Wednesday, 14 February 2018

ಫೆ. 18 ರಂದು ವಸತಿ ಶಾಲೆಗಳ ಪರೀಕ್ಷೆ : ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ


ಕೊಪ್ಪಳ ಫೆ. 14 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಇಂದಿರಾಗಾಂಧಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರಗಳನ್ನು ಪಡೆದುಕೊಳ್ಳುವಂತೆ ಇಲಾಖಾ ಉಪನಿರ್ದೇಶಕರು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದಾರೆ. 
    ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಫೆ. 18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.  ಪ್ರವೇಶ ಪತ್ರಗಳನ್ನು (ಹಾಲ್ ಟಿಕೇಟ್) ಅರ್ಜಿ ಸಲ್ಲಿಸಿದ ಆಯಾ ವಸತಿ ಶಾಲೆಗಳಿಗೆ ಭೇಟಿ ನೀಡಿ ಪ್ರಾಚಾರ್ಯರುಗಳಿಂದ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Post a Comment