Thursday, 15 February 2018

ಕನಕಗಿರಿ ಜಾತ್ರೆ : ಫೆ. 18 ರಂದು ಪೂರ್ವಭಾವಿ ಸಭೆ


ಕೊಪ್ಪಳ ಫೆ. 15 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ, ಕನಕಗಿರಿಯ ಕನಕಾಚಲಪತಿ ದೇವಸ್ಥಾನದ ವಾರ್ಷಿಕ ಜಾತ್ರೆ ಫೆ. 27 ರಿಂದ ಮಾ. 12 ರವರೆಗೆ ಜರುಗಲಿದ್ದು, ಸಿದ್ಧತೆಗಳನ್ನು ಕೈಗೊಳ್ಳುವ ಕುರಿತಂತೆ ಪೂರ್ವಭಾವಿ ಸಭೆ ಫೆ. 18 ರಂದು ಸಂಜೆ 04 ಗಂಟೆಗೆ ಕನಕಗಿರಿಯ ಕನಕಾಚಲಪತಿ ದೇವಸ್ಥಾನ ಆವರಣದಲ್ಲಿ ಏರ್ಪಡಿಸಲಾಗಿದೆ.
     ಸಭೆಯ ಅಧ್ಯಕ್ಷತೆಯನ್ನು ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಅವರು ವಹಿಸುವರು. ಜಾತ್ರೆ ಅಂಗವಾಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ಜರುಗಲಿದೆ.  ಸಭೆಗೆ ಎಲ್ಲಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು  ತಪ್ಪದೆ ಸಭೆಗೆ ಹಾಜರಾಗಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಅವರು ತಿಳಿಸಿದ್ದಾರೆ.
Post a Comment