Monday, 12 February 2018

ಕೊಪ್ಪಳ ಲೋಕ ಅದಾಲತ್‍ನಲ್ಲಿ 478 ಪ್ರಕರಣಗಳು ರಾಜಿ ಮೂಲಕ ಇತ್ಯರ್ಥ


ಕೊಪ್ಪಳ ಫೆ. 12 (ಕರ್ನಾಟಕ ವಾರ್ತೆ) : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಕಳೆದ ಫೆ. 10 ರಂದು ಜಿಲ್ಲೆಯಲ್ಲಿ ಏರ್ಪಡಿಸಲಾದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಒಟ್ಟು 478 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ್ ಅವರು ತಿಳಿಸಿದ್ದಾರೆ.
     ಕಳೆದ ಫೆ. 10 ರಂದು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ವಿವಿಧ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ರಾಜಿ ಮಾಡಿಸಲಾಯಿತು.  ಈ ಪೈಕಿ ಮೋಟಾರು ವಾಹನ ಅಪಘಾತದ 35 ಪ್ರಕರಣಗಳು, ಅಸಲು ದಾವೆಗಳು-152, ಬ್ಯಾಂಕುಗಳಿಗೆ ಸಂಬಂಧಿಸಿದ 139 ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶದ 01 ಪ್ರಕರಣ, ಕಾನೂನಿನನ್ವಯ ರಾಜಿ ಆಗಬಹುದಾದ 28 ಕ್ರಿಮಿನಲ್ ಪ್ರಕರಣಗಳು , ಚೆಕ್‍ಬೌನ್ಸ್‍ನ 32 ಪ್ರಕರಣಗಳು ಹಾಗೂ ಇತರೆ 91 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟಿ 478 ಪ್ರಕರಣಗಳನ್ನು ಇತ್ಯರ್ಥಪಡಿಸಿ, 77. 85 ಲಕ್ಷ ರೂ. ಮೊತ್ತದ ರಾಜಿ ಮಾಡಿಸಲಾಯಿತು.  ಲೋಕ ಅದಾಲತ್ ಯಶಸ್ವಿಗೆ ಸಹಕರಿಸಿದ ಎಲ್ಲ ನ್ಯಾಯಾಲಯದ ನ್ಯಾಯಾಧೀಶರಿಗೆ, ವಕೀಲರ ಸಂಘದ ಅಧ್ಯಕ್ಷರು, ಸರ್ವ ಸದಸ್ಯರು, ಸಂಧಾನಕಾರರು, ಕಕ್ಷಿದಾರರು, ಬ್ಯಾಂಕ್/ ಇನ್ಸೂರೆನ್ಸ್ ವ್ಯವಸ್ಥಾಪಕರು ಹಾಗೂ ನ್ಯಾಯಾಲಯದ ಸಿಬ್ಬಂದಿಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ್ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Post a Comment