Friday, 16 February 2018

ಫೆ.21 ರಿಂದ ರಸ್ತೆ ಸಂಚಾರ ಸಮೀಕ್ಷೆ


ಕೊಪ್ಪಳ ಫೆ. 16 (ಕರ್ನಾಟಕ ವಾರ್ತೆ): ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಜಿಲ್ಲೆಯಲ್ಲಿ ಫೆ. 21 ರಿಂದ 23 ರವರೆಗೆ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಹೆದ್ದಾರಿಗಳಲ್ಲಿ ರಸ್ತೆ ಸಂಚಾರ ಸಮೀಕ್ಷೆ ಕೈಗೊಳ್ಳಲಾಗಿದೆ ಎಂದು ಇಲಾಖಾ ಅಧೀಕ್ಷಕ ಇಂಜಿನೀಯರ ತಿಳಿಸಿದ್ದಾರೆ.
    ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಪ್ರತಿ ವರ್ಷ ರಾಜ್ಯ ಹೆದ್ದಾರಿಗಳು, ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ವಾಹನ ಸಂಚಾರ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತದೆ.  ಕೊಪ್ಪಳ ಜಿಲ್ಲೆಯಲ್ಲಿ ಫೆ. 21 ರ ಬೆಳಿಗ್ಗೆ 06 ಗಂಟೆಯಿಂದ ಫೆ. 23 ರ ಬೆಳಿಗ್ಗೆ 06 ಗಂಟೆಯವರೆಗೆ ಸಮೀಕ್ಷೆ ನಡೆಯಲಿದೆ.  ಈ ಸಮೀಕ್ಷೆಯಿಂದ ಸಂಗ್ರಹಿಸಿದ ಮಾಹಿತಿ ಸರ್ಕಾರಕ್ಕೆ ರಸ್ತೆಗಳ ಸಂಚಾರ, ಸಾಂಧ್ರತೆ, ತೀವ್ರತೆ ಕಂಡು ಹಿಡಿಯುವುದಕ್ಕೆ ಮತ್ತು ರಸ್ತೆಗಳ ಅಗಲಳತೆ ನಿರ್ಧರಿಸಲು ಹಾಗೂ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು, ಅವುಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗುತ್ತದೆ.  ರಸ್ತೆ ಸಂಚಾರ ಸಮೀಕ್ಷೆ ಕಾರ್ಯವನ್ನು ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಸ್ಥಾಪಿಸಲಾಗುವ ಸಮೀಕ್ಷೆ ಕೇಂದ್ರಗಳಲ್ಲಿ ಕೈಗೊಳ್ಳಲಾಗುತ್ತದೆ.  ಸಮೀಕ್ಷೆ ಕೈಗೊಳ್ಳುವ ರಸ್ತೆಗಳಲ್ಲಿ ಸಂಚರಿಸುವ ವಾಹನಗಳು ಸಮೀಕ್ಷಾ ಕಾರ್ಯಕ್ಕೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.  

Post a Comment