Thursday, 8 February 2018

ಆದರ್ಶ ವಿದ್ಯಾಲಯ : 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ ಫೆ. 08 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಆದರ್ಶ ವಿದ್ಯಾಲಯಗಳಿಗೆ 2018-19 ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ತಾಲ್ಲೂಕಿನ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶ ಪರೀಕ್ಷೆಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
    ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಲೇ ಪ್ರಾರಂಭವಾಗಿದ್ದು, ಇಲಾಖೆಯ ಸೇವಾ ಕೇಂದ್ರಗಳಿಂದ ಮಾಹಿತಿ ಪಡೆದುಕೊಂಡು ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ.  ಅರ್ಜಿ ಸಲ್ಲಿಸಲು ಫೆ. 17 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯಾ ಕ್ಲಷ್ಟರನ ಸಿ.ಆರ್.ಪಿ ಗಳಿಂದ ಮಗು ವ್ಯಾಸಂಗ ಮಾಡುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರಿಂದ ಅಥವಾ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯರಿಂದ ಪಡೆಯಬಹುದಾಗಿದೆ ಹಾಗೂ ಮೊ.ಸಂ 9902574251 ಕ್ಕೆ ಸಹ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment