Thursday, 15 February 2018

ಪೊಲೀಸ್ ಕಾನ್ಸ್‍ಟೇಬಲ್ : ಸಹಿಷ್ಣತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ ಫೆ. 20 ಕ್ಕೆ ಮುಂದೂಡಿಕೆ


ಕೊಪ್ಪಳ ಫೆ. 15 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಗೆ ಫೆ. 16 ರಂದು ಏರ್ಪಡಿಸಲು ಉದ್ದೇಶಿಸಲಾಗಿದ್ದ ಸಹಿಷ್ಣತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಯನ್ನು ಫೆ. 20 ಕ್ಕೆ ಮುಂದೂಡಲಾಗಿದೆ. 
ಪ್ರಸಕ್ತ ಸಾಲಿನ ಹೈದರಾಬಾದ್-ಕರ್ನಾಟಕ ಪ್ರದೇಶದ ಸ್ಥಳೀಯ ಮತ್ತು ಸ್ಥಳೀಯೇತರ ಅಭ್ಯರ್ಥಿಗಳಿಗಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ 80 ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಪುರುಷ ಅರ್ಹ ಅಭ್ಯರ್ಥಿಗಳಿಗೆ ಸಹಿಷ್ಣತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಯನ್ನು ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ. 15 ಮತ್ತು 16 ರಂದು ಬೆಳಿಗ್ಗೆ 6 ಗಂಟೆಯಿಂದ ನಡೆಸಲು ನಿಗದಿಪಡಿಸಲಾಗಿತ್ತು.  ಹೀಗಾಗಿ ಫೆ. 15 ರಂದು ಸಹಿಷ್ಣತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಯನ್ನು ನಿಗದಿಯಂತೆ ನಡೆಸಲಾಗಿದೆ.  ಆದರೆ ಫೆ. 16 ರಂದು ನಡೆಸಬೇಕಿದ್ದ ಪರೀಕ್ಷೆಯನ್ನು ಆಡಳಿತಾತ್ಮಕ ದೃಷ್ಟಿಯಿಂದ ಫೆ. 20 ಕ್ಕೆ ಮುಂದೂಡಲಾಗಿದೆ.  ಫೆ. 16 ರಂದು ಸಹಿಷ್ಣತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಗೆ ಬರಬೇಕಾದ ಅಭ್ಯರ್ಥಿಗಳು,  ಫೆ. 20 ರಂದು ಬೆಳಿಗ್ಗೆ 6 ಗಂಟೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ನೇಮಕಾತಿ ಸಮಿತಿ ಅಧ್ಯಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment