Wednesday, 14 February 2018

10 ವರ್ಷಕ್ಕೂ ಅಧಿಕ ಕಾರ್ಯನಿರ್ವಹಿಸಿದ ಶಿಕ್ಷಕರ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ


ಕೊಪ್ಪಳ ಫೆ. 14 (ಕರ್ನಾಟಕ ವಾರ್ತೆ): ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ‘ಎ’ ವಲಯದಲ್ಲಿ 10 ವರ್ಷಕ್ಕೂ ಹೆಚ್ಚು ಸೇವೆಯನ್ನು ಪೂರೈಸಿರುವ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.  
          ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ನಿಯಮ 3 (ಎ) ರಂತೆ 10 ವರ್ಷ ಗರಿಷ್ಠ ಸೇವಾವಧಿಯನ್ನು ‘ಎ’ ವಲಯದಲ್ಲಿ ಕಾರ್ಯಾನಿರ್ವಹಿಸುತ್ತಿರುವ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆಗೊಳಿಸುವ ಸಂಬಂಧಿಸಿದಂತೆ ಎ ವಲಯದಲ್ಲಿ 10 ವರ್ಷಕ್ಕೂ ಹೆಚ್ಚು ಸೇವೆಯನ್ನು ಪೂರೈಸಿರುವ ಶಿಕ್ಷಕರ ಪಟ್ಟಿಯನ್ನು ನಿರ್ದೇಶಕರು (ಪ್ರಾಥಮಿಕ ಶಿಕ್ಷಣ) ಆಯುಕ್ತರ ಕಛೇರಿ ಸಾ.ಶಿ. ಇಲಾಖೆ ಬೆಂಗಳೂರು ರವರು ಸೂಚನೆ ನೀಡಿದ್ದು, 10 ವರ್ಷಕ್ಕೂ ಹೆಚ್ಚು ಸೇವೆಯನ್ನು ಪೂರೈಸಿರುವ ಶಿಕ್ಷಕರ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸೂಚನೆ ಫಲಕದಲ್ಲಿ ಪ್ರಕಟಿಸಲಾಗಿದೆ.  ಈ ಆಯ್ಕೆ ಪಟ್ಟಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಫೆ. 17 ರೊಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment