Friday, 9 February 2018

ವಸತಿ ಶಾಲೆ : 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಫೆ. 08 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಣೆಯಾಗುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ನವೋದಯ ಮಾದರಿಯ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶವನ್ನು ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  
        ಅರ್ಜಿ ಸಲ್ಲಿಸಲು 5ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿರಬೇಕು.  ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷಕ್ಕೆ ಮೀರಿರಬಾರದು.  ಪ್ರತಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಲಾ 50 ಆಸನಗಳಂತೆ ಒಟ್ಟು 350 ಆಸನಗಳನ್ನು ನಿಗದಿ ಪಡಿಸಲಾಗಿದ್ದು, ಇದರಲ್ಲಿ ಶೇ.75 ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ರಷ್ಟು ಇತರೆ ವರ್ಗದವರಿಗೆ ವಿತರಿಸಲಾಗುವುದು.  ಅಲ್ಪಸಂಖ್ಯಾತರ ನವೋದಯ ಮಾದರಿ ವಸತಿ ಶಾಲೆಯಲ್ಲಿ 80 ಆಸನಗಳಿದ್ದು, ಇದರಲ್ಲಿ ಶೇ.75 ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ರಷ್ಟು ಇತರೆ ವರ್ಗದವರಿಗೆ ವಿತರಿಸಲಾಗುವುದು.  ಅಂಗವಿಕಲ ವಿದ್ಯಾರ್ಥಿಗಳು, ವಿಶೇಷ ಗುಂಪಿಗೆ ಸೇರಿದ ಅಂದರೆ ಅನಾಥ ಮಕ್ಕಳು, ವಿಧವೆಯರ ಮಕ್ಕಳು, ಪೌರ ಕಾರ್ಮಿಕರ ಮಕ್ಕಳು ಇತ್ಯಾದಿಗಳಿಗೆ ಶೇ.03 ರಷ್ಟು ಆಸನಗಳನ್ನು ಕಾಯ್ತಿರಸಲಾಗಿದೆ.  
      ಅರ್ಜಿಯನ್ನು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಯಲಬುರ್ಗಾ/ ಕುಷ್ಟಗಿ/ ಗಂಗಾವತಿ, ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕುಕನೂರು, ತಳಕಲ್, ಕುದರಿಮೋತಿ, ಟಣಕನಕಲ್, ಹಿರೇಬೆಣಕಲ್, ಹಾಗೂ ಅಲ್ಪಸಂಖ್ಯಾತರ ನವೋದಯ ಮಾದರಿಯ ವಸತಿ ಶಾಲೆ ಕೊಪ್ಪಳ ಇಲ್ಲಿಂದ ಪಡೆದು ಭರ್ತಿ ಮಾಡಿ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ದೃಢೀಕರಿಸಿದತ ಪ್ರತಿ, ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕ ಪಟ್ಟಿಯ ದೃಢೀಕರಿಸಿದ ಪ್ರತಿ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ ಹಾಗೂ ವಿದ್ಯಾರ್ಥಿಯ ಪಾಸ್ ಪೊರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರಗಳೊಂದಿಗೆ ಮಾರ್ಚ್. 01 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ ಕೊಪ್ಪಳ ದೂರವಾಣಿ ಸಂಖ್ಯೆ : 08539-225070, ಅರ್ಜಿಯನ್ನು  http://dom.karnataka.gov.in/koppal ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು ಅಥವಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖಾ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment