕಂಪನಿಯ ನಿಯಮಾನುಸಾರ ದೊರೆಯಲಿವೆ.  ಅಭ್ಯಥಿಗಳು ಎಸ್.ಎಸ್.ಎಲ್.ಸಿ ಮತ್ತು ಐ.ಟಿ.ಐ ಪಾಸಾದ ಮಾಕ್ರ್ಸ್ ಕಾರ್ಡ್ ಮತ್ತು ಎನ್.ಸಿ.ವಿ.ಟಿ ಪ್ರಮಾಣ ಪತ್ರಗಳ ಝರಾಕ್ಸ್ ಪ್ರತಿ, ಹಾಗೂ ಭಾವಚಿತ್ರಗಳೊಂದಿಗೆ ಹಾಜರಾಗಬೇಕು.  ತಮ್ಮ ಸ್ವಂತ ಖರ್ಚಿನಲ್ಲಿಯೇ ಸಂದರ್ಶನಕ್ಕೆ ಆಗಮಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9964247098 ಕ್ಕೆ ಸಂಪರ್ಕಿಸಬಹುದು ಎಂದು ಕುಕನೂರು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಪ್ರಾಚಾರ್ಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರೀಡಾಸಕ್ತಿ ಹೆಚ್ಚಿಸಲು “ಯುವ ಚೈತನ್ಯ” ಯೋಜನೆ ಪೂರಕವಾಗಿದೆ : ರಾಜಶೇಖರ ಹಿಟ್ನಾಳ


ಕೊಪ್ಪಳ ಫೆ. 23 (ಕರ್ನಾಟಕ ವಾರ್ತೆ): ಕ್ರೀಡಾಸಕ್ತಿ ಹೆಚ್ಚಿಸಿ ಯುವಕರನ್ನು ಸದೃಡ ಹಾಗೂ ಆರೋಗ್ಯವಂತರನ್ನಾಗಿಸಲು ರಾಜ್ಯ ಸರ್ಕಾರವು ಇದೇ ಮೊದಲಬಾರಿಗೆ ಜಾರಿಗೊಳಿಸಿರುವ “ಯುವ ಚೈತನ್ಯ” ಯೋಜನೆಯು ಅತ್ಯಂತ ಪೂರಕ ಯೋಜನೆಯಾಗಿದೆ  ಎಂದು ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಹೇಳಿದರು.   

    ಕೊಪ್ಪಳ ತಾಲೂಕಿನ ನೊಂದಾಯಿತ ಯವ ಸಂಘಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ “ಯುವ ಚೈತನ್ಯ” ಕಾರ್ಯಕ್ರಮದಡಿ ನಗರದ ಸಾಹಿತ್ಯ ಭವನದಲ್ಲಿ ಶನಿವಾರದಂದು ಏರ್ಪಡಿಸಲಾದ ಕ್ರೀಡಾ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

    ಭಾರತವು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಹೊಂದಿದ ದೇಶವಾಗಿದೆ.  ಯುವಕರು ದುಶ್ಚಟಗಳಿಗೆ ಒಳಗಾಗದೆ, ಕ್ರೀಡೆಗಳು, ಸಾಂಸ್ಕøತಿಕ ಚಟುವಟಿಕೆಗಳಂತಹ ಸೃಜನಶೀಲ ಹವ್ಯಾಸವನ್ನು ಬೆಳಿಸಿಕೊಳ್ಳಬೇಕು.  ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಖಾಂತರವಾಗಿ ಯುವ ಜನರನ್ನು ಕ್ರೀಡೆಗಳತ್ತ ಪ್ರೋತ್ಸಾಹಿಸಲು “ಯುವ ಚೈತನ್ಯ” ಎಂಬ  ಮಹತ್ತರವಾದ ಯೋಜನೆಯೊಂದನ್ನು ಪ್ರಥಮಬಾರಿಗೆ ಜಾರಿಗೆ ತಂದಿದೆ.  ಈ ಯೋಜನೆಯಲ್ಲಿ ರಾಜ್ಯದ ನೊಂದಾಯಿತ ಯುವ ಸಂಘಗಳಿಗೆ ಕ್ರೀಡಾ ಸಾಮಾಗ್ರಿಗಳನ್ನು ನೀಡಲು ಉದ್ದೇಶಿಸಿದ್ದು, ಇದರಲ್ಲಿ ನಮ್ಮ ಕೊಪ್ಪಳ ಜಿಲ್ಲೆಯ 129 ಸಂಸ್ಥೆಗಳು ಒಳಗೊಂಡಿವೆ.  ಯೋಜನೆಯ ಸದುಪಯೋಗ ಪಡೆದು, ಯುವಕರು ಕ್ರೀಡಾ ಚಟುವಟಿಕೆಗಳನ್ನು ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡು ಮುಂದಿನ ದಿನಮಾನಗಳಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲೆಯ, ರಾಜ್ಯದ ಹಾಗೂ ಈ ದೇಶಕ್ಕೆ ಕೀರ್ತಿ ತರುವಂತಹ ಪ್ರಯತ್ನ ಮಾಡಬೇಕಾಗಿದೆ.  ಸರ್ಕಾರವು ಶಿಕ್ಷಣಕ್ಕಾಗಿ ಅತಿ ಹೆಚ್ಚಿನ ಒತ್ತು ನೀಡುತ್ತಿದ್ದು, ವಿದ್ಯಾಸಿರಿ, ಕ್ಷೀರಭಾಗ್ಯಗಳಂತಹ ಯೋಜನೆಗಳನ್ನು ಜಾರಿಗೆ ತಂದಿದೆ.  ಪ್ರಸಕ್ತ ಸಾಲಿನಲ್ಲಿ ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಹಾಗೂ ಲ್ಯಾಪ್‍ಟ್ಯಾಪ್ ನೀಡುವ ಕಾರ್ಯದಿಂದ ಇಡೀ ದೇಶದ ಗಮನವನ್ನು ನಮ್ಮ ಸರ್ಕಾರ ಸೆಳೆದಿದೆ ಎಂದು ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಹೇಳಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಯುವ ಚೈತನ್ಯ ಕಾರ್ಯಕ್ರಮವು ಯುವಕರಿಗೆ ಅತ್ಯದ್ಬುತವಾದ ಕೊಡುಗೆಯಾಗಿದೆ.  ಹಾಗೂ ಯುವಕರಲ್ಲಿ ಅಡಗಿದ ಪ್ರತಿಭೆಯನ್ನು ಗುರುತಿಸಲು ಮೊಟ್ಟ ಮೊದಲಿಗೆ ಜಾರಿಯಾದಂತಹ ಒಂದು ಹೊಸ ಕಾರ್ಯಕ್ರಮ ಇದಾಗಿದೆ.  ಇಂದಿನ ದಿನಮಾನಗಳಲ್ಲಿ ಯುವಕರಲ್ಲಿ ಕ್ರೀಡಾಸಕ್ತಿ ಕಡಿಮೆಯಾಗುತ್ತಿದ್ದು, ಈ ದಿಸೆಯಲ್ಲಿ ಸರ್ಕಾರವು ಕ್ರಿಕೆಟ್ ಬ್ಯಾಟ್-ಬಾಲ್, ವಾಲಿಬಾಲ್, ಫುಟ್‍ಬಾಲ, ಥ್ರೋಬಾಲ್, ಶಟಲ್ ಬ್ಯಾಟ್‍ಮಿಂಟನ್, ಹೀಗೆ ಅನೇಕ ಕ್ರೀಡಾ ಸಾಮಾಗ್ರಿಗಳ ಕಿಟ್ ನೀಡುವುದರ ಮೂಲಕ ಕ್ರೀಡೆಯತ್ತ ಯುವಕರನ್ನು ಕೊಂಡೊಯ್ಯಲು ಪ್ರಯತ್ನಿಸುತ್ತಿದೆ.  ಯುವಕರು ‘ಯುವ ಚೈತನ್ಯ’ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿದೆ.  ದೈಹಿಕ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಈಜುಗೋಳವನ್ನು ಸಹ ಸ್ಥಾಪಿಸಲಾಗಿದೆ.  ತಾಲೂಕು ಕ್ರೀಡಾಂಗಣಕ್ಕೆ 2.5 ಕೋಟಿ, ಭಾಗ್ಯನಗರದಲ್ಲಿ ಸೆಂಟ್ರಲ್ ಲೈಬ್ರರಿ ಸ್ಥಾಪನೆಗೆ ಒಂದು ಕೋಟಿ ಅನುದಾನವನ್ನು ನೀಡಲಾಗಿದೆ.  ಯುವಕರಿಗೆ ಅನುಕೂಲವಾಗುವಂತೆ ಮುಂದಿನ ದಿನಮಾನಗಳಲ್ಲಿ ತಾಲೂಕಿನ ನಾಲ್ಕು ಹೋಬಳಿಗಳಲ್ಲಿ “ಮಲ್ಟಿ ಜಿಮ್” ಗಳನ್ನು ಸಹ ನಿರ್ಮಿಸಲಾಗುವುದು ಎಂದರು.     
    ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ಸದಸ್ಯರಾದ ಮಹೇಶ ಭಜಂತ್ರಿ, ಮುತ್ತುರಾಜ ಕುಷ್ಟಗಿ, ಮಾರುತಿ ಕಾರಟಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೈ. ಸುದರ್ಶನರಾವ್ ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಯುವ ಪ್ರಶಸ್ತಿ ಪುರಸ್ಕøತರು, ಹಾಗೂ ಗಣ್ಯರು ಉಪಸ್ಥಿತರಿದ್ದರು.  ತಾಲೂಕಿನ ನೊಂದಾಯಿತ ಯುವ ಸಂಘಗಳಿಗೆ ಇದೇ ಸಂದರ್ಭದಲ್ಲಿ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು. 

ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಎಲ್ಲರೂ ಸಹಕರಿಸಿ : ಎನ್.ಎಸ್. ಕುಲಕರ್ಣಿ


ಕೊಪ್ಪಳ ಫೆ. 24 (ಕರ್ನಾಟಕ ವಾರ್ತೆ): ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಸಹಕರಿಸಬೇಕು ಎಂದು ಕುಷ್ಟಗಿ ತಾಲೂಕ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾದೀಶರಾದ ಎನ್.ಎಸ್. ಕುಲಕರ್ಣಿ ಅವರು ಸಾರ್ವಜನಿಕರಿಗೆ ಕರೆ ನೀಡಿದರು. 
ಕುಷ್ಟಗಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯಾವಾದಿಗಳ ಸಂಘ, ತಾಲೂಕ ಆಡಳಿತ, ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಕಂದಕೂರದ ಗ್ರಾಮದ ಸರ್ದಾರ್ ವಲ್ಲಭಾಯಿ ಪಟೇಲ್ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಲಾದ ಜನಜಾಗೃತಿ ಕಾರ್ಯಕ್ರಮ ಮತ್ತು “ಸಾಮಾಜಿಕ ನ್ಯಾಯದ ವಿಶ್ವ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ದತಿಯನ್ನು ಹೋಗಲಾಡಿಸಬೇಕಾದರೆ ಇದರಲ್ಲಿ ಸಮಾಜದ ಪಾತ್ರ ಮಹತ್ವದಾಗಿದ್ದು, ಎಲ್ಲಾ ನಾಗರೀಕರು ಬಾಲಕಾರ್ಮಿಕ ಪದ್ದತಿಯ ನಿರ್ಮೂಲನೆಗಾಗಿ ಸಹಕರಿಸಬೇಕು.  ಬಾಲಕಾರ್ಮಿಕರು ಕಂಡು ಬಂದಲ್ಲಿ ಬಾಲಕಾರ್ಮಿಕ ಇಲಾಖೆ ಅಥವಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು.  ಮಕ್ಕಳಿಗೆ ಮೂಲಭೂತ ಹಕ್ಕುಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.  ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು.  ಕಾನೂನು ದುಬಾರಿ ವಸ್ತು ಅದು ಶ್ರೀಮಂತರ ಕೈಯಲ್ಲಿದೆ ಎಂದು ತಪ್ಪು ಕಲ್ಪನೆ ಜನರಲ್ಲಿ ಮನೆ ಮಾಡಿದೆ.  ಆದರೆ ನ್ಯಾಯದ ಮುಂದೆ ಎಲ್ಲರೂ ಸರಿಸಮಾನರು ಹಾಗೂ ಎಲ್ಲರೂ ಕಾನೂನು ಜ್ಞಾನವನ್ನು ಪಡೆದುಕೊಳ್ಳಬೇಕು.  ಎಲ್ಲರಿಗೂ ನ್ಯಾಯ ಒದಗಿಸಲು ಕಾನೂನು ಸೇವಾ ಸಮಿತಿ ಸಿದ್ಧವಿದೆ.  ಕಾನೂನಿನ ರಕ್ಷಣೆ ಹಾಗೂ ಅರಿವಿನ ಅಗತ್ಯವಿರುವ ಯಾವುದೇ ವ್ಯಕ್ತಿ ಬಂದು ತಮಗೆ ಬೇಕಾದ ಕಾನೂನು ಸಲಹೆ ಪಡೆಯಬಹುದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕುಷ್ಟಗಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಪರಸಪ್ಪ ಎನ್. ಗುಜಮಾಗಡಿ ಅವರು ಮಾತನಾಡಿ, ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘವು ಜನಸಾಮಾನ್ಯರ ಅನುಕೂಲಕ್ಕೆ ಯಾವಾಗಲು ಬದ್ಧವಾಗಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು.  ಇಂದು ಕಾನೂನು ಎಲ್ಲರ ಮನೆಬಾಗಿಲಿಗೆ ಬಂದು ಸಹಾಯ ಮಾಡುತ್ತಿದ್ದು ಅದರ ಪ್ರಯೋಜನ ಪಡೆದುಕೊಳ್ಳಬೇಕು ಮತ್ತು  ಬಾಲಕಾರ್ಮಿಕತೆಯಂತಹ ಅನಿಷ್ಠ ಪದ್ದತಿಯನ್ನು ಎಲ್ಲರೂ ಕೂಡಿ ತೊಡೆದು ಹಾಕಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ ಅವರು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿರ್ಮೂಲನೆ ಕುರಿತು, ಕುಷ್ಟಗಿಯ ವಕೀಲರಾದ ಎಂ.ಬಿ. ಕೋನಸಾಗರ ಅವರು ಬಾಲನ್ಯಾಯ ಕಾಯ್ದೆಯ ಕುರಿತು, ಹಾಗೂ ಇನ್ನೋರ್ವ ವಕೀಲರಾದ ಬಿ.ಆರ್. ಪಾಟೀಲ್ ಅವರು ಅಪರಾಧ ಕೃತ್ಯಕ್ಕೊಳಗಾದ ವ್ಯಕ್ತಿಗೆ ಪರಿಹಾರ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.  ತಾಲೂಕ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಬಿ. ಕೇಶವಮೂರ್ತಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ರಫೀಕ್ ಅಹ್ಮದ್, ಕಂದಕೂರು ಗ್ರಾ.ಪಂ. ಅಧ್ಯಕ್ಷ ಬಸವರಾಜ ತುಮ್ಮರಗುದ್ದಿ, ಸ್ಪಂದನಾ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ರವೀಂದ್ರ ಪತ್ತಾರ, ಸಮಾಜ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು, ಸರ್ದಾರ್ ವಲ್ಲಭಾಯಿ ಪಟೇಲ್ ಶಾಲೆಯ ವಿದ್ಯಾರ್ಥಿಗಳು, ಕಂದಕೂರ ಗ್ರಾಮಸ್ಥರು, ಗ್ರಾ.ಪಂ. ಸದಸ್ಯರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಕುಷ್ಟಗಿಯಲ್ಲಿ ಮಕ್ಕಳ ರಕ್ಷಣೆ ಮತ್ತು ಪರವಾದ ಕಾನೂನು ಕುರಿತು ಜಾಗೃತಿ ಕಾರ್ಯಕ್ರಮ


ಕೊಪ್ಪಳ ಫೆ. 24 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿಯ ತಾಲ್ಲೂಕು ಆಸ್ಪತ್ರೆಯಲ್ಲಿ ಮಕ್ಕಳ ರಕ್ಷಣೆ ಮತ್ತು ಪರವಾದ ಕಾನೂನು ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. 
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ “ಮಕ್ಕಳ ರಕ್ಷಣೆ ಮತ್ತು ಮಕ್ಕಳ ಪರವಾದ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮ”ವನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀರೇಂದ್ರ ನವಾದಗಿ ಅವರು ಮಾತನಾಡಿ, ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿಯಲ್ಲಿ ಮಕ್ಕಳ ರಕ್ಷಣಾ ಘಟವು ಈಗಾಗಲೇ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಕ್ಕಳ ಹಕ್ಕುಗಳ ಕುರಿತು ಈಗಾಗಲೇ ಸಾಕಷ್ಟು ಅರಿವು, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.  ಆದಾಗ್ಯೂ ಸಹ, ಇನ್ನೂ ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯುತ್ತಿವೆ, ಬಾಲಕಾರ್ಮಿಕತೆ ಕಂಡುಬರುತ್ತಿದೆ.  ಮತ್ತು ಇತ್ತೀಚೆಗೆ ನವಜಾತ ಶಿಶುಗಳನ್ನು ಎಲ್ಲಂದರಲ್ಲಿ ಬಿಸಾಕುತ್ತಿರುವುದು ಕಂಡುಬರುತ್ತಿದೆ.  ಈ ಕುರಿತು ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ತೊಟ್ಟಿಲು ಯೋಜನೆಯನ್ನು ಜಾರಿಗೊಳಿಸಿದ್ದು, ಮಗುವನ್ನು ಎಲ್ಲಂದರಲ್ಲಿ ಬಿಸಾಡದೇ ತೊಟ್ಟಿಲಿನಲ್ಲಿ ಹಾಕಿದರೆ ಮಗುವಿನ್ನು ಸರ್ಕಾರ ಪೋಷಿಸುತ್ತದೆ ಹಾಗೂ ಮಗುವಿನ ಭವಿಷ್ಯ ಉಜ್ವಲಗೊಳ್ಳುತ್ತದೆ.  ಜಿಲ್ಲೆಯಲ್ಲಿ ಗುರುತಿಸಿದ ತೀವ್ರ ಸಂಕಷ್ಠದಲ್ಲಿರುವ ಎಚ್.ಐ.ವಿ ಭಾದಿತ ಹಾಗೂ ಸೋಂಕಿತ ಮಕ್ಕಳ ಆರೈಕೆ ಮತ್ತು ಪೋಷಣೆಗಾಗಿ ಅನುದಾವನ್ನು ಬಿಡುಗಡೆ ಮಾಡಲಾಗಿದೆ ಅಂತಹ ಮಕ್ಕಳು ಕಂಡುಬಂದಲ್ಲಿ ಕಛೇರಿಗೆ ಮಾಹಿತಿ ನೀಡಿ ಎಂದು ತಿಳಿಸಿದರು.
ಮಕ್ಕಳ ವಿಶೇಷ ಪೊಲೀಸ್ ಘಟಕದ ಬಸಪ್ಪ ಹಾದಿಮನಿ ಅವರು ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌಜನ್ಯಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಲೈಂಗಿಕ ದೌಜನ್ಯದಿಂದ ಮಕ್ಕಳ ಸಂರಕ್ಷಣೆ ಕಾಯ್ದೆ- 2012 (ಪಿ.ಓ.ಸಿ.ಎಸ್.ಓ) ರ ಕುರಿತು ಮಾಹಿತಿ ನೀಡಿದರು. ಹಾಗೂ ಮಹಾಲಿಂಗಪ್ಪ ದೋಟಿಹಾಳ ಅವರು ಮಕ್ಕಳ ಕಲ್ಯಾಣ ಸಮಿತಿಯ ಕುರಿತು ಮಾಹಿತಿ ನೀಡಿದರು. 
ಅಂಗನವಾಡಿ ಮೇಲ್ವಿಚಾರಕರಾದ ಸರಸ್ವತಿ ಅವರು ಕೌಟಂಬಿಕ ದೌರ್ಜನ್ಯ ಕಾಯ್ದೆಯಡಿ ನೊಂದಮಹಿಳೆಯರಿಗೆ ಆಪ್ತಸಮಾಲೋಚನೆ, ಉಚಿತ ಕಾನೂನು ನೆರವು, ತಾತ್ಕಾಲಿಕ ಆಶ್ರಯ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಠಾನಗೊಳಿಸಿದ್ದು ಅಲ್ಲದೇ ಸಂಕಷ್ಠಕೊಳಗಾದ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಸಾಹಯವಾಣಿ ಕೇಂದ್ರವನ್ನು ಸ್ಥಾಪಿಸಿದ್ದು, 1091ಗೆ ಕರೆ ಮಾಡಿ ಸಂಕಷ್ಠಕೊಳಗಾದ ಮಹಿಳೆಯ ಬಗ್ಗೆ ಮಾಹಿತಿಯನ್ನು ನೀಡಿದಲ್ಲಿ ಆದಷ್ಟು ಶೀಘ್ರದಲ್ಲಿ ಆ ಮಹಿಳೆಯನ್ನು ರಕ್ಷಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಮಕ್ಕಳ ರಕ್ಷಣಾ ಘಟಕದ ರವಿಕುಮಾರ ಬಡಿಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮಾ. 01 ರಿಂದ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ


ಕೊಪ್ಪಳ ಫೆ. 24 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಮಾ. 01 ರಿಂದ 17 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ. 01 ರಿಂದ 17 ರವರೆಗೆ ಜಿಲ್ಲೆಯ 16 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.  ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶವಿಲ್ಲದಂತೆ, ಸುಗಮವಾಗಿ ನಡೆಸುವ ಸಲುವಾಗಿ, ಪರೀಕ್ಷಾ ದಿನಗಳಂದು, ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1-30 ರವರೆಗೆ ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.  ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.  ಕಾಫಿ ಮಾಡುವ ಸಾಮಾಗ್ರಿಗಳನ್ನು ಹಾಗೂ ಹೊರಗಿನಿಂದ ಕಾಫಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ.  ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.  ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಸುಗಮ ಪಿಯುಸಿ ಪರೀಕ್ಷೆಗೆ ವ್ಯವಸ್ಥಿತ ಸಿದ್ಧತೆ ಕೈಗೊಳ್ಳಿ- ಡಾ. ರುದ್ರೇಶ್ ಘಾಳಿ


ಕೊಪ್ಪಳ ಫೆ. 24 (ಕ.ವಾ): ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ. 01 ರಿಂದ 17 ರವರೆಗೆ ನಡೆಯಲಿದ್ದು, 12391 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.  ಪರೀಕ್ಷೆಯನ್ನು ಸುಗಮ, ನ್ಯಾಯಸಮ್ಮತ ಹಾಗೂ ಸಮರ್ಪಕವಾಗಿ ಕೈಗೊಳ್ಳಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು  ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
     ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಜಿಲ್ಲೆಯಲ್ಲಿ ಈ ಬಾರಿ ಒಟ್ಟು 12391 ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದು, ಇದಕ್ಕಾಗಿ ಒಟ್ಟು 16 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.  ಕೊಪ್ಪಳ ತಾಲೂಕಿನಲ್ಲಿ 04, ಯಲಬುರ್ಗಾ-02, ಕುಷ್ಟಗಿ-03 ಹಾಗೂ ಗಂಗಾವತಿ ತಾಲೂಕಿನಲ್ಲಿ 07 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದೆ.  ಪರೀಕ್ಷೆಯು ಸಮರ್ಪಕವಾಗಿ ನಡೆಸಲು ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು.   ಪ್ರಶ್ನೆಪತ್ರಿಕೆಗಳ ಸುರಕ್ಷತೆ ಬಗ್ಗೆ ಅಧಿಕಾರಿಗಳು ಇಲಾಖೆಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.  ಪ್ರಶ್ನೆಪತ್ರಿಕೆಗಳನ್ನು ಇರಿಸಲಾಗುವ ಖಜಾನೆ ಕೇಂದ್ರಗಳಿಂದ ದೂರವಿರುವ ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಅವಧಿ ಒಳಗಾಗಿ ತಲುಪುವಂತೆ ಪೂರ್ವಸಿದ್ಧತೆ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸೂಕ್ತ ಆಸನ, ಗಾಳಿ, ಬೆಳಕು ಹಾಗೂ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಇರಬೇಕು. ಪರೀಕ್ಷಾ ಕೊಠಡಿಯಲ್ಲಿ ಮೇಲ್ವಿಚಾರಕರು, ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳಿಗೆ ಸೂಕ್ತ ತಿಳುವಳಿಕೆ ಹಾಗೂ ಜಾಗೃತಿ ಮೂಡಿಸುವ ಮೂಲಕ ಪರೀಕ್ಷಾಭಯ ಹೋಗಲಾಡಿಸಬೇಕು.  ಪರೀಕ್ಷೆ ಸಂದರ್ಭದಲ್ಲಿ ಮಾಧ್ಯಮದವರು ಚಿತ್ರೀಕರಣ ಅಥವಾ ಫೋಟೋ ಪಡಯಲು ಅವಕಾಶ ನೀಡಿದಲ್ಲಿ, ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ, ಮಾಧ್ಯಮದವರು ಪರೀಕ್ಷೆ ಪ್ರಾರಂಭಕ್ಕೂ ಮೊದಲು ಅಲ್ಲಿನ ವ್ಯವಸ್ಥೆಯ ಬಗ್ಗೆ ವಿಡಿಯೋ ಅಥವಾ ಫೋಟೋ ಪಡೆಯಲು ಮಾತ್ರ ಅವಕಾಶ ನೀಡಬಹುದು.  ಪರೀಕ್ಷೆ ಪ್ರಾರಂಭದ ನಂತರ ಮಾಧ್ಯಮದವರ ಪ್ರವೇಶಕ್ಕೆ ಅವಕಾಶವಿಲ್ಲ.  ಪರೀಕ್ಷೆಯನ್ನು ಸುಗಮವಾಗಿ ನಡೆಸಲು, ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳ್ಳಲಿದೆ.  ಅಲ್ಲದೆ ಸೂಕ್ತ ಪೊಲೀಸ್ ಬಂದೋಬಸ್ತ್‍ಗೆ ಕ್ರಮ ಕೈಗೊಳ್ಳಲಾಗುವುದು.  ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಅಥವಾ ನಕಲಿಗೆ ಅವಕಾಶ ನೀಡದಂತೆ ಸುಗಮ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷೆ ನಡೆಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
     ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ಕೃಷ್ಣಸ್ವಾಮಿ ಅವರು ಪರೀಕ್ಷೆಯ ಕುರಿತು ಸಭೆಗೆ ವಿವರಣೆ ನೀಡಿ, ಈ ಬಾರಿ ಸುರಕ್ಷತಾ ಪರೀಕ್ಷಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದ್ದು, ಒಟ್ಟು 12391 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ.  ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸುವ ಕಾರ್ಯಕ್ಕಾಗಿ 10 ಮಾರ್ಗಾಧಿಕರಿಗಳನ್ನು ನೇಮಿಸಲಾಗಿದೆ.  ಪ್ರಶ್ನೆಪತ್ರಿಕೆಗಳ ಸುರಕ್ಷತೆಗಾಗಿ ಈ ಬಾರಿ ಹೆಚ್ಚಿನ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಪ್ರಶ್ನೆಪತ್ರಿಕೆಗಳ ಅಕ್ರಮ ಪ್ರಕರಣಗಳ ಸಂಬಂಧ ಆರೋಪಿಗಳಿಗೆ 06 ವರ್ಷಗಳ ಜೈಲು ಶಿಕ್ಷೆ ಮತ್ತು 06 ಲಕ್ಷ ರೂ. ಗಳ ದಂಡ ವಿಧಿಸಲು ಕಾನೂನು ರೂಪಿಸಲಾಗಿದೆ.  ಪ್ರಶ್ನೆಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುತ್ತಿದ್ದು, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ವಾಹನ ಸಾಗುವ ಮಾರ್ಗಗಳ ಬಗ್ಗೆ ನಿಗಾ ಇರಿಸಲಾಗುವುದು.  ಮಾರ್ಗ ಬದಲಾವಣೆಯಾದಲ್ಲಿ ಸ್ವಯಂ ಚಾಲಿತವಾಗಿ ಎಸ್‍ಎಂಎಸ್ ಸಂದೇಶ ರವಾನೆ ವ್ಯವಸ್ಥೆ ಇರುತ್ತದೆ.  ವಿದ್ಯಾರ್ಥಿಗಳು ಯಾವುದೇ ಬಗೆಯ ಎಲೆಕ್ಟ್ರಾನಿಕ್ ಉಪಕರಣಗಳೊಂದಿಗೆ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ ಎಂದರು.

ಪರೀಕ್ಷಾ ಕೇಂದ್ರಗಳ ವಿವರ :
********** ಜಿಲ್ಲೆಯಲ್ಲಿ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ವಿವರ ಇಂತಿದೆ.  ಕೊಪ್ಪಳದ ಗವಿಸಿದ್ದೇಶ್ವರ ಪ.ಪೂ ಕಾಲೇಜು, ಬಾಲಕರ ಸರಕಾರಿ ಪ.ಪೂ ಕಾಲೇಜು, ಬಾಲಕಿಯರ ಸರಕಾರಿ ಪ.ಪೂ ಕಾಲೇಜು,  ಬಿ.ಎನ್.ಆರ್.ಕೆ ಪ.ಪೂ ಕಾಲೇಜು. ಯಲಬುರ್ಗಾದ ಸರಕಾರಿ ಪ.ಪೂ ಕಾಲೇಜು, ಕುಕನೂರ ತಾಲೂಕಿನ ವಿದ್ಯಾನಂದ ಗುರುಕುಲ ಪ.ಪೂ ಕಾಲೇಜು. ಕುಷ್ಟಗಿಯ ಸರಕಾರಿ ಬಾಲಕರ ಪ.ಪೂ ಕಾಲೇಜು, ಸರಕಾರಿ ಬಾಲಕಿಯರ ಪ.ಪೂ ಕಾಲೇಜು. ತಾವರಗೇರಾದ ಸರಕಾರಿ ಬಾಲಕೀಯರ ಪ.ಪೂ ಕಾಲೇಜು. ಗಂಗಾವತಿಯ ಸರಕಾರಿ ಬಾಲಕರ ಪ.ಪೂ ಕಾಲೇಜು, ಹೆಚ್.ಆರ್. ಸರೋಜಮ್ಮ ಪ.ಪೂ ಕಾಲೇಜು, ಸರಕಾರಿ ಎಸ್.ಎಂ.ಎನ್.ಎಂ ಬಾಲಕೀಯರ ಪ.ಪೂ ಕಾಲೇಜು. ಕಾರಟಗಿಯ ಸರಕಾರಿ ಪ.ಪೂ ಕಾಲೇಜು, ಶ್ರೀರಾಮನಗರದ ಎ.ಕೆ.ಆರ್. ದೇವಿ ಪ.ಪೂ ಕಾಲೇಜು, ಕನಕಗಿರಿಯ ಸರಕಾರಿ ಪ.ಪೂ ಕಾಲೇಜು, ಮತ್ತು ಗಂಗಾವತಿಯ ವಾಯ್. ಜನತಾರಾಣಿ ಪ.ಪೂ ಕಾಲೇಜು.
ವೇಳಾಪಟ್ಟಿ :
******* ಮಾ. 01 ರಿಂದ ಮಾ. 17 ರವರೆಗೆ ಬೆಳಿಗ್ಗೆ 10-15 ರಿಂದ ಮಧ್ಯಾಹ್ನ 01-30 ಗಂಟೆಯವರೆಗೆ ಪರೀಕ್ಷೆ ಜರುಗಲಿದೆ.  ಮಾ. 01 ರಂದು ಅರ್ಥಶಾಸ್ತ್ರ, ಭೌತಶಾಸ್ತ್ರ.  ಮಾ. 02 ರಂದು ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೊಮೊಬೈಲ್, ಹೆಲ್ತ್ ಕೇರ್, ಬ್ಯೂಟಿ & ವೆಲ್‍ನೆಸ್.  ಮಾ. 03 ರಂದು ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್.  ಮಾ. 05 ರಂದು ಬಿಸಿನೆಸ್ ಸ್ಟಡೀಸ್, ಜೀವಶಾಸ್ತ್ರ.  ಮಾ. 06 ರಂದು ಉರ್ದು, ಸಂಸ್ಕøತ.  ಮಾ. 07 ರಂದು ರಾಜ್ಯಶಾಸ್ತ್ರ, ಜಿಯೋಲಜಿ.  ಮಾ. 08 ರಂದು ಐಚ್ಛಿಕ ಕನ್ನಡ, ಅಕೌಂಟೆನ್ಸಿ.  ಮಾ. 09 ರಂದು ಲಾಜಿಕ್, ಎಜುಕೇಶನ್, ಹೋಮ್ ಸೈನ್ಸ್.  ಮಾ. 10 ರಂದು  ಹಿಸ್ಟರಿ, ಸ್ಟ್ಯಾಟಿಕ್ಸ್.  ಮಾ. 12 ರಂದು ಸಮಾಜಶಾಸ್ತ್ರ, ಗಣಿತ, ಬೇಸಿಕ್ ಮ್ಯಾಥ್ಸ್.  ಮಾ. 13 ರಂದು ಜಿಯೋಗ್ರಫಿ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ.  ಮಾ. 14 ರಂದು ಕನ್ನಡ.  ಮಾ. 15 ರಂದು ಹಿಂದಿ.  ಮಾ. 16 ರಂದು ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್.  ಮಾ. 17 ರಂದು ಇಂಗ್ಲೀಷ್. ವಿಷಯಗಳ ಪರೀಕ್ಷೆ ನಡೆಯಲಿದೆ.
     ಸಭೆಯಲ್ಲಿ ಡಿಡಿಪಿಐ ಹನುಮಂತಪ್ಪ, ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಾಲೇಜುಗಳ ಪ್ರಾಚಾರ್ಯರು, ತಹಸಿಲ್ದಾರರು ಭಾಗವಹಿಸಿದ್ದರು.

ಗೋಶಾಲೆ ನಿರ್ವಹಿಸುವ ಸಂಘ ಸಂಸ್ಥೆಗಳು ಸರ್ಕಾರದ ಮಾರ್ಗಸೂಚಿ ಪಾಲಿಸಿ- ಎಂ. ಕನಗವಲ್ಲಿ


ಕೊಪ್ಪಳ ಫೆ. 24 (ಕರ್ನಾಟಕ ವಾರ್ತೆ): ಗೋಶಾಲೆಗಳನ್ನು ನಡೆಸುವ ಸಂಘ ಸಂಸ್ಥೆಗಳಿಗೆ ಸರ್ಕಾರ ಸಹಾಯಧನ ನೀಡುವ ಯೋಜನೆಯಿದ್ದು, ಇಂತಹ ಸಂಘ ಸಂಸ್ಥೆಗಳು ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
 
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಜಿಲ್ಲಾ ಪ್ರಾಣಿ ಕಲ್ಯಾಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 
ಗೋಶಾಲೆಗಳಿಗೆ ಭಾರತ ಪ್ರಾಣಿ ಕಲ್ಯಾಣ ಮಂಡಳಿ/ ಸರ್ಕಾರದಿಂದ ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದ್ದು, ಅಶಕ್ತ, ನಿರುಪಯುಕ್ತ ಹಾಗೂ ಅನುತ್ಪಾದಕ ಜಾನುವಾರುಗಳ ರಕ್ಷಣೆ, ಪೋಷಣೆ ಮತ್ತು ಪಾಲನೆ ಮಾಡುವ ನಿಟ್ಟಿನಲ್ಲಿ ಯೋಜನೆ ಉಪಯುಕ್ತವಾಗಿದೆ. ಕೊಪ್ಪಳದ ಮಹಾವೀರ ಜೈನ ಗೋಶಾಲೆಯಲ್ಲಿ 630 ಜಾನುವಾರು, ಯಲಬುರ್ಗಾದ ಬಸವಲಿಂಗೇಶ್ವರ ಶ್ರೀಧರ ಮುರಡಿ ಹಿರೇಮಠ ಗೋಶಾಲೆ ಸೇವಾ ಸಂಘದಲ್ಲಿ 150 ಜಾನುವಾರು ಹಾಗೂ ಕುಷ್ಟಗಿ ತಾಲೂಕು ಗುಡಿಕಲಕೇರಿಯ ಜಯಮಲ ಜೈನ್ ಗೋಶಾಲೆಯಲ್ಲಿ ಸುಮಾರು 238 ಜಾನುವಾರುಗಳನ್ನು ಪೋಷಿಸಲಾಗುತ್ತಿದ್ದು, ಆರ್ಥಿಕ ಸಹಾಯಧನಕ್ಕಾಗಿ ಪ್ರಸ್ತಾವನೆಯನ್ನು ಸಂಬಂಧಪಟ್ಟ ತಾಲೂಕಿನ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಯೋಜನೆಯಡಿ ನೀಡುವ ಅನುದಾನವು ನಿರ್ವಹಣಾ ವೆಚ್ಚವಾಗಿ ನೀಡಲಾಗುತ್ತಿದೆ. ಉಳಿದ ಆವರ್ತಕ ವೆಚ್ಚಗಳನ್ನು ಆಯಾ ಸಂಘ ಸಂಸ್ಥೆಗಳೆ ಭರಿಸಬೇಕಾಗುತ್ತದೆ. ಸರ್ಕಾರ ನೀಡುವ ಅನುದಾನವನ್ನು ಗೋವುಗಳ ನಿರ್ವಹಣೆ ಅವಶ್ಯವಿರುವ ನೀರಿನ ವ್ಯವಸ್ಥೆ, ಶೆಡ್ ನಿರ್ಮಾಣ, ತಡೆಗೋಡೆ, ವಿದ್ಯುಚ್ಛಕ್ತಿ ಸಂಪರ್ಕ, ಮೇವು ಅಭಿವೃದ್ಧಿ, ಸಾವಯವ ಗೊಬ್ಬರ ಉತ್ಪಾದನೆ, ಜೈವಿಕ ಅನಿಲ ಉತ್ಪಾದನೆ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಉಪಯೋಗಿಸಬೇಕು. ಅನುದಾನ ಪಡೆಯುವ ಸಂಸ್ಥೆಗಳು ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಬಿಡಾಡಿ ದನಗಳನ್ನು ಗೋಶಾಲೆಗೆ ಸೇರಿಸಿ :
********ನಗರ ಪ್ರದೇಶಗಳಲ್ಲಿ ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿ ಕಂಡುಬಂದಿದ್ದು, ಸಾರ್ವಜನಿಕರಿಗೆ, ಪಾದಚಾರಿಗಳಿಗೆ, ವಾಹನ ಚಾಲಕರಿಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಮಾಲೀಕರು ತಮ್ಮ ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ ಆಯಾ ಸ್ಥಳೀಯ ಸಂಸ್ಥೆಗಳು ಹಲವು ಬಾರಿ ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ ಹಾವಳಿ ಕಂಡುಬರುತ್ತಿದೆ. ಸಂಬಂಧಪಟ್ಟ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳು, ಮತ್ತೊಮ್ಮೆ ಪ್ರಕಟಣೆ ನೀಡಿ ಬೀದಿ ದನಗಳ ಮಾಲೀಕರಿಗೆ ಎಚ್ಚರಿಕೆ ನೀಡಬೇಕು. ಅಂತಿಮವಾಗಿ ಬೀದಿ ದನಗಳನ್ನು ಪೊಲೀಸ್ ಇಲಾಖೆಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಲಯದ ಮುಖಾಂತರ ಗೋಶಾಲೆಗಳಿಗೆ ರವಾನಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಧಾಗಾರಗಳ ಬಗ್ಗೆ ಮಾಹಿತಿ ಸಲ್ಲಿಸಿ :
**************** ದಿನವೊಂದಕ್ಕೆ 10 ಕ್ಕೂ ಹೆಚ್ಚು ಜಾನುವಾರುಗಳನ್ನು ಒಂದೆಡೆ ವಧೆ ಮಾಡುವ ಸ್ಥಳವನ್ನು ವಧಾಗಾರವನ್ನಾಗಿ ಪರಿಗಣಿಸಲಾಗುತ್ತದೆ. ಆದರೆ ಕೊಪ್ಪಳ ಜಿಲ್ಲೆಯಲ್ಲಿ ಪರವಾನಿಗೆ ಹೊಂದಿರುವ ಯಾವುದೇ ವಧಾಗಾರಗಳಿಲ್ಲ. ಕೊಪ್ಪಳದ ಹಿರೇಸಿಂದೋಗಿ ರಸ್ತೆಯಲ್ಲಿ ಜಾನುವಾರುಗಳನ್ನು ಒಂದೆಡೆ ವಧೆ ಮಾಡುವ ಸಂಬಂಧ ನಗರಸಭೆ ನಿರ್ಮಿಸಿರುವ ಕಟ್ಟಡದಲ್ಲಿ ವಧೆ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮಾಹಿತಿ ನೀಡಿದರು. ವಧೆ ಮಾಡಿದ ಜಾನುವಾರುಗಳ ತ್ಯಾಜ್ಯವನ್ನು ಎಂಎಸ್‍ಐಎಲ್ ಇವರಿಗೆ ಗೊಬ್ಬರ ತಯಾರಿಕೆ ಉಪಯೋಗಕ್ಕಾಗಿ ನೀಡಲಾಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಮಾಲಿನ್ಯ ನಿಯಂತ್ರಣ ಮಂಡಳಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ನಗರಸಭೆ ಪೌರಾಯುಕ್ತರು ಹಾಗೂ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ವಧಾಗಾರಗಳಿಗೆ ಭೇಟಿ ನೀಡಿ ಪರಿಶೀಲಿಸಿ, ವಸ್ತು ಸ್ಥಿತಿಯ ಕುರಿತು ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ವೇಣುಗೋಪಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Friday, 23 February 2018

ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಸರಿಯಾಗಿ ತಲುಪಬೇಕು- ಎಂ. ಕನಗವಲ್ಲಿ


ಕೊಪ್ಪಳ ಫೆ. 23 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಇಲಾಖೆಗಳ ಮೂಲಕ ಜಾರಿಯಲ್ಲಿರುವ ಯೋಜನೆಗಳಡಿ ಫಲಾನುಭವಿಗಳಿಗೆ ಬ್ಯಾಂಕ್‍ಗಳು ಆದ್ಯತೆ ಮೇರೆಗೆ ಸಾಲ ಸೌಲಭ್ಯವನ್ನು ತಲುಪಿಸಬೇಕು.  ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳು ಈ ಕುರಿತು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.

     ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಲಾಗಿದ್ದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ವರ್ಗಗಳ ಬಡವರಿಗೆ ಸಾಲ ಸೌಲಭ್ಯ ಒದಗಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ.  ಆಯಾ ಇಲಾಖೆಗಳು ಸಾಲ ಸೌಲಭ್ಯಕ್ಕಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಿ, ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುತ್ತಿವೆ.  ಆದರೆ ಬ್ಯಾಂಕ್‍ಗಳು ಸಾಲ ಸೌಲಭ್ಯವನ್ನು ಸಂಬಂಧಪಟ್ಟ ಫಲಾನುಭವಿಗಳಿಗೆ ತಲುಪಿಸುವಲ್ಲಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನುವ ಆರೋಪಗಳಿವೆ.  ಹೀಗಾಗಿ ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳು, ಸರ್ಕಾರದ ಯೋಜನೆಗಳು ಜಾರಿಗೊಳ್ಳಲು ನಿಗಾ ವಹಿಸಬೇಕು.  ಸೂಕ್ತವಾಗಿ ಸ್ಪಂದಿಸದ ಬ್ಯಾಂಕ್‍ಗಳ ಬಗ್ಗೆ ಪರಿಶೀಲಿಸಿ, ಫಲಾನುಭವಿಗಳಿಗೆ ಸಾಲ ಸೌಲಭ್ಯ ತಲುಪಿಸಲು ಮುಂದಾಗಬೇಕು.  ಇಲ್ಲದಿದ್ದಲ್ಲಿ ಸರ್ಕಾರದ ಯೋಜನೆಗಳು ಸಫಲವಾಗಲು ಕಷ್ಟಸಾಧ್ಯ. ಪ್ರಸಕ್ತ ವರ್ಷ ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಗಳಡಿ 27293 ಫಲಾನುಭವಿಗಳಿಗೆ 314. 15 ಕೋಟಿ ರೂ. ಸಾಲ ಸೌಲಭ್ಯ ತಲುಪಿಸಬೇಕಿತ್ತು.  ಆದರೆ ಕೇವಲ 15000 ಫಲಾನುಭವಿಗಳಿಗೆ 219 ಕೋಟಿ ರೂ. ಮಾತ್ರ ಸೌಲಭ್ಯ ಒದಗಿಸಲಾಗಿದೆ.  ಇನ್ನೂ ಸುಮಾರು 12 ಸಾವಿರ ಫಲಾನುಭವಿಗಳು ಸೌಲಭ್ಯ ಪಡೆಯಲು ಸಾಧ್ಯವಾಗದಿರುವುದು ಕಂಡುಬಂದಿದೆ.  ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳು ಈ ಕುರಿತು ಪರಿಶೀಲಿಸಿ, ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.
     ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ನೇರ ಸಾಲ, ಸ್ವಯಂ ಉದ್ಯೋಗ, ಅರಿವು ಶೈಕ್ಷಣಿಕ ಸಾಲ, ಗಂಗಾ ಕಲ್ಯಾಣ ಯೋಜನೆಗಳಡಿ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ,  ಫಲಾನುಭವಿಗಳಿಗೆ ಸೌಲಭ್ಯ ದೊರೆಕುವಂತಾಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.   ಜಿಲ್ಲೆಯಲ್ಲಿ ಬಿದಾಯಿ (ಶಾದಿಭಾಗ್ಯ) ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಮುಸ್ಲಿಂ-1030, ಕ್ರಿಶ್ಚಿಯನ್- 14, ಜೈನ್- 04 ಸೇರಿದಂತೆ ಒಟ್ಟು 1048 ಫಲಾನುಭವಿಗಳಿಗೆ ತಲಾ 50 ಸಾವಿರ ರೂ. ಗಳಂತೆ 524 ಲಕ್ಷ ರೂ. ಗಳ ಅನುದಾನದಡಿ ಸಹಾಯಧನ ನೀಡಲಾಗಿದೆ.  ಕೊಪ್ಪಳ ಮತ್ತು ಗಂಗಾವತಿ ತಾಲೂಕಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನಸಂಖ್ಯೆ ಹೆಚ್ಚಿದ್ದು, ಫಲಾನುಭವಿಗಳಿಗೆ ನೀಡುವ ಸೌಲಭ್ಯದ ಭೌತಿಕ ಗುರಿ ಸಾಧನೆ ಹೆಚ್ಚಿನ ಪ್ರಮಾಣದಲ್ಲಿದೆ.  ವರದಿಯಲ್ಲಿ ಈ ಅಂಶವನ್ನು ಸರಿಯಾಗಿ ನಮೂದಿಸಬೇಕು.  ಅಲ್ಪಸಂಖ್ಯಾತರ ವರ್ಗದ ಸರ್ಕಾರಿ ಶಾಲೆಗಳಿಗೆ ಕಟ್ಟಡ ಅಥವಾ ಹೆಚ್ಚಿನ ಕೊಠಡಿಗಳ ನಿರ್ಮಾಣದ ಅಗತ್ಯ ಇದ್ದಲ್ಲಿ, ಈ ಕುರಿತು ಕೂಡಲೆ ಪ್ರಸ್ತಾವನೆಯನ್ನು ಸಲ್ಲಿಸಬೇಕು.  ಅಲ್ಪಸಂಖ್ಯಾತರ ವರ್ಗದ ವಸತಿ ನಿಲಯಗಳಿಗೆ ಜಿಲ್ಲಾ ಮಟ್ಟದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಅಲ್ಲಿನ ಸ್ಥಿತಿ-ಗತಿ ಹಾಗೂ ಸೌಲಭ್ಯ ಲಭ್ಯತೆ ಕುರಿತಂತೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
     
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಲೀಡ್‍ಬ್ಯಾಂಕ್ ವ್ಯವಸ್ಥಾಪಕ ಬಾಬುರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮೆಹಮೂದ್ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಕರಣಗಳ ವಿಲೇವಾರಿಗೆ ಮಧ್ಯಸ್ಥಿಕಾ ವಕೀಲರ ಸಹಕಾರ ಅವಶ್ಯಕ : ಆರ್.ಜಿ ಜೋಶಿಕೊಪ್ಪಳ ಫೆ. 23 (ಕರ್ನಾಟಕ ವಾರ್ತೆ): ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ವಿಲೇವಾರಿಗೊಳಿಸಲು ಮಧ್ಯಸ್ಥಿಕಾ ವಕೀಲರ ಸಹಕಾರ ತುಂಬಾ ಅವಶ್ಯಕವಾಗಿದೆ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಆರ್.ಜಿ ಜೋಶಿ ಅವರು ಹೇಳಿದರು. 

    ಬೆಂಗಳೂರು ಮಧ್ಯಸ್ಥಿಕಾ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಹಯೋಗದಲ್ಲಿ ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಯ ಮಧ್ಯಸ್ಥಿಕಾ ನ್ಯಾಯವಾದಿಗಳಿಗಾಗಿ ಕೊಪ್ಪಳ ಜಿಲ್ಲಾ ಪಂಚಾಯತಿಯ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಶುಕ್ರವಾರದಂದು ಆಯೋಜಿಸಲಾದ ಅಂತರ ಜಿಲ್ಲಾ ಮೂರು ದಿನಗಳ ಮಧ್ಯಸ್ಥಿಕಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯಾರ್ಥ ಪಡಿಸಲು ಲೋಕ ಅದಾಲತ್, ರಾಜಿ ಸಂದಾನ ಹೀಗೆ ಇತರೆ ಕಾರ್ಯಕ್ರಮಗಳನ್ನು ಕಾನೂನು ಇಲಾಖೆಯು ಹಮ್ಮಿಕೊಳ್ಳುತ್ತಿದೆ.  ಇದರ ಜೊತೆ ಮಧ್ಯಸ್ಥಿಕಾ ಕಾರ್ಯಕ್ರಮ ಏರ್ಪಡಿಸಲಾಗುತ್ತಿದ್ದು,  ಮಧ್ಯಸ್ಥಿಕಾ ವಕೀಲರ ಮೂಲಕ ಇನ್ನೂ ತ್ವರಿತ ಹಾಗೂ ಸುಲಭವಾಗಿ ಪ್ರಕರಣಗಳು ವಿಲೇಗೊಳ್ಳಲು ಅವಕಾಶಗಳಿವೆ.  ವೈವಾಹಿಕ, ಜೀವನಾಂಶ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಇನ್ನೂ ಹಲವಾರು ಬಗೆಯ ಪ್ರಕರಣಗಳನ್ನು ಮಧ್ಯಸ್ಥಿಕಾ ವಕೀಲರುಗಳ ಮೂಲಕ ಪರ್ಯಾಯವಾಗಿ ವಿಲೇವಾರಿಗೊಳಿಸಲು ಬೆಂಗಳೂರು ಮಧ್ಯಸ್ಥಿಕಾ ಕೇಂದ್ರದ ಆದೇಶದ ಪ್ರಕಾರ ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಯ ತಲಾ 15 ವಕೀಲರುಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ.  ಈ ತರಬೇತಿಯ ಸದುಪಯೋಗ ಪಡೆದುಕೊಂಡು ಪ್ರಕರಣಗಳ ಇತ್ಯರ್ಥಕ್ಕೆ ಸಹಕರಿಸಿ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಆರ್.ಜಿ. ಜೋಶಿ ಅವರು ಮಧ್ಯಸ್ಥಿಕಾ ವಕೀಲರಿಗೆ ಕರೆ ನೀಡಿದರು.   
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಎಸ್. ಕಂಪ್ಲಿ ಅವರು ಮಾತನಾಡಿ, ಮಧ್ಯಸ್ಥಿಕಾ ವ್ಯವಸ್ಥೆಯು ಅಮೇರಿಕಾದಲ್ಲಿ ಜಾರಿಯಲ್ಲಿತ್ತು,  ನಂತರ ಅದು ಅಲ್ಲಿ ಯಶಸ್ವಿಯಾಗಿದೆ.  ಆದ್ದರಿಂದ ಬಾಕಿ ಉಳಿದ ಪ್ರಕರಣಗಳನ್ನು ವಿಲೇವಾರಿಗೊಳಿಸುವ ಉದ್ದೇಶದಿಂದ ನಮ್ಮ ದೇಶದಲ್ಲಿಯೂ ಸಹ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.  ತರಬೇತಿಗೆ ಆಯ್ಕೆಯಾದ ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಯ ಮಧ್ಯಸ್ಥಿಕಾ ನ್ಯಾಯವಾದಿಗಳು ಕಾರ್ಯಾಗಾರವನ್ನು ಯಶಸ್ವಿಗೊಳಿಸಿ, ಬಾಕಿ ಪ್ರಕರಣಗಳನ್ನು ತ್ವರಿತಗತಿಯಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು. 
    ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ, ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ ಎಸ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮನು ಶರ್ಮಾ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಕೊಟ್ರೇಶ ಯು. ಪೆÇೀಚಗುಂಡಿ ಪಾಲ್ಗೊಂಡಿದ್ದರು.  ಬೆಂಗಳೂರು ಮಧ್ಯಸ್ಥಿಕಾ ಕೇಂದ್ರದ ತರಬೇತಿದಾರರುಗಳಾದ ಆರ್. ವಿಜಯ ಕುಮಾರ, ಲತಾ ಪ್ರಸಾದ ಹಾಗೂ ಲಕ್ಷ್ಮೀಶರಾವ್ ಅವರು ಉಪಸ್ಥಿತರಿದ್ದು, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಯ ಮಧ್ಯಸ್ಥಿಕಾ ವಕೀಲರುಗಳಿಗೆ ತರಬೇತಿ ನೀಡಿದರು.  

ಫೆ. 25 ರಂದು ಪ್ರದಸ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ : ನಿಷೇಧಾಜ್ಞೆ ಜಾರಿ


ಕೊಪ್ಪಳ ಫೆ. 23 (ಕರ್ನಾಟಕ ವಾರ್ತೆ): ಕರ್ನಾಟಕ ಲೋಕ ಸೇವಾ ಆಯೋಗದಿಂದ ಜರುಗಲಿರುವ ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ಫೆ. 25 ರಂದು ಕೊಪ್ಪಳ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ಫೆ. 25 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ಜಿಲ್ಲೆಯ ಕೊಪ್ಪಳ ಹಾಗೂ ಗಂಗಾವತಿ ತಾಲೂಕಿನ ಒಟ್ಟು 33 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು  9974 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.  ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಹಾಗೂ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ/ ಅವ್ಯವಹಾರ ನಡೆಯದಂತೆ 144ನೇ ಕಲಂ ಅನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.  ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿರ್ಬಂಧಿಸಲಾಗಿದೆ.  ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.  ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ : ಫೆ. 25 ರಂದು ನಡೆಯುವ ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ಜಿಲ್ಲೆಯ ಕೊಪ್ಪಳ ಹಾಗೂ ಗಂಗಾವತಿ ತಾಲೂಕುಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ, ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಲಕಿಯರ ಸರ್ಕಾರಿ ಪ.ಪೂ ಕಾಲೇಜು, ಗವಿಸಿದ್ದೇಶ್ವರ ಪಿ.ಯು ಕಾಲೇಜು, ಗವಿಸಿದ್ದೇಶ್ವರ ಕಲಾ-ವಾಣಿಜ್ಯ-ವಿಜ್ಞಾನ ಪದವಿ ಕಾಲೇಜು, ಹೊಸಪೇಟೆ ರಸ್ತೆಯ ಎಸ್.ಎಫ್.ಎಸ್ ಶಾಲೆ, ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಬಾಲಕರ ಸರ್ಕಾರಿ ಪ.ಪೂ ಕಾಲೇಜು, ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಭಾಗ್ಯನಗರ, ಗವಿಸಿದ್ದೇಶ್ವರ ಪ್ರೌಢ ಶಾಲೆ, ಗದಗ ರಸ್ತೆಯ ಸರ್ಕಾರಿ ಪಾಲಿಟೆಕ್ನಿಕ್ ದದೆಗಲ್, ಸರ್ಕಾರಿ ಪ.ಪೂ ಕಾಲೇಜು ಭಾಗ್ಯನಗರ, ಗುಳಗಣ್ಣವರ್ ಪಾಲಿಟೆಕ್ನಿಕ್ ದದೆಗಲ್, ಕುಷ್ಟಗಿ ರಸ್ತೆಯ ಕಾಳಿದಾಸ ಪ್ರೌಢ ಶಾಲೆ, ವಿಠ್ಠಲ ಮಾದರಿ ನಗರದ ನಿವೇಧಿತ ಪ್ರಾಥಮಿ ಮತ್ತು ಪ್ರೌಢ ಶಾಲೆ, ಗವಿಸಿದ್ದೇಶ್ವರ ಕಾಲೇಜ್ ಆಫ್ ಎಜುಕೇಶನ್, ಗದಗ ರಸ್ತೆಯ ಮಿಲ್ಲೆನಿಯಂ ಪಬ್ಲಿಕ್ ಸ್ಕೂಲ್, ಮತ್ತು ಗಂಗಾವತಿ ತಾಲೂಕಿನ ಕಾರಟಗಿಯ ಶ್ರೀಶರಣ ಬಸವೇಶ್ವರ ಕನ್ನಡ/ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಗಂಗಾವತಿಯ ವಿರುಪಾಪುರದ ಬೇಥಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಾರಟಗಿಯ ರೆಡ್ಡಿ ವೀರಣ್ಣ ಸಂಜೀವಪ್ಪ (ಐಸಿಎಸ್‍ಸಿ) ರೆಸಿಡೆಂಸಿಯಲ್ ಸ್ಕೂಲ್ ಮರಲಾನಹಳ್ಳಿ, ಗಂಗಾವತಿಯ ಬಾಲಕರ ಸರ್ಕಾರಿ ಪ.ಪೂ ಕಾಲೇಜು, ಜೈನಗರದ ಸೆಂಟ್ ಪೌಲ್ಸ್ ಇಂಗ್ಲೀಷ್ ಹೌಸ್ಕೂಲ್, ಹೊಸ್ಸಳ್ಳಿ ರಸ್ತೆಯ ಲಿಟ್ಲ್ ಹಾಟ್ರ್ಸ್ ಸ್ಕೂಲ್, ಕೊಟ್ಟೂರೇಶ್ವರ ಪ.ಪೂ ಕಾಲೇಜು, ಎನ್.ಎನ್.ಎಂ ಬಾಲಕೀಯರ ಸರ್ಕಾರಿ ಪ.ಪೂ ಕಾಲೇಜು, ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಎಸ್.ಕೆ.ಎನ್.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೆಂಟರ್-1 & ಸೆಂಟರ್-2, ಪಂಪಾ ನಗರದ ಕಲ್ಮಠ ಚನ್ನಬಸವೇಶ್ವಮೈ ಆಟ್ರ್ಸ್ & ಕಾಮರ್ಸ್ ಕಾಲೇಜ್ ಫಾರ್ ಹೆಮೆನ್, ಹೆಚ್.ಆರ್ ಸರೋಜಮ್ಮ ಮೆಮೋರಿಯಲ್ ಬಾಲಕೀಯರ ಪ.ಪೂ ಕಾಲೇಜು, ಕೊಟ್ಟೂರೇಶ್ವರ ಕ್ಯಾಂಪ್‍ನ ಜಿ.ಹೆಚ್.ಎನ್ ಕಾಲೇಜ್ ಆಫ್ ಕಾಮರ್ಸ್, ಟಿ.ಎಂ.ಎ.ಇ ಸೊಸಿಯೆಟೀಸ್ ಕಾಲೇಜ್ ಆಪ್ ಎಜುಕೇಶನ್, ನವಲಿ ರಸ್ತೆಯ ಸೆಂಟ್ರಲ್ ಪಬ್ಲಿಕ್ ಹೈಸ್ಕೂಲ್ ಹಾಗೂ ಕಾರಟಗಿಯ ಸರ್ಕಾರಿ ಪ.ಪೂ ಕಾಲೇಜುಗಳಲ್ಲಿ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಫೆ. 26 ರಂದು ಕುಕನೂರಿನಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ


ಕೊಪ್ಪಳ ಫೆ. 23 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಜ್ ಪ್ರೈ.ಲಿ. ಬೇವಿನಹಳ್ಳಿ, ಇವರಿಂದ ಐಟಿಐ ತರಬೇತಿ ಪಡೆದ ಅಭ್ಯರ್ಥಿಗಳಿಗಾಗಿ ಶಿಶಿಕ್ಷು (ಅಪ್ರೆಂಟಿಸ್) ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಫೆ. 26 ರಂದು ಬೆಳಿಗ್ಗೆ 10-00 ಗಂಟೆಗೆ ಕೊಪ್ಪಳ ಜಿಲ್ಲೆಯ ಕುಕನೂರು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ.
       ಭಾಗವಹಿಸಲು ಐಟಿಐನಲ್ಲಿ ಎನ್.ಸಿ.ವಿ.ಟಿ ಅಡಿಯಲ್ಲಿ ಎಲೆಕ್ಟ್ರೀಷಿಯನ್, ಫಿಟ್ಟರ್, ಟರ್ನರ್ ಅಥವಾ ವೆಲ್ಡರ್ ವೃತ್ತಿಯಲ್ಲಿ ಉತ್ತೀರ್ಣರಾಗಿರಬೇಕು.  18 ರಿಂದ 25 ವರ್ಷ ವಯೋಮಿತಿಯಲ್ಲಿರಬೇಕು.  ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.   ಸ್ಟೈಪೆಂಡ್ ಕಂಪನಿಯ ನಿಯಮಾನುಸಾರ ದೊರೆಯಲಿವೆ.  ಅಭ್ಯಥಿಗಳು ಎಸ್.ಎಸ್.ಎಲ್.ಸಿ ಮತ್ತು ಐ.ಟಿ.ಐ ಪಾಸಾದ ಮಾಕ್ರ್ಸ್ ಕಾರ್ಡ್ ಮತ್ತು ಎನ್.ಸಿವಿ.ಟಿ ಪ್ರಮಾಣ ಪತ್ರಗಳ ಝರಾಕ್ಸ್ ಪ್ರತಿ, ಹಾಗೂ ಭಾವಚಿತ್ರಗಳೊಂದಿಗೆ ಹಾಜರಾಗಬೇಕು.  ತಮ್ಮ ಸ್ವಂತ ಖರ್ಚಿನಲ್ಲಯೇ ಸಂದರ್ಶನಕ್ಕೆ ಆಗಮಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9964247098 ಕ್ಕೆ ಸಂಪರ್ಕಿಸಬಹುದು ಎಂದು ಕುಕನೂರು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಪ್ರಾಚಾರ್ಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಯುವ ಸಂಘಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ


ಕೊಪ್ಪಳ ಫೆ. 23 (ಕರ್ನಾಟಕ ವಾರ್ತೆ): ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಯುವ ಚೈತನ್ಯ ಯೋಜನೆಯಡಿ ಆಯ್ಕೆಯಾದ ನೊಂದಾಯಿತ ಯುವ ಸಂಘಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮವನ್ನು ಫೆ. 24 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
    ಗ್ರಾಮೀಣ ಯುವ ಜನತೆಯ ಆರೋಗ್ಯಕರ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಾಯಕವಾಗುವ ವಾತಾವರಣವನ್ನು ಸೃಜಿಸಲು “ಯುವ ಚೈತನ್ಯ” ಎಂಬ ಒಂದು ಹೊಸ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆಯಡಿ ಕೊಪ್ಪಳ ತಾಲೂಕಿನ ಆಯ್ಕೆಯಾದ ನೊಂದಾಯಿತ ಒಟ್ಟು 39 ಯುವ ಸಂಘಗಳಿಗೆ ಫೆ. 24 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹಾಗೂ ಜಿ.ಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರಿಂದ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಗುವುದು.
    ಈ ಯೋಜನೆ ಅಡಿಯಲ್ಲಿ ಕೊಪ್ಪಳ ತಾಲೂಕಿನ ಆಯ್ಕೆಯಾದ ನೊಂದಾಯಿತ ಯುವ ಸಂಘದ ಅಧ್ಯಕ್ಷರು/ ಕಾರ್ಯದರ್ಶಿ/ ಸಂಘದ ಸದಸ್ಯರನ್ನೊಳಗೊಂಡಂತೆ ತಮ್ಮ ಸಂಘದ ಬೈಲಾ ಝರಾಕ್ಸ್ ಕಾಫಿ/ ಲೆಟರ್ ಪ್ಯಾಡ ಮತ್ತು ಮೊಹರಿನೊಂದಿಗೆ ಸಂಘದವರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಾಗಬೇಕು.  ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಮಳೇಮಲ್ಲೇಶ್ವರ ರಸ್ತೆ ಕೊಪ್ಪಳ ಇಲ್ಲಿಗೆ ಅಥವಾ ದೂರವಾಣಿ ಸಂಖ್ಯೆ 9482404848, 9036773070, ಹಾಗೂ 7899432227 ಕ್ಕೆ ಸಂಪರ್ಕಿಸಬಹುದು ಎಂದು ಇಲಾಖಾ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Thursday, 22 February 2018

ಮರು ವಿವಾಹ ಹಾಗೂ ಅಂತರ್ ಜಾತಿ ವಿವಾಹ : ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಫೆ. 22 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮರು ವಿವಾಹ ಹಾಗೂ ಅಂತರ್ ಜಾತಿ ವಿವಾಹಗಳಿಗೆ ಪ್ರೋತ್ಸಾಹ ಧನ ನೀಡುವ ಯೋಜನೆಗಾಗಿ ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮರು ಮದುವೆಯಾಗುವ ಪರಿಶಿಷ್ಟ ಜಾತಿ ವಿಧವೆಯರಿಗೆ ಮತ್ತು ಪರಿಶಿಷ್ಟ ಜಾತಿಯ ಯುವಕ/ ಯುವತಿಯರು ಪರಿಶಿಷ್ಟ ಜಾತಿಯ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದವರಿಗೆ   ಪ್ರೋತ್ಸಾಹ ಧನ ಮಂಜೂರು ಮಾಡಲಾಗುವುದು. ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ವಿಧವೆಯರು ಮರುವಿವಾಹವಾದಲ್ಲಿ ರೂ. 3 ಲಕ್ಷ ಹಾಗೂ ಪರಿಶಿಷ್ಟ ಜಾತಿಯ ಯುವಕ/ ಯುವತಿಯರು ಪರಿಶಿಷ್ಟ ಜಾತಿಯ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ ರೂ. 2 ಲಕ್ಷ ಪ್ರೋತ್ಸಾಹ ಧನ ಮಂಜೂರಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಗಳನ್ನು ಸರಳೀಕರಣ ಹಾಗೂ ಪ್ರೋತ್ಸಾಹ ಧನದ ತ್ವರಿತ ಮಂಜೂರಾತಿಗಾಗಿ ಆನ್‍ಲೈಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ರವರ ಸೂಚನೆ ಅನ್ವಯ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಅಥವಾ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿ.ಪಿ.ಪಿ. ಯೋಜನೆ : ವಿವಿಧ ಕೋರ್ಸುಗಳ ತರಬೇತಿ


ಕೊಪ್ಪಳ ಫೆ. 22 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕು ಹನಮಸಾಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪಿ.ಪಿ.ಪಿ. ಯೋಜನೆ ಅಡಿಯಲ್ಲಿ ವಿವಿಧ ಅಲ್ಪಾವಧಿ ಕೋರ್ಸುಗಳಿಗೆ ತರಬೇತಿ ನೀಡಲಾಗುವುದು.
    ಹನಮಸಾಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪಿ.ಪಿ.ಪಿ. ಯೋಜನೆ ಅಡಿಯಲ್ಲಿ 3 ತಿಂಗಳ ಅವಧಿಯ ಬೇಸಿಕ್ ಆರ್ಕ ವೆಲ್ಡಿಂಗ್ ಮತ್ತು ಬೇಸಿಕ್ ಕಂಪ್ಯೂಟರ್ ಕೋರ್ಸ್‍ಗಳು, ಹಾಗೂ 2 ತಿಂಗಳ ಅವಧಿಯ ಡೊಮೆಸ್ಟಿಕ್ ವೈರಿಂಗ್ ಸಿಸ್ಟಮ್ (ಹೌಸ್ ವೈರಿಂಗ್) ತರಬೇತಿ, ಎಲೆಕ್ಟ್ರೀಕಲ್ ಮತ್ತು ಗೃಹ ಉಪಯೋಗಿ ಉಪಕರಣಗಳ ದುರಸ್ಥಿ ಮತ್ತು ನಿರ್ವಹಣೆ ತರಬೇತಿಗಳು ಪ್ರಾರಂಭವಾಗುತ್ತಿದ್ದು, . ಆಸಕ್ತಿಯುಳ್ಳ ಅಭ್ಯರ್ಥಿಗಳು ಕಛೇರಿ ವೇಳೆಯಲ್ಲಿ ಖುದ್ದಾಗಿ ಭೇಟಿಮಾಡಬೇಕು.  ಅಥವಾ ದೂರವಾಣಿ ಸಂಖ್ಯೆ 08536-270633, 9740713006 ಕ್ಕೆ ಸಂಪರ್ಕಿಸಿ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ.  ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಗೃಹೋಪಯೋಗಿ ವಸ್ತುಗಳಾದ ಫ್ಯಾನ್, ಮಿಕ್ಸಿ ಇತ್ಯಾದಿ ಉಪಕರಣಗಳನ್ನು, ಲೆಡ್ ಆಸಿಡ್ ಬ್ಯಾಟರಿಗಳ ದುರಸ್ತಿಯನ್ನು ಯೋಗ್ಯ ದರದಲ್ಲಿ ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ. 01 ರಂದು ಕುರುಗೋಡು ದೊಡ್ಡ ಬಸವೇಶ್ವರ ಮಹಾ ರಥೋತ್ಸವ


ಕೊಪ್ಪಳ ಫೆ. 22 (ಕರ್ನಾಟಕ ವಾರ್ತೆ): ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ ಜಿಲ್ಲೆ ಕುರುಗೋಡು ಕ್ಷೇತ್ರದ ದೊಡ್ಡ ಬಸವೇಶ್ವರ ಸ್ವಾಮಿ ದೇವಸ್ಥಾನದ ಮಹಾ ರಥೋತ್ಸವ ಮಾರ್ಚ್. 01 ರಂದು ಸಂಜೆ 5-30 ಕ್ಕೆ ಜರುಗಲಿದೆ.
ದೊಡ್ಡ ಬಸವೇಶ್ವರ ಮಹಾ ರಥೋತ್ಸವದ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಫೆ. 22 ರಂದು ರಾತ್ರಿ 8-30 ಕ್ಕೆ ನಾಗಾಭರಣ ವಾಹನೋತ್ಸವ, 23 ರಂದು ರಾತ್ರಿ 8-30 ಕ್ಕೆ ನವಿಲು ವಾಹನೋತ್ಸವ, 24 ರಂದು ರಾತ್ರಿ 8-30 ಕ್ಕೆ ಸಿಂಹ ವಾಹನೋತ್ಸವ, 25 ರಂದು ರಾತ್ರಿ 8-30 ಕ್ಕೆ ಅಶ್ವ ವಾಹನೋತ್ಸವ, 26 ರಂದು ರಾತ್ರಿ 8-30 ಕ್ಕೆ ಬಿಳಿ ಬಸವಣ್ಣ ವಾಹನೋತ್ಸವ, 27 ರಂದು ರಾತ್ರಿ 8-30 ಕ್ಕೆ ನೀಲಮ್ಮ ತಾಯಿಗೆ ಉಡಿ ತುಂಬುವುದು ಹಾಗೂ ರಾತ್ರಿ 3 ಗಂಟೆಗೆ ನೀಲಮ್ಮ ಉತ್ಸವ, 28 ರಂದು ರಾತ್ರಿ 8-30 ಕ್ಕೆ ಗಜವಾಹನೋತ್ಸವ.  ಮಾರ್ಚ್. 01 ರಂದು ಸಂಜೆ 5-30 ಕ್ಕೆ  ಮಹಾ ರಥೋತ್ಸವ, ಹಾಗೂ ಮಾ. 02 ರಂದು ರಾತ್ರಿ 10-30 ಕ್ಕೆ ಲಂಕೆ ಸುಡುವ ಕಾರ್ಯಕ್ರಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗುವುದು.  ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾಧಿಗಳು ಪಾಲ್ಗೊಳ್ಳುವಂತೆ ಕೋರಲಾಗಿದೆ.
ಕುರುಗೋಡು ದೊಡ್ಡ ಬಸವೇಶ್ವರ ಸ್ವಾಮಿ ಮೂಲ ವಿಗ್ರಹಕ್ಕೆ ಈಶ್ವರ ಲಿಂಗ ಮತ್ತು ಬಾಗಿಲುಗೆ 150 ಕೆ.ಜಿ ತೂಕದ ಬೆಳ್ಳಿಯನ್ನು ಉಪಯೋಗಿಸಿ ಕವಚ ಮಾಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.  ದೇವರ ಬೆಳ್ಳಿ ಕವಚಕ್ಕೆ ಭಕ್ತಾಧಿಗಳು ಬೆಳ್ಳಿಯನ್ನು ನೀಡಬಹುದಾಗಿದೆ.  ದೊಡ್ಡ ಬಸವೇಶ್ವರ ಸ್ವಾಮಿಯ ಮೂಲ ವಿಗ್ರಹಕ್ಕೆ ಬೆಳ್ಳಿಯನ್ನು ನೀಡಿ ದೇವರ ಕಾರ್ಯದಲ್ಲಿ ಭಾಗವಹಿಸಲು ಕೋರಿದೆ.  ಬೆಳ್ಳಿ/ ಕಾಣಿಕೆಯನ್ನು ದೇವಸ್ಥಾನದ ಕಛೇರಿಯಲ್ಲಿ ನೀಡಿ ಅಧಿಕೃತವಾದ ರಸೀದಿಯನ್ನು ಪಡೆಯಬಹುದು.  ದೇವಸ್ಥಾನಲ್ಲಿ ಖಾಯಂ ಸೇವಾ ಠೇವಣಿ ಯೋಜನೆ ಜಾರಿಯಲ್ಲಿರುತ್ತದೆ.  ಭಕ್ತಾಧಿಗಳ ಈ ಯೋಜನೆಯಲ್ಲಿ ರೂ.3000-00 ಗಳನ್ನು ತೊಡಗಿಸಿದಲ್ಲಿ ಅದರಿಂದ ಬರುವ ಬಡ್ಡಿಯಿಂದ ಭಕ್ತರು ಇಚ್ಚಿಸುವ ಒಂದು ದಿನ ರುಧ್ರಾಭಿಷೇಕ ಮಾಡಲಾಗುವುದು.  ಹಾಗೂ ಪ್ರಸಾದವನ್ನು ಅಂಚೆ ಮೂಲಕ ಕಳುಹಿಸಲಾಗುವುದು.  
ದೇವಸ್ಥಾನಕ್ಕೆ ನೀಡಬಯಸುವ ಚಿನ್ನ, ಬೆಳ್ಳಿ ಆಭರಣ ಧವಸ ಧಾನ್ಯಗಳನ್ನು ಹಾಗೂ ಇತ್ಯಾದಿಗಳನ್ನು ಆಡಳಿತಾಧಿಕಾರಿಗಳ ಕಛೇರಿಗೆ ನೀಡಿ ಅಧಿಕೃತ ರಸೀದಿ ಪಡೆಯಲು ಕೋರಿದೆ.  ರಸೀದಿ ಪಡೆಯದೆ ಕೊಡುವ ಕಾಣಿಕೆಯು ದೇವಸ್ಥಾನಕ್ಕೆ ಸೇರುವುದಿಲ್ಲ.  ಅನ್ನ ದಾಸೋಹಕ್ಕೆ ಧವಸ ಧಾನ್ಯಗಳನ್ನು ದೇವಸ್ಥಾನದ ಕಛೇರಿಯಲ್ಲಿ ನೀಡಿ ರಸೀದಿ ಪಡೆಯಬಹುದಾಗಿದೆ.  ಅನ್ನ ಪ್ರಸಾದ ವಿತರಣೆ ಕಾರ್ಯಕ್ರಮವು ಫೆ. 28, ಮಾರ್ಚ್. 01 ಮತ್ತು 02 ರಂದು ಮೂರು ದಿನಗಳ ಕಾಲ ಜರುಗಲಿದೆ ಎಂದು ಬಳ್ಳಾರಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಶರಣ ಚಳುವಳಿಯಲ್ಲಿ ದಲಿತ ವಚನಕಾರರ ಕೊಡುಗೆ ಅಪಾರ- ಡಾ. ಮಹಾಂತೇಶ ಮಲ್ಲನಗೌಡರಕೊಪ್ಪಳ. ಫೆ.22 (ಕರ್ನಾಟಕ ವಾರ್ತೆ) ಹನ್ನೆರಡನೆ ಶತಮಾನದಲ್ಲಿ ಬಸವಣ್ಣನವರು ಹಾಕಿಕೊಟ್ಟ ವಚನ ಚಳುವಳಿ ಭಾರತ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದ ಐತಿಹಾಸಿಕ ಚಳುವಳಿಯಾಗಿದ್ದು, ಈ ಚಳುವಳಿಯಲ್ಲಿ ದಲಿತ ವಚನಕಾರರ ಕೊಡುಗೆ ಅಪಾರವಾಗಿದೆ ಎಂದು ಕೊಪ್ಪಳದ ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರ ಅವರು ಹೇಳಿದರು.

     ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಮ್ ಹಾಲ್ ನಲ್ಲಿ ಗುರುವಾರದಂದು ಏರ್ಪಡಿಸಿದ ದಲಿತ ವಚನಕಾರರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಜಯಂತಿ ಆಚರಣೆ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿ, ಅವರು ಮಾತನಾಡಿದರು.

    ಹನ್ನೆರಡನೆ ಶತಮಾನದಲ್ಲಿ ಬಸವಣ್ಣನವರ ವಚನ ಚಳುವಳಿ ಜಗತ್ತಿನ ಇತಿಹಾಸದಲ್ಲಿ ಐತಿಹಾಸಿಕ ಚಳುವಳಿಯಾಗಿ ಯಶಸ್ಸು ಪಡೆದಿದೆ. ಈ ಚಳುವಳಿಯಲ್ಲಿ ದಲಿತ ವಚನಕಾರರ ಕೊಡುಗೆ ಅಪಾರವಾಗಿದೆ.  ಅಸ್ಪøಶ್ಯತೆಯ ಡೊಂಬರಾಟವನ್ನು ತಮ್ಮ ವಚನಗಳ ಮೂಲಕ ಸಮಾಜಕ್ಕೆ ತೀಕ್ಷ್ಣವಾಗಿ ತಿಳಿಸಿದ ಮಹನೀಯರು ದಲಿತ ವಚನಕಾರರು.  ಈವರೆಗೆ ದಲಿತ ವಚನಕಾರರಾದ ಮಾದಾರ ದೂಳಯ್ಯರ 106 ವಚನಗಳು, ಮಾದಾರ ಚನ್ನಯ್ಯರ 10 ವಚನಗಳು ಡೋಹರ ಕಕ್ಕಯ್ಯರ 6 ವಚನಗಳು, ಉರಿಲಿಂಗಪೆದ್ದಿ ಅವರ 366 ವಚನಗಳು ಲಭ್ಯವಾಗಿವೆ. ಸಮಗಾರ ಹರಳಯ್ಯನವರ ವಚನಗಳು ಲಭ್ಯವಾಗಿಲ್ಲ, ಆದರೆ ವಚನ ಚಳುವಳಿಯಲ್ಲಿ ಹರಳಯ್ಯ ಶರಣ ಪ್ರಮುಖ ಪಾತ್ರ ವಹಿಸಿದವರಾಗಿದ್ದಾರೆ.  ಕುದುರೆಗಳಿಗೆ ಹುಲ್ಲು ಕತ್ತರಿಸಿ ಪೂರೈಸುವ ಕಾಯಕದಲ್ಲಿದ್ದ ಮಾದಾರ ಚನ್ನಯ್ಯ ಅವರು ಗುಪ್ತ ಭಕ್ತಿಯ ಮೂಲಕ ಪರಶಿವನ ಕೃಪೆಗೆ ಪಾತ್ರರಾಗಿದ್ದರು.  ಸಾಕ್ಷಾತ್ ಶಿವನೇ ಆಗಮಿಸಿ, ಚನ್ನಯ್ಯರಿಂದ ಅಂಬಲಿ ಸ್ವೀಕರಿಸಿದ ಎನ್ನುವ ಐತಿಯ್ಯವೂ ಇದೆ.  ಮಾದಾರ ದೂಳಯ್ಯ ಪಾದರಕ್ಷೆ ತಯಾರಿಕೆಯ ಕಾಯಕ ಮಾಡುತ್ತ, ನಿಷ್ಠಾವಂತ ಶಿವಭಕ್ತನಾಗಿದ್ದರು.  ಡೋಹಾರ ಕಕ್ಕಯ್ಯ ಅವರು ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ವಚನಗಳ ರಕ್ಷಣೆ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಉರಿಲಿಂಗ ಪೆದ್ದಿ ಅವರು ಆರಂಭದಲ್ಲಿ ಕಳ್ಳತನ ಮಾಡುತ್ತ ಜೀವನ ಸಾಗಿಸುತ್ತಿದ್ದರು.  ನಂತರ ಗುರುಗಳ ಸಾಂಗತ್ಯದಿಂದ ಮಹನೀಯರಾದರು.  ಭಾರತೀಯ ಸಿದ್ಧಾಂತದಲ್ಲಿ ವರ್ಣಾಶ್ರಮ, ಧರ್ಮ ತುಂಬಾ ಅಮಾನವಿಯ. ಮಿತಿಮೀರಿದ ಜಾತಿಯ ವೈಭವಿಕರಣ ನಡೆಯುವಂತಹ ಕಾಲಘಟ್ಟದಲ್ಲಿ ಬಸವಣ್ಣನವರು ಅಂತರ್ಜಾತಿ ವಿವಾಹ ಮಾಡಿಸಿದ್ದೆ ಕಲ್ಯಾಣ ಕ್ರಾಂತಿಗೆ ಪ್ರಮುಖ ಕಾರಣವಾಯಿತು.  ಬಸವಣ್ಣನವರ ಆಶಯದಂತೆ ಸಮಾನತೆ ತುಂಬಿದ ಮಾನವ ಸಮಾಜ ನಿರ್ಮಾಣವಾಗುವ ಅಗತ್ಯವಿದೆ ಎಂದು ಡಾ. ಮಹಾಂತೇಶ ಮಲ್ಲನಗೌಡರ ಅವರು ಹೇಳಿದರು.
    ಕೊಪ್ಪಳ ತಹಶೀಲ್ದಾರ ಗುರುಬಸವರಾಜ ಮಾತನಾಡಿ, ಜಾತಿಯ ಪ್ರಭಾವ ಮಿತಿಮೀರಿದ ಕಾಲಮಾನದಲ್ಲಿ ದಲಿತ ವಚನಕಾರರು 12 ನೇ ಶತಮಾನದಲ್ಲಿ ವಚನ ಕ್ರಾಂತಿಯನ್ನು ಮಾಡಿ ಇಡೀ ವಿಶ್ವವೇ ಬೇರಗಾಗುವಂತೆ ಮಾಡಿದರು.  ಪ್ರಪಂಚದ ವಿವಿಧ ಕಡೆಗಳಿಂದ ಜಾತಿ, ಮತ ಮರೆತು ಕಲ್ಯಾಣದ ಅನುಭವ ಮಂಟಪದಲ್ಲಿ ಭಾಗವಹಿಸಿ, ಸಮಾಜದ ಅಂಕು-ಡೋಂಕುಗಳಿಗೆ ಕಿವಿಯಾಗಲು, ತಿದ್ದಲು ವಚನ ಕ್ರಾಂತಿಯನ್ನು ಮಾಡಿದರು.  ಇಡೀ ವಿಶ್ವದಲ್ಲಿ ಸಮಾನತೆ ಮತ್ತು ಸ್ತ್ರೀ ಸ್ವಾತಂತ್ರ್ಯದ ಸಮಾನತೆಯನ್ನು ನೀಡಿದವರು ಬಸವಣ್ಣನವರು ಮತ್ತು ವಚನ ಚಳುವಳಿಯ ಶರಣರು. ಆದ್ದರಿಂದಲೇ ಇಂದಿನ ದಿನಮಾನಗಳಲ್ಲಿ ಸ್ತ್ರೀಯರು ಪುರುಷರ ಸರಿಸಮನಾಗಿ ದುಡಿಯುತ್ತಿದ್ದಾರೆ, ಬದುಕುತ್ತಿದ್ದಾರೆ ಮತ್ತು ಎಲ್ಲಾ ರಂಗದಲ್ಲೂ ಮುಂದಿದ್ದಾರೆ.  ವಚನ ಚಳುವಳಿಯ ಶರಣರು ಶಾಂತಿಯ ಮಾತನ್ನು ಹೇಳಿಕೊಟ್ಟಿದ್ದು, ಅವರು ಹಾಕಿದ ಮಾರ್ಗದಲ್ಲಿ ನಾವಿಂದು ನಡೆಯುತ್ತಿದ್ದೇವೆ. ಅವರ ಸಮಾನತೆಯ ತತ್ವದಡಿ ಬದುಕುತಿದ್ದೇವೆ ಎಂದರು.
    ಕಾರ್ಯಕ್ರಮದ ಉದ್ಘಾಟನೆಯನ್ನು ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ ಅವರು ನೆರೆವೇರಿಸಿದರು.  ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಯು.ನಾಗರಾಜ್ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಮ್ತತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಎಚ್, ಜಿಲ್ಲಾ ಸಂಖ್ಯಾ ಸಂಗ್ರಹಣ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.  ಗಾಯಕ ಸದಾಶೀವ ಪಾಟೀ¯ ನಾಡಗೀತೆ ಮತ್ತು ರೈತಗೀತೆ ಪ್ರಸ್ತುತಪಡಿಸಿದರು.  ನಿವೃತ್ತ ಪ್ರಾಚಾರ್ಯರಾದ ಸಿ.ವಿ.ಜಡಿಯವರ್ ನಿರೂಪಿಸಿ, ವಂದಿಸಿದರು.   

ಫೆ. 23 ರಿಂದ ಕೊಪ್ಪಳದಲ್ಲಿ ನ್ಯಾಯವಾದಿಗಳಿಗೆ ಮಧ್ಯಸ್ಥಿಕಾ ತರಬೇತಿ ಕಾರ್ಯಕ್ರಮ


ಕೊಪ್ಪಳ ಫೆ. 22 (ಕರ್ನಾಟಕ ವಾರ್ತೆ): ಬೆಂಗಳೂರು ಮಧ್ಯಸ್ಥಿಕಾ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಹಯೋಗದಲ್ಲಿ ಕೊಪ್ಪಳ ಬಳ್ಳಾರಿ ಹಾಗೂ ರಾಯಚೂರು ಮಧ್ಯಸ್ಥಿಕಾ ನ್ಯಾಯವಾದಿಗಳಿಗಾಗಿ ಮೂರು ದಿನಗಳ ಮಧ್ಯಸ್ಥಿಕಾ ತರಬೇತಿ ಕಾರ್ಯಕ್ರಮವನ್ನು ಫೆ. 23, 24 ಮತ್ತು 25 ರಂದು ಆಯೋಜಿಸಲಾಗಿದ್ದು, ಉದ್ಘಾಟನಾ ಕಾರ್ಯಕ್ರಮ ಫೆ. 23 ರಂದು ಬೆಳಿಗ್ಗೆ 09-30 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
        ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಆರ್.ಜಿ ಜೋಶಿ ಅವರು ಉದ್ಘಾಟನೆ ನೆರೆವೇರಿಸುವರು.  ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಎಸ್. ಕಂಪ್ಲಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ, ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ ಎಸ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮನು ಶರ್ಮಾ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಕೊಟ್ರೇಶ ಯು. ಪೆÇೀಚಗುಂಡಿ, ಬೆಂಗಳೂರು ಮಧ್ಯಸ್ಥಿಕಾ ಕೇಂದ್ರದ ತರಬೇತಿದಾರರು ಆದ ಆರ್. ವಿಜಯ ಕುಮಾರ, ಲತಾ ಪ್ರಸಾದ ಹಾಗೂ ಲಕ್ಷ್ಮೀಶರಾವ್, ಮತ್ತು ಜಿಲ್ಲಾ ವಾರ್ತಾಧಿಕಾರಿ ತುಕಾರಾಮರಾವ್ ಅವರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಫೆ. 22 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಫೆ. 25 ಮತ್ತು 26 ರಂದು ಎರಡು ದಿನಗಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಬಸವರಾಜ ರಾಯರಡ್ಡಿ ಅವರು ಫೆ. 25 ರಂದು ಬೆಳಿಗ್ಗೆ 08 ಗಂಟೆಗೆ ಹಂಪಿ ಎಕ್ಸ್‍ಪ್ರೆಸ್ ರೈಲಿನ ಮೂಲಕ ಕೊಪ್ಪಳಕ್ಕೆ ಆಗಮಿಸುವರು.  ಅಂದು ಬೆಳಿಗ್ಗೆ 10 ಗಂಟೆಗೆ ಲಕಮಾಪುರಕ್ಕೆ ತೆರಳಿ, ಲಕಮಾಪುರ-ಕೊಪ್ಪಳ ರಸ್ತೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರೆವೇರಿಸುವರು.  ಬೆಳಿಗ್ಗೆ 11 ಗಂಟೆಗೆ ತಳಕಲ್ ಗ್ರಾಮದಲ್ಲಿ ಹಿಂದುಳಿದ ವರ್ಗದ ಹಾಸ್ಟೆಲ್, ತಳಬಾಳ ನಿಂದ ರಾಷ್ಟ್ರೀಯ ಹೆದ್ದಾರಿ-367 ರಸ್ತೆಯ ಸುಧಾರಣೆ ಹಾಗೂ ಕನಕಭವನದ ಶಂಕುಸ್ಥಾಪನೆ ನೆರವೇರಿಸುವರು.  12 ಕ್ಕೆ ಕೋಮಲಾಪುರದಲ್ಲಿ ಕನಕಭವನದ ಶಂಕುಸ್ಥಾಪನೆ ಹಾಗೂ 01 ಗಂಟೆಗೆ ಸೋಂಪುರದಲ್ಲಿ ಕನಕಭವನ ಮತ್ತು ಸೋಂಪುರ ಗ್ರಾಮದಿಂದ ರೈಲ್ವೆ ನಿಲ್ದಾಣ ರಸ್ತೆಯ ಸುಧಾರಣೆಗೆ ಶಂಕುಸ್ಥಾಪನೆ.  ಮಧ್ಯಾಹ್ನ 02 ಗಂಟೆಗೆ ಬಟಪನಹಳ್ಳಿ, 03-30 ಕ್ಕೆ ದ್ಯಾಂಪುರ ಹಾಗೂ 04-15 ಕ್ಕೆ ಸಂಗನಾಳ ಗ್ರಾಮಗಳಲ್ಲಿ ಕನಕಭವನದ ಶಂಕುಸ್ಥಾಪನೆ.   ಸಂಜೆ 05-30 ಗಂಟೆಗೆ ಹಿರೇಮ್ಯಾಗೇರಿ ಗ್ರಾಮಕ್ಕೆ ತೆರಳಿ, ಹಿರೇಮ್ಯಾಗೇರಿ-ಕೊಡಗನೂರ ರಸ್ತೆಯ ಕಾಮಗಾರಿಗೆ ಶಂಕುಸ್ಥಾಪನೆ.  ಸಂಜೆ 06-30 ಕ್ಕೆ ಚಿಕ್ಕಮ್ಯಾಗೇರಿ ಹಾಗೂ 07-30ಕ್ಕೆ ಕುದರಿಮೋತಿ ಗ್ರಾಮಗಳಲ್ಲಿ ಕನಕಭವನದ ಶಂಕುಸ್ಥಾಪನೆ ನೆರೆವೇರಿಸಿ ನಂತರ ಕೊಪ್ಪಳದಲ್ಲಿ ವಾಸ್ತವ್ಯ ಮಾಡುವರು.
ಫೆ. 26 ರಂದು ಬೆಳಿಗ್ಗೆ 10 ಗಂಟೆಗೆ ಗುಂತಮಡವುಕ್ಕೆ ತೆರಳಿ, ಗುಂತಮಡವು-ಚಿಕ್ಕಮನ್ನಾಪುರ ರಸ್ತೆಯ ಶಂಕುಸ್ಥಾಪನೆ ನೆರೆವೇರಿಸುವರು.  ಬೆಳಿಗ್ಗೆ 11 ಕ್ಕೆ ಹಿರೇವಂಕಲಕುಂಟ, 12 ಕ್ಕೆ ಹಿರೇಅರಳಹಳ್ಳಿ ಗ್ರಾಮಗಳಲ್ಲಿ ಕನಕಭವನದ ಶಂಕುಸ್ಥಾಪನೆ.  ಮಧ್ಯಾಹ್ನ 01 ಗಂಟೆಗೆ ಲಿಂಗನಬಂಡಿ ಗ್ರಾಮದಲ್ಲಿ ಕನಕಭವನದ ಶಂಕುಸ್ಥಾಪನೆ ಹಾಗೂ ಮೊರಾರ್ಜಿ ದೇಸಾಯಿ ವಸತಿಯುಕ್ತ ಶಾಲೆಯ ಉದ್ಘಾಟನೆ ನೆರೆವೇರಿಸುವರು.  ಮಧ್ಯಾಹ್ನ. 02 ಕ್ಕೆ ದಮ್ಮೂರ, 03 ಕ್ಕೆ ತುಮ್ಮರಗುದ್ದಿ ಹಾಗೂ 4 ಗಂಟೆಗೆ ಮುಧೋಳ ಗ್ರಾಮಗಳಲ್ಲಿ ಕನಕಭವನದ ಶಂಕುಸ್ಥಾಪನೆ.  04-30 ಕ್ಕೆ ಹರಿಶಂಕರಬಂಡಿ ಗ್ರಾಮಕ್ಕೆ ತೆರಳಿ, ಹರಿಶಂಕರಬಂಡಿ ಯಿಂದ ಚೆನಪನಹಳ್ಳಿಯ ಸಿ.ಸಿ ರಸ್ತೆಯ ಕಾಮಗಾರಿಯ ಶಂಕುಸ್ಥಾಪನೆ ಹಾಗೂ 05-30 ಗಂಟೆಗೆ ತಿಪ್ಪರಸನಾಳ ಸಿ.ಸಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರೆವೇರಿಸುವರು.  ಮಂತ್ರಿಗಳು ಅದೇ ದಿನ ರಾತ್ರಿ 8 ಗಂಟೆಗೆ ಹಂಪಿ ಎಕ್ಸ್‍ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
 

Wednesday, 21 February 2018

ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ

ಗಿರಿಜನ ಉಪಯೋಜನೆಯಡಿ ಜಾನಪದ ಗಾಯನ ಕಲಿಕಾ ತರಬೇತಿ : ಅರ್ಜಿ ಆಹ್ವಾನ
*********************
ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ 2016-17 ನೇ ಸಾಲಿನ ಗಿರಿಜನ ಉಪಯೋಜನೆಯಡಿ ಜಾನಪದ ಗಾಯನ ಕಲಿಕಾ ತರಬೇತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
     ಕರ್ನಾಟಕ ಜಾನಪದ ಅಕಾಡೆಮಿಯು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಶಿಬಿರಾರ್ಥಿಗಳಿಗಾಗಿ ಜಾನಪದ ಗಾಯನ ಕಲಿಕಾ ತರಬೇತಿ ಶಿಬಿರವನ್ನು ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂಲ ಗುರುಗಳಿಂದ ತರಬೇತಿ ನೀಡಲು ನಿರ್ಧರಿಸಿದ್ದು,  ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು.  ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.  ಅರ್ಜಿಯನ್ನು ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ ಬೆಂಗಳೂರು ಅಥವಾ ಸಹಾಯಕ ನಿರ್ದೇಶಕರ ಕಾರ್ಯಾಲಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಪ್ಪಳ ಅಥವಾ ಅಕಾಡೆಮಿಯ ವೆಬ್‍ಸೈಟ್  www.karnatakajanapada.in ನಲ್ಲಿ ಪಡೆಯಬಹುದಾಗಿದೆ.
    ಅರ್ಜಿ ಸಲ್ಲಿಸಲು ಮಾರ್ಚ್. 05 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಜಾನಪದ ಅಕಾಡೆಮಿಯ ದೂರವಾಣಿ ಸಂಖ್ಯೆ 080-22215509 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮ ರಿಜಿಸ್ಟಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ
*************************
ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಪ್ರಸಕ್ತ ಸಾಲಿನ ಗಿರಿಜನ ಉಪಯೋಜನೆಯಡಿ ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿಗಾಗಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಕರ್ನಾಟಕ ಜಾನಪದ ಅಕಾಡೆಮಿಯು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಶಿಬಿರಾರ್ಥಿಗಳಿಗಾಗಿ ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ ಶಿಬಿರವನ್ನು ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂಲ ಗುರುಗಳಿಂದ ತರಬೇತಿ ನೀಡಲು ನಿರ್ಧರಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು.  ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.  ಅರ್ಜಿಯನ್ನು ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ ಬೆಂಗಳೂರು ಅಥವಾ ಸಹಾಯಕ ನಿರ್ದೇಶಕರ ಕಾರ್ಯಾಲಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಥವಾ ಅಕಾಡೆಮಿಯ ವೆಬ್‍ಸೈಟ್ www.karnatakajanapada.in ನಲ್ಲಿ ಪಡೆಯಬಹುದಾಗಿದೆ.
    ಅರ್ಜಿ ಸಲ್ಲಿಸಲು ಮಾರ್ಚ್. 05 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಜಾನಪದ ಅಕಾಡೆಮಿಯ ದೂರವಾಣಿ ಸಂಖ್ಯೆ 080-22215509 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮ ರಿಜಿಸ್ಟಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಫೆ. 24 ರಂದು ಕೊಪ್ಪಳದಲ್ಲಿ ಯುವ ಸಂಘಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ


ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಯುವ ಚೈತನ್ಯ ಯೋಜನೆಯಡಿ ಆಯ್ಕೆಯಾದ ನೊಂದಾಯಿತ ಯುವ ಸಂಘಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮವನ್ನು ಫೆ. 24 ರಂದು ಮಧ್ಯಾಹ್ನ 3 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
    ಗ್ರಾಮೀಣ ಯುವ ಜನತೆಯ ಆರೋಗ್ಯಕರ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಾಯಕವಾಗುವ ವಾತಾವರಣವನ್ನು ಸೃಜಿಸಲು “ಯುವ ಚೈತನ್ಯ” ಎಂಬ ಒಂದು ಹೊಸ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆಯಡಿ ಕೊಪ್ಪಳ ತಾಲೂಕಿನ ಆಯ್ಕೆಯಾದ ನೊಂದಾಯಿತ ಒಟ್ಟು 39 ಯುವ ಸಂಘಗಳಿಗೆ ಫೆ. 24 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹಾಗೂ ಜಿ.ಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರಿಂದ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಗುವುದು.
    ಈ ಯೋಜನೆ ಅಡಿಯಲ್ಲಿ ಕೊಪ್ಪಳ ತಾಲೂಕಿನ ಆಯ್ಕೆಯಾದ ನೊಂದಾಯಿತ ಯುವ ಸಂಘದ ಅಧ್ಯಕ್ಷರು/ ಕಾರ್ಯದರ್ಶಿ/ ಸಂಘದ ಸದಸ್ಯರನ್ನೊಳಗೊಂಡಂತೆ ತಮ್ಮ ಸಂಘದ ಬೈಲಾ ಝರಾಕ್ಸ್ ಕಾಫಿ/ ಲೆಟರ್ ಪ್ಯಾಡ ಮತ್ತು ಮೊಹರಿನೊಂದಿಗೆ ಸಂಘದವರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಾಗಬೇಕು.  ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಮಳೇಮಲ್ಲೇಶ್ವರ ರಸ್ತೆ ಕೊಪ್ಪಳ ಇಲ್ಲಿಗೆ ಅಥವಾ ದೂರವಾಣಿ ಸಂಖ್ಯೆ 9482404848, 9036773070, ಹಾಗೂ 7899432227 ಕ್ಕೆ ಸಂಪರ್ಕಿಸಬಹುದು ಎಂದು ಇಲಾಖಾ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಷ್ಟಗಿ : ಟ್ಯಾಕ್ಸಿ ಡ್ರೈವರ್ ತರಬೇತಿಗಾಗಿ ನೊಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ


ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ಪುರಸಭೆ ವತಿಯಿಂದ ಪ್ರಸಕ್ತ ಸಾಲಿನ ದೀನದಯಾಳ ಅಂತ್ಯೋದಯ ಯೋಜನೆಯ-ನಲ್ಮ್ ಅಭಿಯಾನ ಯೋಜನೆಯಡಿ ಟ್ಯಾಕ್ಸಿ ಡ್ರೈವರ್ ತರಬೇತಿ ನೀಡಲು ಅರ್ಹ ಆರ್.ಟಿ.ಓ ನೋಂದಾಯಿತ ಸಂಸ್ಥೆಗಳಿಂದ   ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  
    ಕುಷ್ಟಗಿ ಪುರಸಭೆ ವತಿಯಿಂದ ದೀನದಯಾಳ ಅಂತ್ಯೋದಯ ಯೋಜನೆಯ-ನಲ್ಮ್ ಅಭಿಯಾನ ಯೋಜನೆಯ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ನಿಯುಕ್ತಿ ಉಪ ಘಟಕದಡಿ ಆರ್.ಟಿ.ಓ. ನೋಂದಾಯಿತ ವಾಹನ ಚಾಲನಾ ತರಬೇತಿ ಸಂಸ್ಥೆಗಳಿಂದ “ಟ್ಯಾಕ್ಸಿ ಡ್ರೈವರ್ ತರಬೇತಿ” ಯನ್ನು ನೀಡಲು ನಿರ್ಧರಿಸಿದ್ದು, ಪ್ರತಿ ಪಲಾನುಭವಿಗೆ ರೂ. 4750/- ದಂತೆ ತರಬೇತಿ ಶುಲ್ಕವನ್ನು ಪಾವತಿಸಲಾಗುವುದು.  ತರಬೇತಿ ಸಂಸ್ಥೆಯವರು ಬೇರೆ ಸಂಸ್ಥೆಗೆ ಉಪ-ಗುತ್ತಿಗೆ ನೀಡಬಾರದು.  ಸಂಸ್ಥೆಯವರು ಆರ್.ಟಿ.ಓ ರವರಿಂದ ಪರವಾನಿಗೆಯನ್ನು ನವೀಕರಿಸಿಕೊಂಡಿರುವ ಮಾಹಿತಿಯನ್ನು ಸಲ್ಲಿಸಬೇಕು.  ತರಬೇತಿ ಪಡೆಯುವ ಫಲಾನುಭವಿಗಳಿಗೆ ತಮ್ಮ ಆರ್.ಟಿ.ಓ ರವರಿಂದ ಪ್ರಮಾಣ ಪತ್ರ ಸಲ್ಲಿಸಬೇಕು.  ತರಬೇತಿ ಪ್ರಾರಂಭವಾದ ಬಗ್ಗೆ ಕಛೇರಿಗೆ ವರದಿ ಸಲ್ಲಿಸಬೇಕು.  ತರಬೇತಿಗೆ ಅನುದಾನ ಲಭ್ಯತೆ ಆಧಾರದ ಮೇಲೆ ಮೊದಲನೇ ಕಂತಿನ ಶೇ.50 ರಷ್ಟು ಅನುದಾನ ಬಿಡುಗಡೆ ಮಾಡಲಾಗುವುದು.  ಚಾಲನಾ ಪರವಾನಿಗೆ ಪತ್ರ ನೀಡಿದ ನಂತರ ಶೇ.30 ರಷ್ಟು ಬಿಡುಗಡೆ ಮಾಡಲಾಗುವುದು.
    ತರಬೇತಿ ನೀಡಲು ಇಚ್ಛೆಯುಳ್ಳ ಆರ್.ಟಿ.ಓ. ನೋಂದಾಯಿತ ವಾಹನ ಚಾಲನಾ ತರಬೇತಿ ಸಂಸ್ಥೆಯವರು, ತರಬೇತಿ ಸಂಬಂಧ ತಮ್ಮ ದರವಾರುಗಳನ್ನು ನಮೂದಿಸಿ, ಸೀಲ್ ಮಾಡಿದ ಲಕೋಟೆಯನ್ನು ಫೆ. 26 ರಂದು ಸಂಜೆ 4-30 ಗಂಟೆಯ ಒಳಗಾಗಿ ಮುಖ್ಯಾಧಿಕಾರಿಗಳು, ಕುಷ್ಟಗಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು, ಹೆಚ್ಚಿನ ಮಾಹಿತಿಯನ್ನು ಕಚೇರಿಯಿಂದ ಪಡೆಯಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪುಸ್ತಕ ಖರೀದಿಗಾಗಿ ಲೇಖಕರಿಂದ ಅರ್ಜಿ ಆಹ್ವಾನ


ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪುಸ್ತಕ ಖರೀದಿಗಾಗಿ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ. 
    ಹೈದ್ರಾಬಾದ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ವತಿಯಿಂದ ಕೊಪ್ಪಳ ಜಿಲ್ಲೆಗೆ ಪುಸ್ತಕ ಖರೀದಿಸಲು ಅನುದಾನ ಬಿಡುಗಡೆಯಾಗಿದ್ದು, ಹೈ-ಕ ಭಾಗದ ಲೇಖಕರಿಗೆ ಉತ್ತೇಜನ ನೀಡಲು ಹಾಗೂ ಈ ಭಾಗದ ಲೇಖಕರು ಬರೆದ ಪುಸ್ತಕಗಳನ್ನು ಪರಿಚಯಿಸುವ ಉದ್ದೇಶದಿಂದ ಹೈ-ಕ ಭಾಗದ ಗ್ರಾ.ಪಂ ಗ್ರಂಥಾಲಯಗಳಲ್ಲಿ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಓದುವ ಉತ್ತೇಜನ ನೀಡಲು ಹೆಚ್.ಕೆ.ಆರ್.ಡಿ.ಬಿ ಕಲಬುರ್ಗಿ ಮ್ಯಾಕ್ರೋ ಯೋಜನೆಯಡಿ ಸ್ಥಳೀಯ ಲೇಖಕರಿಂದ ಪುಸ್ತಕಗಳನ್ನು ಖರೀದಿಸಲಾಗುವುದು.      ಅರ್ಜಿ ಸಲ್ಲಿಸಲು ಸಾಹಿತ್ಯ, ಲಲಿತಕಲೆ, ವಿಜ್ಞಾನ, ಮಾನಸಿಕ, ವೈದ್ಯಕೀಯ, ತಾಂತ್ರಿಕ, ಸ್ಪರ್ಧಾತ್ಮಕ, ಪರಾಮಾರ್ಶಿಕ ಕೃತಿಗಳು ಹಾಗೂ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಅಥವಾ ಇತರೆ ಭಾರತೀಯ ಭಾಷೆಯ ಗ್ರಂಥಗಳಾಗಿರಬೇಕು. ಪುಸ್ತಕಗಳು 2016ರ ಜನವರಿ. 01 ರಿಂದ 2017ರ ಡಿಸೆಂಬರ್. 31 ರವರೆಗೆ ಪ್ರಥಮವಾಗಿ ಮುದ್ರಣಗೊಂಡಿರಬೇಕು. ಮರು ಮುದ್ರಣವಾದಲ್ಲಿ 10 ವರ್ಷಗಳ ಅಂತರವಿರಬೇಕು.   ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪುಸ್ತಕ ಖರೀದಿಗಾಗಿ ರಚಿಸಲಾದ ಸಮಿತಿಯಲ್ಲಿ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಲೇಖಕರು ಸಲ್ಲಿಸಿದ ಪುಸ್ತಕಗಳ ಗುಣಮಟ್ಟ ಪರಿಶೀಲಿಸಿ ಖರೀದಿಗಾಗಿ ಆಯ್ಕೆ ಮಾಡಲಾಗುವುದು.  ಅರ್ಜಿ ಸಲ್ಲಿಸಲು ಪುಸ್ತಕಗಳನ್ನು ಬರೆದ ಲೇಖಕರು ಕಡ್ಡಾಯವಾಗಿ ಕೊಪ್ಪಳ ಜಿಲ್ಲೆಯವರಾಗಿರಬೇಕು.  ಹಾಗೂ ತಮ್ಮ ದೃಢೀಕೃತ ವಿಳಾಸದ ಪ್ರತಿಯನ್ನು ಸಲ್ಲಿಸಬೇಕು.  ಸಾರ್ವಜನಿಕರ ಗ್ರಂಥಾಲಯ ಇಲಾಖೆ ಪುಸ್ತಕ ಖರೀದಿಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪುಸ್ತಕದ ಅಳತೆ ಕಾಗದದ ಗುಣಮಟ್ಟ ಹಾಗೂ ಪುಸ್ತಕದ ಪುಟಗಳಿಗೆ ಅನುಗುಣವಾಗಿ ಸರ್ಕಾರದ ಆದೇಶದಂತೆ ಬೆಲೆಗಳನ್ನು ನಿಗದಿ ಮಾಡಲಾಗುವುದು.  ಲೇಖಕರು ಪುಸ್ತಕ ಖರೀದಿಗೆ ಆಯ್ಕೆಗಾಗಿ ಗ್ರಂಥಗಳ ಒಂದು ಪ್ರತಿಯೊಂದಿಗೆ ಕೊಪ್ಪಳ ಜಿಲ್ಲೆಯ ತಮ್ಮ ವಾಸಸ್ಥಳ ದೃಢೀಕರಣ ಪ್ರತಿ, ಆಧಾರ ಕಾರ್ಡ್, ಓಟರ ಐಡಿ ಯೊಂದಿಗೆ ಮಾರ್ಚ್. 09 ರೊಳಗಾಗಿ ಮುಖ್ಯ ಗ್ರಂಥಾಲಯಾಧಿಕಾರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ಕೊಪ್ಪಳ-583231, ಕಛೇರಿಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗೆ ದೂರವಾಣಿ ಸಂ: 08539-222003 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಥಮ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಸಲ್ಲಿಸಲು ಅವಕಾಶ


ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2016-17ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಉತ್ತೀರ್ಣರಾದ ಪ.ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಫೆ. 28 ರವರೆಗೆ ಅರ್ಜಿ ಸಲ್ಲಿಸಲು ಅಂತಿಮ ಅವಕಾಶ ಕಲ್ಪಿಸಲಾಗಿದೆ.
    ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದ್ದು, ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು.  ಉಪನಿರ್ದೇಶಕರು (ಶಿಕ್ಷಣ) ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಅವರು ಅರ್ಜಿ ಸಲ್ಲಿಸಲು ಫೆ. 28 ರವರೆಗೆ ಅಂತಿಮ ಅವಕಾಶ ಕಲ್ಪಿಸಿದ್ದು, ಆಸಕ್ತರು ವೆಬ್‍ಸೈಟ್ www.sw.kar.nic.in  ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು


ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಬಾಲ್ಯ ವಿವಾಹಕ್ಕೆ ಒಳಪಡುತ್ತಿದ್ದ ಬಾಲಕಿಯನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಆಯೋಜಿಸಲಾಗಿದ ಬಾಲಕಿಯ ಬಾಲ್ಯವಿವಾಹದ ಕುರಿತು ಮಾಹಿತಿಯನ್ನು ತಿಳಿದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಕುಕನೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್‍ಟೇಬಲ್  ಅವರು ಫೆ. 17 ರಂದು ಬಾಲಕಿ ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ, ಬಾಲಕಿಯ ವಿವಾಹದ ಸಿದ್ಧತಾ ಕಾರ್ಯ ಭರದಿಂದ ನಡೆಯುತ್ತಿರುವುದು ಕಂಡುಬಂದಿತು.  ವಿವಾಹ ಕುರಿತು ಪಾಲಕರನ್ನು ಕೇಳಿದಾಗ ವಿವಾಹ ಮಾಡುವುದು ಖಚಿತ ಎಂದು ಹೇಳಿದರು.  ಆದ್ದರಿಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಬಾಲ್ಯವಿವಾಹ ಮಾಡುವುದು ಅಪರಾಧ ಎಂಬುವ ಮಾಹಿತಿಯನ್ನು ಪೋಷಕರಿಗೆ ನೀಡಿ ಬಾಲಕಿಯನ್ನು ವಶಕ್ಕೆ ಪಡೆದು ಮುಂದಿನ ಆರೈಕೆ ಮತ್ತು ಪೋಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಪ್ಪಳ : ವಾಜಪೇಯಿ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ನಗರಸಭೆ ವತಿಯಿಂದ ಪ್ರಸಕ್ತ ಸಾಲಿಗೆ ವಾಜಪೇಯಿ ನಗರ ವಸತಿ ಯೋಜನೆಯಡಿ ಸಾಮಾನ್ಯ ವರ್ಗದ ವಸತಿ ರಹಿತರಿಗೆ ಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಕೊಪ್ಪಳ ನಗರಸಭೆಯು ವಾಜಪೇಯಿ ನಗರ ವಸತಿ ಯೋಜನೆಯಡಿ ಸಾಮಾನ್ಯ ವರ್ಗದ ವಸತಿ ರಹಿತ 200 ಜನರಿಗೆ ಸಹಾಯನವನ್ನು ನೀಡುತ್ತಿದೆ.  ಅರ್ಜಿ ಸಲ್ಲಿಸಲು ಕೊಪ್ಪಳ ನಗರ ಪ್ರದೇಶದವರಾಗಿರಬೇಕು.  ಫಲಾನುಭವಿಯು ವಸತಿ ರಹಿತ ಹಾಗೂ ನಿವೇಶನ ಹೊಂದಿರಬೇಕು. ಅರ್ಜಿ ಸಲ್ಲಿಸಲು ಫೆ. 26 ಕೊನೆಯ ದಿನವಾಗಿದ್ದು, ಆಸಕ್ತರು   ರೇಷನ್ ಕಾರ್ಡ/ ಆಧಾರ್ ಕಾರ್ಡ, ಕುಟುಂಬಸ್ತರ ಆಧಾರ್ ಕಾರ್ಡ, ಚಾಲ್ತಿ ಸಾಲಿನ ಆಸ್ತಿಕರ ಹಾಗೂ ನಮೂನೆ-3ನ್ನು ಲಗತ್ತಿಸಬೇಕು.  ಚಾಲ್ತಿ ಸಾಲಿನ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್‍ಪೋರ್ಟ ಸೈಜಿನ ಮೂರು ಭಾವಚಿತ್ರಗಳು ಹಾಗೂ ಖಾಲಿ ಅಥವಾ ಕಚ್ಚಾಮನೆ ನಿವೇಶನದ ಭಾವಚಿತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಸಕ ಇಕ್ಬಾಲ್ ಅನ್ಸಾರಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರದಿಂದ ಗಂಗಾವತಿ ಕ್ಷೇತ್ರದ ಗ್ರಾಮೀಣದಲ್ಲಿ ಅಭಿವೃದ್ದಿ ಕ್ರಾಂತಿ ಆಗಿದೆ ಎಂದು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿದರು.

       ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದಲ್ಲಿ ಒಟ್ಟು 1 ಕೋಟಿ 38 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ರಸ್ತೆ ಡಾಂಬರೀಕರಣ, ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

      ಗಂಗಾವತಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಶೈಕ್ಷಣಿಕ ಕಾಳಜಿಯಿಂದ ಇಂದರಗಿ ಗ್ರಾಮಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿಸಿದ್ದು ಕಾಲೇಜ್ ಕಟ್ಟಡಕ್ಕಾಗಿ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಗೆ 1 ಕೋಟಿ 34 ಲಕ್ಷ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರ ಹಣ ಮಂಜೂರು ಆಗಲಿದೆ. ಮುಖ್ಯಮಂತ್ರಿಗಳ ಉಚಿತ ಅನಿಲ ಭಾಗ್ಯ ಯೋಜನೆಗೆ ಮೊದಲ ಹಂತದಲ್ಲಿ ಇಂದರಗಿ ಗ್ರಾಮದಲ್ಲಿ 260 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

     ನಂತರ ಶಾಸಕರು ಗೋಸಲದೊಡ್ಡಿಯಲ್ಲಿ  76 ಲಕ್ಷ ವೆಚ್ಚದಲ್ಲಿ ಅರಿಶಿಣಕೇರಿ-ಕೊಡದಾಳ ರಸ್ತೆ ಡಾಂಬರೀಕರಣ, 10ಲಕ್ಷ ವೆಚ್ಚದ ಶಾಲಾ ಕೊಠಡಿ ನಿರ್ಮಾಣ, ಮೆತಗಲ್‍ನಲ್ಲಿ  91ಲಕ್ಷ ವೆಚ್ಚದ ಗಡ್ಡಿ-ಹಂಪಸದುರ್ಗಾ ರಸ್ತೆ ಡಾಂಬರೀಕರಣ, 20 ಲಕ್ಷ ವೆಚ್ಚದ ಸಿಸಿ ರಸ್ತೆ, 30 ಲಕ್ಷ ವೆಚ್ಚದ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಿಸ್ತರಣಾ ಚಿಕಿತ್ಸಾಲಯ ಉದ್ಘಾಟಿಸಿದರು. ಜಿನ್ನಾಪುರದಲ್ಲಿ 10 ಲಕ್ಷ ವೆಚ್ಚದ ಸಿಸಿ ರಸ್ತೆ, ಚಾಮಲಾಪುರದಲ್ಲಿ 15 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
     ಕಾರ್ಯಕ್ರಮದಲ್ಲಿ ಎಪಿಎಂಸಿ ಸದಸ್ಯ ರಾಮನಗೌಡ ಪಾಟೀಲ, ಹಾಸಗಲ್ ಗ್ರಾಪಂ ಅಧ್ಯಕ್ಷ ತುಕಾರಾಮ ಬಡೀಗೇರ, ಗಣ್ಯರಾದ ಹನುಮಂತಪ್ಪ ವನಬಳ್ಳಾರಿ,  ಮಲ್ಲೇಶಪ್ಪ ಗುಮಗೇರಿ, ಸಂಗಮೇಶ ಬಾದವಾಡಗಿ, ಈರಣ್ಣ ಕೊಳ್ಳಿ, ಕನಕಪ್ಪ ಪೂಜಾರ ಇತರರು ಉಪಸ್ಥಿತರಿದ್ದರು.  ಇಂದ್ರೇಶ ಕೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು.

ಫೆ. 22 ರಂದು ಕೊಪ್ಪಳದಲ್ಲಿ ದಲಿತ ವಚನಕಾರರ ಜಯಂತಿ


ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ದಲಿತ ವಚನಕಾರರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿ ಅವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆ. 22 ರಂದು ಬೆಳ್ಳಿಗ್ಗೆ 11-00 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಆಯೋಜಿಸಲಾಗಿದೆ.
    ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು.   ಕೊಪ್ಪಳದ ಸಾಹಿತಿ ಮಹಾಂತೇಶ ಮಲ್ಲನಗೌಡ್ರ ಅವರು ದಲಿತ ವಚನಕಾರರ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಫೆ. 24 ರಂದು ಕಂಪಸಾಗರ ಗ್ರಾಮದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್


ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ತಹಶೀಲ್ ಕಾರ್ಯಾಲಯದ ವತಿಯಿಂದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಫೆ. 24 ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕಿನ ಕಂಪಸಾಗರ ಗ್ರಾಮದಲ್ಲಿ ಆಯೋಜಿಸಲಾಗಿದೆ.
    ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಕೊಪ್ಪಳ ತಾಲೂಕಿನ ಕಂಪಸಾಗರ ಗ್ರಾಮದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.  ಕಾರ್ಯಕ್ರಮದಲ್ಲಿ ಮಂಜೂರಾತಿ ಆದೇಶ ಪಡೆದು ಪಿಂಚಣಿ ವಿತರಣೆ ಆಗದೇ ಇರುವ ಕುರಿತು, ಜನಸ್ನೇಹಿ ಕೇಂದ್ರಗಳಲ್ಲಿ ಸ್ವೀಕರಿಸಿರುವ ಅರ್ಜಿಗಳ ಕ್ಲುಪ್ತಕಾಲದಲ್ಲಿ ವಿಲೇವಾರಿಯ ಕುರಿತು, ಹಾಲಿ ಫಲಾನುಭವಿಗಳ ಪಿಂಚಣಿ ಹಣ ವಿತರಣೆ ಹಾಗೂ ಪಿಂಚಣಿಗೆ ಸಂಬಂಧಿಸಿದ ಇನ್ನಿತರ ದೂರುಗಳ ಕುರಿತು ಚರ್ಚಿಸಲಾಗುವುದು ಎಂದು ತಹಶೀಲ್ದಾರ ಗುರುಬಸವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tuesday, 20 February 2018

ಸರ್ವಜ್ಞರ ತ್ರಿಪದಿಗಳು ಜನಪರ ಮೌಖಿಕ ಅರಿವನ್ನೊಳಗೊಂಡಿವೆ : ರಾಜಶೇಖರ ಹಿಟ್ನಾಳಕೊಪ್ಪಳ ಫೆ. 20 (ಕರ್ನಾಟಕ ವಾರ್ತೆ): ಸಂತ ಕವಿ ಸರ್ವಜ್ಞರ ವಚನಗಳು ಇಂದಿಗೂ ಅಜರಾಮರವಾಗಿ ಉಳಿದಿದ್ದು, ಅವರ ತ್ರಿಪದಿಗಳು ಜನಪರ ಮೌಖಿಕ ಅರಿವನ್ನು ಒಳಗೊಂಡಿವೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಹೇಳಿದರು.

    ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ನಗರದ ಸಾಹಿತ್ಯ ಭವನದಲ್ಲಿ ಮಂಗಳವಾರದಂದು ಏರ್ಪಡಿಸಿದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಸಂಸ್ಕøತದಲ್ಲಿ ಸರ್ವಜ್ಞ ಎಂದರೆ ಎಲ್ಲಾ ಜ್ಞಾನವನ್ನು ಅರಿತವರು ಎಂದರ್ಥ.  ಸರ್ವಜ್ಞರು ತಮ್ಮ ತ್ರಿಪದಿ ವಚನಗಳಲ್ಲಿ ಮುಖ್ಯವಾಗಿ ನೈತಿಕ, ಸಾಮಾಜಿಕ ಮತ್ತು ಧಾರ್ಮಿಕ ವಿಚಾರಗಳ ಕುರಿತು ತಿಳಿಸಿದ್ದಾರೆ.  ಜಾತಿ, ಮತ, ಪಂಥ ಇವುಗಳ ಬಗ್ಗೆ ತ್ರಿಪದಿಗಳ ಮೂಲಕ ಸಮಾಜದ ಅಂಕು-ಡೊಂಕು ವ್ಯವಸ್ಥೆಯನ್ನು ತಿದ್ದಿದ್ದಾರೆ.  ಮನುಷ್ಯರಾಗಿ ಬಾಳುವುದು ಮುಖ್ಯ ಎಂದು ಕವಿ ಸರ್ವಜ್ಞರು ಮನುಕುಲಕ್ಕೆ ಸಂದೇಶವನ್ನು ನೀಡಿದ್ದಾರೆ.  ಸರಳ ಭಾಷೆಯಲ್ಲಿ, ಬದುಕಿನ ಸತ್ಯವನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ಕವಿ ಸರ್ವಜ್ಞರು.  ಅವರ ವಿಚಾರಧಾರೆಗಳನ್ನು ಜಗತ್ತಿಗೆ ಪರಿಚಯಿಸಲು ಸರ್ಕಾರವು ಜಯಂತಿಯನ್ನು ಆಚರಿಸುತ್ತಿದೆ.  ಕೊಪ್ಪಳ ಜಿಲ್ಲೆಯಲ್ಲಿ ಕುಂಬಾರ ಭವನ ನಿರ್ಮಾಣ ಹಾಗೂ ಕುಂಬಾರ ನಿಗಮ ಸ್ಥಾಪನೆಗೆ ಸಮಾಜದ ಬೇಡಿಕೆಯಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಕ್ರಮಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು.  ಹೆಚ್ಚಿನ ಅನುದಾನವನ್ನು ನೀಡಿ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಸಹ ಸ್ಥಾಪಿಸಲಾಗುವುದು ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಹೇಳಿದರು. 
    ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಕನ್ನಡ ಪ್ರಾಧ್ಯಾಪಕರಾದ ಡಾ. ಭಾಗ್ಯಜ್ಯೋತಿ ಅವರು ಸಂತ ಕವಿ ಸರ್ವಜ್ಞರ ಕುರಿತು ವಿಶೇಷ ಉಪನ್ಯಾಸ ನೀಡಿ, ಸರ್ವಜ್ಞರ ಕಾಲಾವಧಿಯ ಕುರಿತು ನಿಖರ ಮಾಹಿತಿ ಇಲ್ಲ.  ಆದರೂ ಹಲವಾರು ತಜ್ಞರ ಸಂಶೋಧನೆಯ ಪ್ರಕಾರ 16 ಮತ್ತು 17ನೇ ಶತಮಾನ ಎಂದು ತಿಳಿಯುತ್ತದೆ.  ಸರ್ವಜ್ಞರು ಹಾವೇರಿ ಜಿಲ್ಲೆಯ ಹಿರೇಕೆರೂರಿನ ಕುಂಬಾರಮಾಳ್ವೆ ಹಾಗೂ ಬಸವರಸ ಎಂಬ ದಂಪತಿಗಳ ಪುತ್ರರು.  ಮೂಲ ನಾಮ ಪುಷ್ಪದತ್ತಾ.  ಸರ್ವಜ್ಞರು ಸಾಕು ತಾಯಿ ಮಲ್ಲಮ್ಮ ಅವರ ಆಶ್ರಯದಲ್ಲಿ ಬೆಳೆಯುತ್ತಾರೆ.  ಬಾಲ್ಯದಲ್ಲಿಯೇ ವಿದ್ಯೆಯಲ್ಲಿ ಚತುರರಾಗಿದ್ದರು.  ಮುಂದೆ ಬೆಳೆಯುತ್ತಾ ತ್ರಿಪದಿಗಳನ್ನು ರಚಿಸುತ್ತಾ ಸಮಾಜ ಸುಧಾರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು.  ಸರ್ವಜ್ಞರು ಸುಮಾರು ಏಳು ಸಾವಿರಕ್ಕೂ ಹೆಚ್ಚು ತ್ರಿಪದಿ ವಚನಗಳನ್ನು ರಚಿಸಿದ್ದು, ಗುರುಪದ್ದತಿ, ಶಿಕ್ಷಣ ಪದ್ದತಿ, ಜ್ಞಾನ ಹಾಗೂ ಲಿಂಗ ಪದ್ದತಿಗಳ ಬಗ್ಗೆ ತಿಳಿಸಿದ್ದಾರೆ.  ಸರ್ವಜ್ಞರು ಜಾತಿ ಪದ್ದತಿಯನ್ನು ತಿದ್ದಿದವರು.  ಅರಿವೇ ಗುರು ಎಂಬ ಬಸವಣ್ಣನವರ ಹೇಳಿಕೆಯಂತೆ, ಜ್ಞಾನ ಒಂದು ಇದ್ದರೆ ಸಾಕು ಈಡೀ ಜಗತ್ತನ್ನೇ ಗೆಲ್ಲಬಹುದು.  ತನ್ನನ್ನು ತಾನು ಅರಿತವನೇ ಗುರು ಎಂದು ಸರ್ವಜ್ಞರು ತಿಳಿಸಿದ್ದಾರೆ.  ಓಡಾಡುವ ನೆಲಕ್ಕೆ ಜಾತಿ ಇಲ್ಲ, ಹರಿಯುವ ನೀರಿಗೆ ಜಾತಿ ಇಲ್ಲ, ಬೀಸುವ ಗಾಳಿಗೆ ಜಾತಿ ಇಲ್ಲ, ಬೆಳಕಿಗೆ ಜಾತಿ ಇಲ್ಲ, ಮಾನವರಲ್ಲಿ ಜಾತಿ ಏತಕೇ ಎಂದು ಸರ್ವಜ್ಞರು ಪ್ರಶ್ನಿಸಿದ್ದಾರೆ.  “ಎಲ್ಲಾ ವಿದ್ಯೆಗಳ ಒಡೆಯ ಕೃಷಿ” ಎಂದು ಕೃಷಿ ಮತ್ತು ವ್ಯವಸಾಯದ ಕುರಿತು ಸಹ ಸರ್ವಜ್ಞರು ತಮ್ಮ ವಚನಗಳಲ್ಲಿ ಪ್ರಸ್ತಾಪಿಸಿದ್ದು, ಸಮಾಜದ ಸಂಜೀವಿನಿಯಾಗಿದ್ದಾರೆ.  ಅವರ ಹಾದಿಯಲ್ಲಿ ಎಲ್ಲರೂ ಮುಂದೆ ಸಾಗಬೇಕಾಗಿದೆ ಎಂದರು.      
    ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳ ತಹಶೀಲ್ದಾರ ಗುರುಬಸವರಾಜ ಅವರು ವಹಿಸಿದ್ದರು.  ಜಿ.ಪಂ ಸದಸ್ಯರಾದ ಗವಿಸಿದ್ದಪ್ಪ ಕರಡಿ, ರಾಮಣ್ಣ ಚೌಡ್ಕಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಪ್ರೊಬೆಷನರಿ ಸಹಾಯಕ ಆಯುಕ್ತ ಚಂದ್ರಯ್ಯ, ನಿಂಗರಾಜ ಕುಂಬಾರ, ಕಳಕಪ್ಪ ಕುಂಬಾರ, ನಿಂಗಪ್ಪ ಕುಂಬಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.  ಕಾರ್ಯಕ್ರಮದ ನಂತರ ಕವಿ ಸರ್ವಜ್ಞರ ಭಾವಚಿತ್ರದ ಭವ್ಯ ಮೆರವಣಿಗೆ ಅಶೋಕ ವೃತ್ತದಿಂದ ಜವಾಹರ ರಸ್ತೆ, ಕಿತ್ತೂರ ರಾಣಿ ಚನ್ನಮ್ಮ ವೃತ್ತ, ಮಾರ್ಗವಾಗಿ ಪ್ಯಾಟಿ ಈಶ್ವರ ದೇವಸ್ಥಾನದವರೆಗೆ ಅದ್ದೂರಿಯಾಗಿ ಜರುಗಿತು.

ಭಾಗ್ಯನಗರ : ಅಂಬೇಡ್ಕರ್ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಫೆ. 20 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವತಿಯಿಂದ ಪ್ರಸಕ್ತ ಸಾಲಿಗೆ ಡಾ. ಬಿ.ಆರ್. ಅಂಬೇಡ್ಕರ್ ನಗರ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಿಗೆ ಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ತಾಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ರಾಜೀವ್‍ಗಾಂಧಿ ಗಾಮೀಣ ವಸತಿ ನಿಗಮ ನಿಯಮಿತದಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ನಗರ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಪರಿಶಿಷ್ಟ ಜಾತಿ – 70, ಹಾಗೂ ಪರಿಶಿಷ್ಟ ವರ್ಗಕ್ಕೆ– 30, ಒಟ್ಟು 100 ಮನೆಗಳಿಗೆ ಸಹಾಯಧನವನ್ನು ನೀಡಲು ಗುರಿ ನಿಗದಿಪಡಿಸಲಾಗಿದ್ದು, ಈಗಾಗಲೇ ಪ.ಜಾ 70 ಹಾಗೂ ಪ.ಪಂ 14 ಒಟ್ಟು 84 ಫಲಾನುಭವಿಗಳ ಆಯ್ಕೆಯಾಗಿದ್ದು, ಇನ್ನುಳಿದ ಪರಿಶಿಷ್ಟ ಪಂಗಡದ ವರ್ಗದವರಿಂದ 16 ಮನೆಗಳ ಸಹಾಯಧನಕ್ಕಾಗಿ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಫಲಾನುಭವಿಗಳು ಫೆ. 26 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಭಾಗ್ಯನಗರ ಪ.ಪಂ ಕಾರ್ಯಾಲಯಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಅತಿಕ್ರಮಣ : ತೆರವುಗೊಳಿಸಲು ಸೂಚನೆ


ಕೊಪ್ಪಳ ಫೆ. 20 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಭಾಗ್ಯನಗರ ಪಟ್ಟಣದ ವ್ಯಾಪ್ತಿಯಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಸ್ಥಳಗಳಲ್ಲಿ ಯಾವುದೇ ಅತಿಕ್ರಮಣವಾಗಿದ್ದಲ್ಲಿ ಅದನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸುವಂತೆ ಪ.ಪಂ ಮುಖ್ಯಾಧಿಕಾರಿ ಸೂಚನೆ ನೀಡಿದ್ದಾರೆ.
ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಸ್ಥಳಗಳಲ್ಲಿ ಯಾವುದೇ ಅತಿಕ್ರಮಣವಾಗಿದ್ದಲ್ಲಿ ಅದನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಭಾಗ್ಯನಗರ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಸಹಕರಿಸಬೇಕು. ಒಂದು ವೇಳೆ ಯಾವುದಾದರೂ ಅತಿಕ್ರಮಣ ಇದ್ದಲ್ಲಿ ಅದನ್ನು ತೆರವುಗೊಳಿಸದೇ ಇರುವ ಸಂದರ್ಭದಲ್ಲಿ ಕಾನೂನು ರೀತ್ಯ ಕ್ರಮವಹಿಸಿ ತೆರವುಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ


ಕೊಪ್ಪಳ ಫೆ. 20 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
       ಜಿಲ್ಲೆಯ ಐದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ 11 ಅಂಗನವಾಡಿ ಕಾರ್ಯಕರ್ತೆ ಮತ್ತು 83 ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ  ನೇಮಕ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳು ವೆಬ್‍ಸೈಟ್   www.anganwadirecruit.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು.  ಅರ್ಜಿ ಸಲ್ಲಿಸಲು ಮಾರ್ಚ್. 16 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿತಗಾಗಿ ಕಛೇರಿ ವೇಳೆಯಲ್ಲಿ  ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಗೆ ಅಥವಾ ದೂರವಾಣಿ ಸಂಖ್ಯೆ ಕೊಪ್ಪಳ 08539-222703, ಸಿ.ಡಿ.ಪಿ.ಓ ಆಫೀಸ್ ಕೊಪ್ಪಳ 08593-230205, ಯಲಬುರ್ಗಾ 08534-220393 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಧಾರಿತ ತಂತ್ರಜ್ಞಾನದಿಂದ ಗುಣಮಟ್ಟದ ಹಣ್ಣುಗಳನ್ನು ಪಡೆಯಲು ಸಾಧ್ಯ- ಯಂಕಣ್ಣ ಯರಾಶಿ


ಕೊಪ್ಪಳ ಫೆ. 20 (ಕರ್ನಾಟಕ ವಾರ್ತೆ): ತೋಟಗಾರಿಕೆಯಲ್ಲಿ ಸುಧಾರಿತ, ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಲ್ಲಿ, ರಫ್ತು ಮಾಡಲರ್ಹ ಗುಣಮಟ್ಟದ ಹಣ್ಣುಗಳನ್ನು ಬೆಳೆದು, ಹೆಚ್ಚಿನ ಲಾಭ ಪಡೆಯಲು ಸಾಧ್ಯ ಎಂದು ಕೊಪ್ಪಳ ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಯಂಕಣ್ಣ ಯರಾಶಿ ಅವರು ಹೇಳಿದರು.
 
     ತೋಟಗಾರಿಕೆ ಇಲಾಖೆ ಹಾಗೂ ಹಾಪ್‍ಕಾಮ್ಸ್ ಸಹಯೋಗದಲ್ಲಿ ದ್ರಾಕ್ಷಿ ಹಾಗೂ ದಾಳಿಂಬೆ ಮೇಳದ ಅಂಗವಾಗಿ ಕೊಪ್ಪಳದ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಾರರಿಗೆ ಮಂಗಳವಾರದಂದು ಆಯೋಜಿಸಿದ್ದ ಮಾಹಿತಿ ಕಾರ್ಯಗಾರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
 
     ಕೊಪ್ಪಳ ಜಿಲ್ಲೆ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ಬಾಳೆ, ಪಪ್ಪಾಯ, ಕಲ್ಲಂಗಡಿ ಹೀಗೆ ಎಲ್ಲ ಬಗೆಯ ಹಣ್ಣುಗಳನ್ನು ಉತ್ತಮವಾಗಿ ಬೆಳೆಯಲು ಪೂರಕ ವಾತಾವರಣವಿರುವ ಜಿಲ್ಲೆಗಳಲ್ಲೊಂದಾಗಿದೆ.  ಇಲ್ಲಿನ ರೈತರು ಕಷ್ಟಪಟ್ಟು ಹಣ್ಣು ಬೆಳೆಗಳನ್ನು ಬೆಳೆಯುತ್ತಾರೆ.  ಆದರೆ ಗುಣಮಟ್ಟದ ಹಣ್ಣುಗಳನ್ನು ಬೆಳೆಯುವುದರತ್ತ ಗಮನ ನೀಡುತ್ತಿಲ್ಲ.  ಇದರ ಜೊತೆಗೆ ಮಾರುಕಟ್ಟೆ ವ್ಯವಸ್ಥೆಯ ಬಗ್ಗೆ ಅರಿವು ಹೊಂದಿಲ್ಲ, ಇದರಿಂದ ಬೆಳೆಗೆ ತಕ್ಕ ಬೆಲೆ ಪಡೆಯಲು ಸಾಧ್ಯವಾಗುತ್ತಿಲ್ಲ.  ಹೀಗಾಗಿ ಬೆಳೆಗಾರರು ಆರ್ಥಿಕವಾಗಿ ಹಿಂದುಳಿಯುತ್ತಿದ್ದಾರೆ.  ತೋಟಗಾರಿಕೆಯಲ್ಲಿನ ಆಧುನಿಕ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಪಡೆಯಲು ರೈತರು, ಈ ಹಿಂದೆ ಬಿಜಾಪುರ, ಬಾಗಲಕೋಟೆ ಜಿಲ್ಲೆಗೆ ಹೋಗಬೇಕಿತ್ತು.  ಆದರೆ ಇದೀಗ, ಕೊಪ್ಪಳ ಜಿಲ್ಲೆಯಲ್ಲಿ ಸುಧಾರಿತ ತಂತ್ರಜ್ಞಾನಗಳನ್ನು ರೈತರೊಂದಿಗೆ ಹಂಚಿಕೊಳ್ಳಲು ಅನೇಕ ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.  ರೈತರು ಇಂತಹ ಮಾಹಿತಿ ಕಾರ್ಯಗಾರದಲ್ಲಿ ಪಾಲ್ಗೊಂಡು, ವಿಚಾರಗಳನ್ನು ತಿಳಿದುಕೊಳ್ಳಬೇಕು.  ಕೊಪ್ಪಳ ಜಿಲ್ಲೆಯಲ್ಲಿ ತರಕಾರಿ ಹಾಗೂ ತೋಟಗಾರಿಕೆ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆಯ ಕೊರತೆ ತೀವ್ರವಾಗಿದ್ದು, ಜಿಲ್ಲಾ ಮಟ್ಟದಲ್ಲಿ ತೋಟಗಾರಿಕೆ ಬೆಳೆಗಳಿಗೆ ಸುಸಜ್ಜಿತ ಮಾರುಕಟ್ಟೆ, ಕೋಲ್ಡ್ ಸ್ಟೋರೇಜ್ ಗೋದಾಮು ನಿರ್ಮಾಣವಾಗಬೇಕಿದೆ.  ರೈತರು ರಫ್ತು ಮಾಡಲರ್ಹ ಗುಣಮಟ್ಟದ ಹಣ್ಣುಗಳನ್ನು ಬೆಳೆಯುವುದು ಹೇಗೆ, ಬೇಸಾಯ ಕ್ರಮಗಳು, ತಂತ್ರಜ್ಞಾನಗಳ ಅಳವಡಿಕೆ, ತಳಿಗಳ ಕುರಿತು ಮಾಹಿತಿಯನ್ನು ಪಡೆಯಲು ಮುಂದಾಗಬೇಕು ಎಂದು ಯಂಕಣ್ಣ ಯರಾಶಿ ಅವರು ಹೇಳಿದರು.
 
     ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ಮಾತನಾಡಿ, ಕೊಪ್ಪಳ ಜಿಲ್ಲೆ ಹಣ್ಣಿನ ಕಣಜವಾಗಿದೆ.  ಜಿಲ್ಲೆಯಲ್ಲಿ ತೋಟಗಾರಿಕೆ ವಿಸ್ತರಣೆಗಾಗಿ ಇಲಾಖೆ ಇಂತಹ ಮೇಳಗಳನ್ನು ಆಯೋಜಿಸುತ್ತಿದೆ.  ತಂತ್ರಜ್ಞಾನಗಳನ್ನು ರೈತರಿಗೆ ತಲುಪಿಸಲು ಮುಂದಾಗಿದೆ.  ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಬಹಳಷ್ಟು ವ್ಯತ್ಯಾಸವಿದೆ.  ಕೃಷಿ ಉತ್ಪನ್ನಗಳನ್ನು ಹೆಚ್ಚು ಕಾಲ ಇಡಬಹುದಾಗಿದ್ದು, ತೋಟಗಾರಿಕೆ ಉತ್ಪನ್ನಗಳನ್ನು ಇಡಲು ಸಾಧ್ಯವಿಲ್ಲ.  ಹೀಗಾಗಿ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಲ್ಲಿ, ಹೆಚ್ಚು ದಿನಗಳ ಕಾಲ ಇಡಲು ಹಾಗೂ ತೋಟಗಾರಿಕೆ ಉಪ ಉತ್ಪನ್ನಗಳನ್ನು ಸಿದ್ಧಪಡಿಸಿ, ಮೌಲ್ಯವರ್ಧಿತ ಪದಾರ್ಥಗಳನ್ನು ಸಿದ್ಧಪಡಿಸುವುದರ ಬಗ್ಗೆ ತಿಳಿದುಕೊಳ್ಳಬೇಕು.  ಈಗಿನ ದಿನಮಾನಗಳಲ್ಲಿ ಯಾವುದೇ ಪದಾರ್ಥಗಳು ಅಥವಾ ಪ್ಯಾಕಿಂಗ್ ವ್ಯವಸ್ಥೆ ಆಕರ್ಷಕವಾಗಿರಬೇಕು.  ಇದರ ಕಡೆಗೂ, ಗಮನ ನೀಡಬೇಕಿದೆ.  ಇಸ್ರೇಲ್‍ನಂತಹ ಸಣ್ಣ ಹಾಗೂ ಅತಿ ಕಡಿಮೆ ನೀರು ಹೊಂದಿರುವ ದೇಶವಾಗಿದ್ದರೂ, ತಂತ್ರಜ್ಞಾನದ ಅಳವಡಿಕೆಯಿಂದ, ಉತ್ತಮ ಗುಣಮಟ್ಟ ಹಾಗೂ ಹೆಚ್ಚು ಇಳುವರಿ ಬರುವ ಹಣ್ಣುಗಳನ್ನು ಬೆಳೆಯಲಾಗುತ್ತಿದೆ.  ತಂತ್ರಜ್ಞಾನವನ್ನು ರೈತರಿಗೆ ತಲುಪಿಸುವುದಕ್ಕಾಗಿಯೇ ಇಂತಹ ಮೇಳಗಳನ್ನು ಆಯೋಜಿಸಲಾಗುತ್ತಿದೆ.  ಇಲಾಖೆಯಿಂದ ರೈತರಿಗೆ ಅಗತ್ಯ ನೆರವು ಒದಗಿಸಲು ಇಲಾಖೆ ಸರ್ವ ಸನ್ನದ್ಧವಾಗಿದ್ದು, ರೈತರ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
     ಮುನಿರಾಬಾದ್ ತೋಟಗಾರಿಕೆ ಕಾಲೇಜಿನ ಡೀನ್ ಗಂಗಾಧರಪ್ಪ, ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥ ಡಾ. ಎಂ.ಬಿ. ಪಾಟೀಲ್ ಕಾರ್ಯಗಾರ ಕುರಿತು ಮಾತನಾಡಿದರು.  ಬಿಜಾಪುರದ ಶ್ರೀಶೈಲ ವಾಗ್ಮೋರೆ ಅವರು ದ್ರಾಕ್ಷಿ ಬೆಳೆ ಕುರಿತು ಹಾಗೂ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಸತೀಶ್ ಅವರು ದಾಳಿಂಬೆ ಬೆಳೆ ಕುರಿತು ರೈತರಿಗೆ ಸುಧಾರಿತ ಬೇಸಾಯ ಕ್ರಮಗಳು, ನವೀನ ತಂತ್ರಜ್ಞಾನಗಳು ಹಾಗೂ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಬಗ್ಗೆ   ಮಾಹಿತಿ ನೀಡಿದರು.
     ಕಾರ್ಯಕ್ರಮದಲ್ಲಿ ಮಲ್ಲನಗೌಡ ಪಾಟೀಲ್, ಶಾಮರಾವ್ ಕುಲಕರ್ಣಿ, ಪೂರ್ಣಿಮಾ, ತುಕಾರಾಂರಾವ್ ಸೇರಿದಂತೆ ಹಲವು ಗಣ್ಯರು, ಪ್ರಗತಿಪರ ರೈತರು ಉಪಸ್ಥಿತರಿದ್ದರು.  ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಯುವ ಜಿಲ್ಲೆಯ ನೂರಾರು ರೈತರು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.