Saturday, 17 February 2018

ಫೆ. 20 ರಂದು ಕೊಪ್ಪಳದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ


ಕೊಪ್ಪಳ ಫೆ. 17 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಸಂತ ಕವಿ ಸರ್ವಜ್ಞರವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆ. 20 ರಂದು ಬೆಳ್ಳಿಗ್ಗೆ 11-00 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
    ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು.   ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಕನ್ನಡ ಪ್ರಾಧ್ಯಾಪಕರಾದ ಡಾ. ಭಾಗ್ಯಜ್ಯೋತಿ ಅವರು ಸಂತ ಕವಿ ಸರ್ವಜ್ಞರ ಕುರಿತು ವಿಶೇಷ ಉಪನ್ಯಾಸ ನೀಡುವರು.
    ಕಾರ್ಯಕ್ರಮದ ನಂತರ ಅಂದು ಮಧ್ಯಾಹ್ನ 12-30 ಗಂಟೆಗೆ ಸಂತ ಕವಿ ಸರ್ವಜ್ಞರವರ ಭಾವಚಿತ್ರದೊಂದಿಗೆ ಮೆರವಣಿಗೆಯು ಸಾಹಿತ್ಯ ಭವನದಿಂದ ಪ್ರಾರಂಭಗೊಂಡು, ಜವಾಹರ ರಸ್ತೆ ಮಾರ್ಗವಾಗಿ ಆಜಾದ್ ಸರ್ಕಲ್ ಮೂಲಕ, ಕಿತ್ತೂರು ಚನ್ನಮ್ಮ ಸರ್ಕಲ್‍ದಿಂದ ಪ್ಯಾಟಿ ಈಶ್ವರ ದೇವಸ್ಥಾನದವರೆಗೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
Post a Comment