Friday, 16 February 2018

ಫೆ. 20 ರಿಂದ ಅಪಘಾತ ಜೀವ ರಕ್ಷಕ ತರಬೇತಿ ಕಾರ್ಯಾಗಾರ


ಕೊಪ್ಪಳ ಫೆ. 16 (ಕರ್ನಾಟಕ ವಾರ್ತೆ): ಕಾರ್ಮಿಕರ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕೊಪ್ಪಳ ಇವರ ಸಹಯೋಗದಲ್ಲಿ ಅಂಬೇಡ್ಕರ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಪಘಾತ ಜೀವ ರಕ್ಷಕ ತರಬೇತಿ ಕಾರ್ಯಾಗಾರವನ್ನು ಫೆ.20 ಮತ್ತು 21 ರಂದು ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದೆ. 
    ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ವೆಂಕಟರಾಜಾ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ ಪಾಲ್ಗೊಳ್ಳುವರು.  ವಾರ್ತಾಧಿಕಾರಿ ತುಕಾರಾಂರಾವ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಬಿ. ನಾಲ್ವರ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಪ್ಪಳ ಶಾಖೆಯ ಸಭಾಪತಿ ಕೆ.ಜಿ. ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಹ್ಯಾಟಿ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.  
Post a Comment